ಶಿವಮೊಗ್ಗದಲ್ಲಿ ‘ಹರೋ ಹರ’ ಜಾತ್ರೆಗೆ ದಿನಾಂಕ ನಿಗದಿ, ಜಾತ್ರೆ ಯಾವಾಗ? ಹೇಗಿರುತ್ತೆ ಆಚರಣೆ?

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

SHIVAMOGGA LIVE NEWS | SHIMOGA | 7 ಜುಲೈ 2022

ಗುಡ್ಡೇಕಲ್ ನಲ್ಲಿರುವ ಬಾಲಸುಬ್ರಹ್ಮಣ್ಯ ಸ್ವಾಮಿಯ ಆಡಿಕೃತ್ತಿಕೆ ಹರೋಹರ ಜಾತ್ರೆಯನ್ನು ಜುಲೈ 22 ಮತ್ತು 23 ರಂದು ದೇವಸ್ಥಾನ ಟ್ರಸ್ಟ್ ವತಿಯಿಂದ ಹಮ್ಮಿಕೊಳ್ಳಲಾಗಿದೆ ಎಂದು ಟ್ರಸ್ಟ್ ಅಧ್ಯಕ್ಷ ಎಂ. ರಾಜು ತಿಳಿಸಿದರು.

Shimoga Nanjappa Hospital

ಸುದ್ದಿಗೋಷ್ಠಿಯಲ್ಲಿಮಾತನಾಡಿದ ಅವರು, ಕೊರೊನಾದಿಂದಾಗಿ ಕಳೆದ ಎರಡು ವರ್ಷಗಳಿಂದ ಜಾತ್ರೆ ಮಾಡಿರಲಿಲ್ಲ. ಈ ವರ್ಷವೂ ಜಾತ್ರೆ ಇದೆಯೋ ಇಲ್ಲವೋ ಎಂಬ ಬಗ್ಗೆ ಅನೇಕರು ಕೇಳುತ್ತಿದ್ದಾರೆ. ಭಕ್ತರ ಇಚ್ಛೆ ಹಾಗೂ ಇದುವರೆಗೂ ನಡೆದಿಕೊಂಡು ಬಂದ ಸಂಪ್ರದಾಯದಂತೆ ವಿಜೃಂಭಣೆಯಿಂದ ಆಚರಿಸಲಾಗುತ್ತದೆ ಎಂದರು.

ಪ್ರತಿ ವರ್ಷದಂತೆ ಭಕ್ತರು ಪಾಲ್ಗೊಳ್ಳಬಹುದು

ಹೊರ ಜಿಲ್ಲೆ ಗಳಿಂದ ಮಾತ್ರ ವಲ್ಲದೆ ಹೊರ ರಾಜ್ಯದಿಂದಲೂ ಭಕ್ತರು ಇಲ್ಲಿಗೆ ಬಂದು  ಹರಕೆ ತೀರಿಸುತ್ತಾರೆ. ಈ ಬಾರಿಯೂ ಕೂಡ ಅದಕ್ಕೆ ಎಲ್ಲಾ ವ್ಯವಸ್ಥೆ ಮಾಡಲಾಗುತ್ತದೆ. ಪ್ರತೀ ವರ್ಷದಂತೆ ಭಕ್ತರು ಜಾತ್ರೆಯಲ್ಲಿ ಪಾಲ್ಗೊಳ್ಳಬಹುದಾಗಿದೆ ಎಂದು ಹೇಳಿದರು.

ಆಷಾಢ ಅಥವಾ ಶ್ರಾವಣ ಮಾಸದಲ್ಲಿ ಕೃತ್ತಿಕೆ ದಿನದಂದು ಈ ಉತ್ಸವ ಆಚರಿಸಲಾಗುತ್ತದೆ. ಮೊದಲನೆಯ ದಿನ ಭರಣಿ ಕಾವಡಿ ಅಂತಲೂ, ಎರಡನೆಯ ದಿನವನ್ನು ಆಡಿ ಕೃತ್ತಿಕೆ ಅಂತಲೂ ಆಚರಿಸಲಾಗುತ್ತದೆ. ದೇವಸ್ಥಾನದ ಮುಂಭಾಗದ ರಸ್ತೆಯಲ್ಲಿ ರೈಲ್ವೆ ಮೇಲ್ಸೇತುವೆ ಕೆಲಸ ನಡೆಯುತ್ತಿರುವುದರಿಂದ ಭಕ್ತರಿಗೆ ಅಡಚಣೆಯಾಗುವ ಸಾಧ್ಯತೆ ಇದೆ ಎಂದರು.

ತಮಿಳುನಾಡಿನಿಂದ ಇಲ್ಲಿಗೆ ಕೆಲಸಕ್ಕೆ ಬಂದಿದ್ದ ಮಹಿಳೆಯೊಬ್ಬರು 80 ವರ್ಷಗಳ ಹಿಂದೆ ಈ ಸ್ಥಳದಲ್ಲಿ ಸಣ್ಣದಾದ ವಿಗ್ರಹ ಸ್ಥಾಪಿಸಿ ಪೂಜೆ ಮಾಡಲು ಆರಂಭಿಸಿದ್ದರು. ಈಗ  ದೇವಸ್ಥಾನ ದೊಡ್ಡದಾಗಿದೆ. ಬರುವ ಭಕ್ತರ ಸಂಖ್ಯೆಯೂ ಹೆಚ್ಚಾಗಿದೆ. ಸಾಕಷ್ಟು ಅಭಿವೃದ್ಧಿ ಕೆಲಸಗಳನ್ನು ಮಾಡಲಾಗಿದೆ ಎಂದರು.

ಪತ್ರಿಕಾ ಗೋಷ್ಠಿಯಲ್ಲಿ ಸಮಿತಿಯ ಪದಾಧಿಕಾರಿಗಳಾದ  ಪಿ.ರಘುಕುಮಾರ್, ಕೆ.ವಿಶ್ವನಾಥ, ಡಿ.ರಾಜಶೇಖರಪ್ಪ, ಎಂ.ಸುಬ್ರಮಣಿ, ಎಂ.ಪಿ.ಸಂಪತ್, ಪಿ.ರವಿಕುಮಾರ, ಎಂ. ಲೋಕೇಶ್ ಸೇರಿದಂತೆ ಹಲವರು ಇದ್ದರು.

ಇದನ್ನೂ ಓದಿ – ಶಿವಮೊಗ್ಗದಲ್ಲಿ ಮಂಟಪ ಬಹುತೇಕ ಮುಳುಗಡೆ, ಎಷ್ಟು ಪ್ರಮಾಣದ ನೀರನ್ನು ಡ್ಯಾಂನಿಂದ ಬಿಡಲಾಗುತ್ತಿದೆ?

ADVERTISEMENT

  • ಆರೋಗ್ಯ ತುರ್ತು ಸಂದರ್ಭದಲ್ಲಿ ಹಣಕಾಸು ಹೊಂದಿಸುವುದು ಸುಲಭವೇನಲ್ಲ. ಒಂದು ವೇಳೆ INSURANCE ಇದ್ದರೆ, ನಿರಮ್ಮಳವಾಗಿರಬಹುದು ಅಲ್ಲವೆ? ಈಗಲೆ INSURANCE ಮಾಡಿಸಿ. ಒಳ್ಳೆಯ INSURANCE PLANSಗಾಗಿ ಕರೆ ಮಾಡಿ – LIC LIFE INSURANCE – ಅನಿಲ್ 9538414151, ಪ್ರಶಾಂತ್ 9972194422
  • ಸುಂದರ ಮನೆ ಕಟ್ಟಬೇಕು, ಸ್ವಂತ ಮನೆಯಲ್ಲಿ ನೆಮ್ಮದಿಯ ಬದುಕು ಸಾಗಿಸಬೇಕು ಅನ್ನವು ಆಸೆ ಯಾರಿಗಿಲ್ಲ? ಇನ್ಯಾಕೆ ತಡ? ಮನೆ ಕಟ್ಟಲು LICಯಿಂದ HOUSING LOAN ಲಭ್ಯವಿದೆ. ಇವತ್ತೇ ಸಂಪರ್ಕಿಸಿ – ಪ್ರಶಾಂತ್ 9972194422

SHIVAMOGGA LIVE WHATSAPP

ನಿಮ್ಮೂರು, ನಿಮ್ಮ ಏರಿಯಾದ ಕಾರ್ಯಕ್ರಮಗಳು, ಸಮಸ್ಯೆಗಳು ಸುದ್ದಿಯಾಗಬೇಕಾ? ನೀವೇ ವರದಿಗಾರರಾಗಿ. ವಿಡಿಯೋ, ಫೋಟೊ ಮಾಡಿ 7411700200 ಮೊಬೈಲ್ ನಂಬರ್’ಗೆ ವಾಟ್ಸಪ್ ಮಾಡಿ. ನೆನಪಿರಲಿ, ಸುದ್ದಿ ಪ್ರಕಟಣೆಗೆ ನಾವು ಹಣ ಪಡೆಯುವುದಿಲ್ಲ.

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment