SHIVAMOGGA LIVE NEWS | THEFT | 21 ಮೇ 2022
ಯಾರೂ ಇಲ್ಲದ ಸಂದರ್ಭ ಮನೆ ಬಾಗಿಲಿನ ಬೀಗ ಮುರಿದು ಚಿನ್ನಾಭರಣ, ನಗದು ಕಳ್ಳತನ ಮಾಡಲಾಗಿದೆ.
ಶಿವಮೊಗ್ಗದ ವಿರುಪಿನಕೊಪ್ಪ ಗ್ರಾಮದ ಶಾರದಾ ಎಂಬುವವರ ಮನೆಯಲ್ಲಿ ಕಳ್ಳತನವಾಗಿದೆ. ಶಾರದಾ ಅವರ ಪತಿ ತೀರಿಕೊಂಡಿದ್ದು, ಇಬ್ಬರು ಮಕ್ಕಳೊಂದಿಗೆ ವಾಸವಾಗಿದ್ದಾರೆ. ನಿತ್ಯ ರಾತ್ರಿ ತಮ್ಮ ಅತ್ತೆ, ಮಾವನ ಮನೆಯಲ್ಲಿ ಶಾರದಾ ಅವರು ಉಳಿದುಕೊಳ್ಳುತ್ತಿದ್ದರು.
ಗುರುವಾರ ಬೆಳಗ್ಗೆ ಶಾರದಾ ಅವರು ಅತ್ತೆ, ಮಾವನ ಮನೆಯಿಂದ ಮರಳಿದಾಗ ಮನೆ ಬಾಗಿಲ ಬೀಗ ಮುರಿಯಲಾಗಿತ್ತು. ಒಳಗೆ ಹೋಗಿ ನೋಡಿದಾಗ ಬೀರುವಿನಲ್ಲಿ ಇಟ್ಟಿದ್ದ ಚಿನ್ನಾಭರಣ, ನಗದು ಕಳ್ಳತನವಾಗಿತ್ತು. 1.45 ಲಕ್ಷ ರೂ. ಮೌಲ್ಯದ ಚಿನ್ನಾಭರಣ, ಮೂರು ಸಾವಿರ ರೂ. ನಗದು ನಾಪತ್ತೆಯಾಗಿದೆ ಎಂದು ದೂರಿನಲ್ಲಿ ತಿಳಿಸಲಾಗಿದೆ.

ಈ ಸಂಬಂಧ ಶಿವಮೊಗ್ಗ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಇದನ್ನೂ ಓದಿ – ಎಗ್ ರೈಸ್ ಸೇವಿಸಿ ಮನೆಗೆ ನಡೆದು ಹೋಗುತ್ತಿದ್ದ ಪೊಲೀಸ್ ಸಿಬ್ಬಂದಿಗೆ ಹಿಂಬದಿಯಿಂದ ಬೈಕ್ ಡಿಕ್ಕಿ
ನಿಮ್ಮೂರು, ನಿಮ್ಮ ಏರಿಯಾದ ಕಾರ್ಯಕ್ರಮಗಳು, ಸಮಸ್ಯೆಗಳು ಸುದ್ದಿಯಾಗಬೇಕಾ? ನೀವೇ ವರದಿಗಾರರಾಗಿ. ವಿಡಿಯೋ, ಫೋಟೊ ಮಾಡಿ 7411700200 ಮೊಬೈಲ್ ನಂಬರ್’ಗೆ ವಾಟ್ಸಪ್ ಮಾಡಿ. ನೆನಪಿರಲಿ, ಸುದ್ದಿ ಪ್ರಕಟಣೆಗೆ ನಾವು ಹಣ ಪಡೆಯುವುದಿಲ್ಲ.
