ಮದುವೆಗೆ ಒಪ್ಪದ ಪ್ರಿಯಕರ, ವಿಷ ಕುಡಿದು ಯುವತಿ ಆತ್ಮಹತ್ಯೆ

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

 SHIVAMOGGA LIVE NEWS 

RIPPONPETE | ಪ್ರಿಯಕರ ಮದುವೆಗೆ (MARRIAGE) ನಿರಾಕರಿಸಿದ್ದಕ್ಕೆ ವಿಷ ಸೇವಿಸಿ ಯುವತಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಮೂರು ತಿಂಗಳ ಹಿಂದೆಯಷ್ಟೆ ಯುವಕ ಪರಿಚಯವಾಗಿದ್ದ.

Shimoga Nanjappa Hospital

ರಿಪ್ಪನ್ ಪೇಟೆ ಸಮೀಪದ ಹಾಲುಗುಡ್ಡೆ ಕ್ಯಾಂಪ್ ನಿವಾಸಿ ಅನುಷಾ (19) ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಾಕೆ. ಮದುವೆ (MARRIAGE) ನಿರಾಕರಿಸಿದ್ದಕ್ಕೆ ಪ್ರಿಯಕರ ಮಂಜುನಾಥನ ಜೊತೆಗೆ ಅನುಷಾ ಜಗಳವಾಡಿದ್ದಾಳೆ. ನಂತರ ವಿಷ ಸೇವಿಸಿ ಪ್ರಿಯಕರನಿಗೆ ಕರೆ ಮಾಡಿ ತಿಳಿಸಿದ್ದಾಳೆ.

ದೌಡಾಯಿಸಿದ ಪ್ರಿಯಕರ

ವಿಷ ಕುಡಿದ ವಿಚಾರ ತಿಳಿದು ಮಂಜುನಾಥ ಅನುಷಾಳ ಮನೆಗೆ ದೌಡಾಯಿಸಿದ್ದಾನೆ. ಆಕೆಯನ್ನು ಆನಂದಪುರದ ಸರ್ಕಾರಿ ಆಸ್ಪತ್ರೆಗೆ ದಾಖಲು ಮಾಡಿ, ಚಿಕಿತ್ಸೆ ಕೊಡಿಸಿದ್ದಾನೆ. ಹೆಚ್ಚಿನ ಚಿಕಿತ್ಸೆಗಾಗಿ ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ಕರೆದೊಯ್ದು ದಾಖಲು ಮಾಡಿದ್ದಾನೆ.

ಚಿಕಿತ್ಸೆ ಫಲಕಾರಿಯಾಗದೆ ಭಾನುವಾರ ಅನುಷಾ ಮೃತಪಟ್ಟಿದ್ದಾಳೆ. ವಿಚಾರ ತಿಳಿದು ಮಂಜುನಾಥ ತಲೆಮರೆಸಿಕೊಂಡಿದ್ದಾನೆ.

gundi

ಕೆಲ ತಿಂಗಳ ಹಿಂದಿನ ಪರಿಚಯ

ಗಾರೆ ಕೆಲಸ ಮಾಡುತ್ತಿದ್ದ ಮಂಜುನಾಥ ಕೆಲವು ತಿಂಗಳ ಹಿಂದಷ್ಟೆ ಅನುಷಾಗೆ ಪರಿಚಯವಾಗಿದ್ದ. ಇಬ್ಬರು ಪರಸ್ಪರ ಪ್ರೀತಿಸಲು ಆರಂಭಿಸಿದ್ದರು. ಹಾಗಾಗಿ ಮದುವೆ ಆಗೋಣ ಎಂದು ಅನುಷಾ ಕೇಳಿದ್ದಳು. ಇದೆ ವಿಚಾರವಾಗಿ ಇಬ್ಬರ ನಡುವೆ ಜಗಳವಾಗಿದೆ ಎಂದು ಅನುಷಾ ತಂದೆ ದೂರು ನೀಡಿದ್ದಾರೆ.

ರಿಪ್ಪನ್ ಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

Sarji Hospital

ಕ್ಲಿಕ್ ಮಾಡಿ ಇದನ್ನೂ ಓದಿ ಮೀನಾಕ್ಷಿ ಭವನ ಬಳಿ ಶಾಲೆಯ ಹೆಂಚು ತೆಗೆದು ಒಳಗಿಳಿದ ಕಳ್ಳರು

ADVERTISEMENT

  • ಆರೋಗ್ಯ ತುರ್ತು ಸಂದರ್ಭದಲ್ಲಿ ಹಣಕಾಸು ಹೊಂದಿಸುವುದು ಸುಲಭವೇನಲ್ಲ. ಒಂದು ವೇಳೆ INSURANCE ಇದ್ದರೆ, ನಿರಮ್ಮಳವಾಗಿರಬಹುದು ಅಲ್ಲವೆ? ಈಗಲೆ INSURANCE ಮಾಡಿಸಿ. ಒಳ್ಳೆಯ INSURANCE PLANSಗಾಗಿ ಕರೆ ಮಾಡಿ – LIC LIFE INSURANCE – ಅನಿಲ್ 9538414151, ಪ್ರಶಾಂತ್ 9972194422
  • ಸುಂದರ ಮನೆ ಕಟ್ಟಬೇಕು, ಸ್ವಂತ ಮನೆಯಲ್ಲಿ ನೆಮ್ಮದಿಯ ಬದುಕು ಸಾಗಿಸಬೇಕು ಅನ್ನವು ಆಸೆ ಯಾರಿಗಿಲ್ಲ? ಇನ್ಯಾಕೆ ತಡ? ಮನೆ ಕಟ್ಟಲು LICಯಿಂದ HOUSING LOAN ಲಭ್ಯವಿದೆ. ಇವತ್ತೇ ಸಂಪರ್ಕಿಸಿ – ಪ್ರಶಾಂತ್ 9972194422

SHIVAMOGGA LIVE WHATSAPP

ನಿಮ್ಮೂರು, ನಿಮ್ಮ ಏರಿಯಾದ ಕಾರ್ಯಕ್ರಮಗಳು, ಸಮಸ್ಯೆಗಳು ಸುದ್ದಿಯಾಗಬೇಕಾ? ನೀವೇ ವರದಿಗಾರರಾಗಿ. ವಿಡಿಯೋ, ಫೋಟೊ ಮಾಡಿ 7411700200 ಮೊಬೈಲ್ ನಂಬರ್’ಗೆ ವಾಟ್ಸಪ್ ಮಾಡಿ. ನೆನಪಿರಲಿ, ಸುದ್ದಿ ಪ್ರಕಟಣೆಗೆ ನಾವು ಹಣ ಪಡೆಯುವುದಿಲ್ಲ.

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment