ಭದ್ರಾವತಿ VISL ಕ್ವಾರ್ಟರ್ಸ್’ನಲ್ಲಿ ಆತಂಕ ಮೂಡಿಸಿದ ಚಿರತೆ ಬಂಧನ

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

SHIVAMOGGA LIVE NEWS | BHADRAVATAHI | 22 ಜೂನ್ 2022

ಭದ್ರಾವತಿ ವಿಐಎಸ್ಎಲ್ ಕ್ವಾರ್ಟರ್ಸ್’ಗೆ ನುಗ್ಗಿದ್ದ ಚಿರತೆಯನ್ನು ಅರಣ್ಯ ಇಲಾಖೆ ಸಿಬ್ಬಂದಿ ಹಿಡಿದಿದ್ದಾರೆ. ಇದರಿಂದ ಸ್ಥಳೀಯರಲ್ಲಿ ಎದುರಾಗಿದ್ದ ಚಿರತೆ ಆತಂಕ ದೂರಾದಂತಾಗಿದೆ.

Shimoga Nanjappa Hospital

ಅರಣ್ಯ ಇಲಾಖೆ ಅಧಿಕಾರಿಗಳು ಕಾರ್ಯಾಚರಣೆ ನಡೆಸಿ ಹಿಡಿದಿದ್ದಾರೆ. ಅರವಳಿಕೆ ಮದ್ದು ನೀಡಿ ಚಿರತೆ ಪ್ರಜ್ಞೆ ತಪ್ಪಿಸಲಾಗಿದೆ. ಬಳಿಕ ಚಿರತೆಯನ್ನ ಬೋನಿನಲ್ಲಿ ಬಂಧಿಸಲಾಗಿದೆ.

ಹೇಗಿತ್ತು ‘ಆಪರೇಷನ್ ಚಿರತೆ’ ಕಾರ್ಯಚರಣೆ?

ಮನೆ ಒಂದರ ಆವರಣದೊಳಗೆ ಚಿರತೆ ಬಂಧಿಯಾಗಿತ್ತು. ಚಿರತೆ ತಪ್ಪಿಸಿಕೊಳ್ಳದಂತೆ ಅರಣ್ಯ ಇಲಾಖೆ ಅಧಿಕಾರಿಗಳು ಸುತ್ತಲು ಬಲೆ ಹಾಕಿದ್ದರು. ಅರಣ್ಯ ಇಲಾಖೆಯ ವನ್ಯಜೀವಿ ವೈದ್ಯ ಡಾ. ವಿನಯ್ ಅವರು ಅರವಳಿಕೆ ಶೂಟ್ ಮಾಡಿದರು. ಕೆಲವೆ ಹೊತ್ತಿನಲ್ಲಿ ಚಿರತೆ ಪ್ರಜ್ಞಾಹೀನ ಸ್ಥಿತಿಗೆ ತಲುಪಿತು.

ಬೋನ್’ನಲ್ಲಿ ಚಿರತೆ ಬಂಧನ

ಪ್ರಜ್ಞಾಹೀನ ಸ್ಥಿತಿಗೆ ತಲುಪಿದ್ದ ಚಿರತೆಯನ್ನು ಬೋನ್’ಗೆ ಹಾಕಿ, ಸುರಕ್ಷಿತವಾಗಿ ಅರಣ್ಯ ಇಲಾಖೆ ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ. ಗಂಡು ಚಿರತೆ  5 ರಿಂದ 6 ವರ್ಷ ವಯಸ್ಸಿನದ್ದು ಎಂದು ಅಂದಾಜಿಸಲಾಗಿದೆ. ಅರವಳಿಕೆ ಮತ್ತು ಇಳಿದ ಬಳಿಕ ಚಿರತೆಯನ್ನು ಅರಣ್ಯಕ್ಕೆ ಬಿಡಲಾಗುತ್ತದೆ.

ಚಿರತೆ ಹಿಡಿಯುವ ಕಾರ್ಯಾಚರಣೆ ನೋಡಲು ದೊಡ್ಡ ಸಂಖ್ಯೆಯ ಜನ ಸೇರಿದ್ದರು. ಕಟ್ಟಡಗಳು, ವಾಹನಗಳ ಮೇಲೆ ನಿಂತು ಕಾರ್ಯಾಚರಣೆ ವೀಕ್ಷಿಸಿದರು.

ಇದನ್ನೂ ಓದಿ – ಭದ್ರಾವತಿ VISL ಕ್ವಾರ್ಟರ್ಸ್’ನಲ್ಲಿ ‘ಆಪರೇಷನ್ ಚಿರತೆ’ ಆರಂಭ, ಈತನಕ ಏನೆಲ್ಲ ಬೆಳವಣಿಗೆ ಆಗಿದೆ?

ADVERTISEMENT

  • ಆರೋಗ್ಯ ತುರ್ತು ಸಂದರ್ಭದಲ್ಲಿ ಹಣಕಾಸು ಹೊಂದಿಸುವುದು ಸುಲಭವೇನಲ್ಲ. ಒಂದು ವೇಳೆ INSURANCE ಇದ್ದರೆ, ನಿರಮ್ಮಳವಾಗಿರಬಹುದು ಅಲ್ಲವೆ? ಈಗಲೆ INSURANCE ಮಾಡಿಸಿ. ಒಳ್ಳೆಯ INSURANCE PLANSಗಾಗಿ ಕರೆ ಮಾಡಿ – LIC LIFE INSURANCE – ಅನಿಲ್ 9538414151, ಪ್ರಶಾಂತ್ 9972194422
  • ಸುಂದರ ಮನೆ ಕಟ್ಟಬೇಕು, ಸ್ವಂತ ಮನೆಯಲ್ಲಿ ನೆಮ್ಮದಿಯ ಬದುಕು ಸಾಗಿಸಬೇಕು ಅನ್ನವು ಆಸೆ ಯಾರಿಗಿಲ್ಲ? ಇನ್ಯಾಕೆ ತಡ? ಮನೆ ಕಟ್ಟಲು LICಯಿಂದ HOUSING LOAN ಲಭ್ಯವಿದೆ. ಇವತ್ತೇ ಸಂಪರ್ಕಿಸಿ – ಪ್ರಶಾಂತ್ 9972194422

SHIVAMOGGA LIVE WHATSAPP

ನಿಮ್ಮೂರು, ನಿಮ್ಮ ಏರಿಯಾದ ಕಾರ್ಯಕ್ರಮಗಳು, ಸಮಸ್ಯೆಗಳು ಸುದ್ದಿಯಾಗಬೇಕಾ? ನೀವೇ ವರದಿಗಾರರಾಗಿ. ವಿಡಿಯೋ, ಫೋಟೊ ಮಾಡಿ 7411700200 ಮೊಬೈಲ್ ನಂಬರ್’ಗೆ ವಾಟ್ಸಪ್ ಮಾಡಿ. ನೆನಪಿರಲಿ, ಸುದ್ದಿ ಪ್ರಕಟಣೆಗೆ ನಾವು ಹಣ ಪಡೆಯುವುದಿಲ್ಲ.

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : June 22, 2022

Leave a Comment