ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
ಶಿವಮೊಗ್ಗ ಲೈವ್.ಕಾಂ | 02 ಏಪ್ರಿಲ್ 2019
ಮುಖ್ಯಮಂತ್ರಿ ಕುಮಾರಸ್ವಾಮಿ, ಸಚಿವ ಡಿ.ಕೆ.ಶಿವಕುಮಾರ್ ಸೇರಿದಂತೆ ಪ್ರಮುಖರು ನಾಳೆ ಶಿವಮೊಗ್ಗಕ್ಕೆ ಭೇಟಿ ನೀಡಲಿದ್ದಾರೆ. ಮೈತ್ರಿ ಅಭ್ಯರ್ಥಿ ಮಧು ಬಂಗಾರಪ್ಪ ನಾಮಪತ್ರ ಸಲ್ಲಿಸುವ ಹಿನ್ನೆಲೆ, ಗಣ್ಯರು ಭೇಟಿ ನೀಡುತ್ತಿದ್ದಾರೆ ಅಂತಾ ಜೆಡಿಎಸ್ ಜಿಲ್ಲಾಧ್ಯಕ್ಷ ಆರ್.ಎಂ.ಮಂಜುನಾಥಗೌಡ ತಿಳಿಸಿದ್ದಾರೆ.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಮಂಜುನಾಥಗೌಡ, ಬೆಳಿಗ್ಗೆ 11ಗಂಟೆಗೆ ರಾಮಣ್ಣ ಶ್ರೇಷ್ಠಿ ಪಾರ್ಕ್’ನಿಂದ ಮೆರವಣಿಗೆ ಹೊರಟು ಮಧ್ಯಾಹ್ನ 2 ರಿಂದ 3 ಗಂಟೆ ಒಳಗಾಗಿ ಮಧುಬಂಗಾರಪ್ಪ ನಾಮಪತ್ರ ಸಲ್ಲಿಸಲಿದ್ದಾರೆ ಎಂದರು.
ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ, ಸಚಿವ ಡಿ.ಕೆ.ಶಿವಕುಮಾರ್, ಜೆಡಿಎಸ್ ರಾಜ್ಯಾಧ್ಯಕ್ಷ ಹೆಚ್.ವಿಶ್ವನಾಥ್, ಹಿರಿಯ ಕಾಂಗ್ರೆಸ್ ಮುಖಂಡ ಕಾಗೋಡು ತಿಮ್ಮಪ್ಪ, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹೆಚ್.ಎಸ್.ಸುಂದರೇಶ್, ಎರಡೂ ಪಕ್ಷಗಳ ಮುಖಂಡರು ಮೆರವಣಿಗೆಯಲ್ಲಿ ಭಾಗವಹಿಸಲಿದ್ದಾರೆ. ಬಹಿರಂಗ ಸಭೆ ನಡೆಸುವ ಬದಲು ಮೆರವಣಿಗೆ ಸಾಗುವ ಪ್ರಮುಖ ವೃತ್ತದಲ್ಲಿ ಮುಖಂಡರು ಮಾತನಾಡಲಿದ್ದಾರೆ ಅಂತಾ ಮಂಜುನಾಥಗೌಡ ಸ್ಪಷ್ಟಪಡಿಸಿದರು.
ಕಾಂಗ್ರೆಸ್ ಜಿಲ್ಲಾಧ್ಯಕ್ಷ ಸುಂದರೇಶ್, ಪ್ರಮುಖರಾದ ಎಂ.ಶ್ರೀಕಾಂತ್, ವಿಶ್ವನಾಥ್ ಕಾಶಿ, ಸಿ.ಎಸ್.ಚಂದ್ರಭೂಪಾಲ್, ನಾಗರಾಜ್ ಇನ್ನಿತರರು ಉಪಸ್ಥಿತರಿದ್ದರು.
ಶಿವಮೊಗ್ಗ ಲೈವ್.ಕಾಂ ವಾಟ್ಸಪ್ ನಂಬರ್ | 7411700200
ಸುದ್ದಿಗಾಗಿ ಮೊಬೈಲ್ ನಂಬರ್ | 9964634494
ಈ ಮೇಲ್ | shivamoggalive@gmail.com
LATEST NEWS
- ಆಲ್ಕೊಳ ಬಳಿ ಪೊಲೀಸರ ಕಾರ್ಯಾಚರಣೆ, ಬೈಕ್ ಸಹಿತ ಇಬ್ಬರು ಅರೆಸ್ಟ್, ಕಾರಣವೇನು?

- ಶರಾವತಿ ನಗರದಲ್ಲಿ ಕಾರು ಗಾಜು ಪೀಸ್ ಪೀಸ್ ಕೇಸ್, ಮೂವರು ಅರೆಸ್ಟ್, ಘಟನೆಗೆ ಕಾರಣ ಮನೆ

- ಶಿವಮೊಗ್ಗದಲ್ಲಿ ಏರ್ಟೆಲ್ ಮೊಬೈಲ್ ಟವರ್ನ ಉಪಕರಣ ಕಳವು, ಆಗಿದ್ದೇನು?

- ಶಿವಮೊಗ್ಗ ಕಾಂಗ್ರೆಸ್ ಕಾರ್ಯದರ್ಶಿ ಸೇರಿ ಇಬ್ಬರು 6 ವರ್ಷ ಪಕ್ಷದಿಂದ ಉಚ್ಛಾಟನೆ, ಕಾರಣವೇನು?

- ಬೇಡರ ಹೊಸಹಳ್ಳಿ ಬಳಿ ಚಲಿಸುತ್ತಿದ್ದ ಬಸ್ಸಿನ ಸೀಟಿನಿಂದಲೇ ಹೊರಗೆ ಬಿದ್ದ ಪ್ರಯಾಣಿಕ

About The Editor
ನಿತಿನ್ ಆರ್.ಕೈದೊಟ್ಲು





