ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
SHIVAMOGGA LIVE NEWS
ಶಿವಮೊಗ್ಗ | ಬಡ್ಡಿ ಸಹಿತ ಸಾಲ (LOAN) ತೀರಿಸಿದ್ದರೂ ಹೆಚ್ಚುವರಿ ಬಡ್ಡಿ (INTEREST) ಹಣ ನೀಡುವಂತೆ ಒತ್ತಾಯಿಸಿ, ಮಹಿಳೆಯೊಬ್ಬರಿಗೆ ಲೈಂಗಿಕ ದೌರ್ಜನ್ಯ ಎಸಗಿ, ಜಾತಿ ನಿಂದನೆ ಮಾಡಿ, ಹಲ್ಲೆ ನಡೆಸಿದ ಆರೋಪ ಸಂಬಂಧ ಕುಟುಂಬವೊಂದರ ವಿರುದ್ಧ ಪ್ರಕರಣ ದಾಖಲಾಗಿದೆ.
ಮಹಿಳೆ ಮತ್ತು ಆಕೆಯ ಮಕ್ಕಳ ಮೇಲೆ ಹಲ್ಲೆ ನಡೆಸಲಾಗಿದೆ. ಮಹಿಳೆಯು ಮೆಗ್ಗಾನ್ ಆಸ್ಪತ್ರೆಯಲ್ಲಿ ಹೊರಗುತ್ತಿಗೆ ಆಧಾರದಲ್ಲಿ ಕಾರ್ಯನಿರ್ವಹಿಸುತ್ತಿದ್ದಾರೆ. ಅಶೋಕ ಎಂಬವವರಿಂದ 20 ಸಾವಿರ ರೂ. ಸಾಲ ಪಡೆದಿದ್ದರು. ಬಡ್ಡಿ ಸಹಿತ ಸಾಲವನ್ನು ಹಿಂತಿರುಗಿಸಿರುವುದಾಗಿ ಮಹಿಳೆ ದೂರಿನಲ್ಲಿ ತಿಳಿಸಿದ್ದಾರೆ.
ಸಾಲಕ್ಕೆ ಚಕ್ರ ಬಡ್ಡಿ (INTEREST) ನೀಡುವಂತೆ ಅಶೋಕ್ ಅವರ ಕುಟುಂಬದವರು ಒತ್ತಾಯಿಸಿದ್ದಾರೆ. ಅಲ್ಲದೆ ಮಹಿಳೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ ಎಂದು ಆರೋಪಿಸಲಾಗಿದೆ. ಆ.30ರಂದು ಸಂಜೆ ಅಶೋಕ್ ಅವರ ಕುಟುಂಬದವರು, ಮಹಿಳೆಯ ಮನೆಗೆ ನುಗ್ಗಿ, ಕುಟುಂಬದವರ ಮೇಲೆ ಹಲ್ಲೆ ನಡೆಸಿದ್ದಾರೆ ಎಂದು ದೂರು ಸಲ್ಲಿಸಲಾಗಿದೆ.
ಮಹಿಳೆ ಮತ್ತು ಅವರ ಮಕ್ಕಳ ಮೇಲೆ ಹಲ್ಲೆಯಾಗಿದ್ದರಿಂದ ಮೆಗ್ಗಾನ್ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಅಲ್ಲದೆ ಜಾತಿ ನಿಂದನೆ ಮಾಡಲಾಗಿದೆ ಎಂದು ಆರೋಪಿಸಲಾಗಿದೆ.
ಈ ಸಂಬಂಧ ದೊಡ್ಡಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ನಡೆಯುತ್ತಿದೆ.

ಇದನ್ನೂ ಓದಿ – ಡೊಳ್ಳು ಬಾರಿಸುವ ವಿಚಾರವಾಗಿ ಕಿರಿಕ್, ಕೈ ಕೈ ಮಿಲಾಯಿಸಿದ ಯುವಕರು
ADVERTISEMENT
- ಆರೋಗ್ಯ ತುರ್ತು ಸಂದರ್ಭದಲ್ಲಿ ಹಣಕಾಸು ಹೊಂದಿಸುವುದು ಸುಲಭವೇನಲ್ಲ. ಒಂದು ವೇಳೆ INSURANCE ಇದ್ದರೆ, ನಿರಮ್ಮಳವಾಗಿರಬಹುದು ಅಲ್ಲವೆ? ಈಗಲೆ INSURANCE ಮಾಡಿಸಿ. ಒಳ್ಳೆಯ INSURANCE PLANSಗಾಗಿ ಕರೆ ಮಾಡಿ – LIC LIFE INSURANCE – ಅನಿಲ್ 9538414151, ಪ್ರಶಾಂತ್ 9972194422
- ಸುಂದರ ಮನೆ ಕಟ್ಟಬೇಕು, ಸ್ವಂತ ಮನೆಯಲ್ಲಿ ನೆಮ್ಮದಿಯ ಬದುಕು ಸಾಗಿಸಬೇಕು ಅನ್ನವು ಆಸೆ ಯಾರಿಗಿಲ್ಲ? ಇನ್ಯಾಕೆ ತಡ? ಮನೆ ಕಟ್ಟಲು LICಯಿಂದ HOUSING LOAN ಲಭ್ಯವಿದೆ. ಇವತ್ತೇ ಸಂಪರ್ಕಿಸಿ – ಪ್ರಶಾಂತ್ 9972194422
SHIVAMOGGA LIVE WHATSAPP
ನಿಮ್ಮೂರು, ನಿಮ್ಮ ಏರಿಯಾದ ಕಾರ್ಯಕ್ರಮಗಳು, ಸಮಸ್ಯೆಗಳು ಸುದ್ದಿಯಾಗಬೇಕಾ? ನೀವೇ ವರದಿಗಾರರಾಗಿ. ವಿಡಿಯೋ, ಫೋಟೊ ಮಾಡಿ 7411700200 ಮೊಬೈಲ್ ನಂಬರ್’ಗೆ ವಾಟ್ಸಪ್ ಮಾಡಿ. ನೆನಪಿರಲಿ, ಸುದ್ದಿ ಪ್ರಕಟಣೆಗೆ ನಾವು ಹಣ ಪಡೆಯುವುದಿಲ್ಲ.
LATEST NEWS
- ಆಲ್ಕೊಳ ಬಳಿ ಪೊಲೀಸರ ಕಾರ್ಯಾಚರಣೆ, ಬೈಕ್ ಸಹಿತ ಇಬ್ಬರು ಅರೆಸ್ಟ್, ಕಾರಣವೇನು?

- ಶರಾವತಿ ನಗರದಲ್ಲಿ ಕಾರು ಗಾಜು ಪೀಸ್ ಪೀಸ್ ಕೇಸ್, ಮೂವರು ಅರೆಸ್ಟ್, ಘಟನೆಗೆ ಕಾರಣ ಮನೆ

- ಶಿವಮೊಗ್ಗದಲ್ಲಿ ಏರ್ಟೆಲ್ ಮೊಬೈಲ್ ಟವರ್ನ ಉಪಕರಣ ಕಳವು, ಆಗಿದ್ದೇನು?

- ಶಿವಮೊಗ್ಗ ಕಾಂಗ್ರೆಸ್ ಕಾರ್ಯದರ್ಶಿ ಸೇರಿ ಇಬ್ಬರು 6 ವರ್ಷ ಪಕ್ಷದಿಂದ ಉಚ್ಛಾಟನೆ, ಕಾರಣವೇನು?

- ಬೇಡರ ಹೊಸಹಳ್ಳಿ ಬಳಿ ಚಲಿಸುತ್ತಿದ್ದ ಬಸ್ಸಿನ ಸೀಟಿನಿಂದಲೇ ಹೊರಗೆ ಬಿದ್ದ ಪ್ರಯಾಣಿಕ

About The Editor
ನಿತಿನ್ ಆರ್.ಕೈದೊಟ್ಲು






