ಶಿವಮೊಗ್ಗದಲ್ಲಿ ಮಂಟಪ ಬಹುತೇಕ ಮುಳುಗಡೆ, ಎಷ್ಟು ಪ್ರಮಾಣದ ನೀರನ್ನು ಡ್ಯಾಂನಿಂದ ಬಿಡಲಾಗುತ್ತಿದೆ?

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

SHIVAMOGGA LIVE NEWS | SHIMOGA | 7 ಜುಲೈ 2022

ತೀರ್ಥಹಳ್ಳಿ ತಾಲ್ಲೂಕು, ಚಿಕ್ಕಮಗಳೂರು ಜಿಲ್ಲೆಯಲ್ಲಿ ನಿರಂತರ ಮಳೆ ಆಗುತ್ತಿದೆ. ಈ ಹಿನ್ನೆಲೆಯಲ್ಲಿ ತುಂಗಾ ಜಲಾಶಯದ (TUNGA DAM) ಒಳ ಹರಿವು ಹೆಚ್ಚಳವಾಗುತ್ತಿದೆ. ಒಳ ಹರಿವಿನಷ್ಟೆ ಪ್ರಮಾಣದ ನೀರನ್ನು ಹೊರಗೆ ಹರಿಸಲಾಗುತ್ತಿದೆ.

Shimoga Nanjappa Hospital

ತುಂಗಾ ಜಲಾಶಯಕ್ಕೆ ಇವತ್ತು ಬೆಳಗ್ಗೆ 44,720 ಕ್ಯೂಸೆಕ್ ನೀರು ಒಳ ಹರಿವು ದಾಖಲಾಗಿತ್ತು. ಈ ಹಿನ್ನೆಲೆಯಲ್ಲಿ 49,638 ಕ್ಯೂಸೆಕ್ ನೀರು ಹೊರಗೆ ಬಿಡಲಾಗುತ್ತಿತ್ತು. ಒಳ ಹರಿವು ಪ್ರಮಾಣ ಹೆಚ್ಚಳವಾದ ಹಿನ್ನೆಲೆಯಲ್ಲಿ 52,525 ಕ್ಯೂಸೆಕ್ ನೀರು ಹೊರಗೆ ಬಿಡಲಾಗುತ್ತಿದೆ.

ಬಹುತೇಕ ಮುಳುಗಿದ ಮಂಟಪ

ತುಂಗಾ ನದಿಯಲ್ಲಿ (TUNGA DAM) ನೀರಿನ ಮಟ್ಟ ಹೆಚ್ಚಳವಾಗಿದ್ದು, ಕೋರ್ಪಲಯ್ಯ ಛತ್ರ ಮಂಟಪ ಬಹುತೇಕ ಮುಳುಗಡೆಯಾಗಿದೆ.  ಮಂಟಪದ ಮೇಲ್ಭಾಗದ ಮಾತ್ರ ಕಾಣಿಸುತ್ತಿದೆ. ವಿಚಾರ ತಿಳಿದು ಶಿವಮೊಗ್ಗದ ಜನರು ಬೆಳಗ್ಗೆಯಿಂದ ಮಂಟಪದ ಬಳಿ ಬಂದು ಕಣ್ತುಂಬಿಕೊಳ್ಳುತ್ತಿದ್ದಾರೆ.

ಇನ್ನು, ಜನರು ಹೆಚ್ಚಿನ ಸಂಖ್ಯೆಯಲ್ಲಿ ಮಂಟಪದ ಬಳಿಗೆ ಭೇಟಿ ನೀಡುತ್ತಿರುವ ಹಿನ್ನೆಲೆ, ಮುನ್ನೆಚ್ಚರಿಕೆ ಕ್ರಮವಾಗಿ ಬ್ಯಾರಿಕೇಡ್ ಹಾಕಲಾಗಿದೆ. ಮಂಟಪದ ಮೆಟ್ಟಿಲುಗಳ ಮುಂದೆ ಬ್ಯಾರಿಕೇಡ್ ಹಾಕಿ ಬಂದ್ ಮಾಡಲಾಗಿದೆ. ಮತ್ತೊಂದೆಡೆ ಸ್ಮಾರ್ಟ್ ಸಿಟಿ ಕಾಮಗಾರಿ ನಡೆಯುತ್ತಿರುವುದರಿಂದ ಮೇಲ್ಭಾಗ ಕೆಸರುಮಯವಾಗಿದೆ.

ಇದನ್ನೂ ಓದಿ – ಅಂಜನಾಪುರ ಜಲಾಶಯ ಭರ್ತಿ, ಕಣ್ತುಂಬಿಕೊಳ್ಳಲು ಪ್ರವಾಸಿಗರ ದಂಡು

ADVERTISEMENT

  • ಆರೋಗ್ಯ ತುರ್ತು ಸಂದರ್ಭದಲ್ಲಿ ಹಣಕಾಸು ಹೊಂದಿಸುವುದು ಸುಲಭವೇನಲ್ಲ. ಒಂದು ವೇಳೆ INSURANCE ಇದ್ದರೆ, ನಿರಮ್ಮಳವಾಗಿರಬಹುದು ಅಲ್ಲವೆ? ಈಗಲೆ INSURANCE ಮಾಡಿಸಿ. ಒಳ್ಳೆಯ INSURANCE PLANSಗಾಗಿ ಕರೆ ಮಾಡಿ – LIC LIFE INSURANCE – ಅನಿಲ್ 9538414151, ಪ್ರಶಾಂತ್ 9972194422
  • ಸುಂದರ ಮನೆ ಕಟ್ಟಬೇಕು, ಸ್ವಂತ ಮನೆಯಲ್ಲಿ ನೆಮ್ಮದಿಯ ಬದುಕು ಸಾಗಿಸಬೇಕು ಅನ್ನವು ಆಸೆ ಯಾರಿಗಿಲ್ಲ? ಇನ್ಯಾಕೆ ತಡ? ಮನೆ ಕಟ್ಟಲು LICಯಿಂದ HOUSING LOAN ಲಭ್ಯವಿದೆ. ಇವತ್ತೇ ಸಂಪರ್ಕಿಸಿ – ಪ್ರಶಾಂತ್ 9972194422

SHIVAMOGGA LIVE WHATSAPP

ನಿಮ್ಮೂರು, ನಿಮ್ಮ ಏರಿಯಾದ ಕಾರ್ಯಕ್ರಮಗಳು, ಸಮಸ್ಯೆಗಳು ಸುದ್ದಿಯಾಗಬೇಕಾ? ನೀವೇ ವರದಿಗಾರರಾಗಿ. ವಿಡಿಯೋ, ಫೋಟೊ ಮಾಡಿ 7411700200 ಮೊಬೈಲ್ ನಂಬರ್’ಗೆ ವಾಟ್ಸಪ್ ಮಾಡಿ. ನೆನಪಿರಲಿ, ಸುದ್ದಿ ಪ್ರಕಟಣೆಗೆ ನಾವು ಹಣ ಪಡೆಯುವುದಿಲ್ಲ.

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment