ಟಿಕಾಯತ್ ಮೇಲಿನ ದಾಳಿಗೆ ಶಿವಮೊಗ್ಗದಲ್ಲಿ ಆಕ್ರೋಶ, ಸಾಲು ಸಾಲು ಪ್ರತಿಭಟನೆ

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

SHIVAMOGGA LIVE NEWS | PROTEST | 31 ಮೇ 2022

ರಾಷ್ಟ್ರೀಯ ರೈತ ನಾಯಕ ರಾಕೇಶ್ ಟಿಕಾಯತ್ ಮತ್ತು ಯುದ್ಧವೀರ ಸಿಂಗ್ ಅವರಿಗೆ ಕಪ್ಪು ಮಸಿ ಬಳಿದು, ಹಲ್ಲೆ ನಡೆಸಿದ್ದ ಕ್ರಮಕ್ಕೆ ತೀವ್ರ ವಿರೋಧ ವ್ಯಕ್ತವಾಗಿದೆ. ಶಿವಮೊಗ್ಗದಲ್ಲಿ ವಿವಿಧ ಸಂಘಟನೆಗಳು ಇವತ್ತು ಬೀದಿಗಿಳಿದು ಹೋರಾಟ ನಡೆಸಿದವು.

ರೈತ ಸಂಘದ ಆಕ್ರೋಶ

ಹಲ್ಲೆ ಮಾಡಿದವರನ್ನು ಬಂಧಿಸಿ ಸೂಕ್ತ ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರುಸೇನೆ ವತಿಯಿಂದ ರೈತ ಸಂಘದ ಕಚೇರಿಯಿಂದ ಜಿಲ್ಲಾಧಿಕಾರಿ ಕಚೇರಿವರೆಗೆ ತೆರಳಿ ಪ್ರತಿಭಟನೆ ನಡೆಸಿ ಜಿಲ್ಲಾಧಿಕಾರಿಗಳ ಮೂಲಕ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಲಾಯಿತು. ಈ ಸಂದರ್ಭ ರೈತ ಸಂಘದ ರಾಜ್ಯಾಧ್ಯಕ್ಷ ಹೆಚ್.ಆರ್. ಬಸವರಾಜಪ್ಪ, ಪದಾಧಿಕಾರಿಗಳಾದ ಸಿದ್ಧವೀರಪ್ಪ, ಕುರುವ ಗಣೇಶ್, ಡಾ. ಚಿಕ್ಕಸ್ವಾಮಿ, ಮೊಹಮ್ಮದ್ ನಜೀರ್ ಸಾಬ್, ಮೂಲಮನಿ, ಚುನ್ನಪ್ಪ ಪೂಜಾರಿ ಮೊದಲಾದವರಿದ್ದರು.

ರೈತ ಸಂಘದ ಜಿಲ್ಲಾ ಘಟಕ ಅಕ್ರೋಶ

ಹಲ್ಲೆಕೋರರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಜಿಲ್ಲಾ ಘಟಕದ ವತಿಯಿಂದ  ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿಲಾಯಿತು. ರಾಜ್ಯ ರೈತ ಚಳುವಳಿ ಆತ್ಮಾವಲೋಕನ – ಸ್ಪಷ್ಟೀಕರಣ ಸಭೆಯಲ್ಲಿ ಏಕಾಏಕಿ ನುಗ್ಗಿದ ಕೆಲವು ಕಿಡಿಗೇಡಿಗಳು ರಾಕೇಶ್ ಟಿಕಾಯತ್ ಮತ್ತು ಯುದ್ಧವೀರ್ ಸಿಂಗ್ ಅವರ ಮೇಲೆ ಹಲ್ಲೆ ನಡೆಸಿ ಕಪ್ಪು ಮಸಿ ಎರಚಿ, ಅವಾಚ್ಯ ಶಬ್ದಗಳಿಂದ ನಿಂದಿಸಿ ಕೊಲೆ ಬೆದರಿಕೆ ಹಾಕಿದ್ದಾರೆ. ಇವರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಪ್ರತಿಭಟನಾಕಾರರು ಆಗ್ರಹಿಸಿದರು.

ಪ್ರತಿಭಟನೆಯಲ್ಲಿ ರೈತ ಸಂಘದ ಜಿಲ್ಲಾಧ್ಯಕ್ಷ ಜಯಪ್ಪ ಗೌಡ, ಕಾರ್ಯದರ್ಶಿ ಡಿ.ವಿ. ವೀರೇಶ್, ಕಾರ್ಯಾಧ್ಯಕ್ಷ ಯಶವಂತರಾವ್ ಘೋರ್ಪಡೆ ಮೊದಲಾದವರಿದ್ದರು.

ರೈತ ಮಹಾ ಪಂಚಾಯತ್ ಖಂಡನೆ

ರಾಕೇಶ್ ಟಿಕಾಯತ್ ಮತ್ತು ಜೊತೆಗಿದ್ದ ರೈತ ಹೋರಾಟಗಾರರ ಮೇಲೆ ಆರ್.ಎಸ್.ಎಸ್ ಹಲ್ಲೆಕೋರರು ಮಸಿ ಎರಚಿ ದಾಳಿ ನಡೆಸಿದ್ದಾರೆ. ದಾಳಿಕೋರರನ್ನು ಕೂಡಲೇ ಬಂಧಿಸಿ, ಈ ಗಂಭೀರ ಅಪರಾಧಕ್ಕೆ ಕಠಿಣವಾದ ಪ್ರಕರಣವನ್ನು ಅವರ ಮೇಲೆ ದಾಖಲಿಸಬೇಕು ಎಂದು ರೈತ ಮಹಾ ಪಂಚಾಯತ್ ಆಗ್ರಹಿಸಿದೆ. ಕೆ.ಟಿ.ಗಂಗಾಧರ್, ಹೆಚ್.ಆರ್.ಬಸವರಾಜಪ್ಪ, ಎಂ.ಶ್ರೀಕಾಂತ್, ಕೆ.ಎಲ್. ಅಶೋಕ್, ಕೆ.ಪಿ.ಶ್ರೀಪಾಲ್, ಎಂ.ಗುರುಮೂರ್ತಿ, ಹಾಲೇಶಪ್ಪ, ಎಂ.ರಮೇಶ್, ಹೆಚ್.ಸಿ.ಯೋಗೇಶ್ ಅವರು ಕ್ರಮಕ್ಕೆ ಒತ್ತಾಯಿಸಿದ್ದಾರೆ.

ಎಸ್.ಡಿ.ಪಿ.ಐ ಸಂಘಟನೆಯಿಂದ ಖಂಡನೆ

ರೈತ ನಾಯಕ ರಾಕೇಶ್ ಟಿಕಾಯತ್ ಅವರ ಮೇಲಿನ ಹಲ್ಲೆಯನ್ನು ಎಸ್.ಡಿ.ಪಿ.ಐ ಸಂಘಟನೆ ಖಂಡಿಸಿದೆ. ಜಿಲ್ಲಾಧಿಕಾರಿ ಕಚೇರಿ ಮುಂಭಾಗ ಪ್ರತಿಭಟನೆ ನಡೆಸಿದ ಎಸ್.ಡಿ.ಪಿ.ಐ ಕಾರ್ಯಕರ್ತರು, ಹಲ್ಲೆಕೋರರ ವಿರುದ್ದ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು.

SDPI protest in Shimoga

Farmers Protest in Shimoga

Raitha-Sanga-HR-Basavarajappa-new-president

Shimoga Nanjappa Hospital

ಇದನ್ನೂ ಓದಿ – ‘ಪ್ರತಿ ಲೀಟರ್ ಪೆಟ್ರೋಲ್ 36 ರೂ.ಗೆ ಇಳಿಯಬೇಕಿತ್ತು’, ಕೇಂದ್ರದ ವಿರುದ್ಧ ಶಿವಮೊಗ್ಗದಲ್ಲಿ ಆಕ್ರೋಶ

ನಿಮ್ಮೂರು, ನಿಮ್ಮ ಏರಿಯಾದ ಕಾರ್ಯಕ್ರಮಗಳು, ಸಮಸ್ಯೆಗಳು ಸುದ್ದಿಯಾಗಬೇಕಾ? ನೀವೇ ವರದಿಗಾರರಾಗಿ. ವಿಡಿಯೋ, ಫೋಟೊ ಮಾಡಿ 7411700200 ಮೊಬೈಲ್ ನಂಬರ್’ಗೆ ವಾಟ್ಸಪ್ ಮಾಡಿ. ನೆನಪಿರಲಿ, ಸುದ್ದಿ ಪ್ರಕಟಣೆಗೆ ನಾವು ಹಣ ಪಡೆಯುವುದಿಲ್ಲ.

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ

ಈಗಲೇ ಕರೆ ಮಾಡಿ
9972194422

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : May 31, 2022

ಶಿವಮೊಗ್ಗ ಡಿ.ಸಿ ಎದುರು ಮೈದಾನಕ್ಕೆ ಬ್ಯಾರಿಕೇಡ್‌, ಹಿಂದೂ ಸಂಘಟನೆಗಳು ಗರಂ, ಕಾರಣವೇನು?

ಶಿವಮೊಗ್ಗ ಡಿ.ಸಿ ಎದುರು ಮೈದಾನಕ್ಕೆ ಬ್ಯಾರಿಕೇಡ್‌, ಹಿಂದೂ ಸಂಘಟನೆಗಳು ಗರಂ, ಕಾರಣವೇನು?

ಬೆಳಗ್ಗೆ ಲೇಔಟ್‌ಗೆ ಬಂದ ಲೆಕ್ಚರರ್‌ಗೆ ಕಾದಿತ್ತು ಆಘಾತ, ರಾತ್ರಿ 11.15ರ CCTV ದೃಶ್ಯ ಕಂಡು ಶಾಕ್‌

ಬೆಳಗ್ಗೆ ಲೇಔಟ್‌ಗೆ ಬಂದ ಲೆಕ್ಚರರ್‌ಗೆ ಕಾದಿತ್ತು ಆಘಾತ, ರಾತ್ರಿ 11.15ರ CCTV ದೃಶ್ಯ ಕಂಡು ಶಾಕ್‌

ಶಿವಮೊಗ್ಗ TO ಬೆಂಗಳೂರು ಇನ್ನಷ್ಟು ವೇಗ, ದ್ವಿಪಥ ಯೋಜನೆಗೆ ಒತ್ತಾಯ

ಶಿವಮೊಗ್ಗ TO ಬೆಂಗಳೂರು ಇನ್ನಷ್ಟು ವೇಗ, ದ್ವಿಪಥ ಯೋಜನೆಗೆ ಒತ್ತಾಯ

ಜಮೀನಿಗೆ ನೀರು ಹರಿಸಲು ಹೋಗಿದ್ದ ವ್ಯಕ್ತಿಗೆ ಕಾದಿತ್ತು ಸಾವು, ಆಗಿದ್ದೇನು?

ಜಮೀನಿಗೆ ನೀರು ಹರಿಸಲು ಹೋಗಿದ್ದ ವ್ಯಕ್ತಿಗೆ ಕಾದಿತ್ತು ಸಾವು, ಆಗಿದ್ದೇನು?

ನಾಳೆಯಿಂದ SSLC ಪರೀಕ್ಷೆ, ಹೇಗಿದೆ ಸಿದ್ಧತೆ? ಯಾವ್ಯಾವ ತಾಲೂಕಿನಲ್ಲಿ ಎಷ್ಟು ಪರೀಕ್ಷಾ ಕೇಂದ್ರಗಳಿವೆ?

ನಾಳೆಯಿಂದ SSLC ಪರೀಕ್ಷೆ, ಹೇಗಿದೆ ಸಿದ್ಧತೆ? ಯಾವ್ಯಾವ ತಾಲೂಕಿನಲ್ಲಿ ಎಷ್ಟು ಪರೀಕ್ಷಾ ಕೇಂದ್ರಗಳಿವೆ?

ಮನೆಯ ಮೀಟರ್ ಬೋರ್ಡ್ ಮೇಲೆ ಕೀ ಇಡುವ ಅಭ್ಯಾಸ ಇದ್ಯಾ? ನಿದಿಗೆಯಲ್ಲಿ ದಾಖಲಾಯ್ತು ಕೇಸ್‌, ಯಾಕೆ?

ಮನೆಯ ಮೀಟರ್ ಬೋರ್ಡ್ ಮೇಲೆ ಕೀ ಇಡುವ ಅಭ್ಯಾಸ ಇದ್ಯಾ? ನಿದಿಗೆಯಲ್ಲಿ ದಾಖಲಾಯ್ತು ಕೇಸ್‌, ಯಾಕೆ?

ಶಿವಮೊಗ್ಗದ ‘ಶಿವಚೌಡಿ ಧರಣಿ’ ಇನ್ನಿಲ್ಲ, ವಿಭಿನ್ನವಾಗಿ ತಿಥಿ ಕಾರ್ಯ ಮಾಡಿದ ಮಾಲೀಕ

ಶಿವಮೊಗ್ಗದ ‘ಶಿವಚೌಡಿ ಧರಣಿ’ ಇನ್ನಿಲ್ಲ, ವಿಭಿನ್ನವಾಗಿ ತಿಥಿ ಕಾರ್ಯ ಮಾಡಿದ ಮಾಲೀಕ

ಸಹ್ಯಾದ್ರಿ ಉತ್ಸವ, ಸಮಗ್ರ ಪ್ರಶಸ್ತಿ ಇಂದಿರಾ ಗಾಂಧಿ ಮಹಿಳಾ ಕಾಲೇಜು ಮುಡಿಗೆ

ಸಹ್ಯಾದ್ರಿ ಉತ್ಸವ, ಸಮಗ್ರ ಪ್ರಶಸ್ತಿ ಇಂದಿರಾ ಗಾಂಧಿ ಮಹಿಳಾ ಕಾಲೇಜು ಮುಡಿಗೆ

ಮಾವನ ಕುತ್ತಿಗೆ ಸೀಳಿ ಕೊಲೆಗೆ ಯತ್ನಿಸಿದ ಅಳಿಯ, ಎಲ್ಲಿ? ಕಾರಣವೇನು?

ಮಾವನ ಕುತ್ತಿಗೆ ಸೀಳಿ ಕೊಲೆಗೆ ಯತ್ನಿಸಿದ ಅಳಿಯ, ಎಲ್ಲಿ? ಕಾರಣವೇನು?

ಗೆಜ್ಜೇನಹಳ್ಳಿಯಲ್ಲಿ ಹಿಟ್ ಅಂಡ್ ರನ್ ಅಪಘಾತ, ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ಯುವಕ ಸಾವು

ಗೆಜ್ಜೇನಹಳ್ಳಿಯಲ್ಲಿ ಹಿಟ್ ಅಂಡ್ ರನ್ ಅಪಘಾತ, ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ಯುವಕ ಸಾವು

Leave a Comment