ಅರಣ್ಯಾಧಿಕಾರಿಗಳಿಗೆ ಎಂಎಲ್ಎ ಕ್ಲಾಸ್, ರೈತರ ಮಕ್ಕಳಿಗೆ ಸ್ಲೇಟ್ ಹಿಡಿಸಿದ್ದಕ್ಕೆ ಆಕ್ರೋಶ

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

SHIVAMOGGA LIVE NEWS

ಸಾಗರ |  ಮಲೆನಾಡಿನಲ್ಲಿ ಕಾಡು ಉಳಿಯಲು ರೈತರು ಕಾರಣವೆ ಹೊರತು ಅರಣ್ಯ (FOREST) ಇಲಾಖೆಯಲ್ಲ. ಕಾಡು ಉಳಿಸಿದ ರೈತರ ಕೈಗೆ ಸ್ಲೇಟ್ ನೀಡಿ, ಭಯೋತ್ಪಾದಕರ ಹಾಗೆ ಫೋಟೊ ಹೊಡೆಸಿ ಮಾನಸಿಕ ಮತ್ತು ದೈಹಿಕ ಹಿಂಸೆ ನೀಡುತ್ತಿರುವುದು ಸರಿಯಲ್ಲ ಎಂದು ಸಾಗರ ಶಾಸಕ ಹರತಾಳು ಹಾಲಪ್ಪ ಆಕ್ರೋಶ ವ್ಯಕ್ತಪಡಿಸಿದರು.

Shimoga Nanjappa Hospital

ಸಾಗರದ ಸಾಮರ್ಥ್ಯ ಸೌಧದಲ್ಲಿ ನಡೆದ ತ್ರೈಮಾಸಿಕ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮಾತನಾಡಿದ ಶಾಸಕ ಹರತಾಳು ಹಾಲಪ್ಪ ಅವರು, ಅರಣ್ಯ ಇಲಾಖೆ ರೈತರ ಮಕ್ಕಳ ವಿರುದ್ಧ ಇಲ್ಲಸಲ್ಲದ ಕೇಸ್ ದಾಖಲು ಮಾಡುತ್ತಿರುವುದು ತಮ್ಮ ಗಮನಕ್ಕೆ ಬಂದಿದೆ. ಇದು ಸರಿಯಾದ ಕ್ರಮವಲ್ಲ ಎಂದು ಆಕ್ರೋಶ ವ್ಯಕ್ತoಪಡಿಸಿದರು.

ಅರಣ್ಯ ಇಲಾಖೆ ಅಡ್ಡಿಪಡಿಸಬಾರದು

ರಸ್ತೆ, ವಿದ್ಯುತ್ ಯೋಜನೆಗಳಿಗೆ ಅರಣ್ಯ (FOREST) ಇಲಾಖೆ ಅಡ್ಡಿಪಡಿಸಬಾರದು. 30 ಮರ ಕಡಿದರೆ 300 ಮರಗಳನ್ನು ನೆಡುವ ಹಾಗೆ ಸೀಡ್ ಬಾಲ್, ಬೀಜಗಳನ್ನು ಕೊಟ್ಟು ಅವರನ್ನು ಕೆಲಸಕ್ಕೆ ಹಚ್ಚಬೇಕು. ಸಂಬಂಧಪಟ್ಟ ಅರಣ್ಯ ಇಲಾಖೆ ಅಧಿಕಾರಿಗಳ ವಿರುದ್ಧ ಕ್ರಮಕ್ಕೆ ಕೆಡಿಪಿ ನಿರ್ಣಯ ತೆಗೆದುಕೊಳ್ಳಬೇಕು ಎಂದು ಶಾಸಕ ಹಾಲಪ್ಪ ಅವರು ಸೂಚಿಸಿದರು.

ರೈತರನ್ನು ದೇಶದ್ರೋಹಿಗಳ ಹಾಗೆ ಚಿತ್ರಿಸಿದ್ದು ಸರಿಯಾದ ಕ್ರಮವಲ್ಲ. ಅರಣ್ಯ ಇಲಾಖೆ ಅಧಿಕಾರಿಗಳು ಅಮಾಯಕರಿಗೆ ಹಿಂಸೆ ನೀಡುತ್ತಾರೆ. ಹೆಣ್ಣು ಮಕ್ಕಳಿಗೆ ಅವಾಚ್ಯವಾಗಿ ನಿಂದಿಸುತ್ತಾರೆ. ಮರ ಕಡಿದ ವಿಚಾರದಲ್ಲಿ ರೈತರ ವಿರುದ್ಧದ ಪ್ರಕರಣವನ್ನು ಪ್ರತ್ಯೇಕ ತನಿಖಾ ಸಂಸ್ಥೆಯಿಂದ ತನಿಖೆ ನಡೆಸಬೇಕು.ಮಂಜಯ್ಯ ಜೈನ್, ಕೆಡಿಪಿ ಸದಸ್ಯ

ಕೆಟ್ಟ ಹೆಸರು ತರಲು ಪ್ರಯತ್ನ

Haratalu-Halappaತುಮರಿ ಪ್ರಾಥಮಿಕ ಆರೋಗ್ಯ ಕೇಂದ್ರ ವ್ಯಾಪ್ತಿಯಲ್ಲಿ ಈಗ 4 ಆಂಬುಲೆನ್ಸ್’ಗಳಿವೆ. ಆದರೆ 108 ಆಂಬುಲೆನ್ಸ್ ಸೇವೆ ಇಲ್ಲ ಎಂದು ಆರೋಪಿಸಿ, ಸರ್ಕಾರಕ್ಕೆ ಕೆಟ್ಟ ಹೆಸರು ತರಲು ಪ್ರಯತ್ನ ನಡೆಯಿತು. ತಾಲೂಕು ಆರೋಗ್ಯಾಧಿಕಾರಿ ಅವರು ಸ್ಥಳೀಯರಿಗೆ ಸರಿಯಾದ ಮಾಹಿತಿ ನೀಡುವಲ್ಲಿ ವಿಫಲವಾಗಿದ್ದಾರೆ ಎಂದು ಶಾಸಕ ಹರತಾಳು ಹಾಲಪ್ಪ ಬೇಸರ ವ್ಯಕ್ತಪಡಿಸಿದರು.

ತಾಲೂಕು ಪಂಚಾಯಿತಿ ಆಡಳಿತಾಧಿಕಾರಿ ಮಲ್ಲಪ್ಪ ಕೆ. ತೊದಲಬಾವಿ, ತಾಲೂಕ ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ ಪುಷ್ಪಾ ಎಂ.ಕಮ್ಮಾರ್, ಕೆಡಿಪಿ ಸದಸ್ಯರಾದ ಗೌತಮ ಎಸ್, ಪಶುಪತಿ, ದೇವೇಂದ್ರಪ್ಪ, ಸುವರ್ಣ ಟೀಕಪ್ಪ, ಈಶ್ವರ ಡಿ.ಹೆಚ್, ವಿವಿಧ ಇಲಾಖೆ ಅಧಿಕಾರಿಗಳು ಉಪಸ್ಥಿತರಿದ್ದರು.

ಇದನ್ನೂ ಓದಿ – ಮನೆ ಮನೆಗೂ ತಿರಂಗ, ಸಾಗರದಲ್ಲಿ ರೆಡಿಯಾಗ್ತಿದೆ 50 ಸಾವಿರ ರಾಷ್ಟ್ರಧ್ವಜ

ADVERTISEMENT

  • ಆರೋಗ್ಯ ತುರ್ತು ಸಂದರ್ಭದಲ್ಲಿ ಹಣಕಾಸು ಹೊಂದಿಸುವುದು ಸುಲಭವೇನಲ್ಲ. ಒಂದು ವೇಳೆ INSURANCE ಇದ್ದರೆ, ನಿರಮ್ಮಳವಾಗಿರಬಹುದು ಅಲ್ಲವೆ? ಈಗಲೆ INSURANCE ಮಾಡಿಸಿ. ಒಳ್ಳೆಯ INSURANCE PLANSಗಾಗಿ ಕರೆ ಮಾಡಿ – LIC LIFE INSURANCE – ಅನಿಲ್ 9538414151, ಪ್ರಶಾಂತ್ 9972194422
  • ಸುಂದರ ಮನೆ ಕಟ್ಟಬೇಕು, ಸ್ವಂತ ಮನೆಯಲ್ಲಿ ನೆಮ್ಮದಿಯ ಬದುಕು ಸಾಗಿಸಬೇಕು ಅನ್ನವು ಆಸೆ ಯಾರಿಗಿಲ್ಲ? ಇನ್ಯಾಕೆ ತಡ? ಮನೆ ಕಟ್ಟಲು LICಯಿಂದ HOUSING LOAN ಲಭ್ಯವಿದೆ. ಇವತ್ತೇ ಸಂಪರ್ಕಿಸಿ – ಪ್ರಶಾಂತ್ 9972194422

SHIVAMOGGA LIVE WHATSAPP

ನಿಮ್ಮೂರು, ನಿಮ್ಮ ಏರಿಯಾದ ಕಾರ್ಯಕ್ರಮಗಳು, ಸಮಸ್ಯೆಗಳು ಸುದ್ದಿಯಾಗಬೇಕಾ? ನೀವೇ ವರದಿಗಾರರಾಗಿ. ವಿಡಿಯೋ, ಫೋಟೊ ಮಾಡಿ 7411700200 ಮೊಬೈಲ್ ನಂಬರ್’ಗೆ ವಾಟ್ಸಪ್ ಮಾಡಿ. ನೆನಪಿರಲಿ, ಸುದ್ದಿ ಪ್ರಕಟಣೆಗೆ ನಾವು ಹಣ ಪಡೆಯುವುದಿಲ್ಲ.

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ

ಈಗಲೇ ಕರೆ ಮಾಡಿ
9972194422

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : August 2, 2022

ನಾಳೆಯಿಂದ ಎಸ್ಸೆಸ್ಸೆಲ್ಸಿ ಪರೀಕ್ಷೆ, ಶಿವಮೊಗ್ಗದಲ್ಲಿ ಎಷ್ಟು ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ?

ನಾಳೆಯಿಂದ ಎಸ್ಸೆಸ್ಸೆಲ್ಸಿ ಪರೀಕ್ಷೆ, ಶಿವಮೊಗ್ಗದಲ್ಲಿ ಎಷ್ಟು ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ?

ಬ್ಯಾಂಕ್‌ ಉದ್ಯೋಗಿ, ವಿದ್ಯಾರ್ಥಿಗಳ ಮೇಲೆ ಹೆಜ್ಜೇನು ದಾಳಿ, ಗಾಯಾಳುಗಳು ಆಸ್ಪತ್ರೆಗೆ

ಬ್ಯಾಂಕ್‌ ಉದ್ಯೋಗಿ, ವಿದ್ಯಾರ್ಥಿಗಳ ಮೇಲೆ ಹೆಜ್ಜೇನು ದಾಳಿ, ಗಾಯಾಳುಗಳು ಆಸ್ಪತ್ರೆಗೆ

ಶಿವಮೊಗ್ಗದಲ್ಲಿ ಕೆಲಸ ಖಾಲಿ ಇದೆ, ತಿಂಗಳಿಗೆ ₹20,000 ದಿಂದ ₹50,000 ದವರೆಗೆ ಸಂಬಳ

ಶಿವಮೊಗ್ಗದಲ್ಲಿ ಕೆಲಸ ಖಾಲಿ ಇದೆ, ತಿಂಗಳಿಗೆ ₹20,000 ದಿಂದ ₹50,000 ದವರೆಗೆ ಸಂಬಳ

ತಂದೆ, ಮಗನಿಗೆ ಜೀವಾವಧಿ ಶಿಕ್ಷೆ, ದಂಡ ವಿಧಿಸಿದ ಶಿವಮೊಗ್ಗ ಕೋರ್ಟ್‌, ಯಾಕೆ?

ತಂದೆ, ಮಗನಿಗೆ ಜೀವಾವಧಿ ಶಿಕ್ಷೆ, ದಂಡ ವಿಧಿಸಿದ ಶಿವಮೊಗ್ಗ ಕೋರ್ಟ್‌, ಯಾಕೆ?

ಇವತ್ತು ಯಾವ್ಯಾವ ಅಡಿಕೆಗೆ ಎಷ್ಟಿದೆ ರೇಟ್? – 17 ಮಾರ್ಚ್‌ 2026 – ಅಡಿಕೆ ಧಾರಣೆ

ಇವತ್ತು ಯಾವ್ಯಾವ ಅಡಿಕೆಗೆ ಎಷ್ಟಿದೆ ರೇಟ್? – 17 ಮಾರ್ಚ್‌ 2026 – ಅಡಿಕೆ ಧಾರಣೆ

ಶಿವಮೊಗ್ಗ ಡಿ.ಸಿ ಎದುರು ಮೈದಾನಕ್ಕೆ ಬ್ಯಾರಿಕೇಡ್‌, ಹಿಂದೂ ಸಂಘಟನೆಗಳು ಗರಂ, ಕಾರಣವೇನು?

ಶಿವಮೊಗ್ಗ ಡಿ.ಸಿ ಎದುರು ಮೈದಾನಕ್ಕೆ ಬ್ಯಾರಿಕೇಡ್‌, ಹಿಂದೂ ಸಂಘಟನೆಗಳು ಗರಂ, ಕಾರಣವೇನು?

ಬೆಳಗ್ಗೆ ಲೇಔಟ್‌ಗೆ ಬಂದ ಲೆಕ್ಚರರ್‌ಗೆ ಕಾದಿತ್ತು ಆಘಾತ, ರಾತ್ರಿ 11.15ರ CCTV ದೃಶ್ಯ ಕಂಡು ಶಾಕ್‌

ಬೆಳಗ್ಗೆ ಲೇಔಟ್‌ಗೆ ಬಂದ ಲೆಕ್ಚರರ್‌ಗೆ ಕಾದಿತ್ತು ಆಘಾತ, ರಾತ್ರಿ 11.15ರ CCTV ದೃಶ್ಯ ಕಂಡು ಶಾಕ್‌

ಶಿವಮೊಗ್ಗ TO ಬೆಂಗಳೂರು ಇನ್ನಷ್ಟು ವೇಗ, ದ್ವಿಪಥ ಯೋಜನೆಗೆ ಒತ್ತಾಯ

ಶಿವಮೊಗ್ಗ TO ಬೆಂಗಳೂರು ಇನ್ನಷ್ಟು ವೇಗ, ದ್ವಿಪಥ ಯೋಜನೆಗೆ ಒತ್ತಾಯ

ಜಮೀನಿಗೆ ನೀರು ಹರಿಸಲು ಹೋಗಿದ್ದ ವ್ಯಕ್ತಿಗೆ ಕಾದಿತ್ತು ಸಾವು, ಆಗಿದ್ದೇನು?

ಜಮೀನಿಗೆ ನೀರು ಹರಿಸಲು ಹೋಗಿದ್ದ ವ್ಯಕ್ತಿಗೆ ಕಾದಿತ್ತು ಸಾವು, ಆಗಿದ್ದೇನು?

ನಾಳೆಯಿಂದ SSLC ಪರೀಕ್ಷೆ, ಹೇಗಿದೆ ಸಿದ್ಧತೆ? ಯಾವ್ಯಾವ ತಾಲೂಕಿನಲ್ಲಿ ಎಷ್ಟು ಪರೀಕ್ಷಾ ಕೇಂದ್ರಗಳಿವೆ?

ನಾಳೆಯಿಂದ SSLC ಪರೀಕ್ಷೆ, ಹೇಗಿದೆ ಸಿದ್ಧತೆ? ಯಾವ್ಯಾವ ತಾಲೂಕಿನಲ್ಲಿ ಎಷ್ಟು ಪರೀಕ್ಷಾ ಕೇಂದ್ರಗಳಿವೆ?

Leave a Comment