‘ಶಿವಮೊಗ್ಗದಲ್ಲಿ ಪೊಲೀಸರಿಗೆ ಫ್ರೀ ಹ್ಯಾಂಡ್, ಚಾಕು ಇರಿದವರ ಹಿನ್ನೆಲೆ ಪರಿಶೀಲನೆ’

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

 SHIVAMOGGA LIVE NEWS 

ಶಿವಮೊಗ್ಗ | ಸಾವರ್ಕರ್ ಫೋಟೊ ವಿವಾದದ ಬಳಿಕ ಶಿವಮೊಗ್ಗ ನಗರದಲ್ಲಿ ಶಾಂತಿಯುತ ವಾತಾವರಣವಿದೆ. ಚಾಕು ಇರಿತ ಪ್ರಕರಣ ಸಂಬಂಧ ನಾಲ್ವರು ಆರೋಪಿಗಳನ್ನು ಬಂಧಿಸಲಾಗಿದೆ. ಹಿರಿಯ ಪೊಲೀಸ್ ಅಧಿಕಾರಿಗಳು ಇಲ್ಲಿಯೆ ಇದ್ದು ಪರಿಸ್ಥಿತಿ ನಿಯಂತ್ರಿಸುತ್ತಿದ್ದಾರೆ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ತಿಳಿಸಿದರು.

Shimoga Nanjappa Hospital

ಶಿವಮೊಗ್ಗದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಗೃಹ ಸಚಿವ ಆರಗ ಜ್ಞಾನೇಂದ್ರ ಅವರು, ಶಿವಮೊಗ್ಗ ಮತ್ತು ಭದ್ರಾವತಿಯಲ್ಲಿ ಸೆಕ್ಷನ್ 144ರ ಅನ್ವಯ ನಿಷೇಧಾಜ್ಞೆ ಜಾರಿಯಲ್ಲಿದೆ. ಎಡಿಜಿಪಿ ಅಲೋಕ್ ಕುಮಾರ್, ದಾವಣಗೆರೆ ವಲಯದ ಐಜಿಪಿ ಸೇರಿದಂತೆ ಹಿರಿಯ ಅಧಿಕಾರಿಗಳು ಶಿವಮೊಗ್ಗದಲ್ಲಿ ಇದ್ದು ಪರಿಸ್ಥಿತಿ ನಿಯಂತ್ರಿಸುತ್ತಿದ್ದಾರೆ ಎಂದು ತಿಳಿಸಿದರು.

ಆರ್.ಎ.ಎಫ್, ಕೆ.ಎಸ್.ಆರ್.ಪಿ ಪ್ಲಾಟೂನ್’ಗಳನ್ನು ಶಿವಮೊಗ್ಗಕ್ಕೆ ಕರೆಯಿಸಲಾಗಿದೆ. ಸೂಕ್ತ ಬಂದೋಬಸ್ತ್ ವ್ಯವಸ್ಥೆ ಮಾಡಲಾಗಿದೆ. ಪೊಲೀಸರಿಗೆ ಫ್ರೀ ಹ್ಯಾಂಡ್ ನೀಡಿದ್ದೇವೆ. ಯಾರೆ ತಪ್ಪು ಮಾಡಿದರು ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳುವಂತೆ ಸೂಚಿಸಲಾಗಿದೆ ಎಂದು ತಿಳಿಸಿದರು.

ಆರೋಪಿಗಳ ಹಿನ್ನೆಲೆ ಪರಿಶೀಲನೆ

ಶಿವಮೊಗ್ಗದಲ್ಲಿ ಚಾಕು ಇರಿತ ಪ್ರಕರಣದಲ್ಲಿ ನಾಲ್ವರು ಆರೋಪಿಗಳನ್ನು ಬಂಧಿಸಲಾಗಿದೆ. ಓರ್ವ ಆರೋಪಿಯ ಬಂಧನದ ವೇಳೆ ಪೊಲೀಸರ ಮೇಲೆ ಹಲ್ಲೆಗೆ ಮುಂದಾಗಿದ್ದಾನೆ. ಆತ್ಮರಕ್ಷಣೆಗಾಗಿ ಪೊಲೀಸರು ಆತನ ಮೇಲೆ ಫೈರಿಂಗ್ ಮಾಡಿದ್ದಾರೆ. ಬಂಧಿತರ ಹಿನ್ನೆಲೆಯನ್ನು ಪರಿಶೀಲಿಸಲಾಗುತ್ತಿದೆ. ಯಾವ ಸಂಘಟನೆಗೆ ಸೇರಿದವರು. ಇವರ ಹಿಂದೆ ಯಾರೆಲ್ಲ ಇದ್ದಾರೆ ಎಂದು ತನಿಖೆ ನಡೆಸಲಾಗುತ್ತಿದೆ ಎಂದು ಆರಗ ಜ್ಞಾನೇಂದ್ರ ತಿಳಿಸಿದರು.

ಚಾಕು ಇರಿತಕ್ಕೆ ಒಳಗಾದ ಪ್ರೇಮ್ ಸಿಂಗ್ ಗೆ ಮೆಗ್ಗಾನ್ ಆಸ್ಪತ್ರೆಯಲ್ಲಿ ತಕ್ಷಣಕ್ಕೆ ಚಿಕಿತ್ಸೆ ಲಭಿಸಿದೆ. ಆದರೆ ಈಗಲೂ ಆತನ ಸ್ಥಿತಿ ಗಂಭೀರವಾಗಿದೆ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ತಿಳಿಸಿದರು.

ಇದನ್ನೂ ಓದಿ – ‘ಮುಸ್ಲಿಂ ಏರಿಯಾಗಳು ಈ ದೇಶದ ಭಾಗವಲ್ಲವಾ? ಸಾವರ್ಕರ್ ಫೋಟೊ ಹಾಕೋಕೆ ನಿಷೇಧವಿದ್ಯಾ?’

ADVERTISEMENT

  • ಆರೋಗ್ಯ ತುರ್ತು ಸಂದರ್ಭದಲ್ಲಿ ಹಣಕಾಸು ಹೊಂದಿಸುವುದು ಸುಲಭವೇನಲ್ಲ. ಒಂದು ವೇಳೆ INSURANCE ಇದ್ದರೆ, ನಿರಮ್ಮಳವಾಗಿರಬಹುದು ಅಲ್ಲವೆ? ಈಗಲೆ INSURANCE ಮಾಡಿಸಿ. ಒಳ್ಳೆಯ INSURANCE PLANSಗಾಗಿ ಕರೆ ಮಾಡಿ – LIC LIFE INSURANCE – ಅನಿಲ್ 9538414151, ಪ್ರಶಾಂತ್ 9972194422
  • ಸುಂದರ ಮನೆ ಕಟ್ಟಬೇಕು, ಸ್ವಂತ ಮನೆಯಲ್ಲಿ ನೆಮ್ಮದಿಯ ಬದುಕು ಸಾಗಿಸಬೇಕು ಅನ್ನವು ಆಸೆ ಯಾರಿಗಿಲ್ಲ? ಇನ್ಯಾಕೆ ತಡ? ಮನೆ ಕಟ್ಟಲು LICಯಿಂದ HOUSING LOAN ಲಭ್ಯವಿದೆ. ಇವತ್ತೇ ಸಂಪರ್ಕಿಸಿ – ಪ್ರಶಾಂತ್ 9972194422

SHIVAMOGGA LIVE WHATSAPP

ನಿಮ್ಮೂರು, ನಿಮ್ಮ ಏರಿಯಾದ ಕಾರ್ಯಕ್ರಮಗಳು, ಸಮಸ್ಯೆಗಳು ಸುದ್ದಿಯಾಗಬೇಕಾ? ನೀವೇ ವರದಿಗಾರರಾಗಿ. ವಿಡಿಯೋ, ಫೋಟೊ ಮಾಡಿ 7411700200 ಮೊಬೈಲ್ ನಂಬರ್’ಗೆ ವಾಟ್ಸಪ್ ಮಾಡಿ. ನೆನಪಿರಲಿ, ಸುದ್ದಿ ಪ್ರಕಟಣೆಗೆ ನಾವು ಹಣ ಪಡೆಯುವುದಿಲ್ಲ.

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment