ಶಿವಮೊಗ್ಗ ಲೈವ್.ಕಾಂ | 30 ಮಾರ್ಚ್ 2019
ಶಿವಮೊಗ್ಗ ಲೈವ್ನ ಪ್ರತಿ ಅಪ್ಡೇಟ್ ನೀವೇ ಮೊದಲು ಪಡೆಯಲು ಕೆಳಗಿನ ಗ್ರೂಪ್ಗಳನ್ನು ಜಾಯಿನ್ ಆಗಿ:
ಸಾಗರ ಪಟ್ಟಣದಲ್ಲಿ ಕಾಡುಕೋಣಗಳು ಓಡಾಡುತ್ತಿರುವ ವಿಡಿಯೋ ವೈರಲ್ ಆಗಿದೆ. ಎರಡು ಕಾಡುಕೋಣಗಳು ರಾಜಾರೋಷವಾಗಿ ರಸ್ತೆಯಲ್ಲಿ ಸಾಗುತ್ತಿರುವುದನ್ನು ಮೊಬೈಲ್ ಕ್ಯಾಮರಾದಲ್ಲಿ ಸೆರೆ ಹಿಡಿಯಲಾಗಿದೆ.
ಗುರುವಾರ ಮಧ್ಯರಾತ್ರಿ ಸಾಗರದ ಎಸ್.ಎನ್.ನಗರದಲ್ಲಿ ಎರಡು ಕಾಡು ಕೋಣಗಳು ಪ್ರತ್ಯಕ್ಷವಾಗಿವೆ. ಸಾಗರ ಸಿಗಂದೂರು ರಸ್ತೆಯಲ್ಲಿ ಹೋಗುತ್ತಿದ್ದ ಕಾಡುಕೋಣಗಳನ್ನು, ರಸ್ತೆಯಲ್ಲಿ ಸಾಗುತ್ತಿದ್ದ ಲಾರಿ, ಕಾರಿನಲ್ಲಿ ತೆರಳುತ್ತಿದ್ದವರು ಗಮನಿಸಿ, ವಾಹನಗಳನ್ನು ಸೈಡಿಗೆ ನಿಲ್ಲಿಸಿದ್ದಾರೆ. ಕಾಡುಕೋಣಗಳ ವಿಚಾರ ತಿಳಿಯದ ಪೊಲೀಸರು, ಬೈಕಿನಲ್ಲಿ ಅವುಗಳ ಬಳಿಗೆ ಹೋಗಿ, ಬೆದರಿ ಹಿಂತಿರುಗುವ ದೃಶ್ಯ, ಮೊಬೈಲ್’ನಲ್ಲಿ ಸೆರೆಯಾಗಿದೆ.
ನಗರಕ್ಕೆ ಬಂದಿದ್ದು ಇದೇ ಮೊದಲ್ಲಲ್ಲ
2017ರ ಮಾರ್ಚ್ 23ರಂದು ಸಾಗರದ ಜೆಸಿ ರಸ್ತೆಯಲ್ಲಿ ಕಾಡುಕೋಣಗಳು ಕಾಣಿಸಿಕೊಂಡಿದ್ದವು. ನಗರದ ವಿವಿಧೆಡೆ ಸಂಚರಿಸಿ, ಶಿರವಾಳದ ಮಾರ್ಗ ಮೂಲಕ ಕಾಡು ಸೇರಿದ್ದವು. ಡಿಸೆಂಬರ್ 3ರಂದು ಒಂಟಿ ಕಾಡುಕೋಣ, ಭೀಮನಕೋಣೆ ರಸ್ತೆ ಬಳಿಯ ವಿಜಯನಗರ ಬಡಾವಣೆಯ ಪಾರ್ಕ್’ನಲ್ಲಿ ಸಂಚರಿಸಿತ್ತು.
ಶಿವಮೊಗ್ಗ ಲೈವ್.ಕಾಂ ವಾಟ್ಸಪ್ ನಂಬರ್ | 7411700200
ಸುದ್ದಿಗಾಗಿ ಮೊಬೈಲ್ ನಂಬರ್ | 9964634494
ಈ ಮೇಲ್ | shivamoggalive@gmail.com
LATEST NEWS
- ಕಾಂಗ್ರೆಸ್ನದ್ದು ‘3-C ಸರ್ಕಾರ’, ಮಿನಿಸ್ಟರ್ ರಾಜೀನಾಮೆಗೆ ಶಿವಮೊಗ್ಗದಲ್ಲಿ ಆಗ್ರಹ, ಏನಿದು ಮೂರು C?

- ಶಿವಮೊಗ್ಗ ಸಿಟಿಯ ವಿವಿಧೆಡೆ ಫೆಬ್ರವರಿ 6, 7ರಂದು ಕರೆಂಟ್ ಇರಲ್ಲ, ಎಲ್ಲೆಲ್ಲಿ? ಕಾರಣವೇನು?

- ಶಿವಮೊಗ್ಗ, ಭದ್ರಾವತಿಯಲ್ಲಿ ತುಸು ತಗ್ಗಿದ ತಾಪಮಾನ, ಉಳಿದ ತಾಲೂಕುಗಳಲ್ಲಿ ಹೇಗಿರಲಿದೆ?

- ಪೂಜಾ ಗೌಡ ನಂಬಿ ಅರ್ಧ ಕೋಟಿ ಹಣ ಕಳೆದುಕೊಂಡ ಶಿವಮೊಗ್ಗದ ಸೇಲ್ಸ್ಮನ್, ಆಗಿದ್ದೇನು?

- ಇವತ್ತು ಸಂಕಷ್ಟ ಚತುರ್ಥಿ, ಒಳ್ಳೆ ಸಮಯ ಎಷ್ಟೊತ್ತಿಗಿದೆ? – ಇಂದಿನ ಪಂಚಾಂಗ

About The Editor
ನಿತಿನ್ ಆರ್.ಕೈದೊಟ್ಲು





