ನಿಗದಿಯಾಗಿದ್ದ ಶಿವಮೊಗ್ಗ ಮೇಯರ್, ಉಪ ಮೇಯರ್ ಚುನಾವಣೆ ಮುಂದೂಡಿಕೆ, ಕಾರಣವೇನು?

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

 SHIVAMOGGA LIVE NEWS 

SHIMOGA | ಮಹಾನಗರ ಪಾಲಿಕೆ (PALIKE) ಮೇಯರ್ (MAYOR), ಉಪ ಮೇಯರ್ ಚುನಾವಣೆಗೆ (ELECTION) ನಿಗದಿಯಾಗಿದ್ದ ದಿನಾಂಕವನ್ನು ಹೈಕೋರ್ಟ್ (HIGH COURT) ಮಧ್ಯಂತರ ಅದೇಶದ ಮೇರೆಗೆ ಪ್ರಾದೇಶಿಕ ಆಯುಕ್ತ ಅಮ್ಲಾನ್ ಆದಿತ್ಯ ಬಿಸ್ವಾಸ್ ಮುಂದೂಡಿದ್ದಾರೆ.

TODAY NEWS PARAGRAPH

ಪೂರ್ವ ನಿಗದಿಯಂತೆ ಸೆ.13ರಂದು ಚುನಾವಣೆ ನಡೆಯಬೇಕಿತ್ತು. ಆದರೆ ಮೇಯರ್ ಸ್ಥಾನ ಎಸ್.ಟಿಗೆ ಮೀಸಲಾಗದೆ ಹಲವು ವರ್ಷಗಳಾಗಿವೆ ಎಂದು ವ್ಯಕ್ತಿಯೊಬ್ಬರು ಕೋರ್ಟ್ ಮೆಟ್ಟಿಲೇರಿದ್ದರಿಂದ ಮಧ್ಯಂತರ ಆದೇಶ ನೀಡಿರುವ ಹೈಕೋರ್ಟ್ ಚುನಾವಣೆ ದಿನಾಂಕವನ್ನು ಮುಂದೂಡುವಂತೆ ಸರ್ಕಾರಕ್ಕೆ ಸೂಚನೆ ನೀಡಿದೆ. ಸೆ.6ರಂದು ಪ್ರಕರಣದ ವಿಚಾರಣೆ ಮುಂದುವರಿಸುವುದಾಗಿ ತಿಳಿಸಿದೆ.

ಮೇಯರ್ ಸುನೀತಾ ಅಣ್ಣಪ್ಪ ಅವರ ಅಧಿಕಾರ ಅವಧಿ ಮುಕ್ತಾಯಕ್ಕೂ ಮುನ್ನವೇ ವಾಲ್ಮೀಕಿ ಸಮುದಾಯದ ಕೆಲವರು ಕೋರ್ಟ್ ಮೆಟ್ಟಿಲೇರಿದ್ದರು. ಎಸ್‌ಟಿಗೆ ಮೀಸಲು ನಿಗದಿ ಮಾಡಬೇಕೆಂದು ಮನವಿ ಮಾಡಿದ್ದರು. ಈ ಸಂಬಂಧ ಆದೇಶ ನೀಡಿದ್ದ ಹೈಕೋರ್ಟ್, ಅರ್ಜಿದಾರರ ಮನವಿಯನ್ನು ಪರಿಶೀಲಿಸುವಂತೆ ಸರ್ಕಾರಕ್ಕೆ ಸೂಚನೆ ನೀಡಿತ್ತು. ಒಂದು ವೇಳೆ ಸರ್ಕಾರ ನಿಮ್ಮ ಮನವಿ ಪುರಸ್ಕರಿಸದಿದ್ದರೆ ಮೇಯ‌ರ್ ಮೀಸಲಾತಿ ಘೋಷಣೆ ಬಳಿಕ ಮತ್ತೆ ಕೋರ್ಟ್‌ ಗೆ ಬರಲು ಅವಕಾಶವಿದೆ ಎಂದು ಅರ್ಜಿದಾರರಿಗೆ ತಿಳಿಸಿತ್ತು.

Shimoga Nanjappa Hospital

ಇದೀಗ ಬಿಸಿಎಂ-ಎ ಅಭ್ಯರ್ಥಿಗೆ ಮೀಸಲು ಘೋಷಣೆಯಾಗುತ್ತಿದ್ದಂತೆ ಮತ್ತೆ ಮೀಸಲಾತಿ ವಿಚಾರ ಕೋರ್ಟ್ ಮೆಟ್ಟಿಲೇರಿದೆ. ಸೆ.6ರಂದು ನ್ಯಾಯಾಲಯ ಯಾವ ಆದೇಶ ನೀಡುತ್ತದೆ ಎಂಬುದು ಕುತೂಹಲಕ್ಕೆ ಕಾರಣವಾಗಿದೆ. ನ್ಯಾಯಾಂಗ ಪ್ರಕ್ರಿಯೆ ವಿಳಂಬವಾದಷ್ಟೂ ಹಾಲಿ ಮೇಯರ್ ಹಾಗೂ ಉಪಮೇಯರ್ ಅಧಿಕಾರಾವಧಿ ವಿಸ್ತರಣೆಯಾಗಲಿದೆ.

ದನ್ನೂ ಓದಿ – ಹಿಂದೂ ಮಹಾಸಭಾ ಗಣಪತಿ ಮಹಾದ್ವಾರ, ನಿರ್ಮಿಸಿದ್ದು ಯಾರು?

ADVERTISEMENT

  • ಆರೋಗ್ಯ ತುರ್ತು ಸಂದರ್ಭದಲ್ಲಿ ಹಣಕಾಸು ಹೊಂದಿಸುವುದು ಸುಲಭವೇನಲ್ಲ. ಒಂದು ವೇಳೆ INSURANCE ಇದ್ದರೆ, ನಿರಮ್ಮಳವಾಗಿರಬಹುದು ಅಲ್ಲವೆ? ಈಗಲೆ INSURANCE ಮಾಡಿಸಿ. ಒಳ್ಳೆಯ INSURANCE PLANSಗಾಗಿ ಕರೆ ಮಾಡಿ – LIC LIFE INSURANCE – ಅನಿಲ್ 9538414151, ಪ್ರಶಾಂತ್ 9972194422
  • ಸುಂದರ ಮನೆ ಕಟ್ಟಬೇಕು, ಸ್ವಂತ ಮನೆಯಲ್ಲಿ ನೆಮ್ಮದಿಯ ಬದುಕು ಸಾಗಿಸಬೇಕು ಅನ್ನವು ಆಸೆ ಯಾರಿಗಿಲ್ಲ? ಇನ್ಯಾಕೆ ತಡ? ಮನೆ ಕಟ್ಟಲು LICಯಿಂದ HOUSING LOAN ಲಭ್ಯವಿದೆ. ಇವತ್ತೇ ಸಂಪರ್ಕಿಸಿ – ಪ್ರಶಾಂತ್ 9972194422

SHIVAMOGGA LIVE WHATSAPP

ನಿಮ್ಮೂರು, ನಿಮ್ಮ ಏರಿಯಾದ ಕಾರ್ಯಕ್ರಮಗಳು, ಸಮಸ್ಯೆಗಳು ಸುದ್ದಿಯಾಗಬೇಕಾ? ನೀವೇ ವರದಿಗಾರರಾಗಿ. ವಿಡಿಯೋ, ಫೋಟೊ ಮಾಡಿ 7411700200 ಮೊಬೈಲ್ ನಂಬರ್’ಗೆ ವಾಟ್ಸಪ್ ಮಾಡಿ. ನೆನಪಿರಲಿ, ಸುದ್ದಿ ಪ್ರಕಟಣೆಗೆ ನಾವು ಹಣ ಪಡೆಯುವುದಿಲ್ಲ.

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment