ತಾಳಗುಪ್ಪ – ಬೆಂಗಳೂರು ರೈಲು ಹತ್ತುವಾಗ ಕಾಲು ಜಾರಿ ಬಿದ್ದು ತಂದೆ, ಮಗ ಸಾವು

 SHIVAMOGGA LIVE NEWS 

BHADRAVATHI | ಚಲಿಸುತ್ತಿದ್ದ ರೈಲು (TRAIN) ಹತ್ತಲು ಹೋಗಿ ಪ್ಲಾಟ್ ಫಾರಂನಿಂದ ಕೆಳಗೆ ಬಿದ್ದು ತಂದೆ, ಮಗ ಮೃತಪಟ್ಟಿದ್ದಾರೆ. ತಾಳಗುಪ್ಪ – ಬೆಂಗಳೂರು – ಮೈಸೂರು ಎಕ್ಸ್ ಪ್ರೆಸ್ ರೈಲಿಗೆ ಸಿಲುಕಿ ಇಬ್ಬರು ಸಾವನಪ್ಪಿದ್ದಾರೆ.

Shimoga Nanjappa Hospital

ಭದ್ರಾವತಿ ರೈಲ್ವೆ ನಿಲ್ದಾಣದ (RAILWAY STATION) ಪ್ಲಾಟ್ ಫಾರಂ 1ರಲ್ಲಿ ಘಟನೆ ಸಂಭವಿಸಿದೆ. ಭಾನುವಾರ ರಾತ್ರಿ ರೈಲು ಹತ್ತುವಾಗ ಕಾಲು ಜಾರಿ ಬಿದ್ದು ಇಬ್ಬರು ಮೃತಪಟ್ಟಿದ್ದಾರೆ.

ಹೇಗಾಯ್ತು ಘಟನೆ?

ಮೋಹನ್ ಪ್ರಸಾದ್ (70) ಮತ್ತು ಅಮರನಾಥ್ (30) ಮೃತರು. ತಂದೆ ಮತ್ತು ಮಗ ರಾತ್ರಿ ರೈಲಿನಲ್ಲಿ (TRAIN) ಬೆಂಗಳೂರಿಗೆ ತೆರಳಬೇಕಿತ್ತು. ನಿಲ್ದಾಣಕ್ಕೆ ಬಂದಾಗ ರೈಲು ಹೊರಟಿತ್ತು. ಚಲಿಸುತ್ತಿದ್ದ ರೈಲು ಹತ್ತಲು ಹೋಗಿ ಮಗ ಅಮರನಾಥ್ ಕಾಲು ಜಾರಿ ಕೆಳಗೆ ಬಿದ್ದಿದ್ದಾನೆ. ಆತನ ರಕ್ಷಣೆಗೆ ಧಾವಿಸಿದ ಮೋಹನ್ ಪ್ರಸಾದ್ ಅವರು ರೈಲಿನ ಅಡಿಗೆ ಸಿಲುಕಿದ್ದಾರೆ.

ಅಮರನಾಥ್ ತಲೆಗೆ ಗಂಭೀರ ಪೆಟ್ಟು ಬಿದ್ದಿದ್ದರಿಂದ ಸ್ಥಳದಲ್ಲೇ ಮೃತಪಟ್ಟಿದ್ದಾನೆ. ಮೋಹನ್ ಪ್ರಸಾದ್ ಅವರಿಗೂ ಗಂಭೀರ ಗಾಯವಾಗಿತ್ತು. ಕೂಡಲೆ ಅವರಿಗೆ ಭದ್ರಾವತಿಯ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಯಿತು. ಹೆಚ್ಚಿನ ಚಿಕಿತ್ಸೆಗೆ ಮೆಗ್ಗಾನ್ ಆಸ್ಪತ್ರೆಗೆ ದಾಖಲು ಮಾಡಲಾಯಿತು. ಮುಂದಿನ ಚಿಕಿತ್ಸೆಗೆ ಬೆಂಗಳೂರಿಗೆ ಕರೆದೊಯ್ಯುತ್ತಿದ್ದಾಗ ಮಾರ್ಗ ಮಧ್ಯೆ ಕೊನೆಯುಸಿರೆಳೆದಿದ್ದಾರೆ.

Kalleshwara-Enterprises.webp

ಮೋಹನ್ ಪ್ರಸಾದ್ ಅವರು ವಿಐಎಸ್ಎಲ್ ನಿವೃತ್ತ ನೌಕರರಾಗಿದ್ದು, ಬೆಂಗಳೂರಿನಲ್ಲಿ ನೆಲೆಸಿದ್ದರು. ಭದ್ರಾವತಿಯಲ್ಲಿರುವ ಮಗನ ಮನೆಗೆ ಬಂದಿದ್ದರು.

ಶಿವಮೊಗ್ಗ ರೈಲ್ವೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ನಡೆಯುತ್ತಿದೆ.

Sarji HOspital

ಕ್ಲಿಕ್ ಮಾಡಿ ಇದನ್ನೂ ಓದಿ ಇವತ್ತಿಂದ ಶಿವಮೊಗ್ಗ ನಗರದಿಂದ ಮತ್ತೊಂದು ಹೊಸ ರೈಲು ಸಂಚಾರ ಆರಂಭ

ADVERTISEMENT

  • ಆರೋಗ್ಯ ತುರ್ತು ಸಂದರ್ಭದಲ್ಲಿ ಹಣಕಾಸು ಹೊಂದಿಸುವುದು ಸುಲಭವೇನಲ್ಲ. ಒಂದು ವೇಳೆ INSURANCE ಇದ್ದರೆ, ನಿರಮ್ಮಳವಾಗಿರಬಹುದು ಅಲ್ಲವೆ? ಈಗಲೆ INSURANCE ಮಾಡಿಸಿ. ಒಳ್ಳೆಯ INSURANCE PLANSಗಾಗಿ ಕರೆ ಮಾಡಿ – LIC LIFE INSURANCE – ಅನಿಲ್ 9538414151, ಪ್ರಶಾಂತ್ 9972194422
  • ಸುಂದರ ಮನೆ ಕಟ್ಟಬೇಕು, ಸ್ವಂತ ಮನೆಯಲ್ಲಿ ನೆಮ್ಮದಿಯ ಬದುಕು ಸಾಗಿಸಬೇಕು ಅನ್ನವು ಆಸೆ ಯಾರಿಗಿಲ್ಲ? ಇನ್ಯಾಕೆ ತಡ? ಮನೆ ಕಟ್ಟಲು LICಯಿಂದ HOUSING LOAN ಲಭ್ಯವಿದೆ. ಇವತ್ತೇ ಸಂಪರ್ಕಿಸಿ – ಪ್ರಶಾಂತ್ 9972194422

SHIVAMOGGA LIVE WHATSAPP

ನಿಮ್ಮೂರು, ನಿಮ್ಮ ಏರಿಯಾದ ಕಾರ್ಯಕ್ರಮಗಳು, ಸಮಸ್ಯೆಗಳು ಸುದ್ದಿಯಾಗಬೇಕಾ? ನೀವೇ ವರದಿಗಾರರಾಗಿ. ವಿಡಿಯೋ, ಫೋಟೊ ಮಾಡಿ 7411700200 ಮೊಬೈಲ್ ನಂಬರ್’ಗೆ ವಾಟ್ಸಪ್ ಮಾಡಿ. ನೆನಪಿರಲಿ, ಸುದ್ದಿ ಪ್ರಕಟಣೆಗೆ ನಾವು ಹಣ ಪಡೆಯುವುದಿಲ್ಲ.

ಶಿವಮೊಗ್ಗ ಜಿಲ್ಲೆಯ ಯಾವುದೇ ಊರಿನ ಸುದ್ದಿಯನ್ನು ವಾಟ್ಸಪ್‌ ಮಾಡಬಹುದು. ಉಚಿತವಾಗಿ ಪ್ರಕಟಿಸುತ್ತೇವೆ. ವಾಟ್ಸಪ್‌ ನಂಬರ್: 7411700200
Kalleshwara-Enterprises.webp

Leave a Comment