SHIVAMOGGA LIVE NEWS
SHIMOGA | ಶಿವಮೊಗ್ಗದಿಂದ ಮಧ್ಯಾಹ್ನ ಹೊರಡಲಿರುವ ಡೆಮೋ ಅನ್ ರಿಸರ್ವಡ್ ಎಕ್ಸ್ ಪ್ರೆಸ್ ರೈಲಿನಲ್ಲಿ ಪ್ರಯಾಣಿಕರು ಬೆಂಗಳೂರು ತಲುಪಬಹುದು ಎಂದು ಸಂಸದ ಬಿ.ವೈ.ರಾಘವೇಂದ್ರ (BY RAGHAVENDRA) ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಶಿವಮೊಗ್ಗ ಲೈವ್‌ನ ಪ್ರತಿ ಅಪ್‌ಡೇಟ್ ನೀವೇ ಮೊದಲು ಪಡೆಯಲು ಕೆಳಗಿನ ಗ್ರೂಪ್‌ಗಳನ್ನು ಜಾಯಿನ್ ಆಗಿ:
ಈಚೆಗೆ ನೈಋತ್ಯ ರೈಲ್ವೆಯ ಜನರಲ್ ಮ್ಯಾನೇಜರ್ ಅವರು ಶಿವಮೊಗ್ಗಕ್ಕೆ ಭೇಟಿ ನೀಡಿದ್ದ ವೇಳೆ ಮಧ್ಯಾಹ್ನದ ಹೊತ್ತಿನಲ್ಲಿ ಬೆಂಗಳೂರಿಗೆ ರೈಲು ಸೌಲಭ್ಯ ಕಲ್ಪಿಸುವಂತೆ ಮನವಿ ಮಾಡಲಾಗಿತ್ತು. ತಮ್ಮ ಮನವಿ ಪುರಸ್ಕರಿಸಿ ತುಮಕೂರು ಅರಸೀಕರೆ ನಡುವೆ ಸಂಚರಿಸುತ್ತಿದ್ದ ರೈಲನ್ನು ಶಿವಮೊಗ್ಗದವರೆಗೆ ವಿಸ್ತರಣೆ ಮಾಡಲಾಗಿದೆ ಎಂದು ಸಂಸದ ರಾಘವೇಂದ್ರ ತಿಳಿಸಿದ್ದಾರೆ.
‘ಅದೇ ರೈಲಲ್ಲಿ ಬೆಂಗಳೂರಿಗೆ’ : BY RAGHAVENDRA
ವಿಶೇಷ ರೈಲು ಮಧ್ಯಾಹ್ನ 1.05ಕ್ಕೆ ಶಿವಮೊಗ್ಗದಿಂದ ಹೊರಟು ಸಂಜೆ 5.30ಕ್ಕೆ ತುಮಕೂರು ತಲುಪಲಿದೆ. 5.40ಕ್ಕೆ ತುಮಕೂರಿನಿಂದ ಹೊರಟು ಸಂಜೆ 6.50ಕ್ಕೆ ಯಶವಂತಪುರ, ರಾತ್ರಿ 7.40ಕ್ಕೆ ಬಾಣಸವಾಡಿ ತಲುಪಲಿದೆ. ಅದೇ ರೀತಿ ಬೆಳಗ್ಗೆ 5.50ಕ್ಕೆ ಬಾಣಸವಾಡಿಯಿಂದ ಹೊರಟು, ಬೆಳಗ್ಗೆ 6.40ಕ್ಕೆ ಯಶವಂತಪುರ, ಬೆಳಗ್ಗೆ 7.55ಕ್ಕೆ ತುಮಕೂರು ತಲುಪಲಿದೆ. ಬೆಳಗ್ಗೆ 8.05ಕ್ಕೆ ತುಮಕೂರಿನಿಂದ ಹೊರಟು ಮಧ್ಯಾಹ್ನ 12.30ಕ್ಕೆ ಶಿವಮೊಗ್ಗ ತಲುಪಲಿದೆ ಎಂದು ತಿಳಿಸಿದ್ದಾರೆ.
ಮಧ್ಯಾಹ್ನ ಶಿವಮೊಗ್ಗದಿಂದ ಹೊರಡುವ ರೈಲಿನಲ್ಲಿ ಬಾಣಸವಾಡಿವರೆಗೂ ಟೆಕೆಟ್ ಪಡೆಯಬಹುದಾಗಿದೆ. ತಮ್ಮ ಮನವಿ ಪುರಸ್ಕರಿಸಿ ಈ ರೈಲು ಸೇವೆಯನ್ನು ವಿಸ್ತರಿಸಿದ ನೈಋತ್ಯ ರೈಲ್ವೆಯ ಜನರಲ್ ಮ್ಯಾನೇಜರ್ ಅವರಿಗೆ ಅಭಿನಂದನೆ ಸಲ್ಲಿಸುವುದಾಗಿ ಸಂಸದ ರಾಘವೇಂದ್ರ (BY RAGHAVENDRA) ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಕ್ಲಿಕ್ ಮಾಡಿ ಇದನ್ನೂ ಓದಿ | ಇವತ್ತಿಂದ ಶಿವಮೊಗ್ಗ ನಗರದಿಂದ ಮತ್ತೊಂದು ಹೊಸ ರೈಲು ಸಂಚಾರ ಆರಂಭ
ADVERTISEMENT
- ಆರೋಗ್ಯ ತುರ್ತು ಸಂದರ್ಭದಲ್ಲಿ ಹಣಕಾಸು ಹೊಂದಿಸುವುದು ಸುಲಭವೇನಲ್ಲ. ಒಂದು ವೇಳೆ INSURANCE ಇದ್ದರೆ, ನಿರಮ್ಮಳವಾಗಿರಬಹುದು ಅಲ್ಲವೆ? ಈಗಲೆ INSURANCE ಮಾಡಿಸಿ. ಒಳ್ಳೆಯ INSURANCE PLANSಗಾಗಿ ಕರೆ ಮಾಡಿ – LIC LIFE INSURANCE – ಅನಿಲ್ 9538414151, ಪ್ರಶಾಂತ್ 9972194422
- ಸುಂದರ ಮನೆ ಕಟ್ಟಬೇಕು, ಸ್ವಂತ ಮನೆಯಲ್ಲಿ ನೆಮ್ಮದಿಯ ಬದುಕು ಸಾಗಿಸಬೇಕು ಅನ್ನವು ಆಸೆ ಯಾರಿಗಿಲ್ಲ? ಇನ್ಯಾಕೆ ತಡ? ಮನೆ ಕಟ್ಟಲು LICಯಿಂದ HOUSING LOAN ಲಭ್ಯವಿದೆ. ಇವತ್ತೇ ಸಂಪರ್ಕಿಸಿ – ಪ್ರಶಾಂತ್ 9972194422
SHIVAMOGGA LIVE WHATSAPP
ನಿಮ್ಮೂರು, ನಿಮ್ಮ ಏರಿಯಾದ ಕಾರ್ಯಕ್ರಮಗಳು, ಸಮಸ್ಯೆಗಳು ಸುದ್ದಿಯಾಗಬೇಕಾ? ನೀವೇ ವರದಿಗಾರರಾಗಿ. ವಿಡಿಯೋ, ಫೋಟೊ ಮಾಡಿ 7411700200 ಮೊಬೈಲ್ ನಂಬರ್’ಗೆ ವಾಟ್ಸಪ್ ಮಾಡಿ. ನೆನಪಿರಲಿ, ಸುದ್ದಿ ಪ್ರಕಟಣೆಗೆ ನಾವು ಹಣ ಪಡೆಯುವುದಿಲ್ಲ.
LATEST NEWS
- ಮನೆಯನ್ನೇ ಬಂದೂಕು ಕಾರ್ಖಾನೆ ಮಾಡಿಕೊಂಡಿದ್ದ ಕಾರ್ಪೆಂಟರ್, ಎಲ್ಲಿ? ಎಷ್ಟು ಬಂದೂಕು ಸಿಕ್ತು?

- ಕಾಂಗ್ರೆಸ್ನದ್ದು ‘3-C ಸರ್ಕಾರ’, ಮಿನಿಸ್ಟರ್ ರಾಜೀನಾಮೆಗೆ ಶಿವಮೊಗ್ಗದಲ್ಲಿ ಆಗ್ರಹ, ಏನಿದು ಮೂರು C?

- ಶಿವಮೊಗ್ಗ ಸಿಟಿಯ ವಿವಿಧೆಡೆ ಫೆಬ್ರವರಿ 6, 7ರಂದು ಕರೆಂಟ್ ಇರಲ್ಲ, ಎಲ್ಲೆಲ್ಲಿ? ಕಾರಣವೇನು?

- ಶಿವಮೊಗ್ಗ, ಭದ್ರಾವತಿಯಲ್ಲಿ ತುಸು ತಗ್ಗಿದ ತಾಪಮಾನ, ಉಳಿದ ತಾಲೂಕುಗಳಲ್ಲಿ ಹೇಗಿರಲಿದೆ?

- ಪೂಜಾ ಗೌಡ ನಂಬಿ ಅರ್ಧ ಕೋಟಿ ಹಣ ಕಳೆದುಕೊಂಡ ಶಿವಮೊಗ್ಗದ ಸೇಲ್ಸ್ಮನ್, ಆಗಿದ್ದೇನು?

About The Editor
ನಿತಿನ್ ಆರ್.ಕೈದೊಟ್ಲು






