ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಪುರಸ್ಕೃತ ಸಾಹಿತಿ ಡಿ.ಎಸ್.ನಾಗಭೂಷಣ್ ಶಿವಮೊಗ್ಗದಲ್ಲಿ ನಿಧನ

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

SHIVAMOGGA LIVE NEWS | LITERATURE | 19 ಮೇ 2022

ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಪುರಸ್ಕೃತ ಸಾಹಿತಿ ಡಿ.ಎಸ್.ನಾಗಭೂಷಣ್ (70) ಅವರು ಶಿವಮೊಗ್ಗದಲ್ಲಿ ನಿಧನರಾಗಿದ್ದಾರೆ.

ವಿನೋಬನಗರದ ಕಲ್ಲಹಳ್ಳಿಯಲ್ಲಿರುವ ಅವರ ಮನೆಯಲ್ಲಿ ಬುಧವಾರ ರಾತ್ರಿ ಕೊನೆಯುಸಿರೆಳೆದಿದ್ದಾರೆ. ಪತ್ನಿ ಸವಿತಾ ಮತ್ತು ಸಾಹಿತ್ಯ ಅಭಿಮಾನಿಗಳನ್ನು ಅವರು ಅಗಲಿಸಿದ್ದಾರೆ. ಸಂಜೆವರೆಗೂ ಕಲ್ಲಹಳ್ಳಿಯ ನಿವಾಸದಲ್ಲಿ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ.

ಮೂಲತಃ ಬೆಂಗಳೂರಿನವರು

ಡಿ.ಎಸ್.ನಾಗಭೂಷಣ್ ಅವರು ಮೂಲತಃ ಬೆಂಗಳೂರಿನ ಹೊಸಕೋಟೆ ತಾಲೂಕಿನ ತಿಮ್ಮಸಂದ್ರದವರು. 1952ರ ಫೆಬ್ರಬರಿ 1ರಂದು ಜನನ. 1973ರಲ್ಲಿ ಬೆಂಗಳೂರು ವಿಶ್ವವಿದ್ಯಾಲಯದಿಂದ ಗಣಿತ ವಿಷಯದಲ್ಲಿ ಸ್ನಾತಕೋತ್ತರ ಪದವಿ ಪಡೆದರು. 1975 ರಿಂದ 2005ರವರೆಗೆ ಆಕಾಶವಾಣಿಯ ವಿವಿಧ ಹುದ್ದೆಗಳಲ್ಲಿ ಕಾರ್ಯನಿರ್ವಹಿಸಿದರು.

ಸ್ವಯಂ ನಿವೃತ್ತಿ ಪಡೆದು ಪತ್ನಿ ಸವಿತಾ ಅವರೊಂದಿಗೆ ಶಿವಮೊಗ್ಗದಲ್ಲಿ ನೆಲೆಸಿದ್ದರು.

ಸಮಾಜವಾದಿ ಚಿಂತಕರು

ಸಮಾಜವಾದಿ ಚಿಂತನೆ ಮತ್ತು ಚರ್ಚೆಗಳ ವಿಚಾರದಲ್ಲಿ ಡಿ.ಎಸ್.ನಾಗಭೂಷಣ್ ಅವರ ಹೆಸರು ಮುಂಚೂಣಿಯಲ್ಲಿರುತ್ತಿತ್ತು. ಅಲ್ಲದೆ ಬರಹಗಳ ಮೂಲಕವು ಅವರು ಗುರುತಿಸಿಕೊಂಡಿದ್ದರು. ಇಂದಿಗೆ ಬೇಕಾದ ಗಾಂಧಿ, ಲೋಹಿಯಾ ಜೊತೆಯಲ್ಲಿ, ರೂಪ ರೂಪಗಳನ್ನು ದಾಟಿ, ಕುವೆಂಪು ಒಂದು ಪುನರನ್ವೇಷಣೆ, ಕುವೆಂಪು ಸಾಹಿತ್ಯ ದರ್ಶನ, ಜಯಪ್ರಕಾಶ ನಾರಾಯಣ ಒಂದು ಅಪೂರ್ಣ ಕ್ರಾಂತಿಯ ಕಥೆ, ನಮ್ಮ ಶಾಮಣ್ಣ, ಕನ್ನಡದ ಮನಸು ಮತ್ತು ಇತರೆ ಲೇಖನಗಳು, ಕಾಲಗ್ರಾಮ, ಮರಳಿ ಬರಲಿದೆ ಸಮಾಜವಾದ ಸೇರಿದಂತೆ ಹಲವರು ಕೃತಿಗಳನ್ನು ರಚಿಸಿದ್ದಾರೆ.

ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ

ಡಿ.ಎಸ್.ನಾಗಭೂಷಣ್ ಅವರ ಗಾಂಧಿ ಕಥನಕ್ಕೆ ಕೇಂದ್ರ ಸಾಹಿತ್ಯ (LITERATURE) ಅಕಾಡೆಮಿಯು 2021ರಲ್ಲಿ ಪ್ರಶಸ್ತಿ ನೀಡಿ ಗೌರವಿಸಿತ್ತು. ಮಹಾತ್ಮ ಗಾಂಧೀಜಿ ಅವರ ಬದುಕಿನ ವಿವರನ್ನು ಕಟ್ಟಿಕೊಡುವ ಅಪರೂಪದ ಕೃತಿ ಇದಾಗಿತ್ತು. ಇದು ಹಲವು ಭಾರಿ ಮರು ಮುದ್ರಣವನ್ನು ಕಂಡಿತ್ತು. ಅನೇಕ ಸಾಹಿತ್ಯ ಪ್ರಶಸ್ತಿಗಳು, ವಿವಿಧ ಸಂಘಟನೆಗಳಿಂದಲು ಡಿ.ಎಸ್.ನಾಗಭೂಷಣ್ ಅವರಿಗೆ ಗೌರವ ಸಲ್ಲಿಸಿದ್ದವು.

Shimoga DS Nagabhushan

ನೇರ ನುಡಿ ಮತ್ತು ಸಮಕಾಲಿನ ವಿಚಾರಗಳ ಪ್ರಖರ ವಿಶ್ಲೇಷಣೆ ಮತ್ತು ವಿಮರ್ಶೆ ಮಾಡುತ್ತಿದ್ದರು. ಹೊಸ ಮನುಷ್ಯ ಎಂಬ ಮಾಸಿಕ ಪತ್ರಿಕೆಗೆ ಸತತ 10 ವರ್ಷ ಸಂಪಾದಕರಾಗಿ ಕಾರ್ಯನಿರ್ವಹಿಸಿದ್ದರು.

ಇವತ್ತು ಸಂಜೆ ಶಿವಮೊಗ್ಗ ರೋಟರಿ ಚಿತಾಗಾರದಲ್ಲಿ ಡಿ.ಎಸ್.ನಾಗಭೂಷಣ್ ಅವರ ಅಂತ್ಯ ಸಂಸ್ಕಾರ ನೆರವೇರಲಿದೆ.

ಗಣ್ಯರ ಕಂಬನಿ

ಡಿ.ಎಸ್.ನಾಗಭೂಷಣ್ ಅವರ ನಿಧನಕ್ಕೆ ಅನೇಕ ಗಣ್ಯರು ಕಂಬನಿ ಮಿಡಿದಿದ್ದಾರೆ. ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಸಂತಾಪ ಸೂಚಿಸಿದ್ದಾರೆ.

‘ಅನ್ಯಾಯ,‌ ಅಸಮಾನತೆ ಮತ್ತು ಆತ್ಮವಂಚಕ ನಡವಳಿಕೆಗಳ ವಿರುದ್ಧದ ಹೋರಾಟಕ್ಕೆ, ಸಮಾಜವಾದಿ ಚಿಂತನೆಗಳನ್ನು ಅಸ್ತ್ರವಾಗಿ ಬಳಸುತ್ತಾ ಬಂದಿದ್ದ ಆತ್ಮೀಯರಾಗಿದ್ದ ಡಿ.ಎಸ್.ನಾಗಭೂಷಣ್ ಅವರ ಅಗಲಿಕೆಯಿಂದ ಆಘಾತಕ್ಕೀಡಾಗಿದ್ದೇನೆ. ಅವರ ಪತ್ನಿ‌ ಮತ್ತು ಗೆಳೆಯರೆಲ್ಲರ ಶೋಕದಲ್ಲಿ ನಾನೂ ಭಾಗಿಯಾಗಿದ್ದೇನೆ. ಡಿ.ಎಸ್.ನಾಗಭೂಷಣ್ ಅವರ ‘ಗಾಂಧಿ ಕಥನ’ ವನ್ನು‌ ಪ್ರೀತಿಯಿಂದ ಕಳಿಸಿಕೊಟ್ಟಿದ್ದರು. ಅದನ್ನು ಓದುತ್ತಿದ್ದೇನೆ ಎಂದಾಗ ಖುಷಿಪಟ್ಟಿದ್ದರು. ಲೋಹಿಯಾ ಚಿಂತನೆಯ‌‌ ಪುಸ್ತಕಗಳೂ ಸೇರಿದಂತೆ ಅವರ ಎಲ್ಲ ಕೃತಿಗಳ ಮೂಲಕ ನಾಗಭೂಷಣ್ ನಮ್ಮ ನೆನಪಲ್ಲಿ‌‌‌‌ ಸದಾ ಹಸಿರಾಗಿರುತ್ತಾರೆ.’ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಡಿ.ಎಸ್.ನಾಗಭೂಷಣ್ ಅವರನ್ನು ನೆನಪು ಮಾಡಿಕೊಂಡಿದ್ದಾರೆ.

Shimoga Nanjappa Hospital

‘ಕೇಂದ್ರಸಾಹಿತ್ಯ ಅಕಾಡೆಮಿ ಪ್ರಶಸ್ತಿ ಪುರಸ್ಕೃತ ಬರಹಗಾರ ಹಾಗೂ ಸಾಮಾಜಿಕ ಚಿಂತಕ ಡಿ.ಎಸ್. ನಾಗಭೂಷಣ ಅವರು ಕಾಲವಾದ ವಿಷಯ ತಿಳಿದು ಬೇಸರವಾಯಿತು. ಗಾಂಧಿ ಚಿಂತನೆಗಳ ಬಗ್ಗೆ ಮತ್ತಷ್ಟು ಅರಿವು ಮೂಡಿಸಿದ ಅವರ ಅಗಲಿಕೆಯು ಸಾಹಿತ್ಯ ಕ್ಷೇತ್ರಕ್ಕೆ ತುಂಬಲಾರದ ನಷ್ಟ’ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರು ಸಂತಾಪ ಸೂಚಿಸಿದ್ದಾರೆ.

ಇದನ್ನೂ ಓದಿ – ಇವತ್ತಿನ ಎಲ್ಲಾ ಸುದ್ದಿಗಳನ್ನು ಓದಲು ಕ್ಲಿಕ್ ಮಾಡಿ

ನಿಮ್ಮೂರು, ನಿಮ್ಮ ಏರಿಯಾದ ಕಾರ್ಯಕ್ರಮಗಳು, ಸಮಸ್ಯೆಗಳು ಸುದ್ದಿಯಾಗಬೇಕಾ? ನೀವೇ ವರದಿಗಾರರಾಗಿ. ವಿಡಿಯೋ, ಫೋಟೊ ಮಾಡಿ 7411700200 ಮೊಬೈಲ್ ನಂಬರ್’ಗೆ ವಾಟ್ಸಪ್ ಮಾಡಿ. ನೆನಪಿರಲಿ, ಸುದ್ದಿ ಪ್ರಕಟಣೆಗೆ ನಾವು ಹಣ ಪಡೆಯುವುದಿಲ್ಲ.

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : May 19, 2022

ಶಿಕ್ಷಕನ ಅಮಾನತು, ಇಲಾಖೆ ವಿಚಾರಣೆಗೆ ಆದೇಶಿಸಿದ ಡಿಡಿಪಿಐ, ಕಾರಣವೇನು?

ಶಿಕ್ಷಕನ ಅಮಾನತು, ಇಲಾಖೆ ವಿಚಾರಣೆಗೆ ಆದೇಶಿಸಿದ ಡಿಡಿಪಿಐ, ಕಾರಣವೇನು?

ಶಿವಮೊಗ್ಗ ಜಿಲ್ಲೆಯಲ್ಲಿ ತಂಪು ತಂಪು ವಾತಾವರಣ, ಇವತ್ತು ಎಷ್ಟಿರಲಿದೆ ತಾಪಮಾನ?

ಶಿವಮೊಗ್ಗ ಜಿಲ್ಲೆಯಲ್ಲಿ ತಂಪು ತಂಪು ವಾತಾವರಣ, ಇವತ್ತು ಎಷ್ಟಿರಲಿದೆ ತಾಪಮಾನ?

ಶಿವಮೊಗ್ಗದಲ್ಲಿ ಕೈ ಕೈ ಮಿಲಾಯಿಸಿ ಕಲ್ಲುಗಳಲ್ಲಿ ಹೊಡೆದುಕೊಂಡ ಅಕ್ಕಪಕ್ಕದ ಮನೆಯವರು, ಕಾರಣವೇನು?

ಶಿವಮೊಗ್ಗದಲ್ಲಿ ಕೈ ಕೈ ಮಿಲಾಯಿಸಿ ಕಲ್ಲುಗಳಲ್ಲಿ ಹೊಡೆದುಕೊಂಡ ಅಕ್ಕಪಕ್ಕದ ಮನೆಯವರು, ಕಾರಣವೇನು?

ನಾಳೆಯಿಂದ ಎಸ್ಸೆಸ್ಸೆಲ್ಸಿ ಪರೀಕ್ಷೆ, ಶಿವಮೊಗ್ಗದಲ್ಲಿ ಎಷ್ಟು ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ?

ನಾಳೆಯಿಂದ ಎಸ್ಸೆಸ್ಸೆಲ್ಸಿ ಪರೀಕ್ಷೆ, ಶಿವಮೊಗ್ಗದಲ್ಲಿ ಎಷ್ಟು ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ?

ಬ್ಯಾಂಕ್‌ ಉದ್ಯೋಗಿ, ವಿದ್ಯಾರ್ಥಿಗಳ ಮೇಲೆ ಹೆಜ್ಜೇನು ದಾಳಿ, ಗಾಯಾಳುಗಳು ಆಸ್ಪತ್ರೆಗೆ

ಬ್ಯಾಂಕ್‌ ಉದ್ಯೋಗಿ, ವಿದ್ಯಾರ್ಥಿಗಳ ಮೇಲೆ ಹೆಜ್ಜೇನು ದಾಳಿ, ಗಾಯಾಳುಗಳು ಆಸ್ಪತ್ರೆಗೆ

ಶಿವಮೊಗ್ಗದಲ್ಲಿ ಕೆಲಸ ಖಾಲಿ ಇದೆ, ತಿಂಗಳಿಗೆ ₹20,000 ದಿಂದ ₹50,000 ದವರೆಗೆ ಸಂಬಳ

ಶಿವಮೊಗ್ಗದಲ್ಲಿ ಕೆಲಸ ಖಾಲಿ ಇದೆ, ತಿಂಗಳಿಗೆ ₹20,000 ದಿಂದ ₹50,000 ದವರೆಗೆ ಸಂಬಳ

ತಂದೆ, ಮಗನಿಗೆ ಜೀವಾವಧಿ ಶಿಕ್ಷೆ, ದಂಡ ವಿಧಿಸಿದ ಶಿವಮೊಗ್ಗ ಕೋರ್ಟ್‌, ಯಾಕೆ?

ತಂದೆ, ಮಗನಿಗೆ ಜೀವಾವಧಿ ಶಿಕ್ಷೆ, ದಂಡ ವಿಧಿಸಿದ ಶಿವಮೊಗ್ಗ ಕೋರ್ಟ್‌, ಯಾಕೆ?

ಇವತ್ತು ಯಾವ್ಯಾವ ಅಡಿಕೆಗೆ ಎಷ್ಟಿದೆ ರೇಟ್? – 17 ಮಾರ್ಚ್‌ 2026 – ಅಡಿಕೆ ಧಾರಣೆ

ಇವತ್ತು ಯಾವ್ಯಾವ ಅಡಿಕೆಗೆ ಎಷ್ಟಿದೆ ರೇಟ್? – 17 ಮಾರ್ಚ್‌ 2026 – ಅಡಿಕೆ ಧಾರಣೆ

ಶಿವಮೊಗ್ಗ ಡಿ.ಸಿ ಎದುರು ಮೈದಾನಕ್ಕೆ ಬ್ಯಾರಿಕೇಡ್‌, ಹಿಂದೂ ಸಂಘಟನೆಗಳು ಗರಂ, ಕಾರಣವೇನು?

ಶಿವಮೊಗ್ಗ ಡಿ.ಸಿ ಎದುರು ಮೈದಾನಕ್ಕೆ ಬ್ಯಾರಿಕೇಡ್‌, ಹಿಂದೂ ಸಂಘಟನೆಗಳು ಗರಂ, ಕಾರಣವೇನು?

ಬೆಳಗ್ಗೆ ಲೇಔಟ್‌ಗೆ ಬಂದ ಲೆಕ್ಚರರ್‌ಗೆ ಕಾದಿತ್ತು ಆಘಾತ, ರಾತ್ರಿ 11.15ರ CCTV ದೃಶ್ಯ ಕಂಡು ಶಾಕ್‌

ಬೆಳಗ್ಗೆ ಲೇಔಟ್‌ಗೆ ಬಂದ ಲೆಕ್ಚರರ್‌ಗೆ ಕಾದಿತ್ತು ಆಘಾತ, ರಾತ್ರಿ 11.15ರ CCTV ದೃಶ್ಯ ಕಂಡು ಶಾಕ್‌

Leave a Comment