SHIVAMOGGA LIVE NEWS
ಶಿವಮೊಗ್ಗ | ಶೋ ರೂಂನಲ್ಲಿ ಪ್ರದರ್ಶನಕ್ಕೆ ಇಟ್ಟಿದ್ದ ಎರಡು ಐಫೋನ್ (iphone)ಮೊಬೈಲ್’ಗಳನ್ನು ಕಳವು ಮಾಡಲಾಗಿದೆ. ಕಳ್ಳತನ ಮಾಡುವ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ.
ಶಿವಮೊಗ್ಗ ಕೆ.ಎಸ್.ಆರ್.ಟಿ.ಸಿ ಬಸ್ ನಿಲ್ದಾಣದಲ್ಲಿರುವ ರಿಲಾಯನ್ಸ್ ಡಿಜಿಟಲ್ ಶೋ ರೂಂನಲ್ಲಿ ಘಟನೆ ಸಂಭವಿಸಿದೆ.
ಈಗ ಸುಲಭಕ್ಕೆ ಸಿಗಲಿದೆ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ 9972194422
ಮೊಬೈಲ್ ಕೌಂಟರ್’ನಲ್ಲಿರುವ ಮೊಬೈಲ್ ಫೋನ್’ಗಳನ್ನು ಸಂಜೆ ವೇಳೆಗೆ ಸಿಬ್ಬಂದಿ ಪರಿಶೀಲನೆ ನಡೆಸುತ್ತಿದ್ದರು. ಈ ವೇಳೆ ಎರಡು ಮೊಬೈಲ್ ಫೋನ್’ಗಳು ನಾಪತ್ತೆಯಾಗಿದ್ದವು. ಎಲ್ಲೆಡೆ ಹುಡುಕಾಡಿದ ಬಳಿಕ ಶೋ ರೂಂನಲ್ಲಿರುವ ಸಿಸಿಟಿವಿ ಕ್ಯಾಮರಾ ಪರಿಶೀಲನೆ ನಡೆಸಲಾಯಿತು. ಈ ವೇಳೆ ಎರಡು ಮೊಬೈಲ್ ಕಳ್ಳತನವಾಗಿರುವುದು ಗೊತ್ತಾಗಿದೆ. ಬೆಳಗ್ಗೆ 10.45ರ ಹೊರತ್ತಿಗೆ ಶೋ ರೂಂಗೆ ಬಂದಿದ್ದ ವ್ಯಕ್ತಿಯೊಬ್ಬ ಮೊಬೈಲ್ ಫೋನ್ ಪರಿಶೀಲನೆ ನಡೆಸುತ್ತಿದ್ದ. ಕೌಂಟರ್’ನಲ್ಲಿದ್ದ ಆಪಲ್ ಐ-ಫೋನ್ 12 (iphone) ಮಾಡೆಲ್’ನ ಎರಡು ಮೊಬೈಲ್’ಗಳನ್ನು ಕದ್ದು, ತಾನು ತಂದಿದ್ದ ಬ್ಯಾಗಿನಲ್ಲಿ ಹಾಕಿಕೊಂಡು ಹೋಗಿದ್ದಾನೆ. ಕಳ್ಳತನವಾದ ಮೊಬೈಲ್ ಫೋನ್’ಗಳ ಬೆಲೆ ಅಂದಾಜು 1.40 ಲಕ್ಷ ರೂ. ಎಂದು ದೂರಿನಲ್ಲಿ ತಿಳಿಸಲಾಗಿದೆ. ರಿಲಯನ್ಸ್ ಡಿಜಿಟಲ್ ಶೋ ರೂಂ ಸಿಬ್ಬಂದಿ ದೂರು ನೀಡಿದ್ದಾರೆ. ದೊಡ್ಡಪೇಟೆ ಠಾಣೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಇದನ್ನೂ ಓದಿ – ಬಾಟಲಿಯಿಂದ ಹೊಡೆದು, ಕಲ್ಲು ಎತ್ತಿ ಹಾಕಿ ಕೊಲೆ, ಕಾರಣ ಬಾಯಿಬಿಟ್ಟ ಆರೋಪಿಗಳು ADVERTISEMENT SHIVAMOGGA LIVE WHATSAPP ನಿಮ್ಮೂರು, ನಿಮ್ಮ ಏರಿಯಾದ ಕಾರ್ಯಕ್ರಮಗಳು, ಸಮಸ್ಯೆಗಳು ಸುದ್ದಿಯಾಗಬೇಕಾ? ನೀವೇ ವರದಿಗಾರರಾಗಿ. ವಿಡಿಯೋ, ಫೋಟೊ ಮಾಡಿ 7411700200 ಮೊಬೈಲ್ ನಂಬರ್’ಗೆ ವಾಟ್ಸಪ್ ಮಾಡಿ. ನೆನಪಿರಲಿ, ಸುದ್ದಿ ಪ್ರಕಟಣೆಗೆ ನಾವು ಹಣ ಪಡೆಯುವುದಿಲ್ಲ.ಆಪಲ್ ಐಫೋನ್-12 ಕಳವು