ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
SHIVAMOGGA LIVE NEWS | GAS LEAK | 24 ಮೇ 2022
ಸಿಲಿಂಡರ್ ಗ್ಯಾಸ್ ಸೋರಿಕೆಯಾಗಿ ಅಡುಗೆ ಮನೆಯಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಮನೆಯವರು ಮತ್ತು ಗ್ರಾಮಸ್ಥರ ಸಮಯ ಪ್ರಜ್ಞೆಯಿಂದಾಗಿ ಸಂಭಾವ್ಯ ದೊಡ್ಡ ಹಾನಿ ತಪ್ಪಿದಂತಾಗಿದೆ.
ಶಿವಮೊಗ್ಗದ ಪುರದಾಳು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಶಾಂತಿಪುರದ ಶ್ರೀಧರ್ ಎಂಬುವವರ ಮನೆಯಲ್ಲಿ ಘಟನೆ ಸಂಭವಿಸಿದೆ.
ಬೆಂಕಿ ತಂದ ಆತಂಕ
ಶ್ರೀಧರ್ ಅವರ ಮನೆಯ ಅಡುಗೆ ಮನೆಯಲ್ಲಿಟ್ಟಿದ್ದ ಸಿಲಿಂಡರ್’ನಿಂದ ಗ್ಯಾಸ್ ಸೋರಿಕೆಯಾಗಿ ಬೆಂಕಿ ಹೊತ್ತಿಕೊಂಡಿದೆ. ಇದರಿಂದ ಮನೆಯವರು ಆತಂಕಕ್ಕೀಡಾಗಿದ್ದರು. ಹಸಿ ಗೋಣಿ ಚೀಲ ಸುತ್ತಿ ಬೆಂಕಿ ನಂದಿಸಲು ಯತ್ನಿಸಿದ್ದಾರೆ.
ಗ್ರಾಮಸ್ಥರು ಕೂಡ ನೆರವಿಗೆ ಧಾವಿಸಿದ್ದಾರೆ. ಮರಳು ಸುರಿದು ಬೆಂಕಿ ನಂದಿಸಲು ಪ್ರಯತ್ನಿಸಿದ್ದಾರೆ. ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕ ಸಿಬ್ಬಂದಿ ಕಾರ್ಯಾಚರಣೆ ನಡೆಸಿ ಬೆಂಕಿ ನಂದಿಸಿದ್ದಾರೆ.
ಅಡುಗೆ ಮನೆಯಲ್ಲಿದ್ದ ಕೆಲವು ವಸ್ತುಗಳಿಗೆ ಬೆಂಕಿಯಿಂದ ಹಾನಿ ಸಂಭವಿಸಿದೆ ಎಂದು ತಿಳಿದು ಬಂದಿದೆ.
ಇದನ್ನೂ ಓದಿ – ಶಿವಮೊಗ್ಗದಲ್ಲಿ ಒಂದೇ ದಿನ 150ಕ್ಕೂ ಹೆಚ್ಚು ಜನರನ್ನು ಕಾಪಾಡಿದ ‘ಆಪತ್ಭಾಂಧವರು’, ಯಾರದು?
ನಿಮ್ಮೂರು, ನಿಮ್ಮ ಏರಿಯಾದ ಕಾರ್ಯಕ್ರಮಗಳು, ಸಮಸ್ಯೆಗಳು ಸುದ್ದಿಯಾಗಬೇಕಾ? ನೀವೇ ವರದಿಗಾರರಾಗಿ. ವಿಡಿಯೋ, ಫೋಟೊ ಮಾಡಿ 7411700200 ಮೊಬೈಲ್ ನಂಬರ್’ಗೆ ವಾಟ್ಸಪ್ ಮಾಡಿ. ನೆನಪಿರಲಿ, ಸುದ್ದಿ ಪ್ರಕಟಣೆಗೆ ನಾವು ಹಣ ಪಡೆಯುವುದಿಲ್ಲ.
LATEST NEWS
- ಬೆಟ್ಟೆ, ರಾಶಿ ರೇಟ್ ಇವತ್ತು ಎಷ್ಟಿದೆ? ಸರಕು ದರ ಮತ್ತೆ ಹೆಚ್ಚಾಯ್ತಾ? – 3 ಮಾರ್ಚ್ 2026

- ಶಿವಮೊಗ್ಗದಲ್ಲಿ ರಂಗ ಹಬ್ಬ, ನಾಲ್ಕು ದಿನ ನಾಟಕೋತ್ಸವ, ಯಾವ್ಯಾವ ದಿನ ಯಾವ ನಾಟಕವಿದೆ?

- ಶಿವಮೊಗ್ಗ ಬಸ್ ನಿಲ್ದಾಣದಲ್ಲಿ ವ್ಯಕ್ತಿಗೆ ಬಿಸಿ ಮುಟ್ಟಿಸಿದ ಅಕ್ಕ ಪಡೆ, ಆಗಿದ್ದೇನು?

- ದುರ್ಗಿಗುಡಿಯಲ್ಲಿ ವೈಭವದ ರಥೋತ್ಸವ, ಈ ಬಾರಿ ಉತ್ಸವ ಬೆಳಗ್ಗೆ ನಡೆದಿದ್ದೇಕೆ?

- ₹1,00,000 ಲಂಚದ ಹಣದೊಂದಿಗೆ ಲೋಕಾಯುಕ್ತರಿಗೆ ಸಿಕ್ಕಿಬಿದ್ದ ಅಧಿಕಾರಿ, ಮಧ್ಯವರ್ತಿ

About The Editor
ನಿತಿನ್ ಆರ್.ಕೈದೊಟ್ಲು






