ಶಿವಮೊಗ್ಗ ಲೈವ್.ಕಾಂ
ಶಿವಮೊಗ್ಗ ಜಿಲ್ಲೆಯ ನಂಬರ್ 1 ಸುದ್ದಿ ಮಾಧ್ಯಮ
SHIVAMOGGA LIVE NEWS | DEPUTY COMMISSIONER | 27 ಮೇ 2022
ಜಿಲ್ಲಾಧಿಕಾರಿ ನಡೆ ಹಳ್ಳಿಯ ಕಡೆಗೆ ಕಾರ್ಯಕ್ರಮದಡಿ ಜಿಲ್ಲಾಧಿಕಾರಿ ಡಾ.ಆರ್.ಸೆಲ್ವಮಣಿ ಅವರು ಇವತ್ತು ರಿಪ್ಪನ್ ಪೇಟೆ ಸಮೀಪದ ಬೆಳ್ಳೂರು ಗ್ರಾಮದಲ್ಲಿ ವಾಸ್ತವ್ಯ ಮಾಡಲಿದ್ದಾರೆ.
ಬೆಳಗ್ಗೆ 11 ಗಂಟೆಗೆ ಬೆಳ್ಳೂರು ಗ್ರಾಮ ಪಂಚಾಯಿತಿಯಲ್ಲಿ ನಡೆಯಲಿರುವ ಜಿಲ್ಲಾಧಿಕಾರಿಗಳ ನಡೆ ಹಳ್ಳಿಯ ಕಡೆ ಕಾರ್ಯಕ್ರಮ ಉದ್ಘಾಟಿಸಿ ಗ್ರಾಮಸ್ಥರ ಕುಂದುಕೊರತೆಗಳನ್ನು ಆಲಿಸಲಿದ್ದಾರೆ.
ಈ ಭಾಗದಲ್ಲಿ ಶರಾವತಿ, ಚಕ್ರ,ಮಾಣಿ, ವರಾಹಿ, ಸಾವೆಹಕ್ಲು ಯೋಜನೆಗಳಿಂದ ನಿರಾಶ್ರಿತರಾದ ಕುಟುಂಬಗಳೇ ಹೆಚ್ಚಾಗಿ ವಾಸವಾಗಿದ್ದಾರೆ. ಇವರ ಮೂಲಭೂತ ಸಮಸ್ಯೆಗಳು, ಉದ್ಯೋಗ, ಹಕ್ಕುಪತ್ರ, ಮುಳುಗಡೆ ಪರಿಹಾರ, ರಸ್ತೆ, ಶಾಲೆಗಳು ಮುಂತಾದ ಸಮಸ್ಯೆಗಳಿಗೆ ಜಿಲ್ಲಾಧಿಕಾರಿಗಳಿಂದ ಪರಿಹಾರ ಸಿಗಲಿದೆ ಎಂಬ ನಿರೀಕ್ಷೆ ಗ್ರಾಮಸ್ಥರಲ್ಲಿದೆ.
ಇದನ್ನೂ ಓದಿ – 24 ವರ್ಷದ ಬಳಿಕ ಜಾತ್ರೆ, ಸಿದ್ಧತೆ ಕುರಿತು ಮಹತ್ವದ ಸಭೆ
ನಿಮ್ಮೂರು, ನಿಮ್ಮ ಏರಿಯಾದ ಕಾರ್ಯಕ್ರಮಗಳು, ಸಮಸ್ಯೆಗಳು ಸುದ್ದಿಯಾಗಬೇಕಾ? ನೀವೇ ವರದಿಗಾರರಾಗಿ. ವಿಡಿಯೋ, ಫೋಟೊ ಮಾಡಿ 7411700200 ಮೊಬೈಲ್ ನಂಬರ್’ಗೆ ವಾಟ್ಸಪ್ ಮಾಡಿ. ನೆನಪಿರಲಿ, ಸುದ್ದಿ ಪ್ರಕಟಣೆಗೆ ನಾವು ಹಣ ಪಡೆಯುವುದಿಲ್ಲ.
ಈಗ ಸುಲಭಕ್ಕೆ ಸಿಗಲಿದೆ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ 9972194422