ಶಿವಮೊಗ್ಗ ಲೈವ್.ಕಾಂ
ಶಿವಮೊಗ್ಗ ಜಿಲ್ಲೆಯ ನಂಬರ್ 1 ಸುದ್ದಿ ಮಾಧ್ಯಮ
SHIVAMOGGA LIVE NEWS
ಶಿವಮೊಗ್ಗ| ನಗರದಲ್ಲಿ ವ್ಯಕ್ತಿಯೊಬ್ಬರಿಗೆ ಚಾಕು ಇರಿಯಲಾಗಿದೆ. ಗಾಯಗೊಂಡಿರುವ ಆತನನ್ನು ಕೂಡಲೆ ಮೆಗ್ಗಾನ್ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.
ಪ್ರೇಮ್ ಸಿಂಗ್ ಎಂಬಾತನಿಗೆ ಚಾಕು ಇರಿಯಲಾಗಿದೆ. ನಗರ ಉಪ್ಪಾರಕೇರಿಯಲ್ಲಿ ಘಟನೆ ಸಂಭವಿಸಿದೆ. ಗಾಯಾಳುವನ್ನು ಕೂಡಲೆ ಆಸ್ಪತ್ರೆಗೆ ದಾಖಲಿಸಲಾಗಿದೆ.
ವಿಚಾರ ತಿಳಯುತ್ತಿದ್ದ ಹಾಗೆ ಹಿಂದೂ ಸಂಘಟನೆ ಕಾರ್ಯಕರ್ತರು ಆಸ್ಪತ್ರೆಗೆ ಭೇಟಿ ನೀಡಿದರು.
ಈ ವೇಳೆ ಮಾತನಾಡಿದ ಮಹಾನಗರ ಪಾಲಿಕೆ ಸದಸ್ಯ ಚನ್ನಬಸಪ್ಪ, ಎ.ಎ ಸರ್ಕಲ್‌ನಲ್ಲಿ ಗಲಾಟೆಯಾದ ಹಿನ್ನೆಲೆ ಅಂಗಡಿಗಳನ್ನು ಪೊಲೀಸರು ಬಂದ್ ಮಾಡಿಸಿದರು. ಎಂಕೆಕೆ ರಸ್ತೆಯ ಸಿಲ್ಕ್ ಅಂಗಡಿಯಲ್ಲಿ ಪ್ರೇಮ್ ಸಿಂಗ್ ಕೆಲಸ ಮಾಡುತ್ತಿದ್ದ. ಅಂಗಡಿ ಬಾಗಿಲು ಹಾಕಿಸಿದ್ದರಿಂದ ಸ್ನೇಹಿತನ ಜೊತೆಗೆ ಒಟ್ಟಿಗೆ ಮನೆ ಕಡೆಗೆ ಹೋಗುತ್ತಿದ್ದಾಗ ಮಾರಣಾಂತಿಕ ಹಲ್ಲೆ ನಡೆಸಿದ್ದಾರೆ. ಇದು ಉದ್ದೇಶಪೂರ್ವಕವಾಗಿ ನಡೆದ ದಾಳಿ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಈಗ ಸುಲಭಕ್ಕೆ ಸಿಗಲಿದೆ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ 9972194422