ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
SHIVAMOGGA LIVE NEWS | ACCIDENT | 30 ಮೇ 2022
ಕಾರು ಮತ್ತು ಲಾರಿ ಮುಖಾಮುಖಿ ಡಿಕ್ಕಿ ಸಂಭವಿಸಿದೆ. ನಡು ರಸ್ತೆಯಲ್ಲಿ ಲಾರಿ ಪಲ್ಟಿಯಾಗಿದ್ದು, ಶಿವಮೊಗ್ಗ ತೀರ್ಥಹಳ್ಳಿ ರಸ್ತೆಯಲ್ಲಿ ಕೆಲಕಾಲ ಸಂಚಾರ ದಟ್ಟಣೆ ಉಂಟಾಗಿತ್ತು.
ತೀರ್ಥಹಳ್ಳಿ ತಾಲೂಕು ತೂದೂರು ಗ್ರಾಮದ ಬಳಿ ಘಟನೆ ಸಂಭವಿಸಿದೆ. ಉಡುಪಿಯಿಂದ ಶಿವಮೊಗ್ಗಕ್ಕೆ ತೆರಳುತ್ತಿದ್ದ ಕಾರು ಮತ್ತು ಶಿವಮೊಗ್ಗದಿಂದ ತೀರ್ಥಹಳ್ಳಿ ಕಡೆಗೆ ತೆರಳುತ್ತಿದ್ದ ಲಾರಿ ನಡುವ ಮುಖಾಮುಖಿ ಡಿಕ್ಕಿ ಸಂಭವಿಸಿದೆ.
ಘಟನೆಯಲ್ಲಿ ಲಾರಿ ಪಲ್ಟಿಯಾಗಿದೆ. ಕಾರಿನ ಮುಂಭಾಗ ಜಖಂ ಆಗಿದೆ. ಕಾರು ಚಾಲಕನ ಕಾಲಿಗೆ ಗಂಭೀರ ಗಾಯವಾಗಿದೆ ಎಂದು ತಿಳಿದು ಬಂದಿದೆ. ಇನ್ನು, ಘಟನೆಯ ಬೆನ್ನಿಗೆ ತೂದೂರಿನಲ್ಲಿ ಸಂಚಾರ ದಟ್ಟಣೆ ಉಂಟಾಗಿತ್ತು.
ಮಾಳೂರು ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ಟ್ರಾಫಿಕ್ ಜಾಮ್ ನಿಯಂತ್ರಿಸಿದರು.
ಇದನ್ನೂ ಓದಿ – ಶಿವಮೊಗ್ಗ ವಿಮಾನ ನಿಲ್ದಾಣ ಕಾಮಗಾರಿ ಸ್ಥಳದಲ್ಲಿ ಅವಘಡ, ಕಾರ್ಮಿಕ ಸಾವು
ನಿಮ್ಮೂರು, ನಿಮ್ಮ ಏರಿಯಾದ ಕಾರ್ಯಕ್ರಮಗಳು, ಸಮಸ್ಯೆಗಳು ಸುದ್ದಿಯಾಗಬೇಕಾ? ನೀವೇ ವರದಿಗಾರರಾಗಿ. ವಿಡಿಯೋ, ಫೋಟೊ ಮಾಡಿ 7411700200 ಮೊಬೈಲ್ ನಂಬರ್’ಗೆ ವಾಟ್ಸಪ್ ಮಾಡಿ. ನೆನಪಿರಲಿ, ಸುದ್ದಿ ಪ್ರಕಟಣೆಗೆ ನಾವು ಹಣ ಪಡೆಯುವುದಿಲ್ಲ.
LATEST NEWS
- ಬೆಳಗ್ಗೆ ಲೇಔಟ್‌ಗೆ ಬಂದ ಲೆಕ್ಚರರ್‌ಗೆ ಕಾದಿತ್ತು ಆಘಾತ, ರಾತ್ರಿ 11.15ರ CCTV ದೃಶ್ಯ ಕಂಡು ಶಾಕ್

- ಶಿವಮೊಗ್ಗ TO ಬೆಂಗಳೂರು ಇನ್ನಷ್ಟು ವೇಗ, ದ್ವಿಪಥ ಯೋಜನೆಗೆ ಒತ್ತಾಯ

- ಜಮೀನಿಗೆ ನೀರು ಹರಿಸಲು ಹೋಗಿದ್ದ ವ್ಯಕ್ತಿಗೆ ಕಾದಿತ್ತು ಸಾವು, ಆಗಿದ್ದೇನು?

- ನಾಳೆಯಿಂದ SSLC ಪರೀಕ್ಷೆ, ಹೇಗಿದೆ ಸಿದ್ಧತೆ? ಯಾವ್ಯಾವ ತಾಲೂಕಿನಲ್ಲಿ ಎಷ್ಟು ಪರೀಕ್ಷಾ ಕೇಂದ್ರಗಳಿವೆ?

- ಮನೆಯ ಮೀಟರ್ ಬೋರ್ಡ್ ಮೇಲೆ ಕೀ ಇಡುವ ಅಭ್ಯಾಸ ಇದ್ಯಾ? ನಿದಿಗೆಯಲ್ಲಿ ದಾಖಲಾಯ್ತು ಕೇಸ್, ಯಾಕೆ?

About The Editor
ನಿತಿನ್ ಆರ್.ಕೈದೊಟ್ಲು
















