ಗಾಜನೂರಿನ ತುಂಗಾ ಜಲಾಶಯದಿಂದಲೂ ಹೆಚ್ಚಿನ ಪ್ರಮಾಣದ ನೀರು ಹೊರಕ್ಕೆ

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

 SHIVAMOGGA LIVE NEWS 

ಶಿವಮೊಗ್ಗ | ತೀರ್ಥಹಳ್ಳಿ ಸೇರಿದಂತೆ ಜಲಾನಯನ ಪ್ರದೇಶದಲ್ಲಿ ಭಾರಿ ಮಳೆ ಆಗುತ್ತಿರುವುದರಿಂದ ತುಂಗಾ ಜಲಾಶಯದ (tunga dam) ಒಳ ಹರಿವು ಏರಿಕೆಯಾಗಿದೆ. ಹಾಗಾಗಿ ಹೆಚ್ಚುವರಿ ಪ್ರಮಾಣದ ನೀರನ್ನು ಹೊಳೆಗೆ ಹರಿಸಲಾಗುತ್ತಿದೆ.

Shimoga Nanjappa Hospital

ಗಾಜನೂರಿನ ತುಂಗಾ ಜಲಾಶಯಕ್ಕೆ ಪ್ರಸ್ತುತ 46,600 ಕ್ಯೂಸೆಕ್ ಒಳ ಹರಿವು ಇದೆ. ಜಲಾಶಯ ಭರ್ತಿ ಆಗಿರುವುದರಿಂದ ಬಂದಷ್ಟು ನೀರನ್ನು ಹೊಳೆಗೆ ಹರಿಸಲಾಗುತ್ತಿದೆ. ಇದರಿಂದ ತುಂಗಾ ನದಿಯಲ್ಲಿ ನೀರಿನ ಮಟ್ಟ ಹೆಚ್ಚಳವಾಗಿದೆ.

ಸಂಜೆ ವೇಳೆಗೆ ಹೆಚ್ಚಿನ ನೀರು

ತುಂಗಾ ಜಲಾಶಯಕ್ಕೆ 39,250 ಕ್ಯೂಸೆಕ್ ಒಳ ಹರಿವು ಇತ್ತು. ಅಷ್ಟೇ ಪ್ರಮಾಣದ ನೀರನ್ನು ಹೊಳೆಗೆ ಬಿಡಲಾಗುತ್ತಿತ್ತು. ಆದರೆ ಜಲಾನಯನ (tunga dam) ಪ್ರದೇಶದಲ್ಲಿ ಇಡೀ ದಿನ ಮಳೆ ಸುರಿದಿದ್ದರಿಂದ ಒಳ ಹರಿವು ಪ್ರಮಾಣದಲ್ಲಿ ಏರಿಕೆಯಾಗಿದೆ. 21 ಗೇಟುಗಳ ಮೂಲಕ ನೀರನ್ನು ಹೊಳೆಗೆ ಹರಿಸಲಾಗಿದೆ.

 ಇದನ್ನೂ ಓದಿ –  ಶಿವಮೊಗ್ಗದಲ್ಲಿ ಮಳೆಯೋ ಮಳೆ, ಹಳದಿ ಅಲರ್ಟ್ ಘೋಷಣೆ

ಮತ್ತೆ ಮುಳುಗಿದ ಮಂಟಪ

ಇತ್ತ ಭಾರಿ ಪ್ರಮಾಣದ ನೀರನ್ನು ಹೊಳೆಗೆ ಹರಿಸುತ್ತಿರುವುದರಿಂದ ಶಿವಮೊಗ್ಗದ ಕೋರ್ಪಲಯ್ಯ ಛತ್ರ ಮಂಟಪ ಮುಳುಗಡೆಯಾಗಿದೆ. ಬೆಳಗ್ಗೆ ಮಂಟಪದ ಮೇಲ್ಭಾಗದವರೆಗೂ ನೀರು ಹರಿಯುತ್ತಿತ್ತು. ಸಂಜೆ ವೇಳೆಗೆ ಜಲಾಶಯದಿಂದ ಹೆಚ್ಚಿನ ನೀರನ್ನು ಹೊಳೆಗೆ ಹರಿಸಿದ್ದರಿಂದ ಮಂಟಪ ಮುಳುಗಡೆಯಾಗಿದೆ.

 ಇದನ್ನೂ ಓದಿ –  ಗಂಟೆ ಗಂಟೆಗೂ ಹೆಚ್ಚಾಗುತ್ತಿದೆ ಭದ್ರಾ ಡ್ಯಾಂ ಒಳ ಹರಿವು, ಭದ್ರಾವತಿಯಲ್ಲಿ ಆತಂಕ

ADVERTISEMENT

  • ಆರೋಗ್ಯ ತುರ್ತು ಸಂದರ್ಭದಲ್ಲಿ ಹಣಕಾಸು ಹೊಂದಿಸುವುದು ಸುಲಭವೇನಲ್ಲ. ಒಂದು ವೇಳೆ INSURANCE ಇದ್ದರೆ, ನಿರಮ್ಮಳವಾಗಿರಬಹುದು ಅಲ್ಲವೆ? ಈಗಲೆ INSURANCE ಮಾಡಿಸಿ. ಒಳ್ಳೆಯ INSURANCE PLANSಗಾಗಿ ಕರೆ ಮಾಡಿ – LIC LIFE INSURANCE – ಅನಿಲ್ 9538414151, ಪ್ರಶಾಂತ್ 9972194422
  • ಸುಂದರ ಮನೆ ಕಟ್ಟಬೇಕು, ಸ್ವಂತ ಮನೆಯಲ್ಲಿ ನೆಮ್ಮದಿಯ ಬದುಕು ಸಾಗಿಸಬೇಕು ಅನ್ನವು ಆಸೆ ಯಾರಿಗಿಲ್ಲ? ಇನ್ಯಾಕೆ ತಡ? ಮನೆ ಕಟ್ಟಲು LICಯಿಂದ HOUSING LOAN ಲಭ್ಯವಿದೆ. ಇವತ್ತೇ ಸಂಪರ್ಕಿಸಿ – ಪ್ರಶಾಂತ್ 9972194422

SHIVAMOGGA LIVE WHATSAPP

ನಿಮ್ಮೂರು, ನಿಮ್ಮ ಏರಿಯಾದ ಕಾರ್ಯಕ್ರಮಗಳು, ಸಮಸ್ಯೆಗಳು ಸುದ್ದಿಯಾಗಬೇಕಾ? ನೀವೇ ವರದಿಗಾರರಾಗಿ. ವಿಡಿಯೋ, ಫೋಟೊ ಮಾಡಿ 7411700200 ಮೊಬೈಲ್ ನಂಬರ್’ಗೆ ವಾಟ್ಸಪ್ ಮಾಡಿ. ನೆನಪಿರಲಿ, ಸುದ್ದಿ ಪ್ರಕಟಣೆಗೆ ನಾವು ಹಣ ಪಡೆಯುವುದಿಲ್ಲ.

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment