ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
SHIVAMOGGA LIVE NEWS | GUN | 26 ಮೇ 2022
ಪರವಾನಗಿ ಇಲ್ಲದೆ ಬಂದೂಕು ರಿಪೇರಿ ಮಾಡುತ್ತಿದ್ದ ಆರೋಪ ಸಂಬಂಧ ಪೊಲೀಸರು ದಾಳಿ ನಡೆಸಿ ವ್ಯಕ್ತಿಯೊಬ್ಬನನ್ನು ಬಂಧಿಸಿದ್ದಾರೆ. ಆತನಿಂದ 9 ನಾಡ ಬಂದೂಕುಗಳನ್ನು (GUN) ವಶಕ್ಕೆ ಪಡೆದಿದ್ದಾರೆ.
ಪಾಲಾಕ್ಷಪ್ಪ (47) ಬಂಧಿತ. ಭದ್ರಾವತಿ ತಾಲೂಕು ಶಂಕರಘಟ್ಟ ಗ್ರಾಮದ ಮನೆಯಲ್ಲಿ ಪಾಲಾಕ್ಷಪ್ಪ ನಾಡ ಬಂದೂಕುಗಳ ರಿಪೇರಿ ಮಾಡುತ್ತಿದ್ದ. ಖಚಿತ ಮಾಹಿತಿ ಹಿನ್ನೆಲೆ ಭದ್ರಾವತಿ ಗ್ರಾಮಾಂತರ ಠಾಣೆ ಪೊಲೀಸರು ಮನೆ ಮೇಲೆ ದಾಳಿ ನಡೆಸಿದ್ದಾರೆ.
ದಾಳಿ ವೇಳೆ ಪಾಲಾಕ್ಷಪ್ಪನ ಮನೆಯಲ್ಲಿ 9 ನಾಡ ಬಂದೂಕುಗಳು ಸಿಕ್ಕಿವೆ. ಅವುಗಳನ್ನು ವಶಕ್ಕೆ ಪಡೆಯಲಾಗಿದೆ. ಆಯುಧ ಕಾಯ್ದೆ ಅಡಿ ಪ್ರಕರಣ ದಾಖಲು ಮಾಡಲಾಗಿದೆ ಎಂದು ಪೊಲೀಸ್ ಪ್ರಕಟಣೆಯಲ್ಲಿ ತಿಳಿಸಲಾಗಿದೆ.
ಭದ್ರಾವತಿ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಮುಂದುವರೆಸಿದ್ದಾರೆ.
ಇದನ್ನೂ ಓದಿ – ಹೊಳೆ ಬಸ್ ಸ್ಟಾಪ್ ಬಳಿ ಪುರಲೆಯ ವ್ಯಕ್ತಿ ಅರೆಸ್, ಕೇಸ್ ದಾಖಲು
ನಿಮ್ಮೂರು, ನಿಮ್ಮ ಏರಿಯಾದ ಕಾರ್ಯಕ್ರಮಗಳು, ಸಮಸ್ಯೆಗಳು ಸುದ್ದಿಯಾಗಬೇಕಾ? ನೀವೇ ವರದಿಗಾರರಾಗಿ. ವಿಡಿಯೋ, ಫೋಟೊ ಮಾಡಿ 7411700200 ಮೊಬೈಲ್ ನಂಬರ್’ಗೆ ವಾಟ್ಸಪ್ ಮಾಡಿ. ನೆನಪಿರಲಿ, ಸುದ್ದಿ ಪ್ರಕಟಣೆಗೆ ನಾವು ಹಣ ಪಡೆಯುವುದಿಲ್ಲ.
LATEST NEWS
- ಬೆಳಗ್ಗೆ ಲೇಔಟ್‌ಗೆ ಬಂದ ಲೆಕ್ಚರರ್‌ಗೆ ಕಾದಿತ್ತು ಆಘಾತ, ರಾತ್ರಿ 11.15ರ CCTV ದೃಶ್ಯ ಕಂಡು ಶಾಕ್

- ಶಿವಮೊಗ್ಗ TO ಬೆಂಗಳೂರು ಇನ್ನಷ್ಟು ವೇಗ, ದ್ವಿಪಥ ಯೋಜನೆಗೆ ಒತ್ತಾಯ

- ಜಮೀನಿಗೆ ನೀರು ಹರಿಸಲು ಹೋಗಿದ್ದ ವ್ಯಕ್ತಿಗೆ ಕಾದಿತ್ತು ಸಾವು, ಆಗಿದ್ದೇನು?

- ನಾಳೆಯಿಂದ SSLC ಪರೀಕ್ಷೆ, ಹೇಗಿದೆ ಸಿದ್ಧತೆ? ಯಾವ್ಯಾವ ತಾಲೂಕಿನಲ್ಲಿ ಎಷ್ಟು ಪರೀಕ್ಷಾ ಕೇಂದ್ರಗಳಿವೆ?

- ಮನೆಯ ಮೀಟರ್ ಬೋರ್ಡ್ ಮೇಲೆ ಕೀ ಇಡುವ ಅಭ್ಯಾಸ ಇದ್ಯಾ? ನಿದಿಗೆಯಲ್ಲಿ ದಾಖಲಾಯ್ತು ಕೇಸ್, ಯಾಕೆ?

About The Editor
ನಿತಿನ್ ಆರ್.ಕೈದೊಟ್ಲು
















