ಗಾಡಿಕೊಪ್ಪ ಬಳಿ ಕಾರು ಡಿಕ್ಕಿ, 7 ಎಮ್ಮೆಗಳು ಸ್ಥಳದಲ್ಲೇ ಸಾವು

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

SHIVAMOGGA LIVE NEWS | ACCIDENT | 16 ಮೇ 2022

ಕಾರು ಡಿಕ್ಕಿಯಾಗಿ ಏಳು ಎಮ್ಮೆಗಳು ಸ್ಥಳದಲ್ಲೆ ಸಾವನ್ನಪ್ಪಿವೆ. ಕಾರಿನಲ್ಲಿದ್ದ ಇಬ್ಬರು ಅದೃಷ್ಟವಶಾತ್ ಪಾರಾಗಿದ್ದಾರೆ. ಕಾರಿನ ಮುಂಭಾಗ ನುಜ್ಜುಗುಜ್ಜಾಗಿದೆ.

ಗಾಡಿಕೊಪ್ಪದ ತುಂಗಾ ನಾಲೆ ಬಳಿ ಭಾನುವಾರ ರಾತ್ರಿ ಘಟನೆ ಸಂಭವಿಸಿದೆ. ಶಿವಮೊಗ್ಗದಿಂದ ಆಯನೂರು ಕಡೆಗೆ ತೆರಳುತ್ತಿದ್ದ ಕಾರು ಎಮ್ಮೆಗಳಿಗೆ ಡಿಕ್ಕಿ ಹೊಡೆದಿದೆ.

ರಸ್ತೆ ಮಧ್ಯೆ ಎಮ್ಮೆಗಳು ತೆರಳುತ್ತಿರುವುದು ಗೊತ್ತಾಗದೆ ಕಾರು ಡಿಕ್ಕಿ ಹೊಡೆದಿದೆ. ಘಟನೆಯಲ್ಲಿ ಏಳು ಎಮ್ಮೆಗಳು ಸ್ಥಳದಲ್ಲೇ ಮೃತಪಟ್ಟಿವೆ. ರಸ್ತೆ ಮೇಲೆ ಎಮ್ಮೆಗಳ ಮೃತದೇಹಗಳು ಬಿದ್ದಿರುವುದು ಮನಕಲಕುವಂತಿತ್ತು. ಏರ್ ಬ್ಯಾಗ್ ಓಪನ್ ಆಗಿದ್ದರಿಂದ ಕಾರಿನಲ್ಲಿದ್ದ ಇಬ್ಬರು ಬಚಾವಾಗಿದ್ದಾರೆ.

Shimoga Nanjappa Hospital

ಎಮ್ಮೆಗಳ ಮಾಲೀಕರ ಪತ್ತೆ ಕಾರ್ಯ ನಡೆಯುತ್ತಿದೆ. ಸಂಚಾರಿ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಇದನ್ನೂ ಓದಿ – ಇವತ್ತಿನ ಎಲ್ಲಾ ಸುದ್ದಿಗಳನ್ನು ಓದಲು ಕ್ಲಿಕ್ ಮಾಡಿ

ನಿಮ್ಮೂರು, ನಿಮ್ಮಾ ಏರಿಯಾದ ಕಾರ್ಯಕ್ರಮಗಳು, ಸಮಸ್ಯೆಗಳು ಸುದ್ದಿಯಾಗಬೇಕಾ? ನೀವೇ ವರದಿಗಾರರಾಗಿ. ವಿಡಿಯೋ, ಫೋಟೊ ಮಾಡಿ 7411700200 ಮೊಬೈಲ್ ನಂಬರ್’ಗೆ ವಾಟ್ಸಪ್ ಮಾಡಿ. ನೆನಪಿರಲಿ, ಸುದ್ದಿ ಪ್ರಕಟಣೆಗೆ ನಾವು ಹಣ ಪಡೆಯುವುದಿಲ್ಲ.

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : May 16, 2022

Leave a Comment