SHIVAMOGGA LIVE NEWS | SIGANDUR | 26 ಮೇ 2022
ಸಿಗಂದೂರು ಲಾಂಚ್ ಸಿಬ್ಬಂದಿಯೊಬ್ಬರು ಹೃದಯಾಘಾತದಿಂದ ಮೃತರಾಗಿದ್ದಾರೆ. ಅವರ ಸಾವಿಗೆ ಹಿನ್ನೀರು ಭಾಗದ ಜನರು, ಶಾಸಕ ಹರತಾಳು ಹಾಲಪ್ಪ ಅವರು ಕಂಬನಿ ಮಿಡಿದಿದ್ದಾರೆ.
ಹುಲಿದೇವರಬನದ ಭಾಸ್ಕರ್ (51) ಮೃತರು. ಬುಧವಾರ ಬೆಳಗ್ಗೆ ಹೃದಯಾಘಾತ ಸಂಭವಿಸಿ ಭಾಸ್ಕರ್ ಅವರು ಮೃತರಾಗಿದ್ದಾರೆ.
ಹಿನ್ನೀರು ಭಾಗದಲ್ಲಿ ಹೆಸರುವಾಸಿ
ಭಾಸ್ಕರ್ ಅವರು ಹಿನ್ನೀರು ಭಾಗದಲ್ಲಿ ಹೆಸರುವಾಸಿಯಾಗಿದ್ದರು. ಸುಮಾರು 15 ವರ್ಷದಿಂದ ಇವರು ಲಾಂಚ್’ನಲ್ಲಿ ಕೆಲಸ ಮಾಡುತ್ತಿದ್ದರು. ಈ ಮೊದಲು ಹಸಿರುಮಕ್ಕಿ ಲಾಂಚ್’ನಲ್ಲಿ ಕರ್ತವ್ಯ ನಿರ್ವಹಿಸಿದ್ದರು. ಆ ಬಳಿಕ ಸಿಗಂದೂರಿಗೆ (SIGANDUR) ಸಂಪರ್ಕ ಕಲ್ಪಿಸುವ ಅಂಬಾರಗೋಡ್ಲು – ಕಳಸವಳ್ಳಿ ಲಾಂಚ್’ನಲ್ಲಿ ಸೇವೆ ಸಲ್ಲಿಸುತ್ತಿದ್ದರು.
ಶಾಸಕ ಹಾಲಪ್ಪ ಕಂಬನಿ
‘ಕಳಸವಳ್ಳಿ – ಅಂಬಾರಗೋಡ್ಲು ಲಾಂಚ್ ಸಿಬ್ಬಂದಿಯಾಗಿ ಸೇವೆ ಸಲ್ಲಿಸುತ್ತಿದ್ದ ಭಾಸ್ಕರ್ ಅವರ ನಿಧನ ಮನಸ್ಸಿಗೆ ದುಃಖವನ್ನುಂಟು ಮಾಡಿದೆ. ಭಗವಂತ ಮೃತರ ಆತ್ಮಕ್ಕೆ ಚಿರಶಾಂತಿಯನ್ನು ಕರುಣಿಸಿ, ಕುಟುಂಬಸ್ಥರಿಗೆ ಹಾಗೂ ಹಿತೈಷಿಗಳಿಗೆ ದುಃಖ ಭರಿಸುವ ಶಕ್ತಿ ನೀಡಲೆಂದು ಪ್ರಾರ್ಥಿಸುತ್ತೇನೆ’ ಎಂದು ಶಾಸಕ ಹರತಾಳು ಹಾಲಪ್ಪ ಅವರು ಸಂತಾಪ ಸೂಚಿಸಿದ್ದಾರೆ.
ಇದನ್ನೂ ಓದಿ – ಶಿವಮೊಗ್ಗದಲ್ಲಿ ಕಾರ್ಪೊರೇಟರ್ ಮನೆಗೆ ಮುತ್ತಿಗೆ ಹಾಕಿದವರ ವಿರುದ್ಧ ಕೇಸ್
ನಿಮ್ಮೂರು, ನಿಮ್ಮ ಏರಿಯಾದ ಕಾರ್ಯಕ್ರಮಗಳು, ಸಮಸ್ಯೆಗಳು ಸುದ್ದಿಯಾಗಬೇಕಾ? ನೀವೇ ವರದಿಗಾರರಾಗಿ. ವಿಡಿಯೋ, ಫೋಟೊ ಮಾಡಿ 7411700200 ಮೊಬೈಲ್ ನಂಬರ್’ಗೆ ವಾಟ್ಸಪ್ ಮಾಡಿ. ನೆನಪಿರಲಿ, ಸುದ್ದಿ ಪ್ರಕಟಣೆಗೆ ನಾವು ಹಣ ಪಡೆಯುವುದಿಲ್ಲ.
- ಶಿವಮೊಗ್ಗದ ಒಂದು ರೈಲು ಎರಡು ದಿನ ಭಾಗಶಃ ರದ್ದು, ಕಾರಣವೇನು?
- ಅಡಿಕೆ ಧಾರಣೆ | 20 ಜನವರಿ 2025 | ಇವತ್ತು ಎಲ್ಲೆಲ್ಲಿ ಎಷ್ಟಿದೆ ಅಡಿಕೆ ರೇಟ್?
- ಮೆಗ್ಗಾನ್ ಆಸ್ಪತ್ರೆ ಬಳಿ ATMನಲ್ಲಿ ಹಣ ಬಿಡಿಸಿದ ರೈತ, ಮರುದಿನ ಕಾದಿತ್ತು ಆಘಾತ, ಆಗಿದ್ದೇನು?
- ಕುವೆಂಪು ವಿವಿಯಿಂದ ಮೂವರಿಗೆ ಗೌರವ ಡಾಕ್ಟರೇಟ್, ಯಾರಿಗೆಲ್ಲ ಪ್ರದಾನ ಮಾಡಲಾಗ್ತಿದೆ?
- ಶಿವಮೊಗ್ಗ ಜಿಲ್ಲೆ, ಇವತ್ತು ಯಾವ್ಯಾವ ತಾಲೂಕಿನಲ್ಲಿ ಎಷ್ಟಿರುತ್ತೆ ತಾಪಮಾನ?
- ಮಕ್ಕಳಿಗೆ ಚಿನ್ನದ ಸರ ಹಾಕುವ ಪೋಷಕರೆ ಹುಷಾರ್, ಶಿವಮೊಗ್ಗದಲ್ಲಿ ಎರಡು ಪ್ರತ್ಯೇಕ ಕೇಸ್ ದಾಖಲು