ಶಿವಮೊಗ್ಗ ಲೈವ್.ಕಾಂ
ಶಿವಮೊಗ್ಗ ಜಿಲ್ಲೆಯ ನಂಬರ್ 1 ಸುದ್ದಿ ಮಾಧ್ಯಮ
SHIVAMOGGA LIVE NEWS | BLAST | 2 ಜೂನ್ 2022
ರಾಗಿಗುಡ್ಡದಲ್ಲಿ ಸಂಭವಿಸದ ಸ್ಪೋಟದ ವಿಚಾರವಾಗಿ ಸ್ಥಳೀಯರು ಶಿವಮೊಗ್ಗ ಜಿಲ್ಲಾಧಿಕಾರಿ ಅವರಿಗೆ ದೂರು ನೀಡಿದ್ದಾರೆ. ಇನ್ಮುಂದೆ ಅಲ್ಲಿ ಸ್ಪೋಟಕ್ಕೆ ಅವಕಾಶ ನೀಡಬಾರದು ಎಂದು ಮನವಿ ಮಾಡಿದ್ದಾರೆ.
ಈಗ ಸುಲಭಕ್ಕೆ ಸಿಗಲಿದೆ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ 9972194422
ಕುವೆಂಪು ನಗರ ನಿವಾಸಿಗಳು ಜಿಲ್ಲಾಧಿಕಾರಿ ಡಾ.ಸೆಲ್ವಮಣಿ ಅವರನ್ನು ಭೇಟಿಯಾಗಿ ಮನವಿ ಸಲ್ಲಿಸಿದರು.
ಸ್ಥಳೀಯರ ಡಿಮಾಂಡ್ ಏನು?
ಕಳೆದ ಎರಡು ವರ್ಷದಿಂದ ಶಿವಮೊಗ್ಗದ ರಾಗಿಗುಡ್ಡದಲ್ಲಿ ಇಎಸ್ಐ ಆಸ್ಪತ್ರೆ ಕಾಮಗಾರಿ ನಡೆಯುತ್ತಿದೆ. ಮೊದಲೆ ಇಲ್ಲಿ ಸ್ಪೋಟಕ ಬಳಕೆ ಮಾಡುವ ಕುರಿತು ಮಾಹಿತಿ ಲಭ್ಯವಾಗಿತ್ತು.
ಮ್ಯಾಕ್ಸ್ ಬಡಾವಣೆಯ ನಿವಾಸಿಗಳು ಹಿಂದಿನ ಜಿಲ್ಲಾಧಿಕಾರಿ ಅವರನ್ನು ಭೇಟಿಯಾಗಿ, ಸ್ಪೋಟಕ ಬಳಕೆಗೆ ಅನುಮತಿ ನೀಡದಂತೆ ಮನವಿ ಮಾಡಿದ್ದೆವು.
ಜಿಲ್ಲಾಧಿಕಾರಿ ಅವರ ಸೂಚನೆ ಮೇರೆಗೆ ಶಿವಮೊಗ್ಗ ಗ್ರಾಮಾಂತರ ಠಾಣೆ ಇನ್ಸ್ ಪೆಕ್ಟರ್ ಅವರು ಸ್ಥಳ ಪರಿಶೀಲನೆ ನಡೆಸಿದ್ದರು. ಬಡಾವಣೆ ನಿವಾಸಿಗಳನ್ನು ಭೇಟಿಯಾಗಿ ಚರ್ಚೆ ನಡೆಸಿದ್ದರು. ನಾವು ಸ್ಪೋಟಕ್ಕೆ ಒಪ್ಪಿಗೆ ನೀಡದ ಹಿನ್ನೆಲೆ ಬೇರೆ ಮಾದರಿಯಲ್ಲಿ ಕಾಮಗಾರಿ ನಡೆಸುವುದಾಗಿ ತಿಳಿಸಿದ್ದರು.
ಸೋಮವಾರ ದಿಢೀರ್ ಎಂದು ಬ್ಲಾಸ್ಟ್ ಮಾಡಿದ್ದಾರೆ. ನಾಲ್ಕು ಕಡಿಮೆ ತೀವ್ರತೆಯ ಸ್ಪೋಟ. ಇನ್ನು ನಾಲ್ಕು ತೀವ್ರ ಸ್ವರೂಪದ ಸ್ಪೋಟ ಸಂಭವಿಸಿದೆ. ಅದರಿಂದ ಹಲವು ಕಟ್ಟಡಗಳಲ್ಲಿ ಬಿರುಕು ಕಾಣಿಸಿಕೊಂಡಿದೆ. ಹುಣಸೋಡು ಸ್ಪೋಟದ ಹಾಗೆ ಅನುಭವವಾಯಿತು. ಭೂಕಂಪನ ಸಂಭವಿಸಿದಂತಾಗಿ ಜನರು ಮನೆಯಿಂದ ಹೊರಗೆ ಓಡಿ ಬಂದಿದ್ದರು.
ಸ್ಪೋಟಕ್ಕೆ ಅನುಮತಿ ನೀಡಬಾರದು. ಇನ್ಮುಂದೆ ಅಲ್ಲಿ ಸ್ಪೋಟಕ ಬಳಕೆ ಅನುಮತಿ ನೀಡಬಾರದು ಎಂದು ಜಿಲ್ಲಾಧಿಕಾರಿ ಅವರಿಗೆ ಮನವಿ ಮಾಡಿದ್ದೇವೆ ಎಂದು ಸ್ಥಳೀಯರಾದ ರವಿ ಕುಲಕರ್ಣಿ ಅವರು ಶಿವಮೊಗ್ಗ ಲೈವ್.ಕಾಂಗೆ ತಿಳಿಸಿದ್ದಾರೆ.
ಇದನ್ನೂ ಓದಿ – ಶಿವಮೊಗ್ಗದ ರಾಗಿಗುಡ್ಡದಲ್ಲಿ ಏಳು ಭಾರಿ ಸ್ಪೋಟ, ಅಕ್ಕಪಕ್ಕದ ನಿವಾಸಿಗಳಿಗೆ ಢವಢವ, ಗೋಡೆಗಳಲ್ಲಿ ಬಿರುಕು
ನಿಮ್ಮೂರು, ನಿಮ್ಮ ಏರಿಯಾದ ಕಾರ್ಯಕ್ರಮಗಳು, ಸಮಸ್ಯೆಗಳು ಸುದ್ದಿಯಾಗಬೇಕಾ? ನೀವೇ ವರದಿಗಾರರಾಗಿ. ವಿಡಿಯೋ, ಫೋಟೊ ಮಾಡಿ 7411700200 ಮೊಬೈಲ್ ನಂಬರ್’ಗೆ ವಾಟ್ಸಪ್ ಮಾಡಿ. ನೆನಪಿರಲಿ, ಸುದ್ದಿ ಪ್ರಕಟಣೆಗೆ ನಾವು ಹಣ ಪಡೆಯುವುದಿಲ್ಲ.