ಭದ್ರಾವತಿ ಹೊಸ ಸೇತುವೆ ಸಂಪೂರ್ಣ ಜಲಾವೃತ, ಸೇತುವೆ ಮುಂದೆ ಬ್ಯಾರಿಕೇಡ್

SHIVAMOGGA LIVE NEWS | BHADRAVATHI | 15 ಜುಲೈ 2022

ಭದ್ರಾ ಜಲಾಶಯದಿಂದ (BHADRA DAM) ಭಾರಿ ಪ್ರಮಾಣದ ನೀರನ್ನು ಹೊಳೆಗೆ ಹರಿಸಲಾಗುತ್ತಿದೆ. ಆದ್ದರಿಂದ ಭದ್ರಾವತಿಯ ಹೊಸ ಸೇತುವೆ (NEW BRIDGE) ಮುಳುಗಡೆಯಾಗಿದೆ. ಕಳೆದ ರಾತ್ರಿಯಿಂದಲೆ ಈ ಸೇತುವೆ ಮೇಲೆ ವಾಹನ ಸಂಚಾರಕ್ಕೆ ನಿರ್ಬಂಧ ವಿಧಿಸಲಾಗಿದೆ.

Shimoga Nanjappa Hospital

ಭದ್ರಾ ಜಲಾಶಯ ಭರ್ತಿಯಾಗಿದೆ. ಗುರುವಾರ ಮಧ್ಯಾಹ್ನದಿಂದ ಜಲಾಶಯದ ಕ್ರಸ್ಟ್ ಗೇಟ್’ಗಳನ್ನು ತೆಗೆದು ನೀರನ್ನು ಹೊರಗೆ ಬಿಡಲಾಗುತ್ತಿದೆ.

ಹೆಚ್ಚಾಯ್ತು ಹೊರ ಹರಿವು

ಜಲಾಶಯ ಭರ್ತಿ ಆಗಿರುವುದರಿಂದ ಒಳ ಹರಿವಿನಷ್ಟೆ ಪ್ರಮಾಣದ ನೀರನ್ನು ಹೊಳೆಗೆ ಹರಿಸಲಾಗುತ್ತಿದೆ ಎಂದು ಇಂಜಿನಿಯರ್’ಗಳು ತಿಳಿಸಿದ್ದರು. ಅದರಂತೆ ರಾತ್ರಿ ವೇಳೆ ಭಾರಿ ಪ್ರಮಾಣದ ನೀರನ್ನು ಜಲಾಶಯದಿಂದ ಹೊರ ಬಿಡಲಾಯಿತು.

Kalleshwara-Enterprises.webp

ಗುರುವಾರ ಸಂಜೆ ವೇಳೆಗೆ ಭದ್ರಾ ಜಲಾಶಯದಿಂದ 52 ಸಾವಿರ ಕ್ಯೂಸೆಕ್ ನೀರನ್ನು ಹೊಳೆಗೆ ಬಿಡಲಾಯಿತು. ಇದರಿಂದ ಭದ್ರಾ ನದಿ ನೀರಿನ ಮಟ್ಟ ಹೆಚ್ಚಳವಾಗಿದೆ.

ಮುಳುಗಿತು ಹೊಸ ಸೇತುವೆ

ಭದ್ರಾ ನದಿಯಲ್ಲಿ ನೀರಿನ ಮಟ್ಟ ಏರಿಕೆಯಾಗುತ್ತಿದ್ದಂತೆ ಭದ್ರಾವತಿಯ ಹೊಸ ಸೇತುವೆ ಮುಳುಗಡೆಯಾಗಿದೆ. KSRTC ಬಸ್ ನಿಲ್ದಾಣದ ಪಕ್ಕದಲ್ಲಿರುವ ಹೊಸ ಸೇತುವೆ ಮಟ್ಟಕ್ಕೆ ನೀರು ಬರುತ್ತಿದ್ದಂತೆ ವಾಹನ ಸಂಚಾರ ನಿರ್ಬಂಧಿಸಲಾಯಿತು. ಬೆಳಗಿನ ಜಾವದ ವೇಳೆಗೆ ಹೊಸ ಸೇತುವೆ ಮೇಲಿಂದ ನೀರು ಹರಿಯುತ್ತಿದೆ.

ಮುನ್ನೆಚ್ಚರಿಕೆ ಕ್ರಮವಾಗಿ ಸೇತುವೆ ಮುಂಭಾಗ ಬ್ಯಾರಿಕೇಡ್ ಹಾಕಲಾಗಿದೆ. ಸೇತುವೆ ಬಳಿಗೆ ಯಾರೂ ತೆರಳದಂತೆ ನಿರ್ಬಂಧ ವಿಧಿಸಲಾಗಿದೆ. ಸ್ಥಳದಲ್ಲಿ ಪೊಲೀಸರನ್ನು ನಿಯೋಜನೆ ಮಾಡಲಾಗಿದೆ.

ಇದನ್ನೂ ಓದಿ – ಭದ್ರಾ ಜಲಾಶಯದ ನಾಲ್ಕು ಗೇಟ್ ಓಪನ್, ಎಷ್ಟು ನೀರು ಹೊರ ಬಿಡಲಾಗುತ್ತಿದೆ?

ADVERTISEMENT

  • ಆರೋಗ್ಯ ತುರ್ತು ಸಂದರ್ಭದಲ್ಲಿ ಹಣಕಾಸು ಹೊಂದಿಸುವುದು ಸುಲಭವೇನಲ್ಲ. ಒಂದು ವೇಳೆ INSURANCE ಇದ್ದರೆ, ನಿರಮ್ಮಳವಾಗಿರಬಹುದು ಅಲ್ಲವೆ? ಈಗಲೆ INSURANCE ಮಾಡಿಸಿ. ಒಳ್ಳೆಯ INSURANCE PLANSಗಾಗಿ ಕರೆ ಮಾಡಿ – LIC LIFE INSURANCE – ಅನಿಲ್ 9538414151, ಪ್ರಶಾಂತ್ 9972194422
  • ಸುಂದರ ಮನೆ ಕಟ್ಟಬೇಕು, ಸ್ವಂತ ಮನೆಯಲ್ಲಿ ನೆಮ್ಮದಿಯ ಬದುಕು ಸಾಗಿಸಬೇಕು ಅನ್ನವು ಆಸೆ ಯಾರಿಗಿಲ್ಲ? ಇನ್ಯಾಕೆ ತಡ? ಮನೆ ಕಟ್ಟಲು LICಯಿಂದ HOUSING LOAN ಲಭ್ಯವಿದೆ. ಇವತ್ತೇ ಸಂಪರ್ಕಿಸಿ – ಪ್ರಶಾಂತ್ 9972194422

SHIVAMOGGA LIVE WHATSAPP

ನಿಮ್ಮೂರು, ನಿಮ್ಮ ಏರಿಯಾದ ಕಾರ್ಯಕ್ರಮಗಳು, ಸಮಸ್ಯೆಗಳು ಸುದ್ದಿಯಾಗಬೇಕಾ? ನೀವೇ ವರದಿಗಾರರಾಗಿ. ವಿಡಿಯೋ, ಫೋಟೊ ಮಾಡಿ 7411700200 ಮೊಬೈಲ್ ನಂಬರ್’ಗೆ ವಾಟ್ಸಪ್ ಮಾಡಿ. ನೆನಪಿರಲಿ, ಸುದ್ದಿ ಪ್ರಕಟಣೆಗೆ ನಾವು ಹಣ ಪಡೆಯುವುದಿಲ್ಲ.

ಶಿವಮೊಗ್ಗ ಜಿಲ್ಲೆಯ ಯಾವುದೇ ಊರಿನ ಸುದ್ದಿಯನ್ನು ವಾಟ್ಸಪ್‌ ಮಾಡಬಹುದು. ಉಚಿತವಾಗಿ ಪ್ರಕಟಿಸುತ್ತೇವೆ. ವಾಟ್ಸಪ್‌ ನಂಬರ್: 7411700200
Kalleshwara-Enterprises.webp

Leave a Comment