ಯಡಿಯೂರಪ್ಪ ಅನುಪಸ್ಥಿತಿಯಲ್ಲಿ ನಾಮಪತ್ರ ಸಲ್ಲಿಸಿದ ಬಿಜೆಪಿ ಅಭ್ಯರ್ಥಿ ರಾಘವೇಂದ್ರ

Published On : ಮಾರ್ಚ್ 28, 2019

Published By : ನಿತಿನ್‌ ಆರ್‌.ಕೈದೊಟ್ಲು 

ಶಿವಮೊಗ್ಗ ಲೈವ್.ಕಾಂ | 28 ಮಾರ್ಚ್ 2019

ಲೋಕಸಭೆ ಚುನಾವಣೆಗೆ ಬಿಜೆಪಿ ಅಭ್ಯರ್ಥಿ ಬಿ.ವೈ.ರಾಘವೇಂದ್ರ ಇವತ್ತು ನಾಮಪತ್ರ ಸಲ್ಲಿಸಿದರು. ಜಿಲ್ಲಾಧಿಕಾರಿ ಕಚೇರಿಗೆ ಆಗಮಿಸಿದ ರಾಘವೇಂದ್ರ, ತಮ್ಮ ಉಮೇದುವಾರಿಕೆ ಸಲ್ಲಿಸಿದರು.

ರಾಘವೇಂದ್ರ ಅವರೊಂದಿಗೆ ಪತ್ನಿ ತೇಜಸ್ವಿನಿ, ಶಾಸಕರಾದ ಕೆ.ಎಸ್.ಈಶ್ವರಪ್ಪ, ಹರತಾಳು ಹಾಲಪ್ಪ, ಬಿಜೆಪಿ ಜಿಲ್ಲಾಧ್ಯಕ್ಷ ರುದ್ರೇಗೌಡ ಇದ್ದರು.

ರಾಘವೇಂದ್ರ ನಾಮಪತ್ರ ಸಲ್ಲಿಕೆ ವೇಳೆ, ಯಡಿಯೂರಪ್ಪ ಅವರು ಉಪಸ್ಥಿತರಿರಬೇಕಿತ್ತು. ಹೆಲಿಕಾಪ್ಟರ್’ನಲ್ಲಿ ತಾಂತ್ರಿಕ ದೋಷ ಕಾಣಿಸಿಕೊಂಡ ಹಿನ್ನೆಲೆ, ಅವರು ಬೆಂಗಳೂರಿನಿಂದ ಶಿವಮೊಗ್ಗಕ್ಕೆ ಬರಲು ಸಾಧ್ಯವಾಗಲಿಲ್ಲ. ಹಾಗಾಗಿ ಯಡಿಯೂರಪ್ಪ ಅನುಪಸ್ಥಿತಿಯಲ್ಲಿ ರಾಘವೇಂದ್ರ ನಾಮಪತ್ರ ಸಲ್ಲಿಸುವಂತಾಯಿತು.

ಶಿವಮೊಗ್ಗ ಲೈವ್.ಕಾಂ ವಾಟ್ಸಪ್ ನಂಬರ್ | 7411700200

ಸುದ್ದಿಗಾಗಿ ಮೊಬೈಲ್ ನಂಬರ್ | 9964634494

ಈ ಮೇಲ್ | shivamoggalive@gmail.com

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : ಮಾರ್ಚ್ 28, 2019

Leave a Comment