ಶಿವಮೊಗ್ಗ ಜಿಲ್ಲಾಧಿಕಾರಿ ಕಚೇರಿ ಮುಂದೆ ಒಂಟಿ ಕಾಲಲ್ಲಿ ನಿಂತು ಪ್ರತಿಭಟನೆ, ಕಾರಣವೇನು?

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

https://chat.whatsapp.com/Doh0PyFFSiTBZY73X533cb

SHIVAMOGGA LIVE NEWS | SHIMOGA | 16 ಜುಲೈ 2022

ಕಸ್ತೂರಿ ರಂಗನ್ ವರದಿ (KASTURI RANGAN REPORT) ಜಾರಿಗೊಳಿಸುವುದನ್ನು ವಿರೋಧಿಸಿ ಶಾಂತವೇರಿ ಗೋಪಾಲಗೌಡ ಸಮಾಜವಾದಿ ಅಧ್ಯಯನ ಕೇಂದ್ರದ ಪದಾಧಿಕಾರಿಗಳು ಇಂದು ನಗರದ ಜಿಲ್ಲಾಧಿಕಾರಿ ಕಚೇರಿ (DC OFFICE) ಎದುರು ಒಂಟಿ ಕಾಲಿನಲ್ಲಿ ನಿಂತು ಪ್ರತಿಭಟನೆ (PROTEST) ನಡೆಸಿದರು.

Shimoga Nanjappa Hospital

ಪಶ್ಚಿಮ ಘಟ್ಟಗಳ 10 ಜಿಲ್ಲೆಗಳನ್ನು ಒಳಗೊಂಡ 20 ಸಾವಿರಕ್ಕೂ ಹೆಚ್ಚು ಚದರ ಕಿ.ಮೀ ಪ್ರದೇಶವನ್ನು ಕೇಂದ್ರದ ಪರಿಸರ ಇಲಾಖೆ ಅವೈಜ್ಞಾನಿಕವಾಗಿ ಪರಿಸರ ಸೂಕ್ಷ್ಮ ಪ್ರದೇಶ ಎಂದು ಘೋಷಣೆ ಮಾಡಿದೆ. ಇದು ಜನವಿರೋಧಿಯಾಗಿದೆ. ಇದರಿಂದ ಅರಣ್ಯವಾಸಿ ಹಾಗೂ ಆದಿವಾಸಿಗಳ ಬದುಕನ್ನು ಕಸಿದುಕೊಂಡಂತಾಗುತ್ತದೆ. ಈಗಿರುವ ಅರಣ್ಯ ಮತ್ತು ವನ್ಯಜೀವಿ ಸಂರಕ್ಷಣೆಯ ಕಾನೂನುಗಳನ್ನೇ ಕಟ್ಟುನಿಟ್ಟಾಗಿ ಜಾರಿಗೊಳಿಸಿದರೆ ಸಾಕು. ಹೊಸ ಆದೇಶವೇನೂ ಬೇಕಾಗಿಲ್ಲ ಎಂದು ಪ್ರತಿಭಟನಾಕಾರರು ತಿಳಿಸಿದರು.

ಸರ್ಕಾರ ತಕ್ಷಣವೇ ಕಸ್ತೂರಿ ರಂಗನ್ ವರದಿ ಜಾರಿ ಮಾಡುವುದನ್ನು ಹಿಂದಕ್ಕೆ ತೆಗೆದುಕೊಳ್ಳಬೇಕು. ಬೆಂಗಳೂರಿನಲ್ಲಿ ಜು. 18 ರಂದು ಮಲೆನಾಡು ಭಾಗದ ಶಾಸಕರ, ಜನಪ್ರತಿನಿಧಿಗಳ ಸಭೆ ನಡೆಯಲಿದೆ. ಈ ಸಭೆಯಲ್ಲಿ ಕಸ್ತೂರಿ ರಂಗನ್ ವರದಿ ಜಾರಿಗೊಳಿಸದಂತೆ ತೀರ್ಮಾನ ತೆಗೆದುಕೊಂಡು ಕೇಂದ್ರಕ್ಕೆ ರಾಜ್ಯ ಸರ್ಕಾರ ತಿಳಿಸಬೇಕು ಎಂದು ಮನವಿಯಲ್ಲಿ ಒತ್ತಾಯಿಸಲಾಗಿದೆ.

ಈ ಸಂದರ್ಭದಲ್ಲಿ ಶಾಂತವೇರಿ ಗೋಪಾಲಗೌಡ ಸಮಾಜವಾದಿ ಅಧ್ಯಯನ ಕೇಂದ್ರದ ವ್ಯವಸ್ಥಾಪಕ ಟ್ರಸ್ಟಿ ಕಲ್ಲೂರು ಮೇಘರಾಜ್, ಪ್ರಮುಖರಾದ ಎಲ್.ಆರ್. ಗೋಪಾಲಕೃಷ್ಣ, ಹೆಚ್.ಎಂ. ಸಂಗಯ್ಯ, ಟಿ.ಆರ್. ಕೃಷ್ಣಪ್ಪ, ಎಸ್.ವಿ. ರಾಜಮ್ಮ, ಚಾಬೂಸಾಬ್, ಶಂಕ್ರಾನಾಯ್ಕ ಮುಂತಾದವರಿದ್ದರು.

ಇದನ್ನೂ ಓದಿ – ಮಹಿಳೆಯ ಕುತ್ತಿಗೆ, ಹೊಟ್ಟೆಗೆ ಚಾಕು ಗುರಿಯಾಗಿಸಿ ಮಾಂಗಲ್ಯ ಸರ ಕಿತ್ತುಕೊಂಡ ದುಷ್ಕರ್ಮಿಗಳು

ADVERTISEMENT

  • ಆರೋಗ್ಯ ತುರ್ತು ಸಂದರ್ಭದಲ್ಲಿ ಹಣಕಾಸು ಹೊಂದಿಸುವುದು ಸುಲಭವೇನಲ್ಲ. ಒಂದು ವೇಳೆ INSURANCE ಇದ್ದರೆ, ನಿರಮ್ಮಳವಾಗಿರಬಹುದು ಅಲ್ಲವೆ? ಈಗಲೆ INSURANCE ಮಾಡಿಸಿ. ಒಳ್ಳೆಯ INSURANCE PLANSಗಾಗಿ ಕರೆ ಮಾಡಿ – LIC LIFE INSURANCE – ಅನಿಲ್ 9538414151, ಪ್ರಶಾಂತ್ 9972194422
  • ಸುಂದರ ಮನೆ ಕಟ್ಟಬೇಕು, ಸ್ವಂತ ಮನೆಯಲ್ಲಿ ನೆಮ್ಮದಿಯ ಬದುಕು ಸಾಗಿಸಬೇಕು ಅನ್ನವು ಆಸೆ ಯಾರಿಗಿಲ್ಲ? ಇನ್ಯಾಕೆ ತಡ? ಮನೆ ಕಟ್ಟಲು LICಯಿಂದ HOUSING LOAN ಲಭ್ಯವಿದೆ. ಇವತ್ತೇ ಸಂಪರ್ಕಿಸಿ – ಪ್ರಶಾಂತ್ 9972194422

SHIVAMOGGA LIVE WHATSAPP

ನಿಮ್ಮೂರು, ನಿಮ್ಮ ಏರಿಯಾದ ಕಾರ್ಯಕ್ರಮಗಳು, ಸಮಸ್ಯೆಗಳು ಸುದ್ದಿಯಾಗಬೇಕಾ? ನೀವೇ ವರದಿಗಾರರಾಗಿ. ವಿಡಿಯೋ, ಫೋಟೊ ಮಾಡಿ 7411700200 ಮೊಬೈಲ್ ನಂಬರ್’ಗೆ ವಾಟ್ಸಪ್ ಮಾಡಿ. ನೆನಪಿರಲಿ, ಸುದ್ದಿ ಪ್ರಕಟಣೆಗೆ ನಾವು ಹಣ ಪಡೆಯುವುದಿಲ್ಲ.

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment