ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
SHIVAMOGGA LIVE NEWS | SHIMOGA | 20 ಜುಲೈ 2022
ರಸ್ತೆ ಡಿವೈಡರ್’ಗೆ (ROAD DIVIDER) ಕಾರು ಡಿಕ್ಕಿಯಾಗಿ ಮೂವರು ಗಾಯಗೊಂಡಿದ್ದಾರೆ. ಶಿಕಾರಿಪುರದಿಂದ (SHIKARIPURA) ಶಿವಮೊಗ್ಗಕ್ಕೆ ಬರುವಾಗ ಕುಂಚೇನಹಳ್ಳಿ (KUNCHENAHALLI) ಗ್ರಾಮದಲ್ಲಿ ಘಟನೆ ಸಂಭವಿಸಿದೆ.

ಮಲವಗೊಪ್ಪದ (MALAVAGOPPA) ಸಂತೊಷ್, ರವಿ, ದುಮ್ಮಳ್ಳಿಯ ಪ್ರವೀಣ್ ಗಾಯಗೊಂಡಿದ್ದಾರೆ. ಅವರನ್ನು ಶಿವಮೊಗ್ಗದ ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.
ವೆಲ್ಡಿಂಗ್ ಕಾಂಟ್ರಾಕ್ಟರ್ (CONTRACTOR) ಆಗಿರುವ ದುಮ್ಮಳ್ಳಿಯ ಪ್ರವೀಣ್ ಅವರು ಶಿಕಾರಿಪುರದ ಮನೆಯೊಂದರಲ್ಲಿ ವೆಲ್ಡಿಂಗ್ ಕಾಂಟ್ರಾಕ್ಟರ್ ತೆಗೆದುಕೊಂಡಿದ್ದರು. ವೆಲ್ಡಿಂಗ್ ಕೆಲಸಕ್ಕಾಗಿ ಸಂತೋಷ್ ಮತ್ತು ರವಿ ಅವರನ್ನು ಕರೆದೊಯ್ದಿದ್ದರು.
ಕೆಲಸ ಮುಗಿಸಿ ಶಿಕಾರಿಪುರದ ಕಡೆಯಿಂದ ಶಿವಮೊಗ್ಗದ ಕಡೆಗೆ ರಾತ್ರಿ ಬರುತ್ತಿದ್ದರು. ಕುಂಚೇನಹಳ್ಳಿ ಗ್ರಾಮದ ಬಳಿ ಪ್ರವೀಣ್ ಚಲಾಯಿಸುತ್ತಿದ್ದ ಕಾರು, ಡಿವೈಡರ್’ಗೆ ಡಿಕ್ಕಿ (ACCIDENT) ಹೊಡೆದಿದೆ. ಘಟನೆಯಲ್ಲಿ ಕಾರಿನಲ್ಲಿದ್ದ ಮೂವರು ಗಾಯಗೊಂಡಿದ್ದಾರೆ. ಕಾರಿನ ಮುಂಭಾಗ ಜಖಂಗೊಂಡಿದೆ. ಮೂವರನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿದೆ.
ಕಾರು ಚಾಲನೆ ಮಾಡುತ್ತಿದ್ದ ಪ್ರವೀಣ್ ವಿರುದ್ಧ ಪ್ರಕರಣ ದಾಖಲಾಗಿದೆ. ಶಿವಮೊಗ್ಗ ಗ್ರಾಮಾಂತರ ಠಾಣೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
ಇದನ್ನೂ ಓದಿ – ‘ನಾನು ಶುಗರ್ ಫ್ಯಾಕ್ಟರಿ ರೌಡಿ’ ಅಂತಾ ಬೆದರಿಸಿ, ಚಿಕನ್ ವ್ಯಾಪಾರಿ ತಲೆಗೆ ದೊಣ್ಣೆಯಿಂದ ಹೊಡೆದು ಪರಾರಿ
ADVERTISEMENT
- ಆರೋಗ್ಯ ತುರ್ತು ಸಂದರ್ಭದಲ್ಲಿ ಹಣಕಾಸು ಹೊಂದಿಸುವುದು ಸುಲಭವೇನಲ್ಲ. ಒಂದು ವೇಳೆ INSURANCE ಇದ್ದರೆ, ನಿರಮ್ಮಳವಾಗಿರಬಹುದು ಅಲ್ಲವೆ? ಈಗಲೆ INSURANCE ಮಾಡಿಸಿ. ಒಳ್ಳೆಯ INSURANCE PLANSಗಾಗಿ ಕರೆ ಮಾಡಿ – LIC LIFE INSURANCE – ಅನಿಲ್ 9538414151, ಪ್ರಶಾಂತ್ 9972194422
- ಸುಂದರ ಮನೆ ಕಟ್ಟಬೇಕು, ಸ್ವಂತ ಮನೆಯಲ್ಲಿ ನೆಮ್ಮದಿಯ ಬದುಕು ಸಾಗಿಸಬೇಕು ಅನ್ನವು ಆಸೆ ಯಾರಿಗಿಲ್ಲ? ಇನ್ಯಾಕೆ ತಡ? ಮನೆ ಕಟ್ಟಲು LICಯಿಂದ HOUSING LOAN ಲಭ್ಯವಿದೆ. ಇವತ್ತೇ ಸಂಪರ್ಕಿಸಿ – ಪ್ರಶಾಂತ್ 9972194422
SHIVAMOGGA LIVE WHATSAPP
ನಿಮ್ಮೂರು, ನಿಮ್ಮ ಏರಿಯಾದ ಕಾರ್ಯಕ್ರಮಗಳು, ಸಮಸ್ಯೆಗಳು ಸುದ್ದಿಯಾಗಬೇಕಾ? ನೀವೇ ವರದಿಗಾರರಾಗಿ. ವಿಡಿಯೋ, ಫೋಟೊ ಮಾಡಿ 7411700200 ಮೊಬೈಲ್ ನಂಬರ್’ಗೆ ವಾಟ್ಸಪ್ ಮಾಡಿ. ನೆನಪಿರಲಿ, ಸುದ್ದಿ ಪ್ರಕಟಣೆಗೆ ನಾವು ಹಣ ಪಡೆಯುವುದಿಲ್ಲ.
LATEST NEWS
- ಆಲ್ಕೊಳ ಬಳಿ ಪೊಲೀಸರ ಕಾರ್ಯಾಚರಣೆ, ಬೈಕ್ ಸಹಿತ ಇಬ್ಬರು ಅರೆಸ್ಟ್, ಕಾರಣವೇನು?

- ಶರಾವತಿ ನಗರದಲ್ಲಿ ಕಾರು ಗಾಜು ಪೀಸ್ ಪೀಸ್ ಕೇಸ್, ಮೂವರು ಅರೆಸ್ಟ್, ಘಟನೆಗೆ ಕಾರಣ ಮನೆ

- ಶಿವಮೊಗ್ಗದಲ್ಲಿ ಏರ್ಟೆಲ್ ಮೊಬೈಲ್ ಟವರ್ನ ಉಪಕರಣ ಕಳವು, ಆಗಿದ್ದೇನು?

- ಶಿವಮೊಗ್ಗ ಕಾಂಗ್ರೆಸ್ ಕಾರ್ಯದರ್ಶಿ ಸೇರಿ ಇಬ್ಬರು 6 ವರ್ಷ ಪಕ್ಷದಿಂದ ಉಚ್ಛಾಟನೆ, ಕಾರಣವೇನು?

- ಬೇಡರ ಹೊಸಹಳ್ಳಿ ಬಳಿ ಚಲಿಸುತ್ತಿದ್ದ ಬಸ್ಸಿನ ಸೀಟಿನಿಂದಲೇ ಹೊರಗೆ ಬಿದ್ದ ಪ್ರಯಾಣಿಕ

About The Editor
ನಿತಿನ್ ಆರ್.ಕೈದೊಟ್ಲು






