SHIVAMOGGA LIVE NEWS | TEMPLE | 17 ಮೇ 2022
ಭದ್ರಾವತಿಯ ಪುರಾಣ ಪ್ರಸಿದ್ಧ ಶ್ರೀ ರಂಗನಾಥಸ್ವಾಮಿ ಬ್ರಹ್ಮರಥೋತ್ಸವ ವೈಭವದಿಂದ ನಡೆಯಿತು. ದೊಡ್ಡ ಸಂಖ್ಯೆಯಲ್ಲಿ ಭಕ್ತರು ಪಾಲ್ಗೊಂಡು, ರಥೋತ್ಸವವನ್ನು ಕಣ್ತುಂಬಿಕೊಂಡರು.
ಈಗ ಸುಲಭಕ್ಕೆ ಸಿಗಲಿದೆ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ 9972194422
ಹಳೇನಗರದ ಶ್ರೀ ಲಕ್ಷ್ಮೀನರಸಿಂಹಸ್ವಾಮಿ ದೇವರ ಬ್ರಹ್ಮರಥೋತ್ಸವ ಸಹಸ್ರಾರು ಭಕ್ತರ ಸಮ್ಮುಖದಲ್ಲಿ ವಿಜೃಂಭಣೆಯಿಂದ ನಡೆಯಿತು. ಸೋಮವಾರ ಮಧ್ಯಾಹ್ನ 12 ಗಂಟೆಗೆ ದೇವಸ್ಥಾನದ ಎದುರು ಹೂವಿನಿಂದ ಅಲಂಕರಿಸಿದ ರಥದಲ್ಲಿ ಭೂದೇವಿ ಶ್ರೀದೇವಿ ಸಹಿತನಾದ ಶ್ರೀನಿವಾಸಸ್ವಾಮಿಯ ಉತ್ಸವ ಮೂರ್ತಿಯನ್ನು ಪ್ರತಿಷ್ಠಾಪಿಸಿ ಪೂಜಾ ಕಾರ್ಯಗಳನ್ನು ನೆರವೇರಿಸಲಾಯಿತು.
ಇದನ್ನೂ ಓದಿ – ಶಿವಮೊಗ್ಗ ಡಿಸಿ ಗ್ರಾಮ ವಾಸ್ತವ್ಯಕ್ಕೆ ದಿನಾಂಕ, ಹಳ್ಳಿ ನಿಗದಿ, ಈ ಭಾರಿ ವಾಸ್ತವ್ಯ ಎಲ್ಲಿ?
ನಂತರ ರಥವನ್ನು ಎಳೆಯಲಾಯಿತು. ಭಕ್ತರು ರಥದ ಮೇಲೆ ಬಾಳೆ ಹಣ್ಣು, ಮೆಣಸು ಸೇರಿದಂತೆ ಇತರ ಪದಾರ್ಥಗಳನ್ನು ಎಸೆದು ತಮ್ಮ ಹರಕೆ ತೀರಿಸಿದರು. ರಸ್ತೆ ದುರಸ್ಥಿ ಹಿನ್ನೆಲೆ ದೇವಾಲಯದಿಂದ ಸ್ವಲ್ಪ ದೂರದವರೆಗೂ ರಥವನ್ನು ಎಳೆದು ಪುನಃ ಅದೆ ಮಾರ್ಗವಾಗ ದೇಗುಲಕ್ಕೆ ಬರಲಾಯಿತು.
ಭಕ್ತರಿಗೆ ಅನ್ನದಾನ
ಕೋವಿಡ್ ಹಿನ್ನೆಲೆಯಲ್ಲಿ ಎರಡು ವರ್ಷ ರಥೋತ್ಸವ ನಿಲ್ಲಿಸಲಾಗಿತ್ತು. ಆದ್ದರಿಂದ ಈ ಭಾರಿ ವಿಜೃಂಭಣೆಯಿಂದ ರಥೋತ್ಸವ ನೆರವೇರಿಸಲಾಯಿತು. ಭಕ್ತರಿಗೆ ಅನ್ನದಾನ ವ್ಯವಸ್ಥೆ ಮಾಡಲಾಗಿತ್ತು. ಸತ್ಯಮ್ಮ ದೀಕ್ಷಿತ್ ಟ್ರಸ್ಟ್ ವತಿಯಿಂದ ಅನ್ನದಾನ ಮಾಡಲಾಯಿತು. ಅರ್ಚಕರ ಕುಟುಂಬ, ಹಳೇ ನಗರದ ಶ್ರೀರಾಮೇಶ್ವರ ಸುಬ್ರಹ್ಮಣ್ಯ ಸ್ವಾಮಿ ದೇವಾಲಯ, ಶ್ರೀ ರಾಘವೇಂದ್ರ ಸ್ವಾಮಿ, ಶ್ರೀ ವಾದಿರಾಜಸ್ವಾಮಿ ಮಠದ ವತಿಯಿಂದಲೂ ಪ್ರತ್ಯೇಕವಾಗಿ ಪ್ರಸದ ವಿತರಣೆ ಮಾಡಲಾಯಿತು.
ಪೂಜಾ ಕಾರ್ಯದಲ್ಲಿ ತಹಸೀಲ್ದಾರ್ ಆರ್.ಪ್ರದೀಪ್, ಕಂದಾಯ ನಿರೀಕ್ಷಕ ಪ್ರಶಾಂತ್, ನಗರಸಭೆ ಅಧ್ಯಕ್ಷೆ ಗೀತಾ ರಾಜ್‌ಕುಮಾರ್, ಉಪಾಧ್ಯಕ್ಷ ಚನ್ನಪ್ಪ, ಪ್ರಧಾನ ಅರ್ಚಕ ರಂಗನಾಥ ಶರ್ಮ, ಶ್ರೀನಿವಾಸ್, ನರಸಿಂಹಾಚಾರ್, ರಮಾಕಾಂತ್, ಸುಧೀಂದ್ರ, ಮನು ಅಭಿರಾಮ್, ಅಭಿನಂದನ್ ಇತರರು ಪಾಲ್ಗೊಂಡಿದ್ದರು.
ಇದನ್ನೂ ಓದಿ – ಇವತ್ತಿನ ಎಲ್ಲಾ ಸುದ್ದಿಗಳನ್ನು ಓದಲು ಕ್ಲಿಕ್ ಮಾಡಿ
ನಿಮ್ಮೂರು, ನಿಮ್ಮ ಏರಿಯಾದ ಕಾರ್ಯಕ್ರಮಗಳು, ಸಮಸ್ಯೆಗಳು ಸುದ್ದಿಯಾಗಬೇಕಾ? ನೀವೇ ವರದಿಗಾರರಾಗಿ. ವಿಡಿಯೋ, ಫೋಟೊ ಮಾಡಿ 7411700200 ಮೊಬೈಲ್ ನಂಬರ್’ಗೆ ವಾಟ್ಸಪ್ ಮಾಡಿ. ನೆನಪಿರಲಿ, ಸುದ್ದಿ ಪ್ರಕಟಣೆಗೆ ನಾವು ಹಣ ಪಡೆಯುವುದಿಲ್ಲ.