BREAKING NEWS | ಮಂಗೋಟೆಯಲ್ಲಿ ಗ್ರಾಮಸ್ಥರಿಂದ ದಿಢೀರ್ ಪ್ರತಿಭಟನೆ, KSRTC ಬಸ್’ಗಳನ್ನು ತಡೆದು ಆಕ್ರೋಶ

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

SHIVAMOGGA LIVE NEWS | BHADRAVATHI | 26 ಜುಲೈ 2022

ಹೆಚ್ಚುವರಿ ಬಸ್ ವ್ಯವಸ್ಥೆ ಕಲ್ಪಿಸುವಂತೆ ಆಗ್ರಹಿಸಿ ಗ್ರಾಮಸ್ಥರು ದಿಢೀರ್ ಪ್ರತಿಭಟನೆ ಕೈಗೊಂಡಿದ್ದಾರೆ. KSRTC ಬಸ್’ಗಳನ್ನು ತಡೆದು ಪ್ರತಿಭಟನೆ ನಡೆಸುತ್ತಿದ್ದಾರೆ.

Shimoga Nanjappa Hospital

ಭದ್ರಾವತಿ ತಾಲೂಕು ಮಂಗೋಟೆ ಗ್ರಾಮದ ಜನರು KSRTC ಬಸ್’ಗಳನ್ನು ತಡೆದು ಪ್ರತಿಭಟನೆ ನಡೆಸುತ್ತಿದ್ದಾರೆ. ಹೊನ್ನಾಳಿ ಕಡೆಯಿಂದ ಸಾಸ್ವೆಹಳ್ಳಿ ಮೂಲಕ ಶಿವಮೊಗ್ಗಕ್ಕೆ ಬರುತ್ತಿರುವ ಬಸ್ಸುಗಳನ್ನು ತಡೆದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಬಸ್ ತಡೆಯಲು ಕಾರಣವೇನು?

ಮಂಗೂಟೆಯಲ್ಲಿ ಸಮರ್ಪಕವಾಗಿ ಬಸ್ ವ್ಯವಸ್ಥೆ ಇಲ್ಲ. ಇದರಿಂದ ವಿದ್ಯಾರ್ಥಿಗಳು, ಗ್ರಾಮಸ್ಥರು ನಿತ್ಯ ಕಿರಿಕಿರಿ ಅನುಭವಿಸುವಂತಾಗಿದೆ ಎಂದು ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಪ್ರತಿದಿನ ಬಸ್ಸು ಸಂಪೂರ್ಣ ಭರ್ತಿಯಾಗಿ ಬರುತ್ತವೆ. ಇದರಿಂದ ಮಂಗೂಟೆ ಸೇರಿದಂತೆ ಮುಂದಿನ ಊರಿನ ವಿದ್ಯಾರ್ಥಿಗಳು ಬಸ್ ಹತ್ತಲು ಆಗುತ್ತಿಲ್ಲ. ಕೆಲವು ಬಸ್ಸುಗಳು ಮಂಗೋಟೆಯಲ್ಲಿ ನಿಲುಗಡೆಯನ್ನೆ ಕೊಡುವುದಿಲ್ಲ. ಹಾಗಾಗಿ ವಿದ್ಯಾರ್ಥಿಗಳು ಸರಿಯಾದ ಸಮಯಕ್ಕೆ ಶಾಲೆ, ಕಾಲೇಜಿಗೆ ತಲುಪಲು ಸಾಧ್ಯವಾಗುತ್ತಿಲ್ಲ ಎಂದು ಗ್ರಾಮಸ್ಥರು ಆರೋಪಿಸಿದರು.

Bhadravathi Magote Villagers Protest

ಇನ್ನು, ಶಿವಮೊಗ್ಗಕ್ಕೆ ತೆರಳಲು ಗ್ರಾಮಸ್ಥರು ಕೂಡ ಪರದಾಡಬೇಕಾಗಿದೆ. ಈ ಕುರಿತು ಹಲವು ಭಾರಿ ಅಧಿಕಾರಿಗಳಿಗೆ ಮನವಿ ಮಾಡಿದರೂ ಪ್ರಯೋಜನವಾಗಿಲ್ಲ ಎಂದು ಗ್ರಾಮಸ್ಥರು ಆರೋಪಿಸಿದ್ದಾರೆ.

ಇದನ್ನೂ ಓದಿ – ಇವತ್ತಿನ ಎಲ್ಲಾ ಸುದ್ದಿ ಓದಲು ಇಲ್ಲಿ ಕ್ಲಿಕ್ ಮಾಡಿ

ಈ ಹಿನ್ನೆಲೆಯಲ್ಲಿ ಇವತ್ತು ದಿಢೀರ್ KSRTC ಬಸ್ಸುಗಳನ್ನು ತಡೆದು ಪ್ರತಿಭಟನೆ ನಡೆಸುತ್ತಿದ್ದಾರೆ. ವಿಚಾರ ತಿಳಿಯುತ್ತಿದ್ದ ಹಾಗೆ ಶಿವಮೊಗ್ಗ KSRTC ವಿಭಾಗದ ಅಧಿಕಾರಿಗಳು ಸ್ಥಳಕ್ಕೆ ದೌಡಾಯಿಸಿದ್ದಾರೆ.

ಇದನ್ನೂ ಓದಿ – ರಾಗಿಗುಡ್ಡದಲ್ಲಿ ಮನೆ ಮೇಲೆ ಪೊಲೀಸರ ದಾಳಿ, ಕಾರಣವೇನು?

https://chat.whatsapp.com/Doh0PyFFSiTBZY73X533cb

ADVERTISEMENT

  • ಆರೋಗ್ಯ ತುರ್ತು ಸಂದರ್ಭದಲ್ಲಿ ಹಣಕಾಸು ಹೊಂದಿಸುವುದು ಸುಲಭವೇನಲ್ಲ. ಒಂದು ವೇಳೆ INSURANCE ಇದ್ದರೆ, ನಿರಮ್ಮಳವಾಗಿರಬಹುದು ಅಲ್ಲವೆ? ಈಗಲೆ INSURANCE ಮಾಡಿಸಿ. ಒಳ್ಳೆಯ INSURANCE PLANSಗಾಗಿ ಕರೆ ಮಾಡಿ – LIC LIFE INSURANCE – ಅನಿಲ್ 9538414151, ಪ್ರಶಾಂತ್ 9972194422
  • ಸುಂದರ ಮನೆ ಕಟ್ಟಬೇಕು, ಸ್ವಂತ ಮನೆಯಲ್ಲಿ ನೆಮ್ಮದಿಯ ಬದುಕು ಸಾಗಿಸಬೇಕು ಅನ್ನವು ಆಸೆ ಯಾರಿಗಿಲ್ಲ? ಇನ್ಯಾಕೆ ತಡ? ಮನೆ ಕಟ್ಟಲು LICಯಿಂದ HOUSING LOAN ಲಭ್ಯವಿದೆ. ಇವತ್ತೇ ಸಂಪರ್ಕಿಸಿ – ಪ್ರಶಾಂತ್ 9972194422

SHIVAMOGGA LIVE WHATSAPP

ನಿಮ್ಮೂರು, ನಿಮ್ಮ ಏರಿಯಾದ ಕಾರ್ಯಕ್ರಮಗಳು, ಸಮಸ್ಯೆಗಳು ಸುದ್ದಿಯಾಗಬೇಕಾ? ನೀವೇ ವರದಿಗಾರರಾಗಿ. ವಿಡಿಯೋ, ಫೋಟೊ ಮಾಡಿ 7411700200 ಮೊಬೈಲ್ ನಂಬರ್’ಗೆ ವಾಟ್ಸಪ್ ಮಾಡಿ. ನೆನಪಿರಲಿ, ಸುದ್ದಿ ಪ್ರಕಟಣೆಗೆ ನಾವು ಹಣ ಪಡೆಯುವುದಿಲ್ಲ.

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : July 26, 2022

Leave a Comment