ಅಂಗಡಿಯ ಗೋಡೆ ಕೊರೆದು ಕೆಜಿಗಟ್ಟಲೆ ಚಿನ್ನ, ಬೆಳ್ಳಿ ಆಭರಣಗಳು ಕಳವು, ಸಿಸಿಟಿವಿ ಹೊತ್ತೊಯ್ದ ಖದೀಮರು

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

SHIVAMOGGA LIVE NEWS | BHADRAVATHI | 11 ಜುಲೈ 2022

ಚಿನ್ನಾಭರಣದ ಅಂಗಡಿಯೊಂದಕ್ಕೆ (JEWELLERY SHOP) ಕನ್ನ ಕೊರೆದು ಕೋಟ್ಯಂತರ ರೂ. ಮೌಲ್ಯದ ಚಿನ್ನಾಭರಣ ಕಳವು (THEFT) ಮಾಡಲಾಗಿದೆ. ಗ್ಯಾಸ್ ಕಟರ್, ದೊಡ್ಡ ರಾಡ್ ಬಳಸಿ ಕನ್ನ ಹಾಕಲಾಗಿದೆ.

Shimoga Nanjappa Hospital

ಭದ್ರಾವತಿಯ (BHADRAVATHI) ಚನ್ನಗಿರಿ ರಸ್ತೆಯಲ್ಲಿ ಇರುವ ಎಸ್.ಎಸ್.ಜ್ಯುವೆಲರ್ಸ್ ಚಿನ್ನಾಭರಣ ಮಳಿಗೆಯ ಕನ್ನ ಕರೆದು ಕಳವು ಮಾಡಲಾಗಿದೆ.

ಕನ್ನ ಕೊರೆದ ಖದೀಮರು

ಚಿನ್ನಾಭರಣ ಮಳಿಗೆಯ ಹಿಂಭಾಗದಲ್ಲಿ ಗೋಡೆ ಕೊರೆದು ಕಳ್ಳರು ಒಳ ನುಗ್ಗಿದ್ದಾರೆ. ಅಂದಾಜು 1.25 ಕೆ.ಜಿ. ತೂಕದ ಚಿನ್ನದ ಆಭರಣ, 50 ಕೆ.ಜಿ ತೂಕದ ಬೆಳ್ಳಿಯ ವಸ್ತುಗಳನ್ನು ದೋಚಿ ಪರಾರಿಯಾಗಿದ್ದಾರೆ. ಗ್ರಾಹಕರಿಗೆ ತೋರಿಸಲು ಅಂಗಡಿಯಲ್ಲಿ ಇರಿಸಿದ್ದ ಆಭರಣಗಳನ್ನು ಬೀರುವಿನಲ್ಲಿ ಇರಿಸಲಾಗಿತ್ತು. ಬೀರು ಬಾಗಿಲು ಒಡೆದು ಚಿನ್ನಾಭರಣ ಕಳವು ಮಾಡಲಾಗಿದೆ.

ಸಿಸಿಟಿವಿ ಉಪಕರಣವು ಕಳವು

ಗ್ಯಾಸ್ ಕಟರ್, ದೊಡ್ಡ ರಾಡ್’ಗಳನ್ನು ಬಳಸಿ ಕಳವು ಮಾಡಲಾಗಿದೆ. ಅಲ್ಲದೆ ಅಂಗಡಿಯೊಳಗೆ ಇದ್ದ ಸಿಸಿಟಿವಿ ಉಪಕರಣಗಳನ್ನು ಕಳವು ಮಾಡಲಾಗಿದೆ ಎಂದು ಹೇಳಲಾಗುತ್ತಿದೆ. ಎಸ್.ಎಸ್. ಜ್ಯುವೆಲರ್ಸ್’ನಲ್ಲಿ ಕಳವು ಮಾಡಿದವರು ಅನುಭವಿ ಕಳ್ಳರು ಎಂದು ಪೊಲೀಸರು ಶಂಕೆ ವ್ಯಕ್ತಪಡಿಸಿದ್ದಾರೆ.

ಶ್ವಾನ ದಳ, ಬೆರಳಚ್ಚು ತಜ್ಞರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಹೆಚ್ಚುವರಿ ರಕ್ಷಣಾಧಿಕಾರಿ ವಿಕ್ರಮ್ ಆಮ್ಟೆ, ಡಿವೈಎಸ್’ಪಿ ಜಿತೇಂದ್ರ ಕುಮಾರ್ ದಯಾಮ, ಸರ್ಕಲ್ ಇನ್ಸ್ ಪೆಕ್ಟರ್ ರಾಘವೇಂದ್ರ ಕಾಂಡಿಕೆ ಸ್ಥಳಕ್ಕೆ ಭೇಟಿ ನೀಡಿದ್ದರು. ಹಳೆ ನಗರ ಠಾಣೆಯಲ್ಲಿ (OLD TOWN) ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ – ರಸ್ತೆ ಪಕ್ಕದ ಮನೆ ಕಾಂಪೌಂಡ್‌ಗೆ ಡಿಕ್ಕಿ ಹೊಡೆದ ಖಾಸಗಿ ಬಸ್

ADVERTISEMENT

  • ಆರೋಗ್ಯ ತುರ್ತು ಸಂದರ್ಭದಲ್ಲಿ ಹಣಕಾಸು ಹೊಂದಿಸುವುದು ಸುಲಭವೇನಲ್ಲ. ಒಂದು ವೇಳೆ INSURANCE ಇದ್ದರೆ, ನಿರಮ್ಮಳವಾಗಿರಬಹುದು ಅಲ್ಲವೆ? ಈಗಲೆ INSURANCE ಮಾಡಿಸಿ. ಒಳ್ಳೆಯ INSURANCE PLANSಗಾಗಿ ಕರೆ ಮಾಡಿ – LIC LIFE INSURANCE – ಅನಿಲ್ 9538414151, ಪ್ರಶಾಂತ್ 9972194422
  • ಸುಂದರ ಮನೆ ಕಟ್ಟಬೇಕು, ಸ್ವಂತ ಮನೆಯಲ್ಲಿ ನೆಮ್ಮದಿಯ ಬದುಕು ಸಾಗಿಸಬೇಕು ಅನ್ನವು ಆಸೆ ಯಾರಿಗಿಲ್ಲ? ಇನ್ಯಾಕೆ ತಡ? ಮನೆ ಕಟ್ಟಲು LICಯಿಂದ HOUSING LOAN ಲಭ್ಯವಿದೆ. ಇವತ್ತೇ ಸಂಪರ್ಕಿಸಿ – ಪ್ರಶಾಂತ್ 9972194422

SHIVAMOGGA LIVE WHATSAPP

ನಿಮ್ಮೂರು, ನಿಮ್ಮ ಏರಿಯಾದ ಕಾರ್ಯಕ್ರಮಗಳು, ಸಮಸ್ಯೆಗಳು ಸುದ್ದಿಯಾಗಬೇಕಾ? ನೀವೇ ವರದಿಗಾರರಾಗಿ. ವಿಡಿಯೋ, ಫೋಟೊ ಮಾಡಿ 7411700200 ಮೊಬೈಲ್ ನಂಬರ್’ಗೆ ವಾಟ್ಸಪ್ ಮಾಡಿ. ನೆನಪಿರಲಿ, ಸುದ್ದಿ ಪ್ರಕಟಣೆಗೆ ನಾವು ಹಣ ಪಡೆಯುವುದಿಲ್ಲ.

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ

ಈಗಲೇ ಕರೆ ಮಾಡಿ
9972194422

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : July 11, 2022

ಶಿವಮೊಗ್ಗದಲ್ಲಿ ಕೆಲಸ ಖಾಲಿ ಇದೆ, ತಿಂಗಳಿಗೆ ₹20,000 ದಿಂದ ₹50,000 ದವರೆಗೆ ಸಂಬಳ

ಶಿವಮೊಗ್ಗದಲ್ಲಿ ಕೆಲಸ ಖಾಲಿ ಇದೆ, ತಿಂಗಳಿಗೆ ₹20,000 ದಿಂದ ₹50,000 ದವರೆಗೆ ಸಂಬಳ

ತಂದೆ, ಮಗನಿಗೆ ಜೀವಾವಧಿ ಶಿಕ್ಷೆ, ದಂಡ ವಿಧಿಸಿದ ಶಿವಮೊಗ್ಗ ಕೋರ್ಟ್‌, ಯಾಕೆ?

ತಂದೆ, ಮಗನಿಗೆ ಜೀವಾವಧಿ ಶಿಕ್ಷೆ, ದಂಡ ವಿಧಿಸಿದ ಶಿವಮೊಗ್ಗ ಕೋರ್ಟ್‌, ಯಾಕೆ?

ಇವತ್ತು ಯಾವ್ಯಾವ ಅಡಿಕೆಗೆ ಎಷ್ಟಿದೆ ರೇಟ್? – 17 ಮಾರ್ಚ್‌ 2026 – ಅಡಿಕೆ ಧಾರಣೆ

ಇವತ್ತು ಯಾವ್ಯಾವ ಅಡಿಕೆಗೆ ಎಷ್ಟಿದೆ ರೇಟ್? – 17 ಮಾರ್ಚ್‌ 2026 – ಅಡಿಕೆ ಧಾರಣೆ

ಶಿವಮೊಗ್ಗ ಡಿ.ಸಿ ಎದುರು ಮೈದಾನಕ್ಕೆ ಬ್ಯಾರಿಕೇಡ್‌, ಹಿಂದೂ ಸಂಘಟನೆಗಳು ಗರಂ, ಕಾರಣವೇನು?

ಶಿವಮೊಗ್ಗ ಡಿ.ಸಿ ಎದುರು ಮೈದಾನಕ್ಕೆ ಬ್ಯಾರಿಕೇಡ್‌, ಹಿಂದೂ ಸಂಘಟನೆಗಳು ಗರಂ, ಕಾರಣವೇನು?

ಬೆಳಗ್ಗೆ ಲೇಔಟ್‌ಗೆ ಬಂದ ಲೆಕ್ಚರರ್‌ಗೆ ಕಾದಿತ್ತು ಆಘಾತ, ರಾತ್ರಿ 11.15ರ CCTV ದೃಶ್ಯ ಕಂಡು ಶಾಕ್‌

ಬೆಳಗ್ಗೆ ಲೇಔಟ್‌ಗೆ ಬಂದ ಲೆಕ್ಚರರ್‌ಗೆ ಕಾದಿತ್ತು ಆಘಾತ, ರಾತ್ರಿ 11.15ರ CCTV ದೃಶ್ಯ ಕಂಡು ಶಾಕ್‌

ಶಿವಮೊಗ್ಗ TO ಬೆಂಗಳೂರು ಇನ್ನಷ್ಟು ವೇಗ, ದ್ವಿಪಥ ಯೋಜನೆಗೆ ಒತ್ತಾಯ

ಶಿವಮೊಗ್ಗ TO ಬೆಂಗಳೂರು ಇನ್ನಷ್ಟು ವೇಗ, ದ್ವಿಪಥ ಯೋಜನೆಗೆ ಒತ್ತಾಯ

ಜಮೀನಿಗೆ ನೀರು ಹರಿಸಲು ಹೋಗಿದ್ದ ವ್ಯಕ್ತಿಗೆ ಕಾದಿತ್ತು ಸಾವು, ಆಗಿದ್ದೇನು?

ಜಮೀನಿಗೆ ನೀರು ಹರಿಸಲು ಹೋಗಿದ್ದ ವ್ಯಕ್ತಿಗೆ ಕಾದಿತ್ತು ಸಾವು, ಆಗಿದ್ದೇನು?

ನಾಳೆಯಿಂದ SSLC ಪರೀಕ್ಷೆ, ಹೇಗಿದೆ ಸಿದ್ಧತೆ? ಯಾವ್ಯಾವ ತಾಲೂಕಿನಲ್ಲಿ ಎಷ್ಟು ಪರೀಕ್ಷಾ ಕೇಂದ್ರಗಳಿವೆ?

ನಾಳೆಯಿಂದ SSLC ಪರೀಕ್ಷೆ, ಹೇಗಿದೆ ಸಿದ್ಧತೆ? ಯಾವ್ಯಾವ ತಾಲೂಕಿನಲ್ಲಿ ಎಷ್ಟು ಪರೀಕ್ಷಾ ಕೇಂದ್ರಗಳಿವೆ?

ಮನೆಯ ಮೀಟರ್ ಬೋರ್ಡ್ ಮೇಲೆ ಕೀ ಇಡುವ ಅಭ್ಯಾಸ ಇದ್ಯಾ? ನಿದಿಗೆಯಲ್ಲಿ ದಾಖಲಾಯ್ತು ಕೇಸ್‌, ಯಾಕೆ?

ಮನೆಯ ಮೀಟರ್ ಬೋರ್ಡ್ ಮೇಲೆ ಕೀ ಇಡುವ ಅಭ್ಯಾಸ ಇದ್ಯಾ? ನಿದಿಗೆಯಲ್ಲಿ ದಾಖಲಾಯ್ತು ಕೇಸ್‌, ಯಾಕೆ?

ಶಿವಮೊಗ್ಗದ ‘ಶಿವಚೌಡಿ ಧರಣಿ’ ಇನ್ನಿಲ್ಲ, ವಿಭಿನ್ನವಾಗಿ ತಿಥಿ ಕಾರ್ಯ ಮಾಡಿದ ಮಾಲೀಕ

ಶಿವಮೊಗ್ಗದ ‘ಶಿವಚೌಡಿ ಧರಣಿ’ ಇನ್ನಿಲ್ಲ, ವಿಭಿನ್ನವಾಗಿ ತಿಥಿ ಕಾರ್ಯ ಮಾಡಿದ ಮಾಲೀಕ

Leave a Comment