ಲಿಂಗನಮಕ್ಕಿ ಜಲಾಶಯದಿಂದ ಹೊರಬಿತ್ತು ಮೊದಲ ಅಲರ್ಟ್

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

SHIVAMOGGA LIVE NEWS

ಸಾಗರ | ಭಾರಿ ಮಳೆಯಿಂದಾಗಿ ಲಿಂಗನಮಕ್ಕಿ ಜಲಾಶಯದ ಒಳ ಹರಿವು ಹೆಚ್ಚಳವಾಗಿದೆ. ಡ್ಯಾಂನಲ್ಲಿ ನೀರಿನ ಮಟ್ಟವು ಏರಿಕೆಯಾಗಿದೆ. ಈ ನಡುವೆ ಕರ್ನಾಟಕ ವಿದ್ಯುತ್ ನಿಗಮದ ವತಿಯಿಂದ ಜನರಿಗೆ ಮುನ್ನೆಚ್ಚರಿಕೆ ನೀಡಲಾಗಿದೆ.

Shimoga Nanjappa Hospital

ಲಿಂಗನಮಕ್ಕಿ ಜಲಾಶಯದ ಹಿನ್ನೀರು ಭಾಗದಲ್ಲಿ ಭಾರಿ ಮಳೆಯಾಗುತ್ತಿದೆ. ಹಾಗಾಗಿ ಜಲಾಶಯಕ್ಕೆ ಇವತ್ತು 30,397 ಕ್ಯೂಸೆಕ್ ನೀರು ಹರಿದು ಬರುತ್ತಿದೆ. ಕಳೆದ ತಿಂಗಳು ಭಾರಿ ಮಳೆಯಾದ ಹಿನ್ನೆಲೆ ಜಲಾಶಯಕ್ಕೆ ಹೆಚ್ಚಿನ ಪ್ರಮಾಣದ ಒಳ ಹರಿವು ದಾಖಲಾಗಿತ್ತು. ಈಗ ಜಲಾನಯನ ಪ್ರದೇಶದಲ್ಲಿ ಪುನಃ ಮಳೆ ಜೋರಾಗಿದ್ದು, ಒಳ ಹರಿವು ಏರಿಕೆಯಾಗಿದೆ.

17.65 ಅಡಿಯಷ್ಟೇ ಬಾಕಿ

ಲಿಂಗಾನಮಕ್ಕಿ ಜಲಾಶಯದ ನೀರಿನ ಸಂಗ್ರಹ ಮಟ್ಟ 1819 ಅಡಿ ಇದೆ. ಜಲಾಶಯ ಭರ್ತಿಗೆ 17.65 ಅಡಿಯಷ್ಟು ಮಾತ್ರ ಬಾಕಿ ಇದೆ. ಪ್ರಸ್ತುತ ಜಲಾಶಯದಲ್ಲಿ 1801.35 ಅಡಿಯಷ್ಟು ನೀರು ಸಂಗ್ರಹವಾಗಿದೆ. ಮಳೆ ಪ್ರಮಾಣ ಹೆಚ್ಚಳವಾದರೆ ನೀರಿನ ಮಟ್ಟ ಇನ್ನಷ್ಟು ಏರಿಕೆಯಾಗಲಿದೆ.

ಜನರಿಗೆ ಮೊದಲ ಮುನ್ನೆಚ್ಚರಿಕೆ

ಜಲಾಶಯದಲ್ಲಿ ನೀರಿನ ಮಟ್ಟ ಏರಿಕೆಯಾದ ಹಿನ್ನೆಲೆ, ಸಾರ್ವಜನಿಕರಿಗೆ ಮೊದಲ ಮುನ್ನೆಚ್ಚರಿಕೆ ಪ್ರಕಟಿಸಲಾಗಿದೆ.

ಜಲಾಶಯವು ಶೀಘ್ರದಲ್ಲಿ ಗರಿಷ್ಠ ಮಟ್ಟವನ್ನು ತಲುಪುವ ಸಾದ್ಯತೆ ಇದೆ. ಆದ್ದರಿಂದ ಅಣೆಕಟ್ಟೆಯ ಸುರಕ್ಷತೆಯ ದೃಷ್ಟಿಯಿಂದ  ಹೆಚ್ಚುವರಿ ನೀರನ್ನು ಯಾವುದೇ ಸಮಯದಲ್ಲಿ ಜಲಾಶಯದಿಂದ ಹೊರಗೆ ಬಿಡುವಲಾಗುತ್ತದೆ. ಅಣೆಕಟ್ಟೆಯ ಕೆಳದಂಡೆಯಲ್ಲಿ ಮತ್ತು ನದಿ ಪಾತ್ರದಲ್ಲಿ ವಾಸಿಸುತ್ತಿರುವ ಜನರು ಸುರಕ್ಷಿತ ಪ್ರದೇಶಕ್ಕೆ ಸ್ಥಳಾಂತರಗೊಳ್ಳಬೇಕು.ಕಾರ್ಯಪಾಲಕ ಇಂಜಿನಿಯರ್, ಕೆಪಿಸಿ

ಇದನ್ನೂ ಓದಿ – ಭದ್ರಾವತಿಯಲ್ಲಿ ರೆಡ್ ಅಲರ್ಟ್, ತುರ್ತು ಸಂದರ್ಭ ಎದುರಿಸಲು ಸಿದ್ಧವಿರುವಂತೆ ಸೂಚನೆ

ADVERTISEMENT

  • ಆರೋಗ್ಯ ತುರ್ತು ಸಂದರ್ಭದಲ್ಲಿ ಹಣಕಾಸು ಹೊಂದಿಸುವುದು ಸುಲಭವೇನಲ್ಲ. ಒಂದು ವೇಳೆ INSURANCE ಇದ್ದರೆ, ನಿರಮ್ಮಳವಾಗಿರಬಹುದು ಅಲ್ಲವೆ? ಈಗಲೆ INSURANCE ಮಾಡಿಸಿ. ಒಳ್ಳೆಯ INSURANCE PLANSಗಾಗಿ ಕರೆ ಮಾಡಿ – LIC LIFE INSURANCE – ಅನಿಲ್ 9538414151, ಪ್ರಶಾಂತ್ 9972194422
  • ಸುಂದರ ಮನೆ ಕಟ್ಟಬೇಕು, ಸ್ವಂತ ಮನೆಯಲ್ಲಿ ನೆಮ್ಮದಿಯ ಬದುಕು ಸಾಗಿಸಬೇಕು ಅನ್ನವು ಆಸೆ ಯಾರಿಗಿಲ್ಲ? ಇನ್ಯಾಕೆ ತಡ? ಮನೆ ಕಟ್ಟಲು LICಯಿಂದ HOUSING LOAN ಲಭ್ಯವಿದೆ. ಇವತ್ತೇ ಸಂಪರ್ಕಿಸಿ – ಪ್ರಶಾಂತ್ 9972194422

SHIVAMOGGA LIVE WHATSAPP

ನಿಮ್ಮೂರು, ನಿಮ್ಮ ಏರಿಯಾದ ಕಾರ್ಯಕ್ರಮಗಳು, ಸಮಸ್ಯೆಗಳು ಸುದ್ದಿಯಾಗಬೇಕಾ? ನೀವೇ ವರದಿಗಾರರಾಗಿ. ವಿಡಿಯೋ, ಫೋಟೊ ಮಾಡಿ 7411700200 ಮೊಬೈಲ್ ನಂಬರ್’ಗೆ ವಾಟ್ಸಪ್ ಮಾಡಿ. ನೆನಪಿರಲಿ, ಸುದ್ದಿ ಪ್ರಕಟಣೆಗೆ ನಾವು ಹಣ ಪಡೆಯುವುದಿಲ್ಲ.

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment