ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
SHIVAMOGGA LIVE NEWS | KUVEMPU UNIVERSITY | 15 ಜುಲೈ 2022
ರಾಷ್ಟ್ರೀಯ ಶೈಕ್ಷಣಿಕ ಸಂಸ್ಥೆಗಳ RANKINGನಲ್ಲಿ ಕುವೆಂಪು ವಿಶ್ವವಿದ್ಯಾಲಯ ಟಾಪ್ 100 ಪಟ್ಟಿಯೊಳಗೆ ಸ್ಥಾನ ಪಡೆದಿದೆ. ಕುವೆಂಪು ವಿವಿ 86ನೇ RANK ಗಳಿಸಿದೆ.

ನವದೆಹಲಿಯಲ್ಲಿ ಕೇಂದ್ರ ಮಾನವ ಸಂಪನ್ಮೂಲ ಅಭಿವೃದ್ಧಿ ಸಚಿವ ಧರ್ಮೇಂದ್ರ ಪ್ರಧಾನ್ ಶುಕ್ರವಾರ ಅಂತರ್ಜಾದಲ್ಲಿ ಬಿಡುಗಡೆಗೊಳಿಸಿರುವ 2022ರ ಪ್ರತಿಷ್ಠಿತ ರಾಷ್ಟ್ರೀಯ ಶೈಕ್ಷಣಿಕ ಸಂಸ್ಥೆಗಳ ರಾಂಕಿಂಗ್ (NIRF) ನಲ್ಲಿ ಕುವೆಂಪು ವಿಶ್ವವಿದ್ಯಾಲಯವು 86ನೇ ರಾಂಕ್ ಗಳಿಸಿದೆ. ಈ ಮೂಲಕ ಸತತ ಐದನೇ ವರ್ಷ ದೇಶದ ಟಾಪ್ 100ರ ಪಟ್ಟಿಯಲ್ಲಿ ಸ್ಥಾನ ಪಡೆದುಕೊಂಡಿದೆ. ರಾಜ್ಯಗಳ ಸಾಂಪ್ರದಾಯಿಕ ವಿ.ವಿ.ಗಳ ಪೈಕಿ ಕಳೆದ ಬಾರಿಯಂತೆಯೇ ಮೂರನೇ ಸ್ಥಾನದಲ್ಲಿ ಮುಂದುವರೆದಿದೆ.
ದೇಶದ 4,100ಕ್ಕೂ ಹೆಚ್ಚು ಶೈಕ್ಷಣಿಕ ಸಂಸ್ಥೆಗಳು ಭಾಗವಹಿಸಿದ್ದ ಈ RANKING ಪಟ್ಟಿಯಲ್ಲಿ ಕುವೆಂಪು ವಿ.ವಿ. 42.44 ಅಂಕಗಳನ್ನು ಪಡೆಯುವ ಮೂಲಕ ಇಡೀ ದೇಶದ ವಿಶ್ವವಿದ್ಯಾಲಯಗಳ ಪೈಕಿ, 86ನೇ ಸ್ಥಾನ ಪಡೆದಿದೆ.
2017ರಲ್ಲಿ 150ರಿಂದ 200ರ ವರ್ಗದಲ್ಲಿ ಸ್ಥಾನ ಪಡೆದಿದ್ದ ವಿಶ್ವವಿದ್ಯಾಲಯ, 2018ರಲ್ಲಿ ಭಾರಿ ಜಿಗಿತ ಕಂಡಿದ್ದು 78ನೇ ಸ್ಥಾನಕ್ಕೇರಿತ್ತು. ಪ್ರಸಕ್ತ ಸಾಲಿನಲ್ಲಿ 86ನೇ RANK ಪಡೆಯುವುದರೊಂದಿಗೆ, ಕೋವಿಡ್-19 ಮತ್ತು ವಿವಿಯ ಸುಮಾರು 10 ಪ್ರಾಧ್ಯಾಪಕರು ನಿವೃತ್ತರಾದ ಕಾರಣದಿಂದ ಉನ್ನತ ಶಿಕ್ಷಣದ ಚಟುವಟಿಕೆಗಳಿಗೆ ಹಿನ್ನೆಡೆಯಾಗಿದ್ದರೂ, ಟಾಪ್ 100ರೊಳಗೆ ಸ್ಥಾನ ಪಡೆದುಕೊಂಡಿದೆ.
ಕರ್ನಾಟಕದ ವಿಶ್ವವಿದ್ಯಾಲಯಗಳ ಪೈಕಿ ಮೈಸೂರು ವಿಶ್ವವಿದ್ಯಾಲಯ ಮತ್ತು ಬೆಂಗಳೂರು ವಿಶ್ವವಿದ್ಯಾಲಯ ಕ್ರಮವಾಗಿ 33 ಮತ್ತು 64ನೇ RANK ಪಡೆಯುವುದರೊಂದಿಗೆ ರಾಜ್ಯಮಟ್ಟದಲ್ಲಿ ಮೊದಲೆರಡು ಸ್ಥಾನ ಪಡೆದಿವೆ.
ಇದನ್ನೂ ಓದಿ – ಕುವೆಂಪು ವಿವಿ ಸ್ನಾತಕ ಪದವಿ ಪ್ರವೇಶಕ್ಕೆ ಕೊನೆ ದಿನಾಂಕ ನಿಗದಿ, ಸಮಾನರೂಪ ವೇಳಾಪಟ್ಟಿ ಬಿಡುಗಡೆ
ADVERTISEMENT
- ಆರೋಗ್ಯ ತುರ್ತು ಸಂದರ್ಭದಲ್ಲಿ ಹಣಕಾಸು ಹೊಂದಿಸುವುದು ಸುಲಭವೇನಲ್ಲ. ಒಂದು ವೇಳೆ INSURANCE ಇದ್ದರೆ, ನಿರಮ್ಮಳವಾಗಿರಬಹುದು ಅಲ್ಲವೆ? ಈಗಲೆ INSURANCE ಮಾಡಿಸಿ. ಒಳ್ಳೆಯ INSURANCE PLANSಗಾಗಿ ಕರೆ ಮಾಡಿ – LIC LIFE INSURANCE – ಅನಿಲ್ 9538414151, ಪ್ರಶಾಂತ್ 9972194422
- ಸುಂದರ ಮನೆ ಕಟ್ಟಬೇಕು, ಸ್ವಂತ ಮನೆಯಲ್ಲಿ ನೆಮ್ಮದಿಯ ಬದುಕು ಸಾಗಿಸಬೇಕು ಅನ್ನವು ಆಸೆ ಯಾರಿಗಿಲ್ಲ? ಇನ್ಯಾಕೆ ತಡ? ಮನೆ ಕಟ್ಟಲು LICಯಿಂದ HOUSING LOAN ಲಭ್ಯವಿದೆ. ಇವತ್ತೇ ಸಂಪರ್ಕಿಸಿ – ಪ್ರಶಾಂತ್ 9972194422
SHIVAMOGGA LIVE WHATSAPP
ನಿಮ್ಮೂರು, ನಿಮ್ಮ ಏರಿಯಾದ ಕಾರ್ಯಕ್ರಮಗಳು, ಸಮಸ್ಯೆಗಳು ಸುದ್ದಿಯಾಗಬೇಕಾ? ನೀವೇ ವರದಿಗಾರರಾಗಿ. ವಿಡಿಯೋ, ಫೋಟೊ ಮಾಡಿ 7411700200 ಮೊಬೈಲ್ ನಂಬರ್’ಗೆ ವಾಟ್ಸಪ್ ಮಾಡಿ. ನೆನಪಿರಲಿ, ಸುದ್ದಿ ಪ್ರಕಟಣೆಗೆ ನಾವು ಹಣ ಪಡೆಯುವುದಿಲ್ಲ.
–
[su_divider top=”no” style=”dotted” divider_color=”#ffffff” link_color=”#000000″ margin=”10″]
[su_button url=”https://www.facebook.com/liveshivamogga” target=”blank” style=”flat” background=” #316FF6″ color=”#ffffff” size=”4″ radius=”0″ icon=”icon: facebook-square”][/su_button] [su_button url=”https://x.com/liveshivamogga” target=”blank” style=”flat” background=”#000000″ color=”#ffffff” size=”4″ radius=”0″ icon=”icon: twitter”][/su_button] [su_button url=”https://www.instagram.com/shivamoggalive/” target=”blank” style=”flat” background=”#E1306C” color=”#ffffff” size=”4″ radius=”0″ icon=”icon: instagram”][/su_button] [su_button url=”https://www.youtube.com/@shivamoggalive” target=”blank” style=”flat” background=”#FF0000″ color=”#ffffff” size=”4″ radius=”0″ icon=”icon: youtube-square”][/su_button] [su_button url=”https://www.linkedin.com/in/shivamogga-live-666a05322/” target=”blank” style=”flat” background=”#0072b1″ color=”#ffffff” size=”4″ radius=”0″ icon=”icon: linkedin-square”][/su_button]
[su_divider top=”no” style=”dotted” divider_color=”#ffffff” link_color=”#000000″ margin=”10″]
LATEST NEWS
- ಶಿವಮೊಗ್ಗದ ವಿವಿಧೆಡೆ ಇಂದು ಮತ್ತು ನಾಳೆ ಇಡೀ ದಿನ ಕರೆಂಟ್ ಇರಲ್ಲ, ಎಲ್ಲೆಲ್ಲಿ?

- ಸರಕು ರೇಟ್ ಕುಸಿತ, ಉಳಿದ ಅಡಿಕೆಗಳ ಧಾರಣೆ ಎಷ್ಟಿದೆ?, 13 ಮಾರ್ಚ್ 2026ರ ಅಡಿಕೆ ರೇಟ್

- ಸಹ್ಯಾದ್ರಿ ಉತ್ಸವದಲ್ಲಿ ಜಾನಪದ ಕಲೆಗಳ ಕಲರವ, ಏನಂದ್ರು ನಟಿ ಜಯಮಾಲಾ?

- ವಿದ್ಯಾನಗರದ ಆರ್ಮಿ ಕ್ಯಾಂಟೀನ್ನಲ್ಲಿ ಮದ್ಯ ಕಳ್ಳತನಕ್ಕೆ ಯತ್ನ, ಆಗಿದ್ದೇನು?

- ಕಾರ್ಗಲ್ನಲ್ಲಿ ವಾಂತಿ, ಭೇದಿ ಪ್ರಕರಣ ಹೆಚ್ಚಳ, ಮಹಿಳೆ ಸಾವು, ಜನರಲ್ಲಿ ಆತಂಕ

[su_divider top=”no” style=”dotted” divider_color=”#ffffff” link_color=”#000000″ margin=”10″]
[su_divider top=”no” style=”dotted” divider_color=”#ffffff” link_color=”#000000″ margin=”10″]
About The Editor
ನಿತಿನ್ ಆರ್.ಕೈದೊಟ್ಲು
















