ಆಸ್ಪತ್ರೆಯಲ್ಲಿ ಇಂಜೆಕ್ಷನ್ ಪಡೆದ ಮಕ್ಕಳು ದಿಢೀರ್ ಅಸ್ವಸ್ಥ, ಕೆಲಕಾಲ ಆತಂಕ

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

SHIVAMOGGA LIVE NEWS | SAGARA | 27 ಜೂನ್ 2022

ಸಾಗರ ಉಪ ವಿಭಾಗೀಯ ಆಸ್ಪತ್ರೆಯಲ್ಲಿ ಚುಚ್ಚುಮದ್ದು (INJECTION) ಪಡೆದ 14 ಮಕ್ಕಳು ಅಸ್ವಸ್ಥಗೊಂಡಿದ್ದಾರೆ. ಕೆಲವು ಮಕ್ಕಳು ಪ್ರಜ್ಞೆ ತಪ್ಪುವ ಸ್ಥಿತಿಗೆ ತಲುಪಿದ್ದರು. ಹೆಚ್ಚುವರಿ ಚಿಕಿತ್ಸೆ ಅಗತ್ಯವಿದ್ದರಿಂದ ನಾಲ್ಕು ಮಕ್ಕಳನ್ನು ಆಂಬುಲೆನ್ಸ್ ಮೂಲಕ ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.

Shimoga Nanjappa Hospital

ಜ್ವರ, ನೆಗಡಿ, ಕೆಮ್ಮು ಸೇರಿದಂತೆ ಶೀತ ಸಂಬಂಧಿ ಕಾಯಿಲೆಗಳಿಗಾಗಿ ಕಳೆದ ಮೂರ್ನಾಲ್ಕು ದಿನದಿಂದ ಸಾಗರದ ಉಪ ವಿಭಾಗೀಯ ಆಸ್ಪತ್ರೆಗೆ ದಾಖಲಾಗಿದ್ದ ಮಕ್ಕಳಿಗೆ ಭಾನುವಾರ ಚುಚ್ಚುಮದ್ದು ನೀಡಲಾಗಿತ್ತು. ಈ ಚುಚ್ಚುಮದ್ದು ಪಡೆದ ಮಕ್ಕಳು ದಿಢೀರ್ ಅಸ್ವಸ್ಥಗೊಂಡಿದ್ದಾರೆ.

ಪ್ರಜ್ಞೆ ತಪ್ಪುವ ಸ್ಥಿತಿಗೆ ತಲುಪಿದ್ದರು

ಚುಚ್ಚು ಮದ್ದು (INJECTION) ಪಡೆದ ಮಕ್ಕಳಲ್ಲಿ ತೀವ್ರ ಚಳಿ ಕಾಣಿಸಿಕೊಂಡಿದೆ. ಮಕ್ಕಳು ನರಳಾಡಲು ಶುರು ಮಾಡಿದ್ದಾರೆ. ಕೆಲವು ಮಕ್ಕಳು ಪ್ರಜ್ಞೆ ತಪ್ಪುವ ಸ್ಥಿತಿಗೆ ತಲುಪಿದರು. ಕೂಡಲೆ ಮಕ್ಕಳಿಗೆ ಚಿಕಿತ್ಸೆ ಆರಂಭಿಸಲಾಯಿತು.

ಹೆಚ್ಚುವರಿ ಚಿಕಿತ್ಸೆ ಅಗತ್ಯವಿದ್ದರಿಂದ ನಾಲ್ಕು ಮಕ್ಕಳನ್ನು ಆಂಬುಲೆನ್ಸ್ ಮೂಲಕ ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ರವಾನಿಸಲಾಯಿತು.

ವೈದ್ಯರ ವಿರುದ್ಧ ಆಕ್ರೋಶ

ಮಕ್ಕಳು ಅಸ್ವಸ್ಥಗೊಂಡಿದ್ದರಿಂದ ಪೋಷಕರು ತೀವ್ರ ಆಕ್ರೋಶ ವ್ಯಕ್ತಪಡಿಸಿದರು. ಚುಚ್ಚುಮದ್ದು ನೀಡಿದ ಡಾಕ್ಟರ್ ವಿರುದ್ಧ ಗರಂ ಆದರು. ಇದರಿಂದ ಆಸ್ಪತ್ರೆಯಲ್ಲಿ ಕೆಲ ಸಮಯ ಬಿಗುವಿನ ವಾತಾವರಣ ನಿರ್ಮಾಣವಾಯಿತು.  ಆಸ್ಪತ್ರೆ ಸಿಬ್ಬಂದಿ ಮತ್ತು ಸಾರ್ವಜನಿಕರು ಪೋಷಕರನ್ನು ಸಮಾಧಾನ ಪಡಿಸಿದರು.

ಶಾಸಕ ಹಾಲಪ್ಪ ದೌಡು

ವಿಚಾರ ತಿಳಿಯುತ್ತಿದ್ದಂತೆ ಸಾಗರ ಶಾಸಕ ಹರತಾಳು ಹಾಲಪ್ಪ ಅವರು ಆಸ್ಪತ್ರೆಗೆ ದೌಡಾಯಿಸಿದರು. ಚಿಕಿತ್ಸೆ ಪಡೆಯುತ್ತಿದ್ದ ಪ್ರತಿ ಮಕ್ಕಳ ಬಳಿ ತೆರಳಿ, ಆರೋಗ್ಯ ವಿಚಾರಿಸಿದರು. ಈ ವೇಳೆ ಪೋಷಕರು ವೈದ್ಯರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.

ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಶಾಸಕ ಹರತಾಳು ಹಾಲಪ್ಪ ಅವರು, ಚುಚ್ಚುಮದ್ದಿನ ಅಡ್ಡಪರಿಣಾಮದಿಂದ ಸಮಸ್ಯೆ ಉಂಟಾಗಿದೆ ಎಂದು ಹೇಳುತ್ತಿದ್ದಾರೆ. ನಿಜವಾದ ಕಾರಣ ತಿಳಿದು ಬಂದಿಲ್ಲ. ವೈದ್ಯರು ತಕ್ಷಣ ಆಸ್ಪತ್ರೆಗೆ ಧಾವಿಸಿ ಪ್ರತಿ ಮಗುವಿನ ಶುಶ್ರೂಷೆಯಲ್ಲಿ ತೊಡಗಿದ್ದಾರೆ. ಹೆಚ್ಚಿನ ಚಿಕಿತ್ಸೆಗಾಗಿ ಶಿವಮೊಗ್ಗಕ್ಕೆ ಕಳುಹಿಸಿರುವ ಮಕ್ಕಳೊಂದಿಗೆ ಒಬ್ಬ ವೈದ್ಯರು, ದಾದಿಯನ್ನು ಕಳುಹಿಸಲಾಗಿದೆ. ಶಿವಮೊಗ್ಗದಲ್ಲಿ ಡಾ.ಶ್ರೀಧರ್ ಅವರು ಗಮನಿಸುತ್ತಿದ್ದಾರೆ. ಆತಂಕ ಪಡುವ ಪ್ರಶ್ನೆ ಇಲ್ಲ ಎಂದು ತಿಳಿಸಿದರು.

ಘಟನೆ ಹಿನ್ನೆಲೆ ಸಾಗರ ಉಪ ವಿಭಾಗೀಯ ಆಸ್ಪತ್ರೆಯಲ್ಲಿ ಕೆಲಕಾಲ ಆತಂಕದ ಪರಿಸ್ಥಿತಿ ನಿರ್ಮಾಣವಾಗಿತ್ತು. ಮಕ್ಕಳಿಗೆ ಯಾವುದೆ ತೊಂದರೆ ಆಗದಂತೆ ನೋಡಿಕೊಳ್ಳಬೇಕು ಎಂದು ಶಾಸಕ ಹರತಾಳು ಹಾಲಪ್ಪ ಅವರು ವೈದ್ಯರಿಗೆ ಸೂಚಿಸಿದರು.

ನಗರಸಭೆ ಅಧ್ಯಕ್ಷೆ ಮಧುರಾ ಶಿವಾನಂದ, ಸದಸ್ಯರಾದ ಟಿ.ಡಿ.ಮೇಘರಾಜ್, ಗಣೇಶ್ ಪ್ರಸಾದ್, ಸೈಯದ್ ಜಾಕೀರ್, ಸಂತೋಷ್ ಶೇಟ್, ಮೈರಿ ಪಾಟೀಲ್ ಸೇರಿದಂತೆ ಹಲವರು ಆಸ್ಪತ್ರೆಗೆ ಭೇಟಿ ನೀಡಿದ್ದರು.

ಇದನ್ನೂ ಓದಿ – ಮಹಿಳೆಯರೆ ಹುಷಾರ್, WORK FROM HOME ಹೆಸರಲ್ಲಿ ನಡೆಯುತ್ತಿದೆ ವಂಚನೆ, ಶಿವಮೊಗ್ಗದಲ್ಲಿ ಕೇಸ್

Shimoga Nanjappa Hospital

ADVERTISEMENT

  • ಆರೋಗ್ಯ ತುರ್ತು ಸಂದರ್ಭದಲ್ಲಿ ಹಣಕಾಸು ಹೊಂದಿಸುವುದು ಸುಲಭವೇನಲ್ಲ. ಒಂದು ವೇಳೆ INSURANCE ಇದ್ದರೆ, ನಿರಮ್ಮಳವಾಗಿರಬಹುದು ಅಲ್ಲವೆ? ಈಗಲೆ INSURANCE ಮಾಡಿಸಿ. ಒಳ್ಳೆಯ INSURANCE PLANSಗಾಗಿ ಕರೆ ಮಾಡಿ – LIC LIFE INSURANCE – ಅನಿಲ್ 9538414151, ಪ್ರಶಾಂತ್ 9972194422
  • ಸುಂದರ ಮನೆ ಕಟ್ಟಬೇಕು, ಸ್ವಂತ ಮನೆಯಲ್ಲಿ ನೆಮ್ಮದಿಯ ಬದುಕು ಸಾಗಿಸಬೇಕು ಅನ್ನವು ಆಸೆ ಯಾರಿಗಿಲ್ಲ? ಇನ್ಯಾಕೆ ತಡ? ಮನೆ ಕಟ್ಟಲು LICಯಿಂದ HOUSING LOAN ಲಭ್ಯವಿದೆ. ಇವತ್ತೇ ಸಂಪರ್ಕಿಸಿ – ಪ್ರಶಾಂತ್ 9972194422

SHIVAMOGGA LIVE WHATSAPP

ನಿಮ್ಮೂರು, ನಿಮ್ಮ ಏರಿಯಾದ ಕಾರ್ಯಕ್ರಮಗಳು, ಸಮಸ್ಯೆಗಳು ಸುದ್ದಿಯಾಗಬೇಕಾ? ನೀವೇ ವರದಿಗಾರರಾಗಿ. ವಿಡಿಯೋ, ಫೋಟೊ ಮಾಡಿ 7411700200 ಮೊಬೈಲ್ ನಂಬರ್’ಗೆ ವಾಟ್ಸಪ್ ಮಾಡಿ. ನೆನಪಿರಲಿ, ಸುದ್ದಿ ಪ್ರಕಟಣೆಗೆ ನಾವು ಹಣ ಪಡೆಯುವುದಿಲ್ಲ.

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ

ಈಗಲೇ ಕರೆ ಮಾಡಿ
9972194422

[su_divider top=”no” style=”dotted” divider_color=”#ffffff” link_color=”#000000″ margin=”10″]

[su_button url=”https://www.facebook.com/liveshivamogga” target=”blank” style=”flat” background=” #316FF6″ color=”#ffffff” size=”4″ radius=”0″ icon=”icon: facebook-square”][/su_button] [su_button url=”https://x.com/liveshivamogga” target=”blank” style=”flat” background=”#000000″ color=”#ffffff” size=”4″ radius=”0″ icon=”icon: twitter”][/su_button] [su_button url=”https://www.instagram.com/shivamoggalive/” target=”blank” style=”flat” background=”#E1306C” color=”#ffffff” size=”4″ radius=”0″ icon=”icon: instagram”][/su_button] [su_button url=”https://www.youtube.com/@shivamoggalive” target=”blank” style=”flat” background=”#FF0000″ color=”#ffffff” size=”4″ radius=”0″ icon=”icon: youtube-square”][/su_button] [su_button url=”https://www.linkedin.com/in/shivamogga-live-666a05322/” target=”blank” style=”flat” background=”#0072b1″ color=”#ffffff” size=”4″ radius=”0″ icon=”icon: linkedin-square”][/su_button]

[su_divider top=”no” style=”dotted” divider_color=”#ffffff” link_color=”#000000″ margin=”10″]

[su_divider top=”no” style=”dotted” divider_color=”#ffffff” link_color=”#000000″ margin=”10″]

[su_divider top=”no” style=”dotted” divider_color=”#ffffff” link_color=”#000000″ margin=”10″]

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : June 27, 2022

ಮಲವಗೊಪ್ಪದ ಭದ್ರಾ ನಾಲೆಯಲ್ಲಿ ನಾಪತ್ತೆಯಾಗಿದ್ದ ಹರಿಗೆಯ ಬಾಲಕ ಶವವಾಗಿ ಪತ್ತೆ, ಆಗಿದ್ದೇನು?

ಮಲವಗೊಪ್ಪದ ಭದ್ರಾ ನಾಲೆಯಲ್ಲಿ ನಾಪತ್ತೆಯಾಗಿದ್ದ ಹರಿಗೆಯ ಬಾಲಕ ಶವವಾಗಿ ಪತ್ತೆ, ಆಗಿದ್ದೇನು?

ಶಿವಮೊಗ್ಗದಲ್ಲಿ ಆಲಿಕಲ್ಲು ಮಳೆ, ಎಲ್ಲೆಲ್ಲಿ ಹೇಗಿತ್ತು ಭಾನುವಾರದ ವರ್ಷಧಾರೆ? ಎಲ್ಲೆಲ್ಲಿ ಹಾನಿಯಾಗಿದೆ?

ಶಿವಮೊಗ್ಗದಲ್ಲಿ ಆಲಿಕಲ್ಲು ಮಳೆ, ಎಲ್ಲೆಲ್ಲಿ ಹೇಗಿತ್ತು ಭಾನುವಾರದ ವರ್ಷಧಾರೆ? ಎಲ್ಲೆಲ್ಲಿ ಹಾನಿಯಾಗಿದೆ?

ಶಿವಮೊಗ್ಗದ ವಿವಿಧೆಡೆ ಇಂದು ಮತ್ತು ನಾಳೆ ಇಡೀ ದಿನ ಕರೆಂಟ್‌ ಇರಲ್ಲ, ಎಲ್ಲೆಲ್ಲಿ?

ಶಿವಮೊಗ್ಗದ ವಿವಿಧೆಡೆ ಇಂದು ಮತ್ತು ನಾಳೆ ಇಡೀ ದಿನ ಕರೆಂಟ್‌ ಇರಲ್ಲ, ಎಲ್ಲೆಲ್ಲಿ?

ಸರಕು ರೇಟ್‌ ಕುಸಿತ, ಉಳಿದ ಅಡಿಕೆಗಳ ಧಾರಣೆ ಎಷ್ಟಿದೆ?, 13 ಮಾರ್ಚ್‌ 2026ರ ಅಡಿಕೆ ರೇಟ್‌

ಸರಕು ರೇಟ್‌ ಕುಸಿತ, ಉಳಿದ ಅಡಿಕೆಗಳ ಧಾರಣೆ ಎಷ್ಟಿದೆ?, 13 ಮಾರ್ಚ್‌ 2026ರ ಅಡಿಕೆ ರೇಟ್‌

ಸಹ್ಯಾದ್ರಿ ಉತ್ಸವದಲ್ಲಿ ಜಾನಪದ ಕಲೆಗಳ ಕಲರವ, ಏನಂದ್ರು ನಟಿ ಜಯಮಾಲಾ?

ಸಹ್ಯಾದ್ರಿ ಉತ್ಸವದಲ್ಲಿ ಜಾನಪದ ಕಲೆಗಳ ಕಲರವ, ಏನಂದ್ರು ನಟಿ ಜಯಮಾಲಾ?

ವಿದ್ಯಾನಗರದ ಆರ್ಮಿ ಕ್ಯಾಂಟೀನ್‌ನಲ್ಲಿ ಮದ್ಯ ಕಳ್ಳತನಕ್ಕೆ ಯತ್ನ, ಆಗಿದ್ದೇನು?

ವಿದ್ಯಾನಗರದ ಆರ್ಮಿ ಕ್ಯಾಂಟೀನ್‌ನಲ್ಲಿ ಮದ್ಯ ಕಳ್ಳತನಕ್ಕೆ ಯತ್ನ, ಆಗಿದ್ದೇನು?

ಕಾರ್ಗಲ್‌ನಲ್ಲಿ ವಾಂತಿ, ಭೇದಿ ಪ್ರಕರಣ ಹೆಚ್ಚಳ, ಮಹಿಳೆ ಸಾವು, ಜನರಲ್ಲಿ ಆತಂಕ

ಕಾರ್ಗಲ್‌ನಲ್ಲಿ ವಾಂತಿ, ಭೇದಿ ಪ್ರಕರಣ ಹೆಚ್ಚಳ, ಮಹಿಳೆ ಸಾವು, ಜನರಲ್ಲಿ ಆತಂಕ

ಹೊಂಬುಜದಲ್ಲಿ ವೈಭದ ರಥೋತ್ಸವ, ಹೇಗಿತ್ತು ಪೂಜೆ? ಎಲ್ಲೆಲ್ಲಿಂದ ಬಂದಿದ್ದರು ಭಕ್ತರು?

ಹೊಂಬುಜದಲ್ಲಿ ವೈಭದ ರಥೋತ್ಸವ, ಹೇಗಿತ್ತು ಪೂಜೆ? ಎಲ್ಲೆಲ್ಲಿಂದ ಬಂದಿದ್ದರು ಭಕ್ತರು?

ಸೋಮಿನಕೊಪ್ಪದ ಮನೆಯೊಂದರ ಹಿಂಬದಿಯ ಶೆಡ್‌ ಮೇಲೆ ಪೊಲೀಸರ ದಾಳಿ, ಒಬ್ಬ ಅರೆಸ್ಟ್‌

ಸೋಮಿನಕೊಪ್ಪದ ಮನೆಯೊಂದರ ಹಿಂಬದಿಯ ಶೆಡ್‌ ಮೇಲೆ ಪೊಲೀಸರ ದಾಳಿ, ಒಬ್ಬ ಅರೆಸ್ಟ್‌

ಮೆಗ್ಗಾನ್‌ ಆಸ್ಪತ್ರೆ ಆವರಣದಲ್ಲಿ ಮೆಡಿಕಲ್‌ ವಿದ್ಯಾರ್ಥಿನಿ ಮೇಲೆ ಹರಿದ ಟ್ಯಾಂಕರ್‌ ಲಾರಿ, ಇಲ್ಲಿದೆ ಡಿಟೇಲ್ಸ್‌

ಮೆಗ್ಗಾನ್‌ ಆಸ್ಪತ್ರೆ ಆವರಣದಲ್ಲಿ ಮೆಡಿಕಲ್‌ ವಿದ್ಯಾರ್ಥಿನಿ ಮೇಲೆ ಹರಿದ ಟ್ಯಾಂಕರ್‌ ಲಾರಿ, ಇಲ್ಲಿದೆ ಡಿಟೇಲ್ಸ್‌

Leave a Comment