ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
SHIVAMOGGA LIVE NEWS | SHIMOGA | 7 ಜುಲೈ 2022
ಗೃಹ ಸಚಿವ ಆರಗ ಜ್ಞಾನೇಂದ್ರ ಅವರು ತಮಗೆ ನ್ಯಾಯ ಒದಗಿಸುತ್ತಿಲ್ಲ ಎಂದು ಆರೋಪಿಸಿ ಬಜರಂಗದಳ ಕಾರ್ಯಕರ್ತ ಹರ್ಷ ಅವರ ಸಹೋದರಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಇದರ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.
.png)
ಬಜರಂಗದಳ ಕಾರ್ಯಕರ್ತ ಹರ್ಷ ಸಹೋದರಿ ಅಶ್ವಿನಿ ಅವರು ಬೆಂಗಳೂರಿನಲ್ಲಿ ಗೃಹ ಸಚಿವ ಆರಗ ಜ್ಞಾನೇಂದ್ರ ಅವರನ್ನು ಭೇಟಿಯಾಗಿದ್ದರು. ಪರಪ್ಪನ ಅಗ್ರಹಾರ ಜೈಲಿನಲ್ಲಿ ಹರ್ಷ ಹತ್ಯೆಯ ಆರೋಪಿಗಳಿಗೆ ರಾಜಾಥಿತ್ಯ ನೀಡುತ್ತಿರುವ ಕುರಿತು ಗೃಹ ಸಚಿವರನ್ನು ಪ್ರಶ್ನಿಸಿದ್ದರು. ಈ ವೇಳೆ ಗೃಹ ಸಚಿವರು ಸಮರ್ಪಕವಾಗಿ ಉತ್ತರ ನೀಡಲಿಲ್ಲ ಎಂದು ಅಶ್ವಿನಿ ಅವರು ಬೇಸರ ವ್ಯಕ್ತಪಡಿಸಿದ್ದಾರೆ.
ವಿಡಿಯೋ ವೈರಲ್, ಏನೇನು ಚರ್ಚೆಯಾಯ್ತು?
ಗೃಹ ಸಚಿವ ಆರಗ ಜ್ಞಾನೇಂದ್ರ ಮತ್ತು ಅಶ್ವಿನಿ ಅವರು ಮಾತನಾಡಿದ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. 1.57 ನಿಮಿಷದ ವಿಡಿಯೋ ವೈರಲ್ ಆಗಿದೆ. ವಿಡಿಯೋದಲ್ಲಿ ಇಬ್ಬರ ನಡುವೆ ಮಾತಿಗೆ ಮಾತು ಬೆಳೆಯಲಿದೆ.
ಆರಗ ಜ್ಞಾನೇಂದ್ರ, ಗೃಹ ಸಚಿವರು : ನಿಮ್ಮ ಇಡೀ ಕುಟುಂಬದ ಜೊತೆಗೆ ನಾವಿದ್ದೇವೆ. ನಾವೇನು ನಿಮಗೆ ದ್ರೋಹ ಮಾಡುತ್ತೇವೆ ಅನ್ನುವ ಹಾಗೆ ನೀನು ಮಾತಾಡ್ತೀಯಲ್ಲಮ್ಮ.
ಅಶ್ವಿನಿ : ಇಲ್ಲಿ ಬಂದವರಿಗೆ ತುಂಬಾ ಚನ್ನಾಗಿ ಮರ್ಯಾದೆ ಕೊಟ್ಟಿದ್ದೀರ. ಥ್ಯಾಂಕ್ಯೂ ಸೋ ಮಚ್.
ಸುತ್ತಲು ಇದ್ದ ಪೊಲೀಸರು ಮತ್ತು ಇತರರು ಆಶ್ವಿನಿ ಅವರ ಮನವೊಲಿಸಲು ಮುಂದಾಗುತ್ತಾರೆ. ಅದರೆ ಅವರು ಕೊಠಡಿಯಿಂದ ಹೊರಗೆ ಬರುತ್ತಾರೆ. ಈ ಸಂದರ್ಭ ಮೊಬೈಲ್ ಫೋನ್ ಮೂಲಕ ವಿಡಿಯೋ ಚಿತ್ರೀಕರಣ ಮಾಡುತ್ತಿದ್ದ ವ್ಯಕ್ತಿ ಅಶ್ವಿನಿ ಅವರಿಂದ ಮಾಹಿತಿ ತಿಳಿಯಲು ಯತ್ನಿಸುತ್ತಾರೆ. ಆಗ ಅಶ್ವಿನಿ ಅವರು ಸಿಟ್ಟು ಹೊರಗೆ ಹಾಕುತ್ತಾರೆ.
ಅಶ್ವಿನಿ : ನಾವು ಕೇಳೋದೆ ತಪ್ಪಾ? ಇಲ್ಲಿ ಏನು ನಡೆಯುತ್ತಿದೆ ಎಂದು ಕೇಳುವುದೇ ತಪ್ಪಾ? ನಮಗೆ ಜೋರು ಮಾಡಿ, ಬಾಯಿ ಮುಚ್ಚಿಸಿ ಕಳುಹಿಸ್ತಾರೆ ಅಂದರೆ, ನಾವಿಲ್ಲಿ ನ್ಯಾಯ ಕೇಳೋದೆ ತಪ್ಪಾ ಹಾಗೆರೆ? ತೊಂದರೆ ಇಲ್ಲ..
ಈ ವೇಳೆ ಗೃಹ ಸಚಿವರ ಜೊತೆಗಿದ್ದ ವ್ಯಕ್ತಿಯೊಬ್ಬರು ಹೊರ ಬಂದು, ಅಶ್ವಿನಿ ಅವರ ಮನವೊಲಿಸಲು ಮುಂದಾಗುತ್ತಾರೆ. ಆದರೆ ಅವರೊಂದಿಗೂ ಅಶ್ವಿನಿ ಅವರು ನ್ಯಾಯ ಕೇಳುವುದೆ ತಪ್ಪಾ ಎಂದು ಪ್ರಶ್ನೆ ಮಾಡುತ್ತಾರೆ.
ಗೃಹ ಸಚಿವ ಆರಗ ಜ್ಞಾನೇಂದ್ರ ಮತ್ತು ಅಶ್ವಿನಿ ಅವರ ನಡುವೆ ಏರು ಧ್ವನಿಯಲ್ಲಿನ ಮಾತಿನ ವಿಡಿಯೋ ವೈರಲ್ ಆಗಿದೆ. ಜಿಲ್ಲೆಯ ರಾಜಕೀಯ ವಲಯದಲ್ಲಿಯು ಇದು ಚರ್ಚೆಗೆ ಕಾರಣವಾಗಿದೆ.
ಇದನ್ನೂ ಓದಿ – ‘ಹರ್ಷ ಹತ್ಯೆ ಆರೋಪಿಗಳನ್ನು ಜೈಲಿನಲ್ಲಿಡುವ ಬದಲು ಹೊರಗೆ ಬಿಡುವುದೆ ಒಳ್ಳೆಯದು’, ತಾಯಿಯ ಕಣ್ಣೀರು
ADVERTISEMENT
- ಆರೋಗ್ಯ ತುರ್ತು ಸಂದರ್ಭದಲ್ಲಿ ಹಣಕಾಸು ಹೊಂದಿಸುವುದು ಸುಲಭವೇನಲ್ಲ. ಒಂದು ವೇಳೆ INSURANCE ಇದ್ದರೆ, ನಿರಮ್ಮಳವಾಗಿರಬಹುದು ಅಲ್ಲವೆ? ಈಗಲೆ INSURANCE ಮಾಡಿಸಿ. ಒಳ್ಳೆಯ INSURANCE PLANSಗಾಗಿ ಕರೆ ಮಾಡಿ – LIC LIFE INSURANCE – ಅನಿಲ್ 9538414151, ಪ್ರಶಾಂತ್ 9972194422
- ಸುಂದರ ಮನೆ ಕಟ್ಟಬೇಕು, ಸ್ವಂತ ಮನೆಯಲ್ಲಿ ನೆಮ್ಮದಿಯ ಬದುಕು ಸಾಗಿಸಬೇಕು ಅನ್ನವು ಆಸೆ ಯಾರಿಗಿಲ್ಲ? ಇನ್ಯಾಕೆ ತಡ? ಮನೆ ಕಟ್ಟಲು LICಯಿಂದ HOUSING LOAN ಲಭ್ಯವಿದೆ. ಇವತ್ತೇ ಸಂಪರ್ಕಿಸಿ – ಪ್ರಶಾಂತ್ 9972194422
SHIVAMOGGA LIVE WHATSAPP
ನಿಮ್ಮೂರು, ನಿಮ್ಮ ಏರಿಯಾದ ಕಾರ್ಯಕ್ರಮಗಳು, ಸಮಸ್ಯೆಗಳು ಸುದ್ದಿಯಾಗಬೇಕಾ? ನೀವೇ ವರದಿಗಾರರಾಗಿ. ವಿಡಿಯೋ, ಫೋಟೊ ಮಾಡಿ 7411700200 ಮೊಬೈಲ್ ನಂಬರ್’ಗೆ ವಾಟ್ಸಪ್ ಮಾಡಿ. ನೆನಪಿರಲಿ, ಸುದ್ದಿ ಪ್ರಕಟಣೆಗೆ ನಾವು ಹಣ ಪಡೆಯುವುದಿಲ್ಲ.
–
[su_divider top=”no” style=”dotted” divider_color=”#ffffff” link_color=”#000000″ margin=”10″]
[su_button url=”https://www.facebook.com/liveshivamogga” target=”blank” style=”flat” background=” #316FF6″ color=”#ffffff” size=”4″ radius=”0″ icon=”icon: facebook-square”][/su_button] [su_button url=”https://x.com/liveshivamogga” target=”blank” style=”flat” background=”#000000″ color=”#ffffff” size=”4″ radius=”0″ icon=”icon: twitter”][/su_button] [su_button url=”https://www.instagram.com/shivamoggalive/” target=”blank” style=”flat” background=”#E1306C” color=”#ffffff” size=”4″ radius=”0″ icon=”icon: instagram”][/su_button] [su_button url=”https://www.youtube.com/@shivamoggalive” target=”blank” style=”flat” background=”#FF0000″ color=”#ffffff” size=”4″ radius=”0″ icon=”icon: youtube-square”][/su_button] [su_button url=”https://www.linkedin.com/in/shivamogga-live-666a05322/” target=”blank” style=”flat” background=”#0072b1″ color=”#ffffff” size=”4″ radius=”0″ icon=”icon: linkedin-square”][/su_button]
[su_divider top=”no” style=”dotted” divider_color=”#ffffff” link_color=”#000000″ margin=”10″]
LATEST NEWS
- ಮಲವಗೊಪ್ಪದ ಭದ್ರಾ ನಾಲೆಯಲ್ಲಿ ನಾಪತ್ತೆಯಾಗಿದ್ದ ಹರಿಗೆಯ ಬಾಲಕ ಶವವಾಗಿ ಪತ್ತೆ, ಆಗಿದ್ದೇನು?

- ಶಿವಮೊಗ್ಗದಲ್ಲಿ ಆಲಿಕಲ್ಲು ಮಳೆ, ಎಲ್ಲೆಲ್ಲಿ ಹೇಗಿತ್ತು ಭಾನುವಾರದ ವರ್ಷಧಾರೆ? ಎಲ್ಲೆಲ್ಲಿ ಹಾನಿಯಾಗಿದೆ?

- ಶಿವಮೊಗ್ಗದ ವಿವಿಧೆಡೆ ಇಂದು ಮತ್ತು ನಾಳೆ ಇಡೀ ದಿನ ಕರೆಂಟ್ ಇರಲ್ಲ, ಎಲ್ಲೆಲ್ಲಿ?

- ಸರಕು ರೇಟ್ ಕುಸಿತ, ಉಳಿದ ಅಡಿಕೆಗಳ ಧಾರಣೆ ಎಷ್ಟಿದೆ?, 13 ಮಾರ್ಚ್ 2026ರ ಅಡಿಕೆ ರೇಟ್

- ಸಹ್ಯಾದ್ರಿ ಉತ್ಸವದಲ್ಲಿ ಜಾನಪದ ಕಲೆಗಳ ಕಲರವ, ಏನಂದ್ರು ನಟಿ ಜಯಮಾಲಾ?

[su_divider top=”no” style=”dotted” divider_color=”#ffffff” link_color=”#000000″ margin=”10″]
[su_divider top=”no” style=”dotted” divider_color=”#ffffff” link_color=”#000000″ margin=”10″]
About The Editor
ನಿತಿನ್ ಆರ್.ಕೈದೊಟ್ಲು
















