ನಡುರಸ್ತೆಯಲ್ಲಿ ಹಂದಿ ಅಣ್ಣಿ ಹತ್ಯೆ ಕೇಸ್, ಎಫ್ಐಆರ್’ನಲ್ಲಿ ಏನಿದೆ?

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

SHIVAMOGGA LIVE NEWS | SHIMOGA | 16 ಜುಲೈ 2022

ನಡುರಸ್ತೆಯಲ್ಲಿ ರೌಡಿ ಶೀಟರ್ ಹತ್ಯೆ ಪ್ರಕರಣ ಸಂಬಂಧ ಎಫ್ಐಆರ್ ದಾಖಲಾಗಿದೆ. ಕೊಲೆ (MURDER) ಮಾಡಿದವರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ದೂರಿನಲ್ಲಿ ತಿಳಿಸಲಾಗಿದೆ.

Shimoga Nanjappa Hospital

ರೌಡಿ ಶೀಟರ್ ಹಂದಿ ಅಣ್ಣಿಯನ್ನು ಜುಲೈ 14ರಂದು ಬೆಳಗ್ಗೆ 10.50ರ ಹೊತ್ತಿಗೆ ವಿನೋಬನಗರ ಪೊಲೀಸ್ ಚೌಕಿ ಸರ್ಕಲ್’ನಲ್ಲಿ ಹತ್ಯೆ ಮಾಡಲಾಗಿತ್ತು. ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಲಾಗಿತ್ತು.

ಘಟನೆ ಸಂಬಂಧ ಹೊನ್ನಪ್ಪ ಅಲಿಯಾಸ್ ಅಣ್ಣಪ್ಪ ಅಲಿಯಾಸ್ ಹಂದಿ ಅಣ್ಣಿಯ ತಾಯಿ ಚಂದ್ರಮ್ಮ ದೂರು ನೀಡಿದ್ದಾರೆ. ‘ಬೆಳಗ್ಗೆ ಕೋರ್ಟಿಗೆ ಹೋಗುತ್ತೇನೆ ಎಂದು ಹೇಳಿ ಹೋಗಿದ್ದ. ಬೆಳಗ್ಗೆ ಯಾರೋ ಫೋನ್ ಮಾಡಿ ನಿಮ್ಮ ಮಗನನ್ನು ವಿನೋಬನಗರ ಚೌಕಿ ಸರ್ಕಲ್’ನಲ್ಲಿ ಯಾರೋ ಕೊಲೆ ಮಾಡಿದ್ದಾರೆ ಎಂದು ತಿಳಿಸಿದರು. ಕೂಡಲೆ ನಾನು ಆಟೋದಲ್ಲಿ ವಿನೋಬನಗರ ಚೌಕಿಗೆ ಅರಳಿ ಮರದ ಎದುರಿಗೆ ಹೋಗಿ ನೋಡಿದಾಗ ನನ್ನ ಮಗ ಹೊನ್ನಪ್ಪ ರಕ್ತದ ಮಡುವಿನಲ್ಲಿ ಬಿದ್ದಿದ್ದು ತಲೆ ಹಿಂಭಾಗ ಮತ್ತು ಕುತ್ತಿಗೆಗೆ ಯಾವುದೋ ಆಯುಧದಿಂದ ಹೊಡೆದು ಕೊಲೆ ಮಾಡಿದ್ದಾರೆ. ಕೊಲೆ ಮಾಡಿದವರ ವಿರುದ್ಧ ಕಾನೂನು ರೀತ್ಯಾ ಕ್ರಮ ಕೈಗೊಳ್ಳಬೇಕು’ ಎಂದು ದೂರಿನಲ್ಲಿ ತಿಳಿಸಲಾಗಿದೆ.

ಕೋರ್ಟ್’ಗೆ ಹೊರಟಿದ್ದ ಹಂದಿ ಅಣ್ಣಿ

ಮೋಟಿ ವೆಂಕಟೇಶ್ ಕೊಲೆ ಪ್ರಕರಣ ಸಂಬಂಧ ಹಂದಿ ಅಣ್ಣಿ ಗುರುವಾರ ಕೋರ್ಟ್ ಗೆ ಹಾಜರಾಗಬೇಕಿತ್ತು. ಆತ ಕೋರ್ಟ್ ಗೆ ಹೋಗುವ ಸಮಯದಲ್ಲೆ ದಾಳಿ ಮಾಡಲು ಹಂತಕರು ಸಿದ್ಧವಾದಂತೆ ತೋರುತ್ತದೆ. ಹಂದಿ ಅಣ್ಣಿ ವಿನೋಬನಗರ ಪೊಲೀಸ್ ಚೌಕಿ ಬಳಿ ಬರುತ್ತಿದ್ದ ಹಾಗೆ ದಾಳಿ ಮಾಡಲಾಗಿದೆ.

ಇದನ್ನೂ ಓದಿ – ನಡು ಬೀದಿಯಲ್ಲಿ ಕೊಲೆ, ಸಿಸಿಟಿವಿ ವಿಡಿಯೋ ವೈರಲ್, ಯಾರಿದು ಹಂದಿ ಅಣ್ಣಿ? ಹೇಗಾಯ್ತು ಹತ್ಯೆ?

ADVERTISEMENT

  • ಆರೋಗ್ಯ ತುರ್ತು ಸಂದರ್ಭದಲ್ಲಿ ಹಣಕಾಸು ಹೊಂದಿಸುವುದು ಸುಲಭವೇನಲ್ಲ. ಒಂದು ವೇಳೆ INSURANCE ಇದ್ದರೆ, ನಿರಮ್ಮಳವಾಗಿರಬಹುದು ಅಲ್ಲವೆ? ಈಗಲೆ INSURANCE ಮಾಡಿಸಿ. ಒಳ್ಳೆಯ INSURANCE PLANSಗಾಗಿ ಕರೆ ಮಾಡಿ – LIC LIFE INSURANCE – ಅನಿಲ್ 9538414151, ಪ್ರಶಾಂತ್ 9972194422
  • ಸುಂದರ ಮನೆ ಕಟ್ಟಬೇಕು, ಸ್ವಂತ ಮನೆಯಲ್ಲಿ ನೆಮ್ಮದಿಯ ಬದುಕು ಸಾಗಿಸಬೇಕು ಅನ್ನವು ಆಸೆ ಯಾರಿಗಿಲ್ಲ? ಇನ್ಯಾಕೆ ತಡ? ಮನೆ ಕಟ್ಟಲು LICಯಿಂದ HOUSING LOAN ಲಭ್ಯವಿದೆ. ಇವತ್ತೇ ಸಂಪರ್ಕಿಸಿ – ಪ್ರಶಾಂತ್ 9972194422

SHIVAMOGGA LIVE WHATSAPP

ನಿಮ್ಮೂರು, ನಿಮ್ಮ ಏರಿಯಾದ ಕಾರ್ಯಕ್ರಮಗಳು, ಸಮಸ್ಯೆಗಳು ಸುದ್ದಿಯಾಗಬೇಕಾ? ನೀವೇ ವರದಿಗಾರರಾಗಿ. ವಿಡಿಯೋ, ಫೋಟೊ ಮಾಡಿ 7411700200 ಮೊಬೈಲ್ ನಂಬರ್’ಗೆ ವಾಟ್ಸಪ್ ಮಾಡಿ. ನೆನಪಿರಲಿ, ಸುದ್ದಿ ಪ್ರಕಟಣೆಗೆ ನಾವು ಹಣ ಪಡೆಯುವುದಿಲ್ಲ.

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : July 16, 2022

Leave a Comment