ಹೆದ್ದಾರಿಯ ಪಕ್ಕದಲ್ಲಿ ಬೈಕ್ ನಿಲ್ಲಿಸಿಕೊಂಡಿದ್ದ ಯುವಕನಿಗೆ ಸ್ವಿಫ್ಟ್ ಕಾರು ಡಿಕ್ಕಿ

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

SHIVAMOGGA LIVE NEWS | BHADRAVATHI | 29 ಜೂನ್ 2022

ರಸ್ತೆ ಪಕ್ಕದಲ್ಲಿ ಬೈಕ್ ನಿಲ್ಲಿಸಿಕೊಂಡಿದ್ದ ಯುವಕನಿಗೆ ಕಾರು ಡಿಕ್ಕಿ (ACCIDENT) ಹೊಡೆದಿದೆ. ಗಂಭೀರವಾದ ಪೆಟ್ಟು ಬಿದ್ದ ಹಿನ್ನೆಲೆ ಯುವಕನನ್ನು ಮೆಗ್ಗಾನ್ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.

Shimoga Nanjappa Hospital

ಭದ್ರಾವತಿ ದೊಡ್ಡಗೊಪ್ಪೇನಹಳ್ಳಿ ನಿವಾಸಿ ಹರ್ಷಿತ್ (29) ಗಾಯಗೊಂಡಾತ. ಭದ್ರಾವತಿಯ ಹುಡ್ಕೊ ಕಾಲೋನಿಯ ಓಂ ಶಕ್ತಿ ದೇವಸ್ಥಾನದ ಬಳಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಅಪಘಾತ ಸಂಭವಿಸಿದೆ.

ಹೇಗಾಯ್ತು ಅಪಘಾತ?

ಹರ್ಷಿತ್ ತನ್ನ ಸಂಬಂಧಿ ಪ್ರವೀಣ್ ಜೊತೆಗೆ ರಾತ್ರಿ 9 ಗಂಟೆ ಹೊತ್ತಿಗೆ ದೊಡ್ಡ ಗೊಪ್ಪೇನಹಳ್ಳಿಯಲ್ಲಿರುವ ತಮ್ಮ ಮನೆಗೆ ತೆರಳುತ್ತಿದ್ದರು. ಓಂ ಶಕ್ತಿ ದೇವಸ್ಥಾನದಿಂದ ಸ್ವಲ್ಪ ದೂರದಲ್ಲಿ ಮೂತ್ರ ವಿಸರ್ಜನೆಗೆಂದು ಪ್ರವೀಣ್,  ರಸ್ತೆ ಪಕ್ಕದಲ್ಲಿ ಬೈಕ್ ನಿಲ್ಲಿಸಿದ. ಹರ್ಷಿತ್ ಬೈಕ್ ಮೇಲೆ ಕುಳಿತಿದ್ದ.

ಉಜ್ಜನೀಪುರದಿಂದ ಶಿವಮೊಗ್ಗದ ಕಡೆಗೆ ತೆರಳುತ್ತಿದ್ದ ಸ್ವಿಫ್ಟ್ ಕಾರು ವೇಗವಾಗಿ ಬಂದು, ಹರ್ಷಿತ್ ಕುಳಿತಿದ್ದ ಬೈಕಿಗೆ ಡಿಕ್ಕಿ (ACCIDENT) ಹೊಡೆದಿದೆ. ಹರ್ಷಿತ್’ಗೆ ಗಂಭೀರ ಪೆಟ್ಟು ಬಿದ್ದಿದೆ. ಕೂಡಲೆ ಆತನನ್ನು ಭದ್ರಾವತಿಯ ಸರ್ಕಾರಿ ಆಸ್ಪತ್ರೆಗೆ ದಾಖಲು ಮಾಡಲಾಯಿತು.

ಹೆಚ್ಚಿನ ಚಿಕಿತ್ಸೆ ಅಗತ್ಯವಿದ್ದರಿಂದ, ಕೂಡಲೆ ಆತನನ್ನು ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ದಾಖಲು ಮಾಡಲಾಯಿತು.

ಭದ್ರಾವತಿಯ ಪೇಪರ್ ಟೌನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ನಡೆಯುತ್ತಿದೆ.

ಇದನ್ನೂ ಓದಿ – ಆಗುಂಬೆ ಬಳಿ ಬಸ್’ನಿಂದ ಆಯಾತಪ್ಪಿ ಕೆಳಗೆ ಬಿದ್ದ ಮಹಿಳೆ

ADVERTISEMENT

  • ಆರೋಗ್ಯ ತುರ್ತು ಸಂದರ್ಭದಲ್ಲಿ ಹಣಕಾಸು ಹೊಂದಿಸುವುದು ಸುಲಭವೇನಲ್ಲ. ಒಂದು ವೇಳೆ INSURANCE ಇದ್ದರೆ, ನಿರಮ್ಮಳವಾಗಿರಬಹುದು ಅಲ್ಲವೆ? ಈಗಲೆ INSURANCE ಮಾಡಿಸಿ. ಒಳ್ಳೆಯ INSURANCE PLANSಗಾಗಿ ಕರೆ ಮಾಡಿ – LIC LIFE INSURANCE – ಅನಿಲ್ 9538414151, ಪ್ರಶಾಂತ್ 9972194422
  • ಸುಂದರ ಮನೆ ಕಟ್ಟಬೇಕು, ಸ್ವಂತ ಮನೆಯಲ್ಲಿ ನೆಮ್ಮದಿಯ ಬದುಕು ಸಾಗಿಸಬೇಕು ಅನ್ನವು ಆಸೆ ಯಾರಿಗಿಲ್ಲ? ಇನ್ಯಾಕೆ ತಡ? ಮನೆ ಕಟ್ಟಲು LICಯಿಂದ HOUSING LOAN ಲಭ್ಯವಿದೆ. ಇವತ್ತೇ ಸಂಪರ್ಕಿಸಿ – ಪ್ರಶಾಂತ್ 9972194422

SHIVAMOGGA LIVE WHATSAPP

ನಿಮ್ಮೂರು, ನಿಮ್ಮ ಏರಿಯಾದ ಕಾರ್ಯಕ್ರಮಗಳು, ಸಮಸ್ಯೆಗಳು ಸುದ್ದಿಯಾಗಬೇಕಾ? ನೀವೇ ವರದಿಗಾರರಾಗಿ. ವಿಡಿಯೋ, ಫೋಟೊ ಮಾಡಿ 7411700200 ಮೊಬೈಲ್ ನಂಬರ್’ಗೆ ವಾಟ್ಸಪ್ ಮಾಡಿ. ನೆನಪಿರಲಿ, ಸುದ್ದಿ ಪ್ರಕಟಣೆಗೆ ನಾವು ಹಣ ಪಡೆಯುವುದಿಲ್ಲ.

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ

ಈಗಲೇ ಕರೆ ಮಾಡಿ
9972194422

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : June 29, 2022

ಶಿವಮೊಗ್ಗ ಡಿ.ಸಿ ಎದುರು ಮೈದಾನಕ್ಕೆ ಬ್ಯಾರಿಕೇಡ್‌, ಹಿಂದೂ ಸಂಘಟನೆಗಳು ಗರಂ, ಕಾರಣವೇನು?

ಶಿವಮೊಗ್ಗ ಡಿ.ಸಿ ಎದುರು ಮೈದಾನಕ್ಕೆ ಬ್ಯಾರಿಕೇಡ್‌, ಹಿಂದೂ ಸಂಘಟನೆಗಳು ಗರಂ, ಕಾರಣವೇನು?

ಬೆಳಗ್ಗೆ ಲೇಔಟ್‌ಗೆ ಬಂದ ಲೆಕ್ಚರರ್‌ಗೆ ಕಾದಿತ್ತು ಆಘಾತ, ರಾತ್ರಿ 11.15ರ CCTV ದೃಶ್ಯ ಕಂಡು ಶಾಕ್‌

ಬೆಳಗ್ಗೆ ಲೇಔಟ್‌ಗೆ ಬಂದ ಲೆಕ್ಚರರ್‌ಗೆ ಕಾದಿತ್ತು ಆಘಾತ, ರಾತ್ರಿ 11.15ರ CCTV ದೃಶ್ಯ ಕಂಡು ಶಾಕ್‌

ಶಿವಮೊಗ್ಗ TO ಬೆಂಗಳೂರು ಇನ್ನಷ್ಟು ವೇಗ, ದ್ವಿಪಥ ಯೋಜನೆಗೆ ಒತ್ತಾಯ

ಶಿವಮೊಗ್ಗ TO ಬೆಂಗಳೂರು ಇನ್ನಷ್ಟು ವೇಗ, ದ್ವಿಪಥ ಯೋಜನೆಗೆ ಒತ್ತಾಯ

ಜಮೀನಿಗೆ ನೀರು ಹರಿಸಲು ಹೋಗಿದ್ದ ವ್ಯಕ್ತಿಗೆ ಕಾದಿತ್ತು ಸಾವು, ಆಗಿದ್ದೇನು?

ಜಮೀನಿಗೆ ನೀರು ಹರಿಸಲು ಹೋಗಿದ್ದ ವ್ಯಕ್ತಿಗೆ ಕಾದಿತ್ತು ಸಾವು, ಆಗಿದ್ದೇನು?

ನಾಳೆಯಿಂದ SSLC ಪರೀಕ್ಷೆ, ಹೇಗಿದೆ ಸಿದ್ಧತೆ? ಯಾವ್ಯಾವ ತಾಲೂಕಿನಲ್ಲಿ ಎಷ್ಟು ಪರೀಕ್ಷಾ ಕೇಂದ್ರಗಳಿವೆ?

ನಾಳೆಯಿಂದ SSLC ಪರೀಕ್ಷೆ, ಹೇಗಿದೆ ಸಿದ್ಧತೆ? ಯಾವ್ಯಾವ ತಾಲೂಕಿನಲ್ಲಿ ಎಷ್ಟು ಪರೀಕ್ಷಾ ಕೇಂದ್ರಗಳಿವೆ?

ಮನೆಯ ಮೀಟರ್ ಬೋರ್ಡ್ ಮೇಲೆ ಕೀ ಇಡುವ ಅಭ್ಯಾಸ ಇದ್ಯಾ? ನಿದಿಗೆಯಲ್ಲಿ ದಾಖಲಾಯ್ತು ಕೇಸ್‌, ಯಾಕೆ?

ಮನೆಯ ಮೀಟರ್ ಬೋರ್ಡ್ ಮೇಲೆ ಕೀ ಇಡುವ ಅಭ್ಯಾಸ ಇದ್ಯಾ? ನಿದಿಗೆಯಲ್ಲಿ ದಾಖಲಾಯ್ತು ಕೇಸ್‌, ಯಾಕೆ?

ಶಿವಮೊಗ್ಗದ ‘ಶಿವಚೌಡಿ ಧರಣಿ’ ಇನ್ನಿಲ್ಲ, ವಿಭಿನ್ನವಾಗಿ ತಿಥಿ ಕಾರ್ಯ ಮಾಡಿದ ಮಾಲೀಕ

ಶಿವಮೊಗ್ಗದ ‘ಶಿವಚೌಡಿ ಧರಣಿ’ ಇನ್ನಿಲ್ಲ, ವಿಭಿನ್ನವಾಗಿ ತಿಥಿ ಕಾರ್ಯ ಮಾಡಿದ ಮಾಲೀಕ

ಸಹ್ಯಾದ್ರಿ ಉತ್ಸವ, ಸಮಗ್ರ ಪ್ರಶಸ್ತಿ ಇಂದಿರಾ ಗಾಂಧಿ ಮಹಿಳಾ ಕಾಲೇಜು ಮುಡಿಗೆ

ಸಹ್ಯಾದ್ರಿ ಉತ್ಸವ, ಸಮಗ್ರ ಪ್ರಶಸ್ತಿ ಇಂದಿರಾ ಗಾಂಧಿ ಮಹಿಳಾ ಕಾಲೇಜು ಮುಡಿಗೆ

ಮಾವನ ಕುತ್ತಿಗೆ ಸೀಳಿ ಕೊಲೆಗೆ ಯತ್ನಿಸಿದ ಅಳಿಯ, ಎಲ್ಲಿ? ಕಾರಣವೇನು?

ಮಾವನ ಕುತ್ತಿಗೆ ಸೀಳಿ ಕೊಲೆಗೆ ಯತ್ನಿಸಿದ ಅಳಿಯ, ಎಲ್ಲಿ? ಕಾರಣವೇನು?

ಗೆಜ್ಜೇನಹಳ್ಳಿಯಲ್ಲಿ ಹಿಟ್ ಅಂಡ್ ರನ್ ಅಪಘಾತ, ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ಯುವಕ ಸಾವು

ಗೆಜ್ಜೇನಹಳ್ಳಿಯಲ್ಲಿ ಹಿಟ್ ಅಂಡ್ ರನ್ ಅಪಘಾತ, ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ಯುವಕ ಸಾವು

Leave a Comment