24 ವರ್ಷದ ಬಳಿಕ ಜಾತ್ರೆ, ಸಿಡಿ ಉತ್ಸವ ಕಣ್ತುಂಬಿಕೊಳ್ಳಲು ಸಾವಿರ ಸಾವಿರ ಭಕ್ತರು

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

MAY-REPORT-1-LAKH-VIEWERS

SHIVAMOGGA LIVE NEWS | HOLEHONNUR | 9 ಜೂನ್ 2022

ಆನವೇರಿ ಗ್ರಾಮದ ಶ್ರೀ ಹಿರಿಮಾವುರದಮ್ಮ ದೇವಿ ಜಾತ್ರೆ ವಿಜೃಂಭಣೆಯಿಂದ ನಡೆಯುತ್ತಿದೆ. ಜಾತ್ರೆ ಅಂಗವಾಗಿ ಸಿಡಿ ಉತ್ಸವ ನಡೆಸಲಾಯಿತು. ದೊಡ್ಡ ಸಂಖ್ಯೆಯ ಭಕ್ತರು ಸಿಡಿ ಉತ್ಸವನ್ನು ಕಣ್ತುಂಬಿಕೊಂಡರು.

Shimoga Nanjappa Hospital

24 ವರ್ಷಗಳ ಬಳಿಕ ಶ್ರೀ ಹಿರಿಮಾವುರದಮ್ಮ ದೇವಿ ಜಾತ್ರೆ ನಡೆಯುತ್ತಿದೆ. ಹಾಗಾಗಿ ವೈಭವದಿಂದ ಜಾತ್ರೆ ನೆರವೇರಿಸಲಾಗುತ್ತಿದೆ. ಸುತ್ತಮುತ್ತಲ ಗ್ರಾಮದ ಜನರು, ನೆರ ಜಿಲ್ಲೆಯ ಭಕ್ತರು ಕೂಡ ಶ್ರೀ ಹಿರಿಮಾವುರದಮ್ಮ ದೇವಿ ಜಾತ್ರೆಯಲ್ಲಿ ಭಾಗವಹಿಸಿದ್ದಾರೆ.

ಕಟ್ಟುನಿಟ್ಟು ಮಡಿ, ಸಿಡಿ ಉತ್ಸವ

ಇಲ್ಲಿ ಕೊಂಡಿ ಸಿಡಿ ನೆರವೇರಿಸಲಾಯಿತು. ಈ ಸಿಡಿ ಆಡುವ ವ್ರತಧಾರಿಗಳು ಮಣ್ಯ ತೀರ್ಥ ಸ್ನಾನ ಮಾಡಿ ಮಡಿಯುಟ್ಟು ಕಟ್ಟುನಿಟ್ಟಿನ ಉಪವಾಸ ಕೈಗೊಂಡಿದ್ದರು. ಸಿಡಿ ಕಂಬದ ಕೊಂಡಿಗೆ ವ್ರತಧಾರಿಯ ಬೆನ್ನು ಭಾಗದ ಚರ್ಮಕ್ಕೆ ಭಂಡಾರ ಹಾಕಿ ಚೂಪಾದ ಕೊಂಡಿ ಸಿಲುಕಿಸಲಾಯಿತು. ಬಳಿಕ ಮೂರು ಸುತ್ತು ಸಿಡಿ ಕಂಬ ತಿರುಗಿಸಿ, ಭಕ್ತಿಯ ಪರಾಕಷ್ಠೆ ಮೆರೆದರು.

ಸಿಡಿ ಆಡುವ ಸಂದರ್ಭ ದೊಡ್ಡ ಸಂಖ್ಯೆಯಲ್ಲಿ ಸೇರಿದ್ದ ಜನರು ಚಪ್ಪಳೆ, ಶಿಳ್ಳೆ ಹೊಡೆದು ಉದೋ ಉದೋ ಎಂದು ದೇವರ ಹರ್ಷೋದ್ಘಾರ ಮಾಡಿದರು.

ದೇವಿಯ ದರ್ಶನ, ಮಡಿಲಕ್ಕಿ ಸಮರ್ಪಣೆ

ಶ್ರೀ ಹಿರಿಮಾವುರದಮ್ಮ ದೇವಿಯ ದರ್ಶನ ಪಡೆಯಲು ದೊಡ್ಡ ಸಂಖ್ಯೆಯ ಜನರು ಭಾಗವಹಿಸಿದ್ದರು. ಸುತ್ತಲ ಏಳು ಗ್ರಾಮಗಳ ಮನೆಯಿಂದ ಮಹಿಳೆಯರು ಅಮ್ಮನವರ ದೇವಸ್ಥಾನಕ್ಕೆ ತೆರಳಿ ಮಡಿಲಕ್ಕಿ, ಸೀರೆ ಹಾಗೂ ಕುಪ್ಪಸ ಸಮರ್ಪಿಸಿದರು. ಬಳಿಕ ದೇವಿಯ ದರ್ಶನ ಪಡೆದು ಹಣ್ಣು ಕಾಯಿ ಪೂಜೆ ಮಾಡಿಸಿದರು.

24 ವರ್ಷದ ಬಳಿಕ ಜಾತ್ರೆಗೆ ಅಪ್ಪಣೆ

ಶ್ರೀ ಹಿರಿಮಾವುರದಮ್ಮ ಜಾತ್ರೆಯು 24 ವರ್ಷದ ಬಳಿಕ ನಡೆಯುತ್ತಿದೆ. 24 ವರ್ಷದ ಬಳಿಕ ತಾಯಿ ಅಪ್ಪಣೆ ನೀಡಿದ್ದರಿಂದ ಜಾತ್ರೆ ನಡೆಸಲಾಗುತ್ತಿದೆ. ಹಾಗಾಗಿ ಈ ಭಾರಿ ವೈಭವದಿಂದ ಜಾತ್ರೆ ನೆರವೇರಿಸಲಾಗುತ್ತಿದೆ.

ಇದನ್ನೂ ಓದಿ – ತೀರ್ಥಹಳ್ಳಿಯ ತೇಜಸ್ವಿನಿ ರಾಜ್ಯಕ್ಕೆ ಪ್ರಥಮ

Gangothri PU College Shimoga

ADVERTISEMENT

  • ಆರೋಗ್ಯ ತುರ್ತು ಸಂದರ್ಭದಲ್ಲಿ ಹಣಕಾಸು ಹೊಂದಿಸುವುದು ಸುಲಭವೇನಲ್ಲ. ಒಂದು ವೇಳೆ INSURANCE ಇದ್ದರೆ, ನಿರಮ್ಮಳವಾಗಿರಬಹುದು ಅಲ್ಲವೆ? ಈಗಲೆ INSURANCE ಮಾಡಿಸಿ. ಒಳ್ಳೆಯ INSURANCE PLANSಗಾಗಿ ಕರೆ ಮಾಡಿ – LIC LIFE INSURANCE – ಅನಿಲ್ 9538414151, ಪ್ರಶಾಂತ್ 9972194422
  • ಸುಂದರ ಮನೆ ಕಟ್ಟಬೇಕು, ಸ್ವಂತ ಮನೆಯಲ್ಲಿ ನೆಮ್ಮದಿಯ ಬದುಕು ಸಾಗಿಸಬೇಕು ಅನ್ನವು ಆಸೆ ಯಾರಿಗಿಲ್ಲ? ಇನ್ಯಾಕೆ ತಡ? ಮನೆ ಕಟ್ಟಲು LICಯಿಂದ HOUSING LOAN ಲಭ್ಯವಿದೆ. ಇವತ್ತೇ ಸಂಪರ್ಕಿಸಿ – ಪ್ರಶಾಂತ್ 9972194422

SHIVAMOGGA LIVE WHATSAPP

ನಿಮ್ಮೂರು, ನಿಮ್ಮ ಏರಿಯಾದ ಕಾರ್ಯಕ್ರಮಗಳು, ಸಮಸ್ಯೆಗಳು ಸುದ್ದಿಯಾಗಬೇಕಾ? ನೀವೇ ವರದಿಗಾರರಾಗಿ. ವಿಡಿಯೋ, ಫೋಟೊ ಮಾಡಿ 7411700200 ಮೊಬೈಲ್ ನಂಬರ್’ಗೆ ವಾಟ್ಸಪ್ ಮಾಡಿ. ನೆನಪಿರಲಿ, ಸುದ್ದಿ ಪ್ರಕಟಣೆಗೆ ನಾವು ಹಣ ಪಡೆಯುವುದಿಲ್ಲ.

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ

ಈಗಲೇ ಕರೆ ಮಾಡಿ
9972194422

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : June 9, 2022

ಶಿವಮೊಗ್ಗ ಡಿ.ಸಿ ಎದುರು ಮೈದಾನಕ್ಕೆ ಬ್ಯಾರಿಕೇಡ್‌, ಹಿಂದೂ ಸಂಘಟನೆಗಳು ಗರಂ, ಕಾರಣವೇನು?

ಶಿವಮೊಗ್ಗ ಡಿ.ಸಿ ಎದುರು ಮೈದಾನಕ್ಕೆ ಬ್ಯಾರಿಕೇಡ್‌, ಹಿಂದೂ ಸಂಘಟನೆಗಳು ಗರಂ, ಕಾರಣವೇನು?

ಬೆಳಗ್ಗೆ ಲೇಔಟ್‌ಗೆ ಬಂದ ಲೆಕ್ಚರರ್‌ಗೆ ಕಾದಿತ್ತು ಆಘಾತ, ರಾತ್ರಿ 11.15ರ CCTV ದೃಶ್ಯ ಕಂಡು ಶಾಕ್‌

ಬೆಳಗ್ಗೆ ಲೇಔಟ್‌ಗೆ ಬಂದ ಲೆಕ್ಚರರ್‌ಗೆ ಕಾದಿತ್ತು ಆಘಾತ, ರಾತ್ರಿ 11.15ರ CCTV ದೃಶ್ಯ ಕಂಡು ಶಾಕ್‌

ಶಿವಮೊಗ್ಗ TO ಬೆಂಗಳೂರು ಇನ್ನಷ್ಟು ವೇಗ, ದ್ವಿಪಥ ಯೋಜನೆಗೆ ಒತ್ತಾಯ

ಶಿವಮೊಗ್ಗ TO ಬೆಂಗಳೂರು ಇನ್ನಷ್ಟು ವೇಗ, ದ್ವಿಪಥ ಯೋಜನೆಗೆ ಒತ್ತಾಯ

ಜಮೀನಿಗೆ ನೀರು ಹರಿಸಲು ಹೋಗಿದ್ದ ವ್ಯಕ್ತಿಗೆ ಕಾದಿತ್ತು ಸಾವು, ಆಗಿದ್ದೇನು?

ಜಮೀನಿಗೆ ನೀರು ಹರಿಸಲು ಹೋಗಿದ್ದ ವ್ಯಕ್ತಿಗೆ ಕಾದಿತ್ತು ಸಾವು, ಆಗಿದ್ದೇನು?

ನಾಳೆಯಿಂದ SSLC ಪರೀಕ್ಷೆ, ಹೇಗಿದೆ ಸಿದ್ಧತೆ? ಯಾವ್ಯಾವ ತಾಲೂಕಿನಲ್ಲಿ ಎಷ್ಟು ಪರೀಕ್ಷಾ ಕೇಂದ್ರಗಳಿವೆ?

ನಾಳೆಯಿಂದ SSLC ಪರೀಕ್ಷೆ, ಹೇಗಿದೆ ಸಿದ್ಧತೆ? ಯಾವ್ಯಾವ ತಾಲೂಕಿನಲ್ಲಿ ಎಷ್ಟು ಪರೀಕ್ಷಾ ಕೇಂದ್ರಗಳಿವೆ?

ಮನೆಯ ಮೀಟರ್ ಬೋರ್ಡ್ ಮೇಲೆ ಕೀ ಇಡುವ ಅಭ್ಯಾಸ ಇದ್ಯಾ? ನಿದಿಗೆಯಲ್ಲಿ ದಾಖಲಾಯ್ತು ಕೇಸ್‌, ಯಾಕೆ?

ಮನೆಯ ಮೀಟರ್ ಬೋರ್ಡ್ ಮೇಲೆ ಕೀ ಇಡುವ ಅಭ್ಯಾಸ ಇದ್ಯಾ? ನಿದಿಗೆಯಲ್ಲಿ ದಾಖಲಾಯ್ತು ಕೇಸ್‌, ಯಾಕೆ?

ಶಿವಮೊಗ್ಗದ ‘ಶಿವಚೌಡಿ ಧರಣಿ’ ಇನ್ನಿಲ್ಲ, ವಿಭಿನ್ನವಾಗಿ ತಿಥಿ ಕಾರ್ಯ ಮಾಡಿದ ಮಾಲೀಕ

ಶಿವಮೊಗ್ಗದ ‘ಶಿವಚೌಡಿ ಧರಣಿ’ ಇನ್ನಿಲ್ಲ, ವಿಭಿನ್ನವಾಗಿ ತಿಥಿ ಕಾರ್ಯ ಮಾಡಿದ ಮಾಲೀಕ

ಸಹ್ಯಾದ್ರಿ ಉತ್ಸವ, ಸಮಗ್ರ ಪ್ರಶಸ್ತಿ ಇಂದಿರಾ ಗಾಂಧಿ ಮಹಿಳಾ ಕಾಲೇಜು ಮುಡಿಗೆ

ಸಹ್ಯಾದ್ರಿ ಉತ್ಸವ, ಸಮಗ್ರ ಪ್ರಶಸ್ತಿ ಇಂದಿರಾ ಗಾಂಧಿ ಮಹಿಳಾ ಕಾಲೇಜು ಮುಡಿಗೆ

ಮಾವನ ಕುತ್ತಿಗೆ ಸೀಳಿ ಕೊಲೆಗೆ ಯತ್ನಿಸಿದ ಅಳಿಯ, ಎಲ್ಲಿ? ಕಾರಣವೇನು?

ಮಾವನ ಕುತ್ತಿಗೆ ಸೀಳಿ ಕೊಲೆಗೆ ಯತ್ನಿಸಿದ ಅಳಿಯ, ಎಲ್ಲಿ? ಕಾರಣವೇನು?

ಗೆಜ್ಜೇನಹಳ್ಳಿಯಲ್ಲಿ ಹಿಟ್ ಅಂಡ್ ರನ್ ಅಪಘಾತ, ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ಯುವಕ ಸಾವು

ಗೆಜ್ಜೇನಹಳ್ಳಿಯಲ್ಲಿ ಹಿಟ್ ಅಂಡ್ ರನ್ ಅಪಘಾತ, ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ಯುವಕ ಸಾವು

Leave a Comment