ಶಿವಮೊಗ್ಗ ಲೈವ್.ಕಾಂ
ಶಿವಮೊಗ್ಗ ಜಿಲ್ಲೆಯ ನಂಬರ್ 1 ಸುದ್ದಿ ಮಾಧ್ಯಮ
SHIVAMOGGA LIVE NEWS | ATTACK | 29 ಮೇ 2022
ಹಳೆ ದ್ವೇಷದ ಹಿನ್ನೆಲೆ ನಡುರಸ್ತೆಯಲ್ಲೇ ಯುವಕನನ್ನು ಅಡ್ಡಗಟ್ಟಿ ಥಳಿಸಲಾಗಿದೆ. ಅಲ್ಲದೆ ಮಚ್ಚು ತೋರಿಸಿ ಬೆದರಿಕೆ ಒಡ್ಡಲಾಗಿದೆ. ಈ ಸಂಬಂಧ ಇಬ್ಬರ ವಿರುದ್ಧ ಪ್ರಕರಣ ದಾಖಲಾಗಿದೆ.
ಈಗ ಸುಲಭಕ್ಕೆ ಸಿಗಲಿದೆ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ 9972194422
ಶಿವಮೊಗ್ಗದ ಹೊಸಮನೆ ಬಡಾವಣೆ ನಿವಾಸಿ ರಾಮಾಂಜನಿ ಎಂಬಾತನ ಮೇಲೆ ಹಲ್ಲೆ ನಡೆಸಲಾಗಿದೆ. ಹೊಸಮನೆಯ ಓಂ ಸರ್ಕಲ್ ಬಳಿ ಘಟನೆ ಸಂಭವಿಸಿದೆ. ಪರಶುರಾಮ್ ಮತ್ತು ನವೀನ್ ಎಂಬುವವರು ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಲಾಗಿದೆ.
ಓಂ ಸರ್ಕಲ್ ಬಳಿ ರಾಮಾಂಜನಿ ನಡೆದು ಮನೆಗೆ ತೆರಳುತ್ತಿದ್ದಾಗ ಆರೋಪಿಗಳು ಅಡ್ಡಗಟ್ಟಿ ಹಲ್ಲೆ ನಡೆಸಿದ್ದಾರೆ. ರಾಮಾಂಜನಿ ಜೋರಾಗಿ ಕೂಗಿಕೊಂಡಿದ್ದರಿಂದ ಅವರ ಕುಟುಂಬದವರು ಬಂದು ಜಗಳ ಬಿಡಿಸಲು ಮುಂದಾಗಿದ್ದಾರೆ. ಈ ವೇಳೆ ಪರಶುರಾಮ ಕಲ್ಲು ಎತ್ತಿ ಹಾಕಿದ್ದಾನೆ ಎಂದು ಆರೋಪಿಸಲಾಗಿದೆ. ರಾಮಾಂಜನಿ ತಪ್ಪಿಸಿಕೊಂಡಿದ್ದು, ಬಲಗೈ ಮೇಲೆ ಬಿದ್ದು ಗಾಯವಾಗಿದೆ. ಸ್ಥಳೀಯರು ಗಲಾಟೆ ಬಿಡಿಸಿದ್ದಾರೆ. ಈ ವೇಳೆ ಆರೋಪಿಗಳು ಮಚ್ಚು ತೋರಿಸಿದ್ದಾರೆ ಎಂದು ದೂರಿನಲ್ಲಿ ತಿಳಿಸಲಾಗಿದೆ.
ನಾಲ್ಕು ವರ್ಷದ ಹಿಂದೆ ರಾಮಾಂಜನಿ ಜೊತೆಗೆ ಆರೋಪಿಗಳು ಗಲಾಟೆ ಮಾಡಿದ್ದರು. ಈ ಸಂಬಂಧ ಪ್ರಕರಣ ನ್ಯಾಯಾಲಯದಲ್ಲಿ ವಿಚಾರಣೆ ಹಂತದಲ್ಲಿದೆ. ಈ ಪ್ರಕರಣವನ್ನು ರಾಜಿ ಮಾಡಿಕೊಳ್ಳುವಂತೆ ಒತ್ತಡ ಹೇರಲಾಗುತ್ತಿತ್ತು ಎಂದು ದೂರಿನಲ್ಲಿ ತಿಳಿಸಲಾಗಿದೆ.
ದೊಡ್ಡಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ನಡೆಯುತ್ತಿದೆ.
ಇದನ್ನೂ ಓದಿ – ಸರ್ಕಲ್’ನಲ್ಲಿ ಅನುಮಾನಾಸ್ಪದ ವರ್ತನೆ, ಮೆಡಿಕಲ್ ಟೆಸ್ಟ್ ಬಳಿಕ ಯುವಕ ಅರೆಸ್ಟ್
ನಿಮ್ಮೂರು, ನಿಮ್ಮ ಏರಿಯಾದ ಕಾರ್ಯಕ್ರಮಗಳು, ಸಮಸ್ಯೆಗಳು ಸುದ್ದಿಯಾಗಬೇಕಾ? ನೀವೇ ವರದಿಗಾರರಾಗಿ. ವಿಡಿಯೋ, ಫೋಟೊ ಮಾಡಿ 7411700200 ಮೊಬೈಲ್ ನಂಬರ್’ಗೆ ವಾಟ್ಸಪ್ ಮಾಡಿ. ನೆನಪಿರಲಿ, ಸುದ್ದಿ ಪ್ರಕಟಣೆಗೆ ನಾವು ಹಣ ಪಡೆಯುವುದಿಲ್ಲ.