ಉಗ್ರ ಸಂಘಟನೆ ನಂಟು, ಸ್ಪೋಟಕ ಹೊಂದಿದ್ದರಾ ಶಂಕಿತರು? ರಾಷ್ಟ್ರಧ್ವಜವನ್ನು ಸುಟ್ಟಿದ್ದರಾ?

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

Shivamogga-Live-9-years-Number-1.avif

 SHIVAMOGGA LIVE NEWS 

SHIMOGA | ನಿಷೇಧಿತ ಭಯೋತ್ಪದಕ ಸಂಘಟನೆಯೊಂದಿಗೆ (ISIS) ನಂಟು ಹೊಂದಿರುವ ಆರೋಪದ ಮೇರೆಗೆ ಇಬ್ಬರು ಶಂಕಿತರನ್ನು ಬಂಧಿಸಲಾಗಿದೆ. ರಾಷ್ಟ್ರಧ್ವಜವನ್ನು ಸುಟ್ಟು ಹಾಕಿರವ ಮತ್ತು ಸ್ಪೋಟಕಗಳನ್ನು ಇಟ್ಟುಕೊಂಡಿರುವ ಆರೋಪ ಕೇಳಿ ಬಂದಿದೆ.

Shimoga Nanjappa Hospital

ವಿಶೇಷ ತಂಡದಿಂದ ದಾಳಿ

ಖಚಿತ ಮಾಹಿತಿ ಮೇರೆಗೆ ಪೊಲೀಸ್ ಇಲಾಖೆಯ ವಿಶೇಷ ತಂಡ ಕಾರ್ಯಾಚರಣೆ ನಡೆಸಿ ಇಬ್ಬರು ಶಂಕಿತರನ್ನು ಬಂಧಿಸಿದೆ. ಮಂಗಳೂರಿನ ಮಾಜ್ ಮುನೀರ್ ಅಹಮದ್ (22) ಮತ್ತು ಶಿವಮೊಗ್ಗ ಸಿದ್ದೇಶ್ವರ ನಗರದ ಸಯ್ಯದ್ ಯಾಸೀನ್ (21) ಬಂಧಿತರು. ತೀರ್ಥಹಳ್ಳಿ ಸೊಪ್ಪುಗುಡ್ಡೆಯ ಶಾರೀಕ್ ಎಂಬಾತನ ಬಂಧನವಾಗಬೇಕಿದೆ.

ಯಾವ ಸಂಘಟನೆ ಜೊತೆ ನಂಟು?

ಮೂವರು ಶಂಕಿತರು ಇಸ್ಲಾಮಿಕ್ ಸ್ಟೇಟ್ (ISIS) ಉಗ್ರ ಸಂಘಟನೆಯೊಂದಿಗೆ ನಂಟು ಹೊಂದಿದ್ದಾರೆ ಎಂದು ಆರೋಪಿಸಲಾಗಿದೆ. ಭಯೋತ್ಪಾದಕ ಕೃತ್ಯಗಳನ್ನು ಮುಂದುವರೆಸುವ ಸಲುವಾಗಿ ಒಳಸಂಚು ರೂಪಿಸಿದ್ದರು ಎಂದು ಆಪಾದಿಸಲಾಗಿದೆ.

ಸ್ಫೋಟಕಗಳು, ರಾಷ್ಟ್ರ ಧ್ವಜ

ಶಂಕಿತರು ಸಾರ್ವಜನಿಕ ಆಸ್ತಿ ಮತ್ತು ಪ್ರಾಣಕ್ಕೆ ಅಪಾಯವಾಗುವ ಸ್ಪೋಟಗಳನ್ನು ಇಟ್ಟುಕೊಂಡಿರುವ ಶಂಕೆ ಇದೆ. ಭಾರತದ ರಾಷ್ಟ್ರಧ್ವಜವನ್ನು ಸುಟ್ಟಿರುವುದಾಗಿ ತಿಳಿದು ಬಂದಿದೆ ಎಂದು ಎಫ್ಐಆರ್’ನಲ್ಲಿ ತಿಳಿಸಲಾಗಿದೆ.

ಯುಎಪಿಎ ಅಡಿ ಪ್ರಕರಣ

ಬಂಧಿತರ ವಿರುದ್ಧ ಕಾನೂನು ಬಾಹಿರ ಚಟುವಟಿಕೆ ನಿರ್ಬಂಧ ಕಾಯ್ದೆ (ಯುಎಪಿಎ) ಅಡಿಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ. ಇಬ್ಬರು ಬಂಧಿತರನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ. ಸೆ.29ರವರೆಗೆ ಶಂಕಿತರನ್ನು ಪೊಲೀಸ್ ಕಸ್ಟಡಿಗೆ ಒಪ್ಪಿಸಲಾಗಿದೆ.

ಕ್ಲಿಕ್ ಮಾಡಿ ಇದನ್ನೂ ಓದಿ BREAKING NEWS | ಭಯೋತ್ಪಾದಕ ಸಂಘಟನೆ ಜೊತೆ ನಂಟು, ಶಿವಮೊಗ್ಗದಲ್ಲಿ ಶಂಕಿತರು ಅರೆಸ್ಟ್

gundi

ADVERTISEMENT

  • ಆರೋಗ್ಯ ತುರ್ತು ಸಂದರ್ಭದಲ್ಲಿ ಹಣಕಾಸು ಹೊಂದಿಸುವುದು ಸುಲಭವೇನಲ್ಲ. ಒಂದು ವೇಳೆ INSURANCE ಇದ್ದರೆ, ನಿರಮ್ಮಳವಾಗಿರಬಹುದು ಅಲ್ಲವೆ? ಈಗಲೆ INSURANCE ಮಾಡಿಸಿ. ಒಳ್ಳೆಯ INSURANCE PLANSಗಾಗಿ ಕರೆ ಮಾಡಿ – LIC LIFE INSURANCE – ಅನಿಲ್ 9538414151, ಪ್ರಶಾಂತ್ 9972194422
  • ಸುಂದರ ಮನೆ ಕಟ್ಟಬೇಕು, ಸ್ವಂತ ಮನೆಯಲ್ಲಿ ನೆಮ್ಮದಿಯ ಬದುಕು ಸಾಗಿಸಬೇಕು ಅನ್ನವು ಆಸೆ ಯಾರಿಗಿಲ್ಲ? ಇನ್ಯಾಕೆ ತಡ? ಮನೆ ಕಟ್ಟಲು LICಯಿಂದ HOUSING LOAN ಲಭ್ಯವಿದೆ. ಇವತ್ತೇ ಸಂಪರ್ಕಿಸಿ – ಪ್ರಶಾಂತ್ 9972194422

SHIVAMOGGA LIVE WHATSAPP

ನಿಮ್ಮೂರು, ನಿಮ್ಮ ಏರಿಯಾದ ಕಾರ್ಯಕ್ರಮಗಳು, ಸಮಸ್ಯೆಗಳು ಸುದ್ದಿಯಾಗಬೇಕಾ? ನೀವೇ ವರದಿಗಾರರಾಗಿ. ವಿಡಿಯೋ, ಫೋಟೊ ಮಾಡಿ 7411700200 ಮೊಬೈಲ್ ನಂಬರ್’ಗೆ ವಾಟ್ಸಪ್ ಮಾಡಿ. ನೆನಪಿರಲಿ, ಸುದ್ದಿ ಪ್ರಕಟಣೆಗೆ ನಾವು ಹಣ ಪಡೆಯುವುದಿಲ್ಲ.

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ

ಈಗಲೇ ಕರೆ ಮಾಡಿ
9972194422

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : September 20, 2022

ಜಯನಗರ ಪೊಲೀಸ್‌ ಠಾಣೆಯಲ್ಲಿ 8 ವಾಹನಗಳ ಹರಾಜು, ದಿನಾಂಕ ಪ್ರಕಟ

ಜಯನಗರ ಪೊಲೀಸ್‌ ಠಾಣೆಯಲ್ಲಿ 8 ವಾಹನಗಳ ಹರಾಜು, ದಿನಾಂಕ ಪ್ರಕಟ

ಶಿವಮೊಗ್ಗದಲ್ಲಿ ಇವತ್ತು ಯಾವ್ಯಾವ ಅಡಿಕೆಗೆ ಎಷ್ಟಿದೆ ರೇಟ್‌? – 31 ಮಾರ್ಚ್‌ 2026

ಶಿವಮೊಗ್ಗದಲ್ಲಿ ಇವತ್ತು ಯಾವ್ಯಾವ ಅಡಿಕೆಗೆ ಎಷ್ಟಿದೆ ರೇಟ್‌? – 31 ಮಾರ್ಚ್‌ 2026

ಗೋಪಾಳದ ಕ್ರೀಡಾ ಸಂಕೀರ್ಣದಲ್ಲಿ ಬೇಸಿಗೆ ಶಿಬಿರ, ಸರ್ಕಾರಿ ಶಾಲೆ ಮಕ್ಕಳಿಗೆ ಶೇ.50ರಷ್ಟು ರಿಯಾಯಿತಿ

ಗೋಪಾಳದ ಕ್ರೀಡಾ ಸಂಕೀರ್ಣದಲ್ಲಿ ಬೇಸಿಗೆ ಶಿಬಿರ, ಸರ್ಕಾರಿ ಶಾಲೆ ಮಕ್ಕಳಿಗೆ ಶೇ.50ರಷ್ಟು ರಿಯಾಯಿತಿ

ಶಿವಮೊಗ್ಗ ಜಿಲ್ಲಾ ಕನ್ನಡ ಸಾಹಿತ್ಯ ಸಾಂಸ್ಕೃತಿಕ ವೇದಿಕೆಗೆ ಪ್ರಶಸ್ತಿ

ಶಿವಮೊಗ್ಗ ಜಿಲ್ಲಾ ಕನ್ನಡ ಸಾಹಿತ್ಯ ಸಾಂಸ್ಕೃತಿಕ ವೇದಿಕೆಗೆ ಪ್ರಶಸ್ತಿ

ಹಾಸ್ಟೆಲ್‌ನಲ್ಲಿ ಸಾಲು ಸಾಲು ಸಮಸ್ಯೆ, ಶಿವಮೊಗ್ಗ ಡಿ.ಸಿ.ಗೆ ದೂರು ನೀಡಿದ ವಿದ್ಯಾರ್ಥಿಗಳು

ಹಾಸ್ಟೆಲ್‌ನಲ್ಲಿ ಸಾಲು ಸಾಲು ಸಮಸ್ಯೆ, ಶಿವಮೊಗ್ಗ ಡಿ.ಸಿ.ಗೆ ದೂರು ನೀಡಿದ ವಿದ್ಯಾರ್ಥಿಗಳು

6 ರಿಂದ 16 ವರ್ಷದ ಮಕ್ಕಳಿಗೆ ರಂತ ತರಬೇತಿ ಶಿಬಿರ, ಎಲ್ಲಿ? ಏನೇನು ಕಲಿಸಲಾಗುತ್ತದೆ?

6 ರಿಂದ 16 ವರ್ಷದ ಮಕ್ಕಳಿಗೆ ರಂತ ತರಬೇತಿ ಶಿಬಿರ, ಎಲ್ಲಿ? ಏನೇನು ಕಲಿಸಲಾಗುತ್ತದೆ?

₹50 ಪೆಟ್ರೋಲ್‌ ಹಾಕಿಸಿಕೊಂಡು ಹಣ ಕೇಳಿದ್ದಕ್ಕೆ ಬಂಕ್‌ ಮಾಲೀಕ, ಸಿಬ್ಬಂದಿ ಮೇಲೆ ಅಟ್ಯಾಕ್‌

₹50 ಪೆಟ್ರೋಲ್‌ ಹಾಕಿಸಿಕೊಂಡು ಹಣ ಕೇಳಿದ್ದಕ್ಕೆ ಬಂಕ್‌ ಮಾಲೀಕ, ಸಿಬ್ಬಂದಿ ಮೇಲೆ ಅಟ್ಯಾಕ್‌

ವರದಹಳ್ಳಿಯಲ್ಲಿ ಶ್ರೀಧರ ಸ್ವಾಮೀಜಿ ಆರಾಧನಾ ಮಹೋತ್ಸವ, ಏನೇನು ಕಾರ್ಯಕ್ರಮ ಇರಲಿದೆ?

ವರದಹಳ್ಳಿಯಲ್ಲಿ ಶ್ರೀಧರ ಸ್ವಾಮೀಜಿ ಆರಾಧನಾ ಮಹೋತ್ಸವ, ಏನೇನು ಕಾರ್ಯಕ್ರಮ ಇರಲಿದೆ?

ಇವತ್ತು ದೀನಬಂಧು ಟ್ರಸ್ಟ್‌ 25ನೇ ವರ್ಷದ ಬೆಳ್ಳಿ ಹಬ್ಬ, ಕಾರ್ಯಕ್ರಮದಲ್ಲಿ ಯಾರೆಲ್ಲ ಭಾಗವಹಿಸ್ತಾರೆ?

ಇವತ್ತು ದೀನಬಂಧು ಟ್ರಸ್ಟ್‌ 25ನೇ ವರ್ಷದ ಬೆಳ್ಳಿ ಹಬ್ಬ, ಕಾರ್ಯಕ್ರಮದಲ್ಲಿ ಯಾರೆಲ್ಲ ಭಾಗವಹಿಸ್ತಾರೆ?

ಭದ್ರಾವತಿಯ ಗೌಡರಹಳ್ಳಿ ಬಳಿ ಅಪಘಾತ, ಟ್ರಾಕ್ಟರ್‌ ಚಾಲಕನ ವಿರುದ್ಧ ಪ್ರಕರಣ, ಆಗಿದ್ದೇನು?

ಭದ್ರಾವತಿಯ ಗೌಡರಹಳ್ಳಿ ಬಳಿ ಅಪಘಾತ, ಟ್ರಾಕ್ಟರ್‌ ಚಾಲಕನ ವಿರುದ್ಧ ಪ್ರಕರಣ, ಆಗಿದ್ದೇನು?

Leave a Comment