ಭಾರಿ ಮಳೆಗೆ ವ್ಯಕ್ತಿ ಬಲಿ, ಸ್ಥಳಕ್ಕೆ ತಹಶೀಲ್ದಾರ್ ಭೇಟಿ

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

SHIVAMOGGA LIVE NEWS | DEATH | 20 ಮೇ 2022

ಭಾರಿ ಮಳೆಗೆ ಶಿವಮೊಗ್ಗ ಜಿಲ್ಲೆಯಲ್ಲಿ ವ್ಯಕ್ತಿಯೊಬ್ಬರು ಸಾವನ್ನಪ್ಪಿದ್ದಾರೆ. ಗದ್ದೆಯಲ್ಲಿ ಕಾಲು ಜಾರಿ ಹೊಂಡಕ್ಕೆ ಬಿದ್ದು ವ್ಯಕ್ತಿ ಮೃತರಾಗಿದ್ದಾರೆ.

ಶಂಕರ, ಮೃತ ದುರ್ದೈವಿ. ತೀರ್ಥಹಳ್ಳಿ ತಾಲೂಕು ಮೇಲಿನ ತೂದೂರಿನಲ್ಲಿ ಘಟನೆ ಸಂಭವಿಸಿದೆ.

ಶಂಕರ ಅವರು ರಾತ್ರಿ ಗದ್ದೆಗೆ ತೆರಳಿದ್ದರು. ಬೆಳಗ್ಗೆ ಬಹು ಹೊತ್ತು ಮನೆ ಮರಳಿರಲಿಲ್ಲ. ಹಾಗಾಗಿ ಮನೆಯವರು ಹುಡುಕಿಕೊಂಡು ಹೋದಾಗ ಘಟನೆ ಬೆಳಕಿಗೆ ಬಂದಿದೆ. ಕಾಲು ಜಾರಿ ಹೊಂಡಕ್ಕೆ ಬಿದ್ದು ಶಂಕರ್ ಮೃತಪಟ್ಟಿದ್ದಾರೆ.

Shimoga Nanjappa Hospital

ತೀರ್ಥಹಳ್ಳಿ ತಹಶೀಲ್ದಾರ್ ಶ್ರೀಪಾದ್ ಅವರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಮರಣೋತ್ತರ ಪರೀಕ್ಷೆಗಾಗಿ ಮೃತದೇಹವನ್ನು ತೀರ್ಥಹಳ್ಳಿ ಜೆ.ಸಿ.ಆಸ್ಪತ್ರೆಗೆ ರವಾನಿಸಲಾಗಿದೆ.

ಇದನ್ನೂ ಓದಿ – ಶಿವಮೊಗ್ಗದ ಜಲಾಶಯಗಳಿಗೆ ಒಳ ಹರಿವು ಹೆಚ್ಚಳ, ಯಾವ್ಯಾವ ಡ್ಯಾಂನಲ್ಲಿ ಎಷ್ಟಿದೆ ನೀರು?

ನಿಮ್ಮೂರು, ನಿಮ್ಮ ಏರಿಯಾದ ಕಾರ್ಯಕ್ರಮಗಳು, ಸಮಸ್ಯೆಗಳು ಸುದ್ದಿಯಾಗಬೇಕಾ? ನೀವೇ ವರದಿಗಾರರಾಗಿ. ವಿಡಿಯೋ, ಫೋಟೊ ಮಾಡಿ 7411700200 ಮೊಬೈಲ್ ನಂಬರ್’ಗೆ ವಾಟ್ಸಪ್ ಮಾಡಿ. ನೆನಪಿರಲಿ, ಸುದ್ದಿ ಪ್ರಕಟಣೆಗೆ ನಾವು ಹಣ ಪಡೆಯುವುದಿಲ್ಲ.

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment