ಭಾರಿ ಮಳೆಗೆ ರಸ್ತೆಗೆ ಅಡ್ಡಲಾಗಿ ಬಿದ್ದ ಮರ, ವಿದ್ಯುತ್ ಕಂಬ, ಕತ್ತಲಲ್ಲಿ ಗ್ರಾಮಸ್ಥರು

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

SHIVAMOGGA LIVE NEWS | THIRTHAHALLI | 13 ಜುಲೈ 2022

ನಿರಂತರ ಮಳೆ, ಗಾಳಿಗೆ ಮರಗಳು ಧರೆಗುರುಳಿ ಗ್ರಾಮವೊಂದರ ಸಂಪರ್ಕ ಕಡಿತವಾಗಿದೆ. ವಿದ್ಯುತ್ ಕಂಬಗಳು (ELECTRIC POLE) ಧರೆಗುರುಳಿ ಜನರು ಕತ್ತಲಲ್ಲಿ ಸಮಯ ಕಳೆಯುವಂತಾಗಿದೆ. ಈ ಮಧ್ಯೆ ಗ್ರಾಮಸ್ಥರೆ ಮರ ಕಡಿದು ರಸ್ತೆ ತೆರವು ಕಾರ್ಯಾಚರಣೆ ನಡೆಸುತ್ತಿದ್ದಾರೆ.

Shimoga Nanjappa Hospital

ಆಗುಂಬೆ – ಮಲ್ಲಂದೂರು (AGUMBE MALLANDUR) ಮಧ್ಯೆ ರಸ್ತೆಯಲ್ಲಿ ಮರಗಳು ಉರುಳಿ ಬಿದ್ದಿವೆ. ವಿದ್ಯುತ್ ಕಂಬಗಳು ಕೂಡ ರಸ್ತೆಗೆ ಅಡ್ಡಲಾಗಿ ಬಿದ್ದಿವೆ. ಇದರಿಂದ ಬಿದರಗೋಡು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಬಾಳೆಹಳ್ಳ ಗ್ರಾಮ ಹೊರ ಜಗತ್ತಿನ ಸಂಪರ್ಕ ಕಡಿದುಕೊಂಡಿದೆ.

ಮೂರು ಬೃಹತ್ ಮರಗಳು ರಸ್ತೆಗೆ ಅಡ್ಡಲಾಗಿ ಬಿದ್ದಿವೆ. ಮರದ ಜೊತೆಗೆ ವಿದ್ಯುತ್ ಕಂಬಗಳು ಕೂಡ ಉರುಳಿವೆ. ಹಾಗಾಗಿ ಗ್ರಾಮದಲ್ಲಿ ವಿದ್ಯುತ್ ಸಂಪರ್ಕ ಕಡಿತವಾಗಿದೆ. ಸುಮಾರು 75 ಮನೆಗಳು ಇಲ್ಲಿವೆ. ಇವುಗಳು ಹೊರ ಜಗತ್ತಿನ ಸಂಪರ್ಕ ಕಡಿದುಕೊಂಡಿವೆ.

ಗ್ರಾಮಸ್ಥರಿಂದಲೆ ಮರ ತೆರವು

ಮರ ತೆರವು ಮಾಡಿ ಕೊಡುವಂತೆ ಗ್ರಾಮಸ್ಥರು ಅಧಿಕಾರಿಗಳಿಗೆ ಮನವಿ ಮಾಡಿದ್ದಾರೆ. ಅದರೆ ಈತನಕ ತೆರವು ಕಾರ್ಯಾಚರಣೆ ನಡೆದಿರಲಿಲ್ಲ. ಹಾಗಾಗಿ ಗ್ರಾಮಸ್ಥರೆ ತೆರವು ಕಾರ್ಯಾಚರಣೆ ಮಾಡುತ್ತಿದ್ದಾರೆ. ಇನ್ನು, ವಿದ್ಯುತ್ ಸಂಪರ್ಕವಿಲ್ಲದೆ (POWER CUT) ಗ್ರಾಮಸ್ಥರು ಸಂಕಷ್ಟಕ್ಕೀಡಾಗಿದ್ದಾರೆ.

ಈ ರಸ್ತೆಯು ಬರ್ಕಣ, ಜೋಗಿಗುಂಡಿಗೆ ಸಂಪರ್ಕ ಕಲ್ಪಿಸಲಾಗಿದೆ. ಇನ್ನು, ಆಗುಂಬೆ ವ್ಯಾಪ್ತಿಯಲ್ಲಿ ಭಾರಿ ಮಳೆ ಸುರಿಯುತ್ತಿದೆ. ಕಳೆದ 24 ಗಂಟೆ ಅವಧಿಲ್ಲಿ 126 ಮಿ.ಮೀ ಮಳೆಯಾಗಿದೆ.

ಮಾಹಿತಿ, ಫೋಟೊ  ವ್ಯವಸ್ಥೆ : ಪ್ರಕಾಶ್

ಇದನ್ನೂ ಓದಿ – ಆಗುಂಬೆ ಘಾಟಿ ಸಂಚಾರಕ್ಕೆ ಮುಕ್ತ, ಎಲ್ಲಾ ವಾಹನಗಳಿಗೂ ಇಲ್ಲ ಅವಕಾಶ

ADVERTISEMENT

  • ಆರೋಗ್ಯ ತುರ್ತು ಸಂದರ್ಭದಲ್ಲಿ ಹಣಕಾಸು ಹೊಂದಿಸುವುದು ಸುಲಭವೇನಲ್ಲ. ಒಂದು ವೇಳೆ INSURANCE ಇದ್ದರೆ, ನಿರಮ್ಮಳವಾಗಿರಬಹುದು ಅಲ್ಲವೆ? ಈಗಲೆ INSURANCE ಮಾಡಿಸಿ. ಒಳ್ಳೆಯ INSURANCE PLANSಗಾಗಿ ಕರೆ ಮಾಡಿ – LIC LIFE INSURANCE – ಅನಿಲ್ 9538414151, ಪ್ರಶಾಂತ್ 9972194422
  • ಸುಂದರ ಮನೆ ಕಟ್ಟಬೇಕು, ಸ್ವಂತ ಮನೆಯಲ್ಲಿ ನೆಮ್ಮದಿಯ ಬದುಕು ಸಾಗಿಸಬೇಕು ಅನ್ನವು ಆಸೆ ಯಾರಿಗಿಲ್ಲ? ಇನ್ಯಾಕೆ ತಡ? ಮನೆ ಕಟ್ಟಲು LICಯಿಂದ HOUSING LOAN ಲಭ್ಯವಿದೆ. ಇವತ್ತೇ ಸಂಪರ್ಕಿಸಿ – ಪ್ರಶಾಂತ್ 9972194422

SHIVAMOGGA LIVE WHATSAPP

ನಿಮ್ಮೂರು, ನಿಮ್ಮ ಏರಿಯಾದ ಕಾರ್ಯಕ್ರಮಗಳು, ಸಮಸ್ಯೆಗಳು ಸುದ್ದಿಯಾಗಬೇಕಾ? ನೀವೇ ವರದಿಗಾರರಾಗಿ. ವಿಡಿಯೋ, ಫೋಟೊ ಮಾಡಿ 7411700200 ಮೊಬೈಲ್ ನಂಬರ್’ಗೆ ವಾಟ್ಸಪ್ ಮಾಡಿ. ನೆನಪಿರಲಿ, ಸುದ್ದಿ ಪ್ರಕಟಣೆಗೆ ನಾವು ಹಣ ಪಡೆಯುವುದಿಲ್ಲ.

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment