23 ವರ್ಷದ ಅಪರಾಧಿಗೆ 20 ವರ್ಷ ಜೈಲು ಶಿಕ್ಷೆ, 60 ಸಾವಿರ ದಂಡ

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

 SHIVAMOGGA LIVE NEWS 

ಶಿವಮೊಗ್ಗ | ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ (POCSO ACT) ಎಸಗಿದ ಆರೋಪ ಸಾಬೀತಾದ ಹಿನ್ನೆಲೆ ಅಪರಾಧಿಗೆ 20 ವರ್ಷ ಜೈಲು ಶಿಕ್ಷೆ (IMPRISONMENT) ಮತ್ತು ದಂಡ ವಿಧಿಸಲಾಗಿದೆ.

Shimoga Nanjappa Hospital

ಮಕ್ಸೂದ್ ಎಂ.ಹೆಚ್ (23) ಎಂಬಾತ ಶಿಕ್ಷೆಗೆ ಒಳಗಾದವನು. ಪ್ರಕರಣದ ವಿಚಾರಣೆ ನಡೆಸಿದ ಶಿವಮೊಗ್ಗ ನ್ಯಾಯಾಲಯ ಶಿಕ್ಷೆ ಪ್ರಕಟಿಸಿದೆ.

ಪ್ರಕರಣದ ಹಿನ್ನೆಲೆ

2021ರ ಜೂನ್ 29ರಂದು ತೀರ್ಥಹಳ್ಳಿ ತಾಲೂಕು ಆಗುಂಬೆ ಪೊಲೀಸ್ ಠಾಣೆ ವ್ಯಾಪ್ತಿಯ ಗ್ರಾಮವೊಂದರಲ್ಲಿ, 13 ವರ್ಷದ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪ ಕೇಳಿ ಬಂದಿತ್ತು. ಪ್ರಕರಣ ಸಂಬಂಧ ಮಕ್ಸೂದ್ ಎಂಬಾತನನ್ನು ಬಂಧಿಸಿ, ಪೋಕ್ಸೋ ಕಾಯ್ದೆ ಅಡಿ ಪ್ರಕರಣ ದಾಖಲು ಮಾಡಲಾಗಿತ್ತು. ತನಿಖೆ ನಡೆಸಿದ ತೀರ್ಥಹಳ್ಳಿ ಸರ್ಕಲ್ ಇನ್ಸ್ ಪೆಕ್ಟರ್ ಪ್ರವೀಣ್ ನೀಲಮ್ಮನವರ್ ಅವರು ನ್ಯಾಯಾಲಯಕ್ಕೆ ದೋಷಾರೋಪಣ ಪಟ್ಟಿ ಸಲ್ಲಿಸಿದ್ದರು.

ವಿಚಾರಣೆ ವೇಳೆ ಮಕ್ಸೂದ್ ತಪ್ಪೆಸಗಿರುವುದು ಸಾಬೀತಾದ ಹಿನ್ನೆಲೆ, ಶಿವಮೊಗ್ಗ ನ್ಯಾಯಾಲಯದ ನ್ಯಾ.ಮೋಹನ್ ಜೆ.ಎಸ್ ಅವರು ಶಿಕ್ಷೆ ಪ್ರಕಟಿಸಿದ್ದಾರೆ. ಅಲ್ಲದೆ ಆತನಿಗೆ 23 ವರ್ಷ ಕಠಿಣ ಕಾರಾಗೃಹ ಶಿಕ್ಷೆ ಮತ್ತು 60 ಸಾವಿರ ರೂ. ದಂಡ ವಿಧಿಸಲಾಗಿದೆ. ದಂಡ ಕಟ್ಟಲು ವಿಫಲವಾದರೆ 6 ತಿಂಗಳು ಸಾದಾ ಶಿಕ್ಷೆ ವಿಧಿಸುವಂತೆ ಆದೇಶಿಸಿದ್ದಾರೆ.

ಸರ್ಕಾರದ ಪರವಾಗಿ ಅಭಿಯೋಜಕರಾದ ಹರಿಪ್ರಸಾದ್ ಅವರು ವಾದಿಸಿದ್ದರು.

ಇದನ್ನೂ ಓದಿ – ಮನೆ ಮುಂದೆ ನಿಲ್ಲಿಸಿದ್ದ ಕಾರಿಗೆ ಬೆಂಕಿ, ಇಬ್ಬರ ಮೇಲೆ ಶಂಕೆ

ADVERTISEMENT

  • ಆರೋಗ್ಯ ತುರ್ತು ಸಂದರ್ಭದಲ್ಲಿ ಹಣಕಾಸು ಹೊಂದಿಸುವುದು ಸುಲಭವೇನಲ್ಲ. ಒಂದು ವೇಳೆ INSURANCE ಇದ್ದರೆ, ನಿರಮ್ಮಳವಾಗಿರಬಹುದು ಅಲ್ಲವೆ? ಈಗಲೆ INSURANCE ಮಾಡಿಸಿ. ಒಳ್ಳೆಯ INSURANCE PLANSಗಾಗಿ ಕರೆ ಮಾಡಿ – LIC LIFE INSURANCE – ಅನಿಲ್ 9538414151, ಪ್ರಶಾಂತ್ 9972194422
  • ಸುಂದರ ಮನೆ ಕಟ್ಟಬೇಕು, ಸ್ವಂತ ಮನೆಯಲ್ಲಿ ನೆಮ್ಮದಿಯ ಬದುಕು ಸಾಗಿಸಬೇಕು ಅನ್ನವು ಆಸೆ ಯಾರಿಗಿಲ್ಲ? ಇನ್ಯಾಕೆ ತಡ? ಮನೆ ಕಟ್ಟಲು LICಯಿಂದ HOUSING LOAN ಲಭ್ಯವಿದೆ. ಇವತ್ತೇ ಸಂಪರ್ಕಿಸಿ – ಪ್ರಶಾಂತ್ 9972194422

SHIVAMOGGA LIVE WHATSAPP

ನಿಮ್ಮೂರು, ನಿಮ್ಮ ಏರಿಯಾದ ಕಾರ್ಯಕ್ರಮಗಳು, ಸಮಸ್ಯೆಗಳು ಸುದ್ದಿಯಾಗಬೇಕಾ? ನೀವೇ ವರದಿಗಾರರಾಗಿ. ವಿಡಿಯೋ, ಫೋಟೊ ಮಾಡಿ 7411700200 ಮೊಬೈಲ್ ನಂಬರ್’ಗೆ ವಾಟ್ಸಪ್ ಮಾಡಿ. ನೆನಪಿರಲಿ, ಸುದ್ದಿ ಪ್ರಕಟಣೆಗೆ ನಾವು ಹಣ ಪಡೆಯುವುದಿಲ್ಲ.

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment