ಮಾಡು ಇಲ್ಲವೆ ಮಡಿ ಹೋರಾಟಕ್ಕೆ ಸಜ್ಜು, ಸರ್ಕಾರಕ್ಕೆ ಎಚ್ಚರಿಕೆ, ಶಿವಮೊಗ್ಗದಲ್ಲಿ ಮೆರವಣಿಗೆ

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

 SHIVAMOGGA LIVE NEWS 

ಶಿವಮೊಗ್ಗ | ಅಖಿಲ ಭಾರತ ಲಿಂಗಾಯತ ಪಂಚಮಸಾಲಿ ಸಮಾಜ ಟ್ರಸ್ಟ್, ಪಂಚಮಸಾಲಿ ಮಹಾಸಭಾ (PANCHAMASALI MAHASABHA) ಧರ್ಮಕ್ಷೇತ್ರ ಕೂಡಲಸಂಗಮ ಶಿವಮೊಗ್ಗ ಜಿಲ್ಲಾ ಘಟಕ ವತಿಯಿಂದ  ಲಿಂಗಾಯತ ಪಂಚಮಸಾಲಿ, ಲಿಂಗಾಯತ (LINGAYATH) ಮಲೆಗೌಡ ಸಮುದಾಯವನ್ನು ಪ್ರವರ್ಗ 2ಎ ಮೀಸಲಾತಿಗೆ ಸೇರಿಸಬೇಕು ಎಂದು ಆಗ್ರಹಿಸಿ ಲಿಂಗಾಯತ ಪಂಚಮಸಾಲಿ ಜಗದ್ಗುರು ಮಹಾಪೀಠದ ಗೌರವಾಧ್ಯಕ್ಷ ಶ್ರೀ ಬಸವಮೃತ್ಯುಂಜನ ಸ್ವಾಮೀಜಿ ಅವರು ಸಂಸದ ಬಿ.ವೈ. ರಾಘವೇಂದ್ರ ಅವರ ಮೂಲಕ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪನವರು ಮತ್ತು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಜ್ಞಾಪನಾ ಪತ್ರ ನೀಡಿದರು.

Shimoga Nanjappa Hospital

ನಗರದ ಶಿವಪ್ಪನಾಯಕ ವೃತ್ತದಲ್ಲಿ ಶಿವಪ್ಪನಾಯಕ ಪ್ರತಿಮೆಗೆ ಮಾಲಾರ್ಪಣೆ ಮಾಡಿ, ಮೆರವಣಿಗೆಯ ಮೂಲಕ ಪಂಚಮಸಾಲಿ ಸಮಾಜದ ಪ್ರಮುಖರೊಂದಿಗೆ ಗೋಪಿವೃತ್ತದವರೆಗೆ ಪಾದಯಾತ್ರೆ ನಡೆಸಿ, ನಂತರ ಬಹಿರಂಗ ಸಭೆ ನಡೆಸಲಾಯಿತು.

ಈ ಸಂದರ್ಭದಲ್ಲಿ ಮಾತನಾಡಿದ ಶ್ರೀಗಳು, ಕಳೆದ ಎರಡು ವರ್ಷಗಳಿಂದ ಕೂಡಲ ಸಂಗಮ ಪಂಚಮಸಾಲಿ ಪೀಠ ದಿಂದ ರಾಜ್ಯಾದ್ಯಂತ ನಿರಂತರ ವಾಗಿ ಲಿಂಗಾಯಿತ ಪಂಚಮ ಸಾಲಿ, ಮಲೆಗೌಡ ಲಿಂಗಾಯತ ಸಮುದಾಯವನ್ನು ರಾಜ್ಯ ಸರ್ಕಾರದ 2 ಎ ಮೀಸಲಾತಿಗೆ ಒಳಪಡಿಸಬೇಕು. ಎಲ್ಲಾ ಲಿಂಗಾಯತ ಸಮಾಜವನ್ನು ಕೇಂದ್ರ ಸರ್ಕಾರದ ಒಬಿಸಿ ಪಟ್ಟಿಗೆ ಸೇರ್ಪಡೆ ಮಾಡಬೇಕೆಂದು ಹಕ್ಕೊತ್ತಾಯ ದಿಂದ ಮೀಸಲಾತಿ ಚಳವಳಿ ನಡೆಸಲಾಗುತ್ತಿದೆ ಎಂದು ತಿಳಿಸಿದರು.

ಈಗಾಗಲೇ 10 ಲಕ್ಷ ಜನರನ್ನು ಸೇರಿಸಿ ಶಕ್ತಿ ಪ್ರದರ್ಶನ ಮಾಡಿ ನಿರಂತರ ಪಾದಯಾತ್ರೆ ಮೂಲಕ ಹಕ್ಕೊತ್ತಾಯ ಮಾಡುವುದು, ರಾಜ್ಯದಾದ್ಯಂತ ಹರಿದು ಹಂಚಿ ಹೋಗಿರುವ ಪಂಚಮಸಾಲಿ ಸಮುದಾಯ ವನ್ನು ಒಗ್ಗೂಡಿಸುವುದು, ಇದರೆಲ್ಲದರ ನಡುವೆ ಪಂಚಮಸಾಲಿ ಸಮಾಜಕ್ಕೆ ಮೀಸಲಾತಿಗೆ ಹೋರಾಟ ನಡೆಸಲಾಗುತ್ತಿದೆ. ಆದರೆ ಸರ್ಕಾರ ನೀಡಿದ್ದ ಗಡುವು ಮುಗಿದಿದೆ.ಶ್ರೀ ಬಸವಮೃತ್ಯುಂಜನ ಸ್ವಾಮೀಜಿ

ಬಿ.ಎಸ್. ಯಡಿಯೂರಪ್ಪ ಅವರು ಮುಖ್ಯಮಂತ್ರಿಯಾಗಿ ದ್ದಾಗ ಸೆಪ್ಟೆಂಬರ್ 21, 2021 ರಲ್ಲಿ ಮೀಸಲಾತಿ ನೀಡುವ ಭರವಸೆ ನೀಡಿದ್ದರು. ಅವರು ಅಧಿಕಾರ ತ್ಯಾಗ ಮಾಡಿದ ಮೇಲೆ ಬಸವರಾಜ ಬೊಮ್ಮಾಯಿ ಸರ್ಕಾರ ಕೂಡ 3 ಭಾರಿ ಭರವಸೆ ನೀಡಿ ವಿಫಲವಾಗಿದೆ. ಕೊನೆಗೆ ಅನಿವಾರ್ಯವಾಗಿ ಮುಖ್ಯ ಮಂತ್ರಿಗಳ ಮನೆ ಮುಂಭಾಗ ಧರಣಿ ಕೂರುವ ತೀರ್ಮಾನ ಮಾಡಿದಾಗ ಸಂಧಾನ ಸಭೆ ನಡೆಸಿ ಎರಡು ತಿಂಗಳ ಕಾಲಾವಕಾಶ ಕೇಳಿದ್ದರು. ಆಯೋಗ ರಚಿಸಿ ಸಮೀಕ್ಷೆಗೆ ತೀರ್ಮಾನ ಮಾಡಲಾಗಿತ್ತು. ಈಗಾಗಲೇ ಹಲವು ಜಿಲ್ಲೆಗಳಲ್ಲಿ ಸಮೀಕ್ಷೆ ನಡೆಯುತ್ತಿದೆ ಎಂದರು.

ಸಮೀಕ್ಷೆಯ ವರದಿ ಬರುವ ಮುನ್ನ ಸರ್ಕಾರಕ್ಕೆ ಎಚ್ಚರಿಸುವ ನಿಟ್ಟಿನಲ್ಲಿ ವಿವಿಧ ಜಿಲ್ಲೆಗಳಲ್ಲಿ ಪ್ರತಿಜ್ಞಾ ಪಂಚಾಯತ್ ಅಭಿಯಾನ ಹಾಗೂ ಜಾಗೃತಿ ಸಭೆಗಳ ಮೂಲಕ ಸರ್ಕಾರಕ್ಕೆ ಎಚ್ಚರಿಕೆ ನೀಡುವ ಕಾರ್ಯ ನಡೆಸಲಾಗುತ್ತಿದೆ. ಈಗಾಗಲೇ ಶಿವಮೊಗ್ಗ ಜಿಲ್ಲೆಯ ತಾಲೂಕು ಹಾಗೂ ಹೋಬಳಿ ಮಟ್ಟದಲ್ಲಿ ಬಹಿರಂಗ ಸಭೆ ನಡೆಸಲಾಗಿದೆ ಎಂದರು.

ಇದನ್ನೂ ಓದಿ – ಶಿವಮೊಗ್ಗ ಮೇಯರ್, ಉಪ ಮೇಯರ್ ಸ್ಥಾನಕ್ಕೆ ಪೈಪೋಟಿ, ಯಾರಾಗ್ತಾರೆ ನಗರದ ಪ್ರಥಮ ಪ್ರಜೆ?

ಕೊಟ್ಟ ಮಾತಿನಂತೆ ಮೀಸಲಾತಿ ನೀಡದಿದ್ದರೆ ಸೆ.26ರಂದು ಶಿಗ್ಗಾಂವಿಯ ಸಿಎಂ ಮನೆ ಮುಂದೆ ಧರಣಿ ಸತ್ಯಾಗ್ರಹ ನಡೆಸಲಾಗುವುದು. ಆಗ ಕೂಡ ಸರ್ಕಾರ ಮೀಸಲಾತಿ ನೀಡದಿದ್ದರೆ ಅಕ್ಟೋಬರ್ 23ರಂದು ಬೆಂಗಳೂರಿನ ವಿಧಾನಸೌಧದ ಮುಂಭಾಗದಲ್ಲಿ ಸುಮಾರು 25 ಲಕ್ಷ ಪಂಚಮಸಾಲಿ ಬಾಂಧವರೊಂದಿಗೆ “ಮಾಡು ಇಲ್ಲವೇ ಮೀಸಲಾತಿ ಪಡೆದು ಮಡಿ” ಎಂಬ ಘೋಷಣೆಯೊಂದಿಗೆ ಬೃಹತ್ ಹೋರಾಟವನ್ನು ಹಮ್ಮಿಕೊಳ್ಳಲಾಗುವುದು ಎಂದರು.

shimoga nanjappa hospital

ಮಾಜಿ ಶಾಸಕ ಪಂಚಮಸಾಲಿ ಸಮಾಜದ ರಾಷ್ಟ್ರೀಯ ಅಧ್ಯಕ್ಷ ವಿಜಯಾನಂದ ಕಾಶಪ್ಪನವರ್ ಮಾತನಾಡಿ, ಇದು 5ನೇ ಹಂತದ ಅಂತಿಮ ಹೋರಾಟ. ಈಗಾಗಲೇ ಎಲ್ಲಾ ಪಕ್ಷದ ಎಲ್ಲಾ ನಾಯಕರಿಗೆ ಸಮಾಜದ ಬಗ್ಗೆ ತಿಳಿಸಲಾಗಿದೆ. ಸಾಮಾಜಿಕ ಮತ್ತು ಶೈಕ್ಷಣಿಕವಾಗಿ ತುಳಿತಕ್ಕೊಳಗಾದ ಸಮಾಜ ನಮ್ಮದು. ನಮ್ಮ ಮಕ್ಕಳು ಕೂಡ ವಿದ್ಯಾವಂತರಾಗಬೇಕು. ಐಎಎಸ್, ಐಪಿಎಸ್ ಆಗಬೇಕೆಂಬ ಹಂಬಲ ಎಲ್ಲರಿಗೂ ಇದೆ. ಇದು ಮಾಡು ಇಲ್ಲವೇ ಮಡಿ ಹೋರಾಟ. ಇನ್ನು ಕಾಯಲು ನಾವು ಸಿದ್ಧರಿಲ್ಲ. ತಕ್ಷಣ ಸ್ಪಂದಿಸದಿದ್ದರೆ ಪರಿಣಾಮ ಮುಂದಿನ ದಿನಗಳಲ್ಲಿ ಬೊಮ್ಮಾಯಿ ಸಕರ್ಾರ ಅನುಭವಿಸಲಿದೆ ಎಂದು ಎಚ್ಚರಿಸಿದರು.

ನಂತರ ಜಿಲ್ಲಾಧಿಕಾರಿಗಳ ಕಚೇರಿಗೆ ತೆರಳಿ, ಸರ್ಕಾರಕ್ಕೆ ಮನವಿ ಸಲ್ಲಿಸಲಾಯಿತು. ಈ ಸಂದರ್ಭದಲ್ಲಿ ಸಮಾಜದ ಪ್ರಮುಖರಾದ ಮಲ್ಲಿಕಾರ್ಜುನ ಹಕ್ರೆ, ಪ್ರೊ. ವಿಜಯಕುಮಾರ್, ರುದ್ರೇಗೌಡ ಕಡೆಮನೆ, ಎಂ.ಎಸ್.ಕುಮಾರ್, ಎಂ.ಪಿ.ವಿಜಯ್ ಕುಮಾರ್, ನವೀನ್, ಲಿಂಗಪ್ಪಣ್ಣ ಕೆಳಗೇರಿ ಮೊದಲಾದವರಿದ್ದರು.

ಇದನ್ನೂ ಓದಿ – ಶಿವಮೊಗ್ಗದ ವಿವಿಧೆಡೆ ಮನೆ, ಸಂಘಟನೆಯ ಕಚೇರಿ ಮೇಲೆ ಪೊಲೀಸರಿಂದ ದಿಢೀರ್ ದಾಳಿ

ADVERTISEMENT

  • ಆರೋಗ್ಯ ತುರ್ತು ಸಂದರ್ಭದಲ್ಲಿ ಹಣಕಾಸು ಹೊಂದಿಸುವುದು ಸುಲಭವೇನಲ್ಲ. ಒಂದು ವೇಳೆ INSURANCE ಇದ್ದರೆ, ನಿರಮ್ಮಳವಾಗಿರಬಹುದು ಅಲ್ಲವೆ? ಈಗಲೆ INSURANCE ಮಾಡಿಸಿ. ಒಳ್ಳೆಯ INSURANCE PLANSಗಾಗಿ ಕರೆ ಮಾಡಿ – LIC LIFE INSURANCE – ಅನಿಲ್ 9538414151, ಪ್ರಶಾಂತ್ 9972194422
  • ಸುಂದರ ಮನೆ ಕಟ್ಟಬೇಕು, ಸ್ವಂತ ಮನೆಯಲ್ಲಿ ನೆಮ್ಮದಿಯ ಬದುಕು ಸಾಗಿಸಬೇಕು ಅನ್ನವು ಆಸೆ ಯಾರಿಗಿಲ್ಲ? ಇನ್ಯಾಕೆ ತಡ? ಮನೆ ಕಟ್ಟಲು LICಯಿಂದ HOUSING LOAN ಲಭ್ಯವಿದೆ. ಇವತ್ತೇ ಸಂಪರ್ಕಿಸಿ – ಪ್ರಶಾಂತ್ 9972194422

SHIVAMOGGA LIVE WHATSAPP

ನಿಮ್ಮೂರು, ನಿಮ್ಮ ಏರಿಯಾದ ಕಾರ್ಯಕ್ರಮಗಳು, ಸಮಸ್ಯೆಗಳು ಸುದ್ದಿಯಾಗಬೇಕಾ? ನೀವೇ ವರದಿಗಾರರಾಗಿ. ವಿಡಿಯೋ, ಫೋಟೊ ಮಾಡಿ 7411700200 ಮೊಬೈಲ್ ನಂಬರ್’ಗೆ ವಾಟ್ಸಪ್ ಮಾಡಿ. ನೆನಪಿರಲಿ, ಸುದ್ದಿ ಪ್ರಕಟಣೆಗೆ ನಾವು ಹಣ ಪಡೆಯುವುದಿಲ್ಲ.

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : August 26, 2022

ನಾಳೆಯಿಂದ ಎಸ್ಸೆಸ್ಸೆಲ್ಸಿ ಪರೀಕ್ಷೆ, ಶಿವಮೊಗ್ಗದಲ್ಲಿ ಎಷ್ಟು ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ?

ನಾಳೆಯಿಂದ ಎಸ್ಸೆಸ್ಸೆಲ್ಸಿ ಪರೀಕ್ಷೆ, ಶಿವಮೊಗ್ಗದಲ್ಲಿ ಎಷ್ಟು ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ?

ಬ್ಯಾಂಕ್‌ ಉದ್ಯೋಗಿ, ವಿದ್ಯಾರ್ಥಿಗಳ ಮೇಲೆ ಹೆಜ್ಜೇನು ದಾಳಿ, ಗಾಯಾಳುಗಳು ಆಸ್ಪತ್ರೆಗೆ

ಬ್ಯಾಂಕ್‌ ಉದ್ಯೋಗಿ, ವಿದ್ಯಾರ್ಥಿಗಳ ಮೇಲೆ ಹೆಜ್ಜೇನು ದಾಳಿ, ಗಾಯಾಳುಗಳು ಆಸ್ಪತ್ರೆಗೆ

ಶಿವಮೊಗ್ಗದಲ್ಲಿ ಕೆಲಸ ಖಾಲಿ ಇದೆ, ತಿಂಗಳಿಗೆ ₹20,000 ದಿಂದ ₹50,000 ದವರೆಗೆ ಸಂಬಳ

ಶಿವಮೊಗ್ಗದಲ್ಲಿ ಕೆಲಸ ಖಾಲಿ ಇದೆ, ತಿಂಗಳಿಗೆ ₹20,000 ದಿಂದ ₹50,000 ದವರೆಗೆ ಸಂಬಳ

ತಂದೆ, ಮಗನಿಗೆ ಜೀವಾವಧಿ ಶಿಕ್ಷೆ, ದಂಡ ವಿಧಿಸಿದ ಶಿವಮೊಗ್ಗ ಕೋರ್ಟ್‌, ಯಾಕೆ?

ತಂದೆ, ಮಗನಿಗೆ ಜೀವಾವಧಿ ಶಿಕ್ಷೆ, ದಂಡ ವಿಧಿಸಿದ ಶಿವಮೊಗ್ಗ ಕೋರ್ಟ್‌, ಯಾಕೆ?

ಇವತ್ತು ಯಾವ್ಯಾವ ಅಡಿಕೆಗೆ ಎಷ್ಟಿದೆ ರೇಟ್? – 17 ಮಾರ್ಚ್‌ 2026 – ಅಡಿಕೆ ಧಾರಣೆ

ಇವತ್ತು ಯಾವ್ಯಾವ ಅಡಿಕೆಗೆ ಎಷ್ಟಿದೆ ರೇಟ್? – 17 ಮಾರ್ಚ್‌ 2026 – ಅಡಿಕೆ ಧಾರಣೆ

ಶಿವಮೊಗ್ಗ ಡಿ.ಸಿ ಎದುರು ಮೈದಾನಕ್ಕೆ ಬ್ಯಾರಿಕೇಡ್‌, ಹಿಂದೂ ಸಂಘಟನೆಗಳು ಗರಂ, ಕಾರಣವೇನು?

ಶಿವಮೊಗ್ಗ ಡಿ.ಸಿ ಎದುರು ಮೈದಾನಕ್ಕೆ ಬ್ಯಾರಿಕೇಡ್‌, ಹಿಂದೂ ಸಂಘಟನೆಗಳು ಗರಂ, ಕಾರಣವೇನು?

ಬೆಳಗ್ಗೆ ಲೇಔಟ್‌ಗೆ ಬಂದ ಲೆಕ್ಚರರ್‌ಗೆ ಕಾದಿತ್ತು ಆಘಾತ, ರಾತ್ರಿ 11.15ರ CCTV ದೃಶ್ಯ ಕಂಡು ಶಾಕ್‌

ಬೆಳಗ್ಗೆ ಲೇಔಟ್‌ಗೆ ಬಂದ ಲೆಕ್ಚರರ್‌ಗೆ ಕಾದಿತ್ತು ಆಘಾತ, ರಾತ್ರಿ 11.15ರ CCTV ದೃಶ್ಯ ಕಂಡು ಶಾಕ್‌

ಶಿವಮೊಗ್ಗ TO ಬೆಂಗಳೂರು ಇನ್ನಷ್ಟು ವೇಗ, ದ್ವಿಪಥ ಯೋಜನೆಗೆ ಒತ್ತಾಯ

ಶಿವಮೊಗ್ಗ TO ಬೆಂಗಳೂರು ಇನ್ನಷ್ಟು ವೇಗ, ದ್ವಿಪಥ ಯೋಜನೆಗೆ ಒತ್ತಾಯ

ಜಮೀನಿಗೆ ನೀರು ಹರಿಸಲು ಹೋಗಿದ್ದ ವ್ಯಕ್ತಿಗೆ ಕಾದಿತ್ತು ಸಾವು, ಆಗಿದ್ದೇನು?

ಜಮೀನಿಗೆ ನೀರು ಹರಿಸಲು ಹೋಗಿದ್ದ ವ್ಯಕ್ತಿಗೆ ಕಾದಿತ್ತು ಸಾವು, ಆಗಿದ್ದೇನು?

ನಾಳೆಯಿಂದ SSLC ಪರೀಕ್ಷೆ, ಹೇಗಿದೆ ಸಿದ್ಧತೆ? ಯಾವ್ಯಾವ ತಾಲೂಕಿನಲ್ಲಿ ಎಷ್ಟು ಪರೀಕ್ಷಾ ಕೇಂದ್ರಗಳಿವೆ?

ನಾಳೆಯಿಂದ SSLC ಪರೀಕ್ಷೆ, ಹೇಗಿದೆ ಸಿದ್ಧತೆ? ಯಾವ್ಯಾವ ತಾಲೂಕಿನಲ್ಲಿ ಎಷ್ಟು ಪರೀಕ್ಷಾ ಕೇಂದ್ರಗಳಿವೆ?

Leave a Comment