ಆನಂದಪುರ ಹೋಬಳಿಯ 300ಕ್ಕೂ ಹೆಚ್ಚು ರೈತರಿಗೆ ನೊಟೀಸ್

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

MAY-REPORT-1-LAKH-READERS

SHIVAMOGGA LIVE NEWS | SAGARA | 8 ಜೂನ್ 2022

ಸಾಗರ ತಾಲೂಕು ಆನಂದಪುರ ಹೋಬಳಿಯ 300ಕ್ಕೂ ಹೆಚ್ಚು ರೈತರಿಗೆ ಅರಣ್ಯ ಇಲಾಖೆ ನೊಟೀಸ್ ನೀಡಿದೆ. ಈ ನೊಟೀಸ್ ಹಿಂಪಡೆಯದೆ ಹೋದರೆ ಬಿಜೆಪಿ ಶಾಸಕರ ಮನೆ ಮುಂದೆ ಪ್ರತಿಭಟನೆ ನಡೆಸಲಾಗುತ್ತದೆ ಎಂದು ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ರತ್ನಾಕರ ಹೊನಗೋಡು ಎಚ್ಚರಿಸಿದರು.

Shimoga Nanjappa Hospital

ಸಾಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ರತ್ನಾಕರ ಹೊನಗೋಡು ಅವರು, ಹಲವು ವರ್ಷಗಳಿಂದ ರೈತರು ಅರಣ್ಯ ಭೂಮಿಯಲ್ಲಿ ಸಾಗುವಳಿ ಮಾಡುತ್ತಿದ್ದಾರೆ. ಈಗ ಅರಣ್ಯ ಇಲಾಖೆಯು ಏಕಾಏಕಿ ಈ ರೈತರನ್ನು ಒಕ್ಕಲೆಬ್ಬಿಸಲು ಮುಂದಾಗಿದೆ ಎಂದು ಆರೋಪಿಸಿದರು.

ಅರಣ್ಯ ಭೂಮಿಯಲ್ಲಿ ಸಾಗುವಳಿ ಮಾಡುತ್ತಿರುವ ಆನಂದಪುರ ಹೋಬಳಿಯ 300ಕ್ಕೂ ಹೆಚ್ಚು ರೈತರಿಗೆ ನೊಟೀಸ್ ನೀಡಲಾಗಿದೆ. ಬೆಂಗಳೂರಿನಲ್ಲಿರುವ ಭೂ ಕಬಳಿಕೆ ವಿಶೇಷ ನ್ಯಾಯಾಲಯಕ್ಕೆ ರೈತರನ್ನು ಅಲೆಸಲು ಸರ್ಕಾರ ಮುಂದಾಗಿದೆ. ಈ ರೀತಿ ರೈತ ವಿರೋಧಿ ಧೋರಣೆಯನ್ನು ಖಂಡಿಸಿ ಬಿಜೆಪಿ ಶಾಸಕರ ಮನೆ ಮುಂದೆ ಪ್ರತಿಭಟನೆ ನಡೆಸಲಾಗುತ್ತದೆ ಎಂದು ಎಚ್ಚರಿಕೆ ನೀಡಿದರು.

ತಾಲೂಕು ಪಂಚಾಯಿತಿ ಮಾಜಿ ಅಧ್ಯಕ್ಷೆ ಜ್ಯೋತಿ ಕೋವಿ, ಆನಂದಪುರ ಗ್ರಾಮ ಪಂಚಾಯಿತಿ ಅಧ್ಯಕ್ಷೆ ನವೀನಾ ರವಿಗೌಡ, ಯಡೇಹಳ್ಳಿ ಗ್ರಾಮ ಪಂಚಾಯಿತಿ ಅಧ್ಯಕ್ಷ ಗಣಪತಿ ಇರುವಕ್ಕಿ, ಎಪಿಎಂಸಿ ಮಾಜಿ ಸದಸ್ಯ ಭರ್ಮಪ್ಪ ಅಂದಾಸುರ ಅವರು ಪತ್ರಿಕಾಗೋಷ್ಠಿಯಲ್ಲಿದ್ದರು.

ಇದನ್ನೂ ಓದಿ – ಅಡಕೆ ಬೆಳೆಗಾರರಲ್ಲಿ ಆತಂಕ ಮೂಡಿಸಿದ್ದ ಎಂಟು ಮಂದಿ ಅರೆಸ್ಟ್

ADVERTISEMENT

  • ಆರೋಗ್ಯ ತುರ್ತು ಸಂದರ್ಭದಲ್ಲಿ ಹಣಕಾಸು ಹೊಂದಿಸುವುದು ಸುಲಭವೇನಲ್ಲ. ಒಂದು ವೇಳೆ INSURANCE ಇದ್ದರೆ, ನಿರಮ್ಮಳವಾಗಿರಬಹುದು ಅಲ್ಲವೆ? ಈಗಲೆ INSURANCE ಮಾಡಿಸಿ. ಒಳ್ಳೆಯ INSURANCE PLANSಗಾಗಿ ಕರೆ ಮಾಡಿ – LIC LIFE INSURANCE – ಅನಿಲ್ 9538414151, ಪ್ರಶಾಂತ್ 9972194422
  • ಸುಂದರ ಮನೆ ಕಟ್ಟಬೇಕು, ಸ್ವಂತ ಮನೆಯಲ್ಲಿ ನೆಮ್ಮದಿಯ ಬದುಕು ಸಾಗಿಸಬೇಕು ಅನ್ನವು ಆಸೆ ಯಾರಿಗಿಲ್ಲ? ಇನ್ಯಾಕೆ ತಡ? ಮನೆ ಕಟ್ಟಲು LICಯಿಂದ HOUSING LOAN ಲಭ್ಯವಿದೆ. ಇವತ್ತೇ ಸಂಪರ್ಕಿಸಿ – ಪ್ರಶಾಂತ್ 9972194422

SHIVAMOGGA LIVE WHATSAPP

ನಿಮ್ಮೂರು, ನಿಮ್ಮ ಏರಿಯಾದ ಕಾರ್ಯಕ್ರಮಗಳು, ಸಮಸ್ಯೆಗಳು ಸುದ್ದಿಯಾಗಬೇಕಾ? ನೀವೇ ವರದಿಗಾರರಾಗಿ. ವಿಡಿಯೋ, ಫೋಟೊ ಮಾಡಿ 7411700200 ಮೊಬೈಲ್ ನಂಬರ್’ಗೆ ವಾಟ್ಸಪ್ ಮಾಡಿ. ನೆನಪಿರಲಿ, ಸುದ್ದಿ ಪ್ರಕಟಣೆಗೆ ನಾವು ಹಣ ಪಡೆಯುವುದಿಲ್ಲ.

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment