SHIVAMOGGA LIVE NEWS | GANJA | 17 ಮೇ 2022
ಶಿವಮೊಗ್ಗದ ಹೊಳೆ ಬಸ್ ಸ್ಟಾಪ್ ಬಳಿ ಅಮಲಿನಲ್ಲಿರುವ ವ್ಯಕ್ತಿಯೊಬ್ಬನನ್ನು ಪೊಲೀಸರು ವಶಕ್ಕೆ ಪಡೆದು ವೈದ್ಯಕೀಯ ಪರೀಕ್ಷೆಗೆ ಒಳಪಡಿಸಿದ್ದಾರೆ. ಗಾಂಜಾ ಸೇವನೆ ಮಾಡಿರುವುದು ದೃಢವಾದ ಹಿನ್ನೆಲೆ ಆತನನ್ನು ಬಂಧಿಸಿ, ಪ್ರಕರಣ ದಾಖಲು ಮಾಡಲಾಗಿದೆ.
ಈಗ ಸುಲಭಕ್ಕೆ ಸಿಗಲಿದೆ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ 9972194422
ಇದನ್ನೂ ಓದಿ – ಬಸ್ ಹತ್ತುವಾಗ ಹೀಗೂ ನಡೆಯುತ್ತೆ ಕಳ್ಳತನ, ಶಿವಮೊಗ್ಗದಲ್ಲಿ ಮಹಿಳೆಯಿಂದ ದೂರು ದಾಖಲು
ಆಟೋ ಚಾಲಕ ಪ್ರಕಾಶ್ ಕುಮಾರ್ ಬಂಧಿತ ಆರೋಪಿ. ಭಾನುವಾರ ಮಧ್ಯಾಹ್ನ ಪ್ರಕಾಶ್ ಕುಮಾರ್ ಶಿವಮೊಗ್ಗದ ಹೊಳೆ ಬಸ್ ಸ್ಟಾಪ್ ಬಳಿ ಅನುಮಾನಾಸ್ಪದವಾಗಿ ವರ್ತಿಸುತ್ತಿದ್ದ. ಗಸ್ತು ತಿರುಗುತ್ತಿದ್ದ ಪೊಲೀಸರು ಈತನನ್ನು ವಶಕ್ಕೆ ಪಡೆದಿದ್ದರು.
ಪ್ರಕಾಶ್ ಕುಮಾರ್’ನನ್ನು ವಶಕ್ಕೆ ಪಡೆದು ಮೆಗ್ಗಾನ್ ಆಸ್ಪತ್ರೆಯಲ್ಲಿ ವೈದ್ಯಕೀಯ ಪರೀಕ್ಷೆಗೆ ಒಳಪಡಿಸಲಾಯಿತು. ಈ ವೇಳೆ ಆತ ಗಾಂಜಾ ಸೇವನೆ ಮಾಡಿರುವುದು ದೃಢವಾಗಿದ್ದು, ಪ್ರಕಾಶ್ ಕುಮಾರ್’ನನ್ನು ಬಂಧಿಸಲಾಗಿದೆ.
ಕೋಟೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
ಇದನ್ನೂ ಓದಿ – ಇವತ್ತಿನ ಎಲ್ಲಾ ಸುದ್ದಿಗಳನ್ನು ಓದಲು ಕ್ಲಿಕ್ ಮಾಡಿ
ನಿಮ್ಮೂರು, ನಿಮ್ಮ ಏರಿಯಾದ ಕಾರ್ಯಕ್ರಮಗಳು, ಸಮಸ್ಯೆಗಳು ಸುದ್ದಿಯಾಗಬೇಕಾ? ನೀವೇ ವರದಿಗಾರರಾಗಿ. ವಿಡಿಯೋ, ಫೋಟೊ ಮಾಡಿ 7411700200 ಮೊಬೈಲ್ ನಂಬರ್’ಗೆ ವಾಟ್ಸಪ್ ಮಾಡಿ. ನೆನಪಿರಲಿ, ಸುದ್ದಿ ಪ್ರಕಟಣೆಗೆ ನಾವು ಹಣ ಪಡೆಯುವುದಿಲ್ಲ.