ವಿದ್ಯಾರ್ಥಿಗಳು ತೂರಾಡಿ ಬೀಳುವ ದೃಶ್ಯ ವೈರಲ್, ಪೊಲೀಸ್ ಇಲಾಖೆಯಿಂದ ಹೊರಬಿತ್ತು ಸ್ಪಷ್ಟನೆ

ನಿಮ್ಮೂರ ಸುದ್ದಿ ಕೆಲವೇ ನಿಮಿಷದಲ್ಲಿ ಸಾವಿರ ಸಾವಿರ ಜನರನ್ನು ತಲುಪುತ್ತೆ!

ಶಿವಮೊಗ್ಗ ಜಿಲ್ಲೆಯ ಯಾವುದೇ ಊರಿನ ಸುದ್ದಿಯನ್ನು ನಮಗೆ ಕಳುಹಿಸಬಹುದು. ನಮ್ಮ ವಾಟ್ಸಪ್‌ ನಂಬರ್ 7411700200.

ನಮ್ಮ ಗ್ರೂಪ್‌ ಸೇರಿಲು ಇಲ್ಲಿ ಕ್ಲಿಕ್‌ ಮಾಡಿ

SHIVAMOGGA LIVE NEWS | SHIMOGA | 26 ಜುಲೈ 2022

ಕಾಲೇಜು ಗೇಟ್ ಮುಂದೆ ವಿದ್ಯಾರ್ಥಿಗಳು ತೂರಾಡಿ ಬೀಳುವ ದೃಶ್ಯ ವೈರಲ್ ಬೆನ್ನಿಗೆ, ಪೊಲೀಸ್ ಇಲಾಖೆ (POLICE) ಘಟನೆ ಕುರಿತು ಸ್ಪಷ್ಟನೆ ನೀಡಿದೆ. ಸುದ್ದಿಯ ಮುಂದಿನ 9 ಪ್ಯಾರಾಗಳು ಕೆಳಗಿವೆ.

Shimoga Nanjappa Hospital

ಖಾಸಗಿ ಕಾಲೇಜು ಮುಂಭಾಗ ವಿದ್ಯಾರ್ಥಿಗಳು ತೂರಾಡಿ ಬೀಳುವ ದೃಶ್ಯ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿತ್ತು.

ಪೊಲೀಸ್ ಪ್ರಕಟಣೆಯಲ್ಲಿ ಏನಿದೆ?

ಶಿವಮೊಗ್ಗದ ಕಾಲೇಜಿನ ಕ್ಯಾಂಪಸ್ ಒಂದರಲ್ಲಿ ಕಾಲೇಜು ವಿದ್ಯಾರ್ಥಿಗಳು ಮಾದಕ ವಸ್ತು ಸೇವಿಸಿ ಮತ್ತಿನಲ್ಲಿರುವಂತಹ ವೀಡಿಯೋ ತುಣುಕೊಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಈ ವಿಚಾರವಾಗಿ ಪ್ರಾಥಮಿಕ ತನಿಖೆ ನಡೆಸಲಾಗಿದೆ.

ವಿದ್ಯಾರ್ಥಿಗಳು ಸಾಗರ ರಸ್ತೆಯಲ್ಲಿರುವ ಬಾರ್ ಒಂದರಲ್ಲಿ ಮದ್ಯ ಸೇವನೆ ಮಾಡಿಕೊಂಡು ಬಸ್ ಹತ್ತಲು ಕಾಲೇಜಿನ ಹತ್ತಿರ ಬಂದಿದ್ದಾರೆ. ಈ ವೇಳೆ ಅವರನ್ನು ಕಾಲೇಜಿನ ಗೇಟ್ ನಲ್ಲಿ ತಡೆಯಲಾಗಿದೆ. ಅವರ ಪೋಷಕರಿಗೆ ಈ ವಿಚಾರವನ್ನು ತಿಳಿಸಲಾಗಿದೆ. ಕಾಲೇಜು ಆಡಳಿತ ಮಂಡಳಿಯು ಪೋಷಕರೊಂದಿಗೆ ಈ ವಿಷಯವಾಗಿ ಸಮಾಲೋಚನೆ ನಡೆಸಿದೆ ಎಂದು ಪೊಲೀಸ್ (POLICE) ಪ್ರಕಟಣೆಯಲ್ಲಿ ತಿಳಿಸಲಾಗಿದೆ.

ಇದನ್ನೂ ಓದಿ – ಇವತ್ತಿನ ಎಲ್ಲಾ ಸುದ್ದಿ ಓದಲು ಇಲ್ಲಿ ಕ್ಲಿಕ್ ಮಾಡಿ

ವಿದ್ಯಾರ್ಥಿಗಳು ಗಾಂಜಾ ಸೇವನೆ ಮಾಡಿದ್ದಾರೆ ಎಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿತ್ತು. ಇದು ಹಲವು ಚರ್ಚೆಗೆ ಕಾರಣವಾಗಿತ್ತು. ಈಗ ಪೊಲೀಸ್ ಇಲಾಖೆ ಸ್ಪಷ್ಟನೆಯಿಂದಾಗಿ ಗೊಂದಲಕ್ಕೆ ತೆರೆ ಬಿದ್ದಂತಾಗಿದೆ.

ಇದನ್ನೂ ಓದಿ – ಸಾಮಾನ್ಯ ಗೃಹಿಣಿ ಈಗ ಶಿವಮೊಗ್ಗ ಪಾಲಿಕೆಯ ವಿರೋಧ ಪಕ್ಷದ ನಾಯಕಿ

https://chat.whatsapp.com/Doh0PyFFSiTBZY73X533cb

ADVERTISEMENT

  • ಆರೋಗ್ಯ ತುರ್ತು ಸಂದರ್ಭದಲ್ಲಿ ಹಣಕಾಸು ಹೊಂದಿಸುವುದು ಸುಲಭವೇನಲ್ಲ. ಒಂದು ವೇಳೆ INSURANCE ಇದ್ದರೆ, ನಿರಮ್ಮಳವಾಗಿರಬಹುದು ಅಲ್ಲವೆ? ಈಗಲೆ INSURANCE ಮಾಡಿಸಿ. ಒಳ್ಳೆಯ INSURANCE PLANSಗಾಗಿ ಕರೆ ಮಾಡಿ – LIC LIFE INSURANCE – ಅನಿಲ್ 9538414151, ಪ್ರಶಾಂತ್ 9972194422
  • ಸುಂದರ ಮನೆ ಕಟ್ಟಬೇಕು, ಸ್ವಂತ ಮನೆಯಲ್ಲಿ ನೆಮ್ಮದಿಯ ಬದುಕು ಸಾಗಿಸಬೇಕು ಅನ್ನವು ಆಸೆ ಯಾರಿಗಿಲ್ಲ? ಇನ್ಯಾಕೆ ತಡ? ಮನೆ ಕಟ್ಟಲು LICಯಿಂದ HOUSING LOAN ಲಭ್ಯವಿದೆ. ಇವತ್ತೇ ಸಂಪರ್ಕಿಸಿ – ಪ್ರಶಾಂತ್ 9972194422

SHIVAMOGGA LIVE WHATSAPP

ನಿಮ್ಮೂರು, ನಿಮ್ಮ ಏರಿಯಾದ ಕಾರ್ಯಕ್ರಮಗಳು, ಸಮಸ್ಯೆಗಳು ಸುದ್ದಿಯಾಗಬೇಕಾ? ನೀವೇ ವರದಿಗಾರರಾಗಿ. ವಿಡಿಯೋ, ಫೋಟೊ ಮಾಡಿ 7411700200 ಮೊಬೈಲ್ ನಂಬರ್’ಗೆ ವಾಟ್ಸಪ್ ಮಾಡಿ. ನೆನಪಿರಲಿ, ಸುದ್ದಿ ಪ್ರಕಟಣೆಗೆ ನಾವು ಹಣ ಪಡೆಯುವುದಿಲ್ಲ.

Leave a Comment