ಮುಚ್ಚಿದಂತೆ ಇದ್ದ ಬಾಗಿಲ ಬೀಗ ತೆಗೆಯಲು ಹೋದಾಗ ಇಂಟರ್ ಲಾಕ್ ಕಟ್, ಒಳ ನೋಡಿದಾಗ ಕಾದಿತ್ತು ಶಾಕ್

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

 SHIVAMOGGA LIVE NEWS 

SHIMOGA | ಮನೆಯಲ್ಲಿ ಯಾರೂ ಇಲ್ಲದ ವೇಳೆ ಬಾಗಿಲು ಬೀಗ (DOOR LOCK BREAK) ಮುರಿದು ಚಿನ್ನಾಭರಣ ಮತ್ತು ನಗದು ಕಳ್ಳತನ ಮಾಡಲಾಗಿದೆ.TODAY NEWS PARAGRAPH

ಸಯ್ಯದ್ ರಿಯಾಜ್ ಅಹಮದ್ ಎಂಬುವವರಿಗೆ ಸೇರಿದ ಇಲಿಯಾಸ್ ನಗರದ ಮನೆ ಬೀಗ ಮುರಿದು ಕಳ್ಳತನ ಮಾಡಲಾಗಿದೆ. ಸಯ್ಯದ್ ರಿಯಾಜ್ ಅಹಮದ್ ಅವರ ಮನೆಯವರು ಕುಟುಂಬದ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ರಾಯಚೂರು ಜಿಲ್ಲೆಯ ಸಿಂಧನೂರಿಗೆ ತೆರಳಿದ್ದರು. ಸೆ.4ರಂದು ಮನೆಗೆ ಮರಳಿದಾಗ ಕೃತ್ಯ ಬೆಳಕಿಗೆ ಬಂದಿದೆ.

ಬಾಗಿಲು ಹಾಕಿದಂತೆಯೇ ಇತ್ತು

ರಾಯಚೂರಿನಿಂದ ಬಂದ ಕುಟುಂಬದವರಿಗೆ ಮನೆ ಬಾಗಿಲು ಹಾಕಿದಂತೆಯೇ ಕಾಣಿಸಿತ್ತು. ಹತ್ತಿರ ಹೋಗಿ ನೋಡಿದಾಗ ಇಂಟರ್ ಲಾಕ್ (DOOR LOCK BREAK) ಮುರಿದಿರುವುದು ಗೊತ್ತಾಗಿದೆ. ಒಳಗೆ ಬೀರುವಿನಲ್ಲಿದ್ದ ವಸ್ತುಗಳು ಚಲ್ಲಾಪಿಲ್ಲಿಯಾಗಿ ಬಿದ್ದಿರುವುದು ಗಮನಕ್ಕೆ ಬಂದಿದೆ.

ಮನೆಯಲ್ಲಿದ್ದ ಸುಮಾರು 23 ಸಾವಿರ ರೂ. ನಗದು, 16 ಸಾವಿರ ರೂ. ಮೌಲ್ಯದ ಮಕ್ಕಳ ಮೂರು ಚಿನ್ನದ ಉಂಗುರ, ಒಂದು ಜೊತೆ ಚಿನ್ನದ ಕಿವಿ ಓಲೆ ಕಳ್ಳತನವಾಗಿದೆ.

ಘಟನೆ ಸಂಬಂಧ ದೊಡ್ಡಪೇಟೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

Shimoga Nanjappa Hospital

ಇದನ್ನೂ ಓದಿ – ಶಿವಮೊಗ್ಗ ಸ್ಮಾರ್ಟ್ ಸಿಟಿ ಕೆಲಸಕ್ಕೆ ಬಂದಿದ್ದ ತೆಲಂಗಾಣದ ಯುವತಿ ನಾಪತ್ತೆ

ADVERTISEMENT

  • ಆರೋಗ್ಯ ತುರ್ತು ಸಂದರ್ಭದಲ್ಲಿ ಹಣಕಾಸು ಹೊಂದಿಸುವುದು ಸುಲಭವೇನಲ್ಲ. ಒಂದು ವೇಳೆ INSURANCE ಇದ್ದರೆ, ನಿರಮ್ಮಳವಾಗಿರಬಹುದು ಅಲ್ಲವೆ? ಈಗಲೆ INSURANCE ಮಾಡಿಸಿ. ಒಳ್ಳೆಯ INSURANCE PLANSಗಾಗಿ ಕರೆ ಮಾಡಿ – LIC LIFE INSURANCE – ಅನಿಲ್ 9538414151, ಪ್ರಶಾಂತ್ 9972194422
  • ಸುಂದರ ಮನೆ ಕಟ್ಟಬೇಕು, ಸ್ವಂತ ಮನೆಯಲ್ಲಿ ನೆಮ್ಮದಿಯ ಬದುಕು ಸಾಗಿಸಬೇಕು ಅನ್ನವು ಆಸೆ ಯಾರಿಗಿಲ್ಲ? ಇನ್ಯಾಕೆ ತಡ? ಮನೆ ಕಟ್ಟಲು LICಯಿಂದ HOUSING LOAN ಲಭ್ಯವಿದೆ. ಇವತ್ತೇ ಸಂಪರ್ಕಿಸಿ – ಪ್ರಶಾಂತ್ 9972194422

SHIVAMOGGA LIVE WHATSAPP

ನಿಮ್ಮೂರು, ನಿಮ್ಮ ಏರಿಯಾದ ಕಾರ್ಯಕ್ರಮಗಳು, ಸಮಸ್ಯೆಗಳು ಸುದ್ದಿಯಾಗಬೇಕಾ? ನೀವೇ ವರದಿಗಾರರಾಗಿ. ವಿಡಿಯೋ, ಫೋಟೊ ಮಾಡಿ 7411700200 ಮೊಬೈಲ್ ನಂಬರ್’ಗೆ ವಾಟ್ಸಪ್ ಮಾಡಿ. ನೆನಪಿರಲಿ, ಸುದ್ದಿ ಪ್ರಕಟಣೆಗೆ ನಾವು ಹಣ ಪಡೆಯುವುದಿಲ್ಲ.

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : September 7, 2022

Leave a Comment