ಶಿವಮೊಗ್ಗದಲ್ಲಿ ಐದು ಮಂದಿಗೆ 3 ವರ್ಷ ಜೈಲು, 10 ಸಾವಿರ ದಂಡ, ಶಿಕ್ಷೆಗೇನು ಕಾರಣ?

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

SHIVAMOGGA LIVE NEWS | SHIMOGA | 3 ಜುಲೈ 2022

ತಮ್ಮ ಮನೆ ಮತ್ತು ಪಕ್ಕದ ಮನೆ ನಡುವಿನ ಓಣಿಯ ಅಳತೆ ಮಾಡಿಸುತ್ತಿದ್ದ ವ್ಯಕ್ತಿಯೊಬ್ಬರ ಮೇಲೆ ಮಾರಣಾಂತಿಕವಾಗಿ ಹಲ್ಲೆ ನಡೆಸಿದ ಪ್ರಕರಣ ಸಂಬಂಧ ಐದು ಮಂದಿಗೆ ಜೈಲು (JAIL) ಶಿಕ್ಷೆಯಾಗಿದೆ.

Shimoga Nanjappa Hospital

ಶಿವಮೊಗ್ಗದ ಹಾರನಹಳ್ಳಿಯ ಸಯ್ಯದ್ ಮಜರ್ (58) ಎಂಬುವವರ ಮೇಲೆ ಮಾರಣಾಂತಿಕವಾಗಿ ಹಲ್ಲೆ ನಡೆಸಲಾಗಿತ್ತು. ಪಕ್ಕದ ಮನೆಯ ಅತೀಕ್ ಅಹಮ್ಮದ್ (34), ಸಿದ್ದಿಕ್ (25), ಶಮ್ಮು (30), ಫೈರೋಜ್ (21), ಖಯೂಮ್ (58) ಎಂಬುವವರು ಹಲ್ಲೆ ನಡೆಸಿದ್ದರು.

2015ರ ಆಗಸ್ಟ್ 18ರಂದು ಸಯ್ಯದ್ ಮಜರ್ ಅವರು ಹಾರನಹಳ್ಳಿಯಲ್ಲಿರುವ ತಮ್ಮ ಮನೆ ಮತ್ತು ಪಕ್ಕದ ಮನೆ ನಡುವೆ ಇದ್ದ ಓಣಿಯ ಅಳತೆ ಮಾಡಿಸುತ್ತಿದ್ದರು. ಈ ವೇಳೆ ಪಕ್ಕದ ಮನೆಯ ಐವರು ಸಯ್ಯದ್ ಮಜರ್ ಮೇಲೆ ದಾಳಿ ಮಾಡಿದ್ದರು. ಅವಾಚ್ಯವಾಗಿ ಬೈಕು, ಕುಡುಗೋಲು, ಮರದ ರೀಪರ್ ಹಿಡಿದು ದಾಳಿ ಮಾರಣಾಂತಿಕವಾಗಿ ಹಲ್ಲೆ ನಡೆಸಿದ್ದರು.

ಘಟನೆ ಸಂಬಂಧ ಕುಂಸಿ ಪೊಲೀಸ್ ಠಾಣೆಯಲ್ಲಿ ಪ್ರರಕಣ ದಾಖಲಾಗಿತ್ತು. ತನಿಖೆ ನಡೆಸಿದ ಆಗಿನ ಪಿಎಸ್ಐ ಮಂಜುನಾಥ್ ಅವರು ನ್ಯಾಯಾಲಯಕ್ಕೆ ದೋಷಾರೋಪ ಪಟ್ಟಿ ಸಲ್ಲಿಸಿದ್ದರು. ಆರೋಪ ಸಾಬೀತಾದ ಹಿನ್ನೆಲೆ, ಜಿಲ್ಲಾ ಸತ್ರ ನ್ಯಾಯಾಲಯದ ನ್ಯಾಯಾಧೀಶರಾದ ಮುಸ್ತಫಾ ಹುಸೇನ್ ಅವರು ಶಿಕ್ಷೆ ಪ್ರಕಟಿಸಿದ್ದಾರೆ.

ತಪ್ಪಿತಸ್ಥರಿಗೆ ಮೂರು ವರ್ಷ ಕಠಿಣ ಜೈಲು (JAIL) ಶಿಕ್ಷೆ, 10 ಸಾವಿರ ರೂ. ದಂಡ ವಿಧಿಸಲಾಗಿದೆ. ದಂಡ ಕಟ್ಟಲು ವಿಫಲವಾದರೆ 3 ತಿಂಗಳು ಸಾದಾ ಕಾರಾಗೃಹ ಶಿಕ್ಷೆ ವಿಧಿಸಲಾಗಿದೆ. ಸರ್ಕಾರಿ ಅಭಿಯೋಜಕರಾಗಿ ಪುಷ್ಪಾ ಅವರು ವಾದ ಮಂಡಿಸಿದ್ದರು.

ಇದನ್ನೂ ಓದಿ – KSRTC ಬಸ್, ಕ್ಯಾಂಟರ್ ಮುಖಾಮುಖಿ ಡಿಕ್ಕಿ

ADVERTISEMENT

  • ಆರೋಗ್ಯ ತುರ್ತು ಸಂದರ್ಭದಲ್ಲಿ ಹಣಕಾಸು ಹೊಂದಿಸುವುದು ಸುಲಭವೇನಲ್ಲ. ಒಂದು ವೇಳೆ INSURANCE ಇದ್ದರೆ, ನಿರಮ್ಮಳವಾಗಿರಬಹುದು ಅಲ್ಲವೆ? ಈಗಲೆ INSURANCE ಮಾಡಿಸಿ. ಒಳ್ಳೆಯ INSURANCE PLANSಗಾಗಿ ಕರೆ ಮಾಡಿ – LIC LIFE INSURANCE – ಅನಿಲ್ 9538414151, ಪ್ರಶಾಂತ್ 9972194422
  • ಸುಂದರ ಮನೆ ಕಟ್ಟಬೇಕು, ಸ್ವಂತ ಮನೆಯಲ್ಲಿ ನೆಮ್ಮದಿಯ ಬದುಕು ಸಾಗಿಸಬೇಕು ಅನ್ನವು ಆಸೆ ಯಾರಿಗಿಲ್ಲ? ಇನ್ಯಾಕೆ ತಡ? ಮನೆ ಕಟ್ಟಲು LICಯಿಂದ HOUSING LOAN ಲಭ್ಯವಿದೆ. ಇವತ್ತೇ ಸಂಪರ್ಕಿಸಿ – ಪ್ರಶಾಂತ್ 9972194422

SHIVAMOGGA LIVE WHATSAPP

ನಿಮ್ಮೂರು, ನಿಮ್ಮ ಏರಿಯಾದ ಕಾರ್ಯಕ್ರಮಗಳು, ಸಮಸ್ಯೆಗಳು ಸುದ್ದಿಯಾಗಬೇಕಾ? ನೀವೇ ವರದಿಗಾರರಾಗಿ. ವಿಡಿಯೋ, ಫೋಟೊ ಮಾಡಿ 7411700200 ಮೊಬೈಲ್ ನಂಬರ್’ಗೆ ವಾಟ್ಸಪ್ ಮಾಡಿ. ನೆನಪಿರಲಿ, ಸುದ್ದಿ ಪ್ರಕಟಣೆಗೆ ನಾವು ಹಣ ಪಡೆಯುವುದಿಲ್ಲ.

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment